Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 51:35 - ಕನ್ನಡ ಸಮಕಾಲಿಕ ಅನುವಾದ

35 ನಮಗೂ, ನಮ್ಮ ಶರೀರಕ್ಕೂ ಮಾಡಿರುವ ಬಲಾತ್ಕಾರವು ಬಾಬಿಲೋನಿನ ಮೇಲೆ ಇರಲಿ,” ಎಂದು ಚೀಯೋನ್ ನಿವಾಸಿಗಳು ಹೇಳುತ್ತಾರೆ; “ಕಸ್ದೀಯರ ನಿವಾಸಿಗಳ ಮೇಲೆ ನನ್ನ ರಕ್ತವು ಇರಲಿ,” ಎಂದು ಯೆರೂಸಲೇಮು ಹೇಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ನಮ್ಮ ಪ್ರಾಣವನ್ನು ಹಿಂಸಿಸಿದ ದೋಷ ಬಾಬಿಲೋನಿಗೆ ತಟ್ಟಲಿ’ ಎಂದು ಚೀಯೋನಿನವರು ಅನ್ನುತ್ತಾರೆ; ‘ನಮ್ಮ ರಕ್ತವನ್ನು ಸುರಿಸಿದ ಅಪರಾಧವು ಕಸ್ದೀಯರಿಗೆ ಬಡಿಯಲಿ’ ಎಂದು ಯೆರೂಸಲೇಮಿನವರು ಹೇಳುತ್ತಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ‘ನಮ್ಮ ಪ್ರಾಣವನ್ನು ಹಿಂಡಿದ ದೋಷ ಬಾಬಿಲೋನಿಗೆ ತಟ್ಟಲಿ’ ಎನ್ನುತ್ತದೆ ಸಿಯೋನ್. ‘ನಮ್ಮ ರಕ್ತವನ್ನು ಸುರಿಸಿದ ಅಪರಾಧ ಅದರ ಕಸ್ದೀಯರಿಗೆ ಬಡಿಯಲಿ!’ ಎನ್ನುತ್ತದೆ ಜೆರುಸಲೇಮ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ನಮ್ಮ ಪ್ರಾಣವನ್ನು ಹಿಂಸಿಸಿದ ದೋಷ ಬಾಬೆಲಿಗೆ ತಟ್ಟಲಿ ಎಂದು ಚೀಯೋನಿನವರು ಅನ್ನುತ್ತಾರೆ; ನಮ್ಮ ರಕ್ತವನ್ನು ಸುರಿಸಿದ ಅಪರಾಧವು ಕಸ್ದೀಯರಿಗೆ ಬಡಿಯಲಿ ಎಂದು ಯೆರೂಸಲೇವಿುನವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ನಮ್ಮನ್ನು ನೋಯಿಸಲು ಬಾಬಿಲೋನ್ ಭಯಂಕರ ಕೆಲಸವನ್ನು ಮಾಡಿತು. ಈಗ ಬಾಬಿಲೋನಿಗೂ ಅಂಥಾ ಸ್ಥಿತಿ ಬರಲೆಂದು ನನ್ನ ಆಶೆ.” ಚೀಯೋನ್ ನಿವಾಸಿಗಳು ಹೀಗೆಂದರು: “ಬಾಬಿಲೋನಿನ ಜನರು ನಮ್ಮ ಜನರನ್ನು ಕೊಲ್ಲುವ ಪಾಪವನ್ನು ಮಾಡಿದ್ದಾರೆ. ಈಗ ಅವರು ಮಾಡಿದ ದುಷ್ಕೃತ್ಯಗಳಿಗಾಗಿ ಅವರನ್ನು ಶಿಕ್ಷಿಸಲಾಗುತ್ತಿದೆ” ಎಂದು ಜೆರುಸಲೇಮ್ ನಗರ ಹೇಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 51:35
20 ತಿಳಿವುಗಳ ಹೋಲಿಕೆ  

“ಪರಲೋಕವೇ ಸಂಭ್ರಮಿಸಿರಿ, ಪರಿಶುದ್ಧರೇ, ಅಪೊಸ್ತಲರೇ ಹಾಗೂ ಪ್ರವಾದಿಗಳೇ ಆಕೆಯ ನಿಮಿತ್ತ ಹರ್ಷಗೊಳ್ಳಿರಿ! ಏಕೆಂದರೆ ಆಕೆ ನಿಮಗೆ ತೀರ್ಪುಮಾಡಿದ್ದಕ್ಕೆ ಸರಿಯಾಗಿ ದೇವರು ಆಕೆಗೆ ತೀರ್ಪುಮಾಡಿದ್ದಾರೆ!”


“ಬಾಬಿಲೋನಿಗೆ ವಿರೋಧವಾಗಿ ಬಿಲ್ಲುಬಾಣಗಾರರನ್ನೆಲ್ಲ ಒಟ್ಟಾಗಿ ಕರೆಯಿರಿ; ಅದರ ಸುತ್ತಲು ದಂಡಿಳಿಸಿರಿ ಅದರ ನಿವಾಸಿಗಳಲ್ಲಿ ಯಾರೂ ತಪ್ಪಿಸಿಕೊಳ್ಳದ ಹಾಗಿರಲಿ. ಅದರ ಕೃತ್ಯಕ್ಕೆ ತಕ್ಕಂತೆ ಮುಯ್ಯಿತೀರಿಸಿರಿ ಅದು ಮಾಡಿದಂತೆಯೇ ಅದಕ್ಕೆ ಮಾಡಿ. ಏಕೆಂದರೆ ಅದು ಅಹಂಕಾರದಿಂದ ಇಸ್ರಾಯೇಲರ ಪರಿಶುದ್ಧ ಯೆಹೋವ ದೇವರನ್ನು ಅಸಡ್ಡೆಮಾಡಿತು.


ಆಕೆಯು ನಿಮಗೆ ಕೊಟ್ಟಿದ್ದಕ್ಕೆ ಸರಿಯಾಗಿ ಹಿಂದಕ್ಕೆ ಕೊಡಿರಿ. ಕೃತ್ಯಗಳಿಗೆ ಸರಿಯಾಗಿ ಎರಡರಷ್ಟು ಅವಳಿಗೆ ಕೊಡಿರಿ. ಆಕೆಯ ಬಟ್ಟಲಿನಿಂದಲೇ ಎರಡರಷ್ಟು ಆಕೆಗೆ ಕಲಸಿ ಕೊಡಿರಿ.


ಅವರು ನಿಮ್ಮ ಭಕ್ತರ ಮತ್ತು ನಿಮ್ಮ ಪ್ರವಾದಿಗಳ ರಕ್ತವನ್ನು ಸುರಿಸಿದ್ದಾರೆ. ನೀವು ಅವರಿಗೆ ಕುಡಿಯುವುದಕ್ಕೆ ರಕ್ತವನ್ನೇ ಕೊಟ್ಟಿರುವಿರಿ. ಅವರು ಅದಕ್ಕೆ ಪಾತ್ರರು.” ಎಂದು ಹೇಳುವುದನ್ನು ಕೇಳಿದೆನು.


ಅವರು ಮಹಾಶಬ್ದದಿಂದ, “ಒಡೆಯನೇ, ಪವಿತ್ರನೇ, ಸತ್ಯವಂತನೇ ನಮ್ಮ ರಕ್ತ ಸುರಿಸಿದ ಲೋಕನಿವಾಸಿಗಳಿಗೆ ತೀರ್ಪನ್ನೂ ಪ್ರತಿದಂಡನೆಯನ್ನೂ ಮಾಡಲು ಇನ್ನೆಷ್ಟು ಸಮಯ ಬೇಕು?” ಎಂದು ಕೂಗಿದರು.


ಕರುಣೆ ತೋರಿಸದೆ ಇರುವವರಿಗೆ ಕರುಣೆಯಿಲ್ಲದ ನ್ಯಾಯತೀರ್ಪಾಗುವುದು. ಕರುಣೆವುಳ್ಳವರೋ ನ್ಯಾಯತೀರ್ಪಿನ ಮೇಲೆಯೇ ವಿಜಯವನ್ನು ಸಾಧಿಸುವರು.


ನೀವು ಇತರರ ಬಗ್ಗೆ ಕೊಡುವ ತೀರ್ಪಿನ ಪ್ರಕಾರವೇ ನಿಮಗೂ ತೀರ್ಪಾಗುವುದು, ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆದುಕೊಡಲಾಗುವುದು.


ನಿಶ್ಚಿಂತೆಯುಳ್ಳವರಾಗಿರುವ ಇತರ ರಾಷ್ಟ್ರಗಳ ಮೇಲೆ ನಾನು ಬಹಳ ಕೋಪವಾಗಿದ್ದೇನೆ. ಆದರೆ ಯೆರೂಸಲೇಮಿನ ಮೇಲೆ ನಾನು ಸ್ವಲ್ಪ ಮಾತ್ರ ಸಿಟ್ಟುಗೊಂಡಿರಲು, ಅವರು ಸಂಕಟಕ್ಕೆ ಇನ್ನು ಹೆಚ್ಚು ಕೇಡು ಕೂಡಿಸಿದರು.


“ಬಡವರು ಹಿಂಸೆಗೆ ಒಳಗಾಗಿರುವುದರಿಂದಲೂ ಗತಿಯಿಲ್ಲದವರು ನರಳಾಡುವುದರಿಂದಲೂ ನಾನು ಈಗಲೇ ಏಳುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ. “ಪೀಡಿಸುವವರಿಂದ ನಾನು ಬಡವರನ್ನು ಕಾಪಾಡುವೆನು.”


ಅವರು ಪ್ರಾಣಹತ್ಯೆ ಮಾಡುವವರನ್ನು ಮುಯ್ಯಿತೀರಿಸಲು ಜ್ಞಾಪಕಮಾಡಿಕೊಳ್ಳುವರು; ಬಾಧೆಗೆ ಒಳಗಾಗಿರುವ ದೀನರ ಕೂಗನ್ನು ಅವರು ಅಲಕ್ಷ್ಯಮಾಡುವುದಿಲ್ಲ.


ಇದರಿಂದ ಯೆರುಬ್ಬಾಳನ ಎಪ್ಪತ್ತು ಮಂದಿ ಮಕ್ಕಳಿಗೆ ಮಾಡಿದ್ದ ಕ್ರೂರತ್ವವು ಬಂದು ಪ್ರಾಪ್ತಿಸುವ ಹಾಗೆಯೂ, ಅವರ ರಕ್ತವು ಅವರನ್ನು ಕೊಂದ ಅವರ ಸಹೋದರನಾದ ಅಬೀಮೆಲೆಕನ ಮೇಲೆಯೂ, ಅವನ ಸಹೋದರರನ್ನು ಕೊಲ್ಲುವುದಕ್ಕೆ ಅವನ ಕೈಗಳನ್ನು ಬಲಪಡಿಸಿದ ಶೆಕೆಮಿನ ಮನುಷ್ಯರ ಮೇಲೆಯೂ ಬರುವ ಹಾಗೆ, ಶೆಕೆಮಿನ ಜನರು ಅಬೀಮೆಲೆಕನಿಗೆ ದ್ರೋಹಮಾಡಿದರು.


ಇಲ್ಲದಿದ್ದರೆ ಅಬೀಮೆಲೆಕನಿಂದ ಬೆಂಕಿ ಹೊರಟು ಶೆಕೆಮಿನ ಹಿರಿಯರನ್ನೂ, ಮಿಲ್ಲೋನಿನ ಮನೆಯವರನ್ನೂ ದಹಿಸಿಬಿಡಲಿ. ಶೆಕೆಮಿನ ಜನರಿಂದಲೂ, ಮಿಲ್ಲೋನಿನ ಮನೆಯವರಿಂದಲೂ ಬೆಂಕಿ ಹೊರಟು ಅಬೀಮೆಲೆಕನನ್ನು ದಹಿಸಿಬಿಡಲಿ,” ಎಂದನು.


ಸಾರಯಳು ಅಬ್ರಾಮನಿಗೆ, “ನನಗೆ ಆದ ಅನ್ಯಾಯಕ್ಕೆ ನೀನೇ ಹೊಣೆ. ನಾನು ನನ್ನ ದಾಸಿಯನ್ನು ನಿನಗೆ ಹೆಂಡತಿಯಾಗಿ ಕೊಟ್ಟೆನು. ಈಗ ಅವಳು ಗರ್ಭಿಣಿಯಾದ್ದರಿಂದ ನಾನು ಅವಳ ಕಣ್ಣಿಗೆ ತಿರಸ್ಕಾರಕ್ಕೆ ಯೋಗ್ಯಳಾದೆನು. ಯೆಹೋವ ದೇವರು ನಿನಗೂ ನನಗೂ ನ್ಯಾಯತೀರಿಸಲಿ,” ಎಂದಳು.


ಬಾಬಿಲೋನಿನ ದೇಶವು ಸುಲಿಗೆಯಾಗುವುದು; ಅದನ್ನು ಸುಲಿದುಕೊಳ್ಳುವವರೆಲ್ಲರಿಗೆ ತೃಪ್ತಿಯಾಗುವುದು, ಎಂದು ಯೆಹೋವ ದೇವರು ಹೇಳುತ್ತಾರೆ.


ಲೆಬನೋನಿನ ಮೇಲೆ ಮಾಡಿದ ಬಲಾತ್ಕಾರವು ನಿನ್ನನ್ನು ಚಕಿತಗೊಳಿಸುವುದು. ಮೃಗಗಳ ನಾಶವು ನಿನ್ನನ್ನು ಹೆದರಿಸುವುದು. ಏಕೆಂದರೆ ನೀನು ಮನುಷ್ಯರ ರಕ್ತ ಸುರಿಸಿದ್ದೀ; ನೀನು ನಾಡುಗಳನ್ನು, ಪಟ್ಟಣಗಳನ್ನು, ಅವುಗಳಲ್ಲಿರುವ ಎಲ್ಲವುಗಳನ್ನು ನಾಶಮಾಡಿದ್ದೀ.


“ಬಾಬಿಲೋನಿನವರು ಮತ್ತು ಕಸ್ದೀಯರು ಚೀಯೋನಿನಲ್ಲಿ ಮಾಡಿದ ಎಲ್ಲಾ ಕೇಡಿಗೆ ಪ್ರತಿಯಾಗಿ ನಾನು ಅವರೆಲ್ಲರಿಗೂ ಚೀಯೋನಿನವರ ಕಣ್ಣೆದುರಿಗೆ ಮುಯ್ಯಿತೀರಿಸುವೆನು” ಎಂದು ಯೆಹೋವ ದೇವರು ಹೇಳುತ್ತಾರೆ.


ಅವರ ಎಲ್ಲಾ ಕೆಟ್ಟತನವು ನಿನ್ನ ಮುಂದೆ ಇರಲಿ. ನನ್ನ ಎಲ್ಲಾ ದ್ರೋಹಗಳ ನಿಮಿತ್ತ, ನೀನು ನನಗೆ ಮಾಡಿದ ಪ್ರಕಾರವೇ ಅವರಿಗೆ ಮಾಡು. ಏಕೆಂದರೆ ನನ್ನ ನರಳಾಟವು ಅನೇಕವಾಗಿವೆ. ನನ್ನ ಹೃದಯವು ಮೂರ್ಛೆಗೊಂಡಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು