ಯೆರೆಮೀಯ 51:36 - ಕನ್ನಡ ಸಮಕಾಲಿಕ ಅನುವಾದ36 ಆದ್ದರಿಂದ ಯೆಹೋವ ದೇವರು ಹೀಗೆ ಹೇಳುತ್ತಾರೆ. “ಇಗೋ, ನಾನು ನಿನ್ನ ನಿಮಿತ್ತ ವ್ಯಾಜ್ಯವಾಡುತ್ತೇನೆ. ನಿನಗೋಸ್ಕರ ಪ್ರತಿದಂಡನೆ ಮಾಡುತ್ತೇನೆ. ಅದರ ಸಮುದ್ರವನ್ನು ಒಣಗಿಸುತ್ತೇನೆ. ಅದರ ಬುಗ್ಗೆಯನ್ನು ಬತ್ತಿಹೋಗುವಂತೆ ಮಾಡುತ್ತೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ಆದ್ದರಿಂದ ಯೆಹೋವನು ಇಂತೆನ್ನುತ್ತಾನೆ, “ಆಹಾ, ನಾನು ನಿನ್ನ ಪರವಾಗಿ ವ್ಯಾಜ್ಯವಾಡಿ, ನಿನ್ನನ್ನು ಹಿಂಸಿಸಿದ ರಾಜ್ಯಕ್ಕೆ ಮುಯ್ಯಿತೀರಿಸುವೆನು; ಅದರ ಸರೋವರವು ಬತ್ತುವಂತೆಯೂ, ಅದರ ಪ್ರವಾಹವು ಒಣಗುವಂತೆಯೂ ಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)36 ಸರ್ವೇಶ್ವರ ಹೀಗೆನ್ನುತ್ತಾರೆ: “ಇಗೋ, ನಾನು ನಿನ್ನ ಪರವಾಗಿ ವ್ಯಾಜ್ಯಮಾಡಿ ನಿನ್ನನ್ನು ಹಿಂಸಿಸಿದ ರಾಜ್ಯಕ್ಕೆ ಮುಯ್ಯಿತೀರಿಸುವೆನು. ಅದರ ಸರೋವರ ಬತ್ತಿಹೋಗುವಂತೆಯೂ ಅದರ ಪ್ರವಾಹ ಒಣಗಿಹೋಗುವಂತೆಯೂ ಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)36 ಆದದರಿಂದ ಯೆಹೋವನು ಇಂತೆನ್ನುತ್ತಾನೆ - ಆಹಾ, ನಾನು ನಿನ್ನ ಪಕ್ಷವಾಗಿ ವ್ಯಾಜ್ಯವಾಡಿ ನಿನ್ನನ್ನು ಹಿಂಸಿಸಿದ ರಾಜ್ಯಕ್ಕೆ ಮುಯ್ಯಿತೀರಿಸುವೆನು; ಅದರ ಸರೋವರವು ಬತ್ತುವಂತೆಯೂ ಅದರ ಪ್ರವಾಹವು ಒಣಗುವಂತೆಯೂ ಮಾಡುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್36 ಯೆಹೋವನು ಹೀಗೆನ್ನುವನು: “ಯೆಹೂದವೇ, ನಾನು ನಿನ್ನನ್ನು ರಕ್ಷಿಸುವೆನು. ನಿಶ್ಚಿತವಾಗಿ ಬಾಬಿಲೋನಿಗೆ ಶಿಕ್ಷೆ ಆಗುವಂತೆ ನಾನು ನೋಡಿಕೊಳ್ಳುತ್ತೇನೆ. ನಾನು ಬಾಬಿಲೋನಿನ ಸಮುದ್ರವನ್ನು ಒಣಗಿಸಿಬಿಡುವೆನು. ಅದರ ನೀರಿನ ಚಿಲುಮೆಗಳು ಬತ್ತುವಂತೆ ಮಾಡುತ್ತೇನೆ. ಅಧ್ಯಾಯವನ್ನು ನೋಡಿ |