Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 51:37 - ಕನ್ನಡ ಸಮಕಾಲಿಕ ಅನುವಾದ

37 ಬಾಬಿಲೋನ್ ದಿಬ್ಬಗಳಾಗುವುದು. ನಿವಾಸಿಗಳು ಇಲ್ಲದೆ ನರಿಗಳ ವಾಸಸ್ಥಳವಾಗಿ ಆಶ್ಚರ್ಯಕ್ಕೂ, ನಾಶಕ್ಕೂ, ಸಿಳ್ಳಿಡುವಿಕೆಗೂ ಒಳಗಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಆಗ ಬಾಬೆಲ್ ಹಾಳುದಿಬ್ಬಗಳಿಂದ ತುಂಬುವುದು ಮತ್ತು ನರಿಗಳ ಬೀಡಾಗಿರುವುದು; ಅದು ನಿರ್ಜನವಾಗಿ ಪರಿಹಾಸ್ಯಕ್ಕೆ ಗುರಿಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ಆಗ ಬಾಬಿಲೋನ್ ಹಾಳುದಿಬ್ಬ ಆಗುವುದು. ಗುಳ್ಳೆನರಿಗಳ ಬೀಡಾಗುವುದು. ಅದು ಭಯಭೀತಿಗೂ ಸೀಳು ಪರಿಹಾಸ್ಯಕ್ಕೂ ಆಸ್ಪದವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ಆಗ ಬಾಬೆಲು ಹಾಳುದಿಬ್ಬಗಳೂ ನರಿಗಳ ಹಕ್ಕೆಯೂ ಆಗಿರುವದು; ಅದು ನಿರ್ಜನವಾಗಿ ಬೆರಗಿನ ಸಿಳ್ಳಿಗೆ ಗುರಿಯಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ಬಾಬಿಲೋನು ನಾಶವಾದ ಕಟ್ಟಡಗಳ ಗುಡ್ಡೆಯಾಗುವುದು. ಬಾಬಿಲೋನು ಕಾಡುನಾಯಿಗಳ ನಿವಾಸವಾಗುವುದು. ಜನರು ಕಲ್ಲುಬಂಡೆಗಳ ಗುಡ್ಡೆಯನ್ನು ನೋಡಿ ಆಶ್ಚರ್ಯಪಡುವರು. ಬಾಬಿಲೋನಿನ ಬಗ್ಗೆ ಜನರು ತಲೆಯಾಡಿಸುವರು. ಬಾಬಿಲೋನು ನಿರ್ಜನ ಪ್ರದೇಶವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 51:37
24 ತಿಳಿವುಗಳ ಹೋಲಿಕೆ  

ಅವನು ಮಹಾಧ್ವನಿಯಿಂದ: “ ‘ಬಿದ್ದಳು! ಬಾಬಿಲೋನ್ ಮಹಾನಗರಿಯು ಬಿದ್ದಳು!’ ಆಕೆಯು ದೆವ್ವಗಳಿಗೆ ವಾಸಸ್ಥಾನವೂ ಎಲ್ಲಾ ದುರಾತ್ಮಗಳಿಗೂ ಅಶುದ್ಧವಾದ ಹಾಗೂ ಅಸಹ್ಯವಾದ ಪ್ರತಿಯೊಂದು ಪ್ರಾಣಿಪಕ್ಷಿಗಳಿಗೂ ನಿವಾಸವಾಗಿದ್ದಾಳೆ.


ಇಗೋ, ನಾನು ಕಳುಹಿಸಿ ಉತ್ತರ ದಿಕ್ಕಿನ ಗೋತ್ರಗಳೆಲ್ಲವನ್ನೂ, ನನ್ನ ಸೇವಕನಾದ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನನ್ನೂ ತೆಗೆದುಕೊಂಡು, ಈ ದೇಶಕ್ಕೆ ವಿರೋಧವಾಗಿಯೂ, ಅವರ ನಿವಾಸಿಗಳಿಗೆ ವಿರೋಧವಾಗಿಯೂ ಸುತ್ತಲಿರುವ ಈ ಎಲ್ಲಾ ಜನಾಂಗಗಳಿಗೆ ವಿರೋಧವಾಗಿಯೂ ತರಿಸಿ, ಅವರನ್ನು ಸಂಪೂರ್ಣ ನಾಶಮಾಡಿ ಅವರನ್ನು ಭಯಕ್ಕೂ, ಪರಿಹಾಸ್ಯಕ್ಕೂ ಗುರಿಮಾಡಿ ನಿತ್ಯ ನಾಶಮಾಡುವೆನು.


ಹೀಗೆ ತಮ್ಮ ದೇಶವನ್ನು ಹಾಳಾಗಿಯೂ, ನಿತ್ಯವಾದ ಹಾಸ್ಯಾಸ್ಪದವಾಗಿಯೂ ಮಾಡಿದ್ದಾರೆ. ಅದನ್ನು ಹಾದುಹೋಗುವವರೆಲ್ಲರೂ ವಿಸ್ಮಿತರಾಗಿ ತಲೆ ಅಲ್ಲಾಡಿಸುವರು.


“ನಿಶ್ಚಿಂತೆಯಾಗಿ ವಾಸಿಸಿದಂಥ ಉಲ್ಲಾಸದ ಪಟ್ಟಣ ನಾನೇ ಹೊರತು ಮತ್ತೊಂದಿಲ್ಲಾ,” ಎಂದು ತನ್ನೊಳಗೆ ಎಂದುಕೊಂಡಂಥ ಸುಭದ್ರ ನಿನೆವೆ ಪಟ್ಟಣವು ಇದೇ. ಅದು ಎಷ್ಟೋ ಹಾಳಾಯಿತು; ಮೃಗಗಳು ಮಲಗಿಕೊಳ್ಳುವ ಸ್ಥಳವಾಯಿತು. ಅದರಲ್ಲಿ ಹಾದುಹೋಗುವವರೆಲ್ಲರೂ ನಿಂದಿಸಿ ಅಪಹಾಸ್ಯ ಮಾಡುವರು.


ಖಡ್ಗದಿಂದಲೂ ಕ್ಷಾಮದಿಂದಲೂ ವ್ಯಾಧಿಯಿಂದಲೂ ಅವರನ್ನು ಹಿಂಸಿಸಿ, ನಾನು ಅವರನ್ನು ಓಡಿಸಿಬಿಟ್ಟ ಎಲ್ಲಾ ಜನಾಂಗಗಳಲ್ಲಿ ಶಾಪಕ್ಕೂ ಭಯಕ್ಕೂ ಪರಿಹಾಸ್ಯಕ್ಕೂ ನಿಂದೆಗೂ ಗುರಿಯಾಗುವ ಹಾಗೆ ಒಪ್ಪಿಸಿಬಿಡುವೆನು.


ಯೆರೂಸಲೇಮಿಗೂ, ಯೆಹೂದದ ಪಟ್ಟಣಗಳಿಗೂ, ಅದರ ಅರಸುಗಳಿಗೂ, ಅಧಿಕಾರಿಗಳಿಗೂ ಅವರನ್ನು ಇಂದಿನ ಪ್ರಕಾರ ಹಾಳು ಮಾಡಿ, ಭಯಕ್ಕೂ, ಪರಿಹಾಸ್ಯಕ್ಕೂ, ಶಾಪಕ್ಕೂ ಗುರಿ ಮಾಡುವ ಹಾಗೆ ಕುಡಿಸಿದೆನು.


“ಎಪ್ಪತ್ತು ವರ್ಷ ತುಂಬಿದ ಮೇಲೆ ನಾನು ಬಾಬಿಲೋನಿನ ಅರಸನನ್ನೂ, ಆ ಜನಾಂಗವನ್ನೂ, ಕಸ್ದೀಯರ ದೇಶವನ್ನೂ ಅವರ ಅಕ್ರಮಕ್ಕಾಗಿ ವಿಚಾರಿಸಿ ದಂಡಿಸುವೆನು. ಅದನ್ನು ನಿತ್ಯವಾಗಿ ಹಾಳುಮಾಡುವೆನು.


ಈ ಪಟ್ಟಣವನ್ನು ಭಯಾನಕವಾಗಿಯೂ, ಹಾಸ್ಯಾಸ್ಪದವಾಗಿಯೂ ಮಾಡುವೆನು. ಅದರ ಬಳಿಯಲ್ಲಿ ಹಾದುಹೋಗುವವರೆಲ್ಲರು ಅದರ ಎಲ್ಲಾ ಬಾಧೆಗಳ ನಿಮಿತ್ತ ವಿಸ್ಮಯಪಟ್ಟು, ಅಪಹಾಸ್ಯ ಮಾಡುವರು.


“ಅದನ್ನು ಮುಳ್ಳುಹಂದಿಗಳ ನಿವಾಸವಾಗಿಯೂ, ಕೊಳಚೆ ಪ್ರದೇಶವನ್ನಾಗಿಯೂ ಪರಿವರ್ತಿಸುವೆನು. ನಾಶನದ ಕಸಬರಿಗೆಯಿಂದ ಅದನ್ನು ಗುಡಿಸುವೆನು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ಆದ್ದರಿಂದ ಯೆಹೂದ ಮತ್ತು ಯೆರೂಸಲೇಮಿನವರ ಮೇಲೆ ಯೆಹೋವ ದೇವರು ಕೋಪಗೊಂಡು, ಅವುಗಳನ್ನು ಭಯಭೀತಿಗೂ, ಅಪಹಾಸ್ಯಗಳಿಗೂ ಆಸ್ಪದ ಮಾಡಿದ್ದಾರೆ. ಇದಕ್ಕೆ ನೀವೇ ಸಾಕ್ಷಿಗಳು.


ಏಕೆಂದರೆ ಒಮ್ರಿಯ ನಿಯಮಗಳನ್ನೂ ಕೈಕೊಳ್ಳುತ್ತೀರಿ. ಅಹಾಬ್ ಮನೆತನದ ದುರಾಚಾರಗಳನ್ನೂ ಅವರ ಸಂಪ್ರದಾಯಗಳನ್ನೂ ಅನುಸರಿಸುತ್ತಾ ಬಂದಿದ್ದೀರಿ. ಆದ್ದರಿಂದ ನೀವು ನಾಶವಾಗುವಂತೆ ಮಾಡುವೆನು. ನಿಮ್ಮ ಜನರನ್ನು ಅಪಹಾಸ್ಯಕ್ಕೆ ಗುರಿಮಾಡುವೆನು. ಆದ್ದರಿಂದ ನೀವು ನನ್ನ ಜನರ ನಿಂದೆಯನ್ನು ಹೊರುವಿರಿ.


ಆಗ ದೇಶವು ನೊಂದು ನಡುಗುವುದು. ಏಕೆಂದರೆ ಬಾಬಿಲೋನ್ ದೇಶವು ನಿರ್ಜನವಾಗಲಿ ಎಂದು ಅದರ ವಿರೋಧವಾಗಿ ಯೆಹೋವ ದೇವರ ಉದ್ದೇಶಗಳು ಸ್ಥಿರವಾಗಿವೆ.


ಯೆರೂಸಲೇಮನ್ನು ದಿಬ್ಬಗಳಾಗಿಯೂ, ನರಿಗಳ ಸ್ಥಾನವಾಗಿಯೂ ಮಾಡುತ್ತೇನೆ. ಯೆಹೂದದ ಪಟ್ಟಣಗಳನ್ನು ನಿವಾಸವಿಲ್ಲದೆ ಹಾಳು ಮಾಡುತ್ತೇನೆ.


“ಎದೋಮು ಸಹ ಹಾಳಾಗುವುದು; ಅದರ ಬಳಿಯಲ್ಲಿ ಹಾದುಹೋಗುವವರೆಲ್ಲರು ಅದರ ಎಲ್ಲಾ ಬಾಧೆಗಳ ನಿಮಿತ್ತ ವಿಸ್ಮಯಪಟ್ಟು, ಅಪಹಾಸ್ಯ ಮಾಡುವರು.


ಹಾಚೋರು ನರಿಗಳ ನಿವಾಸವೂ, ಎಂದೆಂದಿಗೂ ಹಾಳಾದ ಸ್ಥಳವೂ ಆಗುವುದು. ಅಲ್ಲಿ ಯಾವನಾದರೂ ವಾಸಮಾಡುವುದಿಲ್ಲ. ಯಾವ ನರಪುತ್ರನಾದರೂ ಅಲ್ಲಿ ತಂಗುವುದಿಲ್ಲ.


ಅಸಹ್ಯವಾದವುಗಳನ್ನು ನಿನ್ನ ಮೇಲೆ ಹಾಕಿ, ನಿನ್ನನ್ನು ನೀಚಳನ್ನಾಗಿ ಮಾಡಿ, ನಿನ್ನನ್ನು ಪರಿಹಾಸ್ಯಕ್ಕೀಡುಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು