Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 51:51 - ಕನ್ನಡ ಸಮಕಾಲಿಕ ಅನುವಾದ

51 “ನಾಚಿಕೆ ಪಡುತ್ತೇವೆ, ಏಕೆಂದರೆ ನಿಂದೆಯನ್ನು ಕೇಳಿದ್ದೇವೆ. ಅವಮಾನ ನಿಮ್ಮ ಮುಖಗಳನ್ನು ಮುಚ್ಚಿದೆ. ಏಕೆಂದರೆ ವಿದೇಶಿಗಳು ಯೆಹೋವ ದೇವರ ಆಲಯದ ಪರಿಶುದ್ಧ ಸ್ಥಳಗಳಲ್ಲಿ ಪ್ರವೇಶಿಸಿದ್ದಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

51 ನಾವು ನಿಂದೆಯನ್ನು ಕೇಳಿ ನಾಚಿಕೆಗೊಂಡೆವು, ‘ಯೆಹೋವನ ಆಲಯದ ಪವಿತ್ರಸ್ಥಾನಗಳನ್ನು ಮ್ಲೇಚ್ಛರು ಪ್ರವೇಶಿಸಿದ್ದರಿಂದ ಅವಮಾನವು ನಮ್ಮ ಮುಖವನ್ನು ಮುಚ್ಚಿಕೊಂಡಿದೆ’ ಎಂಬುದಾಗಿ ಅಂದುಕೊಳ್ಳುತ್ತಿರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

51 ‘ನಿಂದೆಯನ್ನು ಕೇಳಿ ನಾವು ಲಜ್ಜೆಗೊಂಡೆವು, ಮ್ಲೇಚ್ಛರು ಸರ್ವೇಶ್ವರನ ಪವಿತ್ರಾಲಯವನ್ನು ಪ್ರವೇಶಿಸಿದ್ದರಿಂದ ಅವಮಾನವು ನಮ್ಮ ಮುಖವನ್ನು ಆವರಿಸಿದೆ,’ ಎನ್ನುತ್ತೀರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

51 ನಾವು ನಿಂದೆಯನ್ನು ಕೇಳಿ ನಾಚಿಕೆಗೊಂಡೆವು, ಯೆಹೋವನ ಆಲಯದ ಪವಿತ್ರಸ್ಥಾನಗಳನ್ನು ಮ್ಲೇಚ್ಫರು ಪ್ರವೇಶಿಸಿದ್ದರಿಂದ ಅವಮಾನವು ನಮ್ಮ ಮುಖವನ್ನು ಮುಚ್ಚಿಕೊಂಡಿದೆ [ಎಂಬದಾಗಿ ಅಂದುಕೊಳ್ಳುತ್ತೀರೋ?]

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

51 “ಯೆಹೂದದ ಜನರಾದ ನಾವು ನಾಚಿಕೆಪಟ್ಟೆವು. ಜನರು ನಮ್ಮನ್ನು ಅಪಮಾನಗೊಳಿಸಿದ್ದರಿಂದ ನಾವು ನಾಚಿಕೆಪಟ್ಟಿದ್ದೇವೆ. ಏಕೆಂದರೆ ಯೆಹೋವನ ಆಲಯದ ಪವಿತ್ರ ಸ್ಥಳಗಳಲ್ಲಿ ಅಪರಿಚಿತರು ಪ್ರವೇಶಗೈದಿದ್ದಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 51:51
37 ತಿಳಿವುಗಳ ಹೋಲಿಕೆ  

ವೈರಿಯು ಆಕೆಯ ಎಲ್ಲಾ ಬೊಕ್ಕಸಗಳ ಮೇಲೆ ತನ್ನ ಕೈಚಾಚಿದ್ದಾನೆ. ನಿನ್ನ ಸಭೆಯಲ್ಲಿ ಸೇರಬಾರದೆಂದು ನೀನು ಆಜ್ಞಾಪಿಸಿದ ಇತರ ಜನಾಂಗಗಳು, ತನ್ನ ಪರಿಶುದ್ಧ ಸ್ಥಳದಲ್ಲಿ ಸೇರುವುದನ್ನು ನೋಡಿದ್ದಾಳೆ.


ನಾವು ನಮ್ಮ ನೆರೆಯವರಿಗೆ ನಿಂದೆಯೂ ನಮ್ಮ ಸುತ್ತಲಿರುವವರಿಗೆ ಗೇಲಿಯೂ ಹಾಸ್ಯವೂ ಆಗಿದ್ದೇವೆ.


ಆಗ ನನ್ನ ಶತ್ರು ಇದನ್ನು ನೋಡುವನು. ಅವನ ಮುಖವನ್ನು ಅವಮಾನದಿಂದ ಮುಚ್ಚಿಕೊಳ್ಳುವನು, “ನಿನ್ನ ಯೆಹೋವ ದೇವರು ಎಲ್ಲಿ?” ಎಂದು ನನ್ನನ್ನು ಜರೆದವರೇ ನಾಚಿಕೆಪಡುವರು. ಇದನ್ನು ನಾನು ಕಣ್ಣಾರೆ ಕಾಣುವೆನು. ಆ ಶತ್ರುಗಳಾದರೋ ಬೀದಿಯ ಕಸದಂತೆ ದಾರಿಹೋಕರ ತುಳಿತಕ್ಕೆ ಈಡಾಗುವರು.


ಅವನು ಕೂಡಿಸುವ ಸೈನ್ಯವು ಆಶ್ರಯದುರ್ಗವಾದ ಪವಿತ್ರಾಲಯವನ್ನು ಹೊಲಸುಮಾಡಿ, ನಿತ್ಯ ಯಜ್ಞವನ್ನು ನಿಲ್ಲಿಸುವುದು. ಹಾಳುಮಾಡುವ ಅಸಹ್ಯವಾದವುಗಳನ್ನು ಪ್ರತಿಷ್ಠಿಸುವುದು.


ಜನಾಂಗಗಳಲ್ಲಿ ನಿಮಗೆ ಬರಗಾಲದ ನಿಂದೆಯು ಇನ್ನು ಮೇಲೆ ಬಾರದ ಹಾಗೆ ನಾನು ಮರಗಳ ಫಲವನ್ನೂ ಹೊಲದ ಆದಾಯವನ್ನೂ ಹೆಚ್ಚಿಸುವೆನು.


ಇಸ್ರಾಯೇಲರ ಮನೆತನದವರಿಗೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ ಎಂದು ಹೇಳು: ಇಗೋ, ನಾನು ನನ್ನ ಪವಿತ್ರಾಲಯವನ್ನೂ, ನಿಮ್ಮ ಮುಖ್ಯಬಲವನ್ನೂ, ನಿಮ್ಮ ನೇತ್ರಾನಂದಕರವಾದದ್ದನ್ನೂ, ನಿಮ್ಮ ಮನಸ್ಸು ಅಭಿಲಾಷಿಸುವುದನ್ನೂ ನಾನು ಅಪವಿತ್ರಪಡಿಸುವೆನು; ನೀವು ಬಿಟ್ಟಿರುವ ನಿಮ್ಮ ಗಂಡು ಮತ್ತು ಹೆಣ್ಣುಮಕ್ಕಳು ಖಡ್ಗದಿಂದ ಬೀಳುವರು.


ದೇವರು ಅವರಿಗೆ, “ಆಲಯವನ್ನು ಅಶುದ್ಧ ಮಾಡಿರಿ, ಹತರಾದವರಿಂದ ಅಂಗಳಗಳನ್ನು ತುಂಬಿರಿ, ಹೊರಡಿರಿ,” ಎಂದು ಹೇಳಿದರು. ಆಗ ಅವರು ಹೊರಟು ನಗರದಲ್ಲಿದ್ದವರನ್ನು ಕೊಂದರು.


ಅವರು ತಮ್ಮಲ್ಲಿ ಗೋಣಿತಟ್ಟುಗಳನ್ನು ಕಟ್ಟಿಕೊಳ್ಳುವರು ಮತ್ತು ಭಯವು ಅವರನ್ನು ಮುಚ್ಚಿಬಿಡುವುದು. ಎಲ್ಲಾ ಮುಖಗಳ ಮೇಲೆ ನಾಚಿಕೆಯೂ, ಅವರ ಎಲ್ಲಾ ತಲೆಗಳು ಬೋಳಾಗಿಯೂ ಇರುವುವು.


ಯೆಹೋವ ದೇವರೇ, ನಮಗೆ ಏನು ಸಂಭವಿಸಿದೆ ಎಂದು ಜ್ಞಾಪಕಮಾಡಿಕೊಳ್ಳಿರಿ. ಪರಿಗಣಿಸಿ, ನಮ್ಮ ನಿಂದೆಯನ್ನು ನೋಡಿರಿ.


ಯೆಹೋವ ದೇವರೇ, ಕಟಾಕ್ಷಿಸಿ: ನೀವು ಇದನ್ನು ಯಾರಿಗೆ ಮಾಡಿದಿರೋ ಯೋಚಿಸಿರಿ. ಸ್ತ್ರೀಯರು ತಮ್ಮ ಫಲವಾದ ಕೂಸುಗಳನ್ನು ತಿನ್ನಬೇಕೇ? ಯಾಜಕನು ಮತ್ತು ಪ್ರವಾದಿಯು ಕರ್ತದೇವರ ಪರಿಶುದ್ಧ ಸ್ಥಳದಲ್ಲಿ ಹತರಾಗಬೇಕೋ?


ಯೆಹೋವ ದೇವರ ಆಲಯವನ್ನೂ, ಅರಮನೆಯನ್ನೂ, ಯೆರೂಸಲೇಮಿನಲ್ಲಿರುವ ಸಮಸ್ತ ಮನೆಗಳನ್ನೂ, ಪ್ರತಿ ದೊಡ್ಡಮನುಷ್ಯರ ಮನೆಗಳನ್ನೂ ಬೆಂಕಿಯಿಂದ ಸುಟ್ಟುಬಿಟ್ಟನು.


ನಾನು ನಿಮ್ಮಿಂದ ದೂರವಾದ ಮೇಲೆಯೇ ಪಶ್ಚಾತ್ತಾಪ ಪಟ್ಟೆನು; ತಿಳುವಳಿಕೆ ಹೊಂದಿದ ಮೇಲೆಯೇ ದುಃಖದಿಂದ ನನ್ನ ಎದೆಯನ್ನು ಬಡಿದುಕೊಂಡೆನು. ನನ್ನ ಯೌವನದ ಅವಮಾನವನ್ನು ನನ್ನ ಮೇಲೆ ಹೊತ್ತುಕೊಂಡ ಕಾರಣ ನಾನು ಲಜ್ಜೆಗೊಂಡೆನು, ಹೌದು, ತುಂಬಾ ನಾಚಿಕೆಪಟ್ಟೆನು.’


ಶ್ರೇಷ್ಠರು ತಮ್ಮ ಚಿಕ್ಕವರನ್ನು ನೀರಿಗೆ ಕಳುಹಿಸುತ್ತಾರೆ. ಇವರು ಬಾವಿಗಳಿಗೆ ಬರುತ್ತಾರೆ. ಆದರೆ ನೀರು ಸಿಕ್ಕಲ್ಲ. ಬರೀ ಪಾತ್ರೆಗಳುಳ್ಳವರಾಗಿ ತಿರುಗಿಕೊಳ್ಳುತ್ತಾರೆ. ಅವರು ನಾಚಿಕೆಪಟ್ಟು ದಿಗ್ಭ್ರಮೆಗೊಂಡವರಾಗಿ, ತಮ್ಮ ತಲೆಗಳನ್ನು ಮುಚ್ಚಿಕೊಳ್ಳುತ್ತಾರೆ.


ನನ್ನ ಎದುರಾಳಿಗಳು ಅವಮಾನವನ್ನು ಹೊದ್ದುಕೊಳ್ಳಲಿ, ತಮ್ಮ ನಾಚಿಕೆಯನ್ನು ಹೊದಿಕೆಯಂತೆ ತೊಟ್ಟುಕೊಳ್ಳಲಿ.


ಯೆಹೋವ ದೇವರೇ, ನಿಮ್ಮನ್ನು ನಿಂದಿಸಿದ ನಮ್ಮ ನೆರೆಯವರಿಗೆ ಏಳರಷ್ಟು ಪ್ರತಿದಂಡನೆಯನ್ನು ಅವರ ಮಡಿಲಿಗೆ ಕೊಡಿರಿ.


ದೇವರೇ, ಜನಾಂಗಗಳು ನಿಮ್ಮ ಬಾಧ್ಯತೆಗೆ ಬಂದು, ನಿಮ್ಮ ಪರಿಶುದ್ಧ ಮಂದಿರವನ್ನು ಅಪವಿತ್ರ ಮಾಡಿ, ಯೆರೂಸಲೇಮನ್ನು ಹಾಳು ದಿಬ್ಬಗಳಾಗಿ ಮಾಡಿದ್ದಾರೆ.


ನನ್ನನ್ನು ಆರೋಪಿಸುವವರು, ನಾಚಿಕೆಪಟ್ಟು ನಾಶವಾಗಲಿ. ನನ್ನ ಕೇಡಿಗಾಗಿ ಹುಡುಕುವವರನ್ನು ನಿಂದಾಪಮಾನಗಳು ಕವಿಯಲಿ.


“ಇಸಾಕನ ಉನ್ನತ ಪೂಜಾಸ್ಥಳಗಳು ನಾಶವಾಗುವುವು. ಇಸ್ರಾಯೇಲಿನ ಪರಿಶುದ್ಧ ಸ್ಥಳಗಳು ಹಾಳಾಗುವುವು. ನಾನು ಖಡ್ಗದೊಂದಿಗೆ ಯಾರೊಬ್ಬಾಮನ ಮನೆತನಕ್ಕೆ ವಿರುದ್ಧವಾಗಿ ಏಳುವೆನು.”


ಏಕೆಂದರೆ ಒಮ್ರಿಯ ನಿಯಮಗಳನ್ನೂ ಕೈಕೊಳ್ಳುತ್ತೀರಿ. ಅಹಾಬ್ ಮನೆತನದ ದುರಾಚಾರಗಳನ್ನೂ ಅವರ ಸಂಪ್ರದಾಯಗಳನ್ನೂ ಅನುಸರಿಸುತ್ತಾ ಬಂದಿದ್ದೀರಿ. ಆದ್ದರಿಂದ ನೀವು ನಾಶವಾಗುವಂತೆ ಮಾಡುವೆನು. ನಿಮ್ಮ ಜನರನ್ನು ಅಪಹಾಸ್ಯಕ್ಕೆ ಗುರಿಮಾಡುವೆನು. ಆದ್ದರಿಂದ ನೀವು ನನ್ನ ಜನರ ನಿಂದೆಯನ್ನು ಹೊರುವಿರಿ.


ಯೆಹೋವ ದೇವರೇ, ಇನ್ನೂ ಎಷ್ಟರವರೆಗೆ? ಸದಾಕಾಲಕ್ಕೆ ನೀವು ಅಡಗಿಕೊಳ್ಳುವಿರಾ? ನಿಮ್ಮ ಬೇಸರವು ಬೆಂಕಿಯ ಹಾಗೆ ಉರಿಯುವುದು ಎಷ್ಟರವರೆಗೆ?


ಆಮೋಚನ ಮಗ ಯೆಶಾಯನಿಗೆ ಬಾಬಿಲೋನಿನ ವಿಷಯವಾಗಿ ಬಂದ ಪ್ರವಾದನೆ:


ಯೆಹೋವ ದೇವರು ಯಾಕೋಬ್ಯರನ್ನು ಕರುಣಿಸುವರು. ಇಸ್ರಾಯೇಲರನ್ನು ಪುನಃ ಆಯ್ದುಕೊಳ್ಳುವರು. ಅವರನ್ನು ಅವರ ಸ್ವಂತ ದೇಶದಲ್ಲಿ ಸೇರಿಸುವರು. ಪರದೇಶದವರು ಅವರೊಂದಿಗೆ ಕೂಡಿಬಂದು, ಯಾಕೋಬನ ಮನೆತನಕ್ಕೆ ಸೇರಿಕೊಳ್ಳುವರು.


ಸಮುದ್ರತೀರದ ಮರುಭೂಮಿಯ ವಿಷಯವಾದ ಪ್ರವಾದನೆ: ದಕ್ಷಿಣ ಸೀಮೆಯಲ್ಲಿ ಬೀಸುವ ಬಿರುಗಾಳಿ ದಾಟಿ ಹೋಗುವಂತೆ ಆಕ್ರಮಣಕಾರರು ಮರುಭೂಮಿ ಕಡೆಯಿಂದ ಭಯಂಕರವಾದ ದೇಶದಿಂದ ಬರುತ್ತಾರೆ.


ಬಾಬಿಲೋನಿನ ಪುತ್ರಿಯಾದ ಕನ್ನಿಕೆಯೇ, ಕೆಳಕ್ಕೆ ಇಳಿದುಬಂದು, ಧೂಳಿನಲ್ಲಿ ಕುಳಿತುಕೋ! ಕಸ್ದೀಯರ ಪುತ್ರಿಯೇ, ಸಿಂಹಾಸನರಹಿತಳಾಗಿ ನೆಲದ ಮೇಲೆ ಕುಳಿತುಕೋ. ಏಕೆಂದರೆ ಇನ್ನು ಮೇಲೆ ನಿನ್ನನ್ನು ಕೋಮಲೆ ಮತ್ತು ನಾಜೂಕಾದವಳು ಎಂದು ಕರೆಯುವುದಿಲ್ಲ.


ಹತ್ತಿರದಲ್ಲಿಯೂ, ದೂರದಲ್ಲಿಯೂ ಒಬ್ಬರ ಬಳಿಯಲ್ಲಿ ಒಬ್ಬರಿರುವ ಉತ್ತರ ದಿಕ್ಕಿನ ಅರಸರೆಲ್ಲರಿಗೂ, ಭೂಮಿಯ ಮೇಲ್ಭಾಗದಲ್ಲಿರುವಂಥ ಲೋಕದ ಎಲ್ಲಾ ರಾಜ್ಯಗಳಿಗೂ ಕುಡಿಸಿದೆನು. ಶೇಷಕಿನ ಅರಸನು ಅವರ ತರುವಾಯ ಕುಡಿಯುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು