ಯೆರೆಮೀಯ 51:55 - ಕನ್ನಡ ಸಮಕಾಲಿಕ ಅನುವಾದ55 ಏಕೆಂದರೆ ಯೆಹೋವ ದೇವರು ಬಾಬಿಲೋನನ್ನು ಸೂರೆಮಾಡಿದ್ದಾರೆ; ಅವಳೊಳಗಿಂದ ಮಹಾ ಶಬ್ದವನ್ನು ತೆಗೆದುಹಾಕಿದ್ದಾರೆ; ಅವಳ ತೆರೆಗಳು ನೀರಿನ ಹಾಗೆ ಘೋಷಿಸುವಾಗ, ಅವುಗಳ ಶಬ್ದದ ಧ್ವನಿಯು ಹೊರಟಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201955 ಯೆಹೋವನು ಬಾಬೆಲನ್ನು ಹಾಳುಮಾಡುತ್ತಿದ್ದಾನಲ್ಲಾ, ಅದರ ಸದ್ದುಗದ್ದಲವನ್ನು ಅಡಗಿಸಿಬಿಡುತ್ತಾನೆ; ಮಹಾ ಜಲಪ್ರವಾಹಗಳು ಭೋರ್ಗರೆಯುವಂತೆ ತರಂಗತರಂಗವಾಗಿ ಬಂದ ಶತ್ರುಗಳು ಘೋಷಿಸುತ್ತಾರೆ, ಕೂಗಿ ಆರ್ಭಟಿಸುತ್ತಾರೆ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)55 ಬಾಬಿಲೋನನ್ನು ನಾನು ಹಾಳುಮಾಡಿಬಿಡುತ್ತೇನೆ ಅದರ ಸದ್ದುಗದ್ದಲವನ್ನು ಅಡಗಿಸಿಬಿಡುತ್ತೇನೆ. ಮಹಾ ಜಲಪ್ರವಾಹಗಳು ಭೋರ್ಗರೆಯುವಂತೆ ಅಲೆ ಅಲೆಯಾಗಿ ಬಂದ ಶತ್ರುಗಳು ಘೋಷಿಸಿ ಆರ್ಭಟಿಸುತ್ತಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)55 ಯೆಹೋವನು ಬಾಬೆಲನ್ನು ಹಾಳುಮಾಡುತ್ತಿದ್ದಾನಲ್ಲಾ, ಅದರ ಬಲು ಗದ್ದಲವನ್ನು ಅಣಗಿಸಿಬಿಡುತ್ತಾನೆ; ಮಹಾಜಲಪ್ರವಾಹಗಳು ಭೋರ್ಗರೆಯುವಂತೆ ತರಂಗತರಂಗವಾಗಿ ಬಂದ ಶತ್ರುಗಳು ಘೋಷಿಸುತ್ತಾರೆ, ಕೂಗಿ ಆರ್ಭಟಿಸುತ್ತಾರೆ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್55 ಯೆಹೋವನು ಬಾಬಿಲೋನನ್ನು ಬಹುಬೇಗನೆ ನಾಶಮಾಡುವನು. ಆ ನಗರದ ದೊಡ್ಡ ಧ್ವನಿಗಳು ಶಾಂತವಾಗುವಂತೆ ಆತನು ಮಾಡುವನು. ವೈರಿಗಳು ಸಾಗರದ ತರಂಗಮಾಲೆಗಳಂತೆ ಗರ್ಜಿಸುತ್ತಾ ಬರುವರು. ಸುತ್ತಮುತ್ತಲಿನ ಜನರೆಲ್ಲರು ಆ ಗರ್ಜನೆಯನ್ನು ಕೇಳುವರು. ಅಧ್ಯಾಯವನ್ನು ನೋಡಿ |