Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 51:57 - ಕನ್ನಡ ಸಮಕಾಲಿಕ ಅನುವಾದ

57 ಇದಲ್ಲದೆ ನಾನು ಅವಳ ಪ್ರಧಾನರನ್ನೂ, ಅವಳ ಜ್ಞಾನಿಗಳನ್ನೂ, ಅವಳ ಅಧಿಪತಿಗಳನ್ನೂ, ಅವಳ ಅಧಿಕಾರಿಗಳನ್ನೂ, ಅವಳ ಪರಾಕ್ರಮಶಾಲಿಗಳನ್ನೂ ಮತ್ತರಾಗಿ ಮಾಡುತ್ತೇನೆ. ಅವರು ನಿತ್ಯ ನಿದ್ರೆ ಮಾಡುವರು, ಎಚ್ಚರವಾಗುವುದಿಲ್ಲ,” ಎಂದು ಸೇನಾಧೀಶ್ವರ ಯೆಹೋವ ದೇವರು ಎಂಬ ಹೆಸರುಳ್ಳ ರಾಜಾಧಿರಾಜರು ಸಾರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

57 ನಾನು ಅದರ ಪ್ರಧಾನರು, ಮಂತ್ರಿಗಳು, ಅಧಿಪತಿಗಳು, ಅಧಿಕಾರಿಗಳು, ಬಲಿಷ್ಠರು, ಇವರೆಲ್ಲರಿಗೂ ತಲೆಗೇರುವ ಮಟ್ಟಿಗೆ ಕುಡಿಸುವೆನು; ಅವರು ಎಂದಿಗೂ ಎಚ್ಚರಗೊಳ್ಳದೆ ದೀರ್ಘನಿದ್ರೆಮಾಡುವರು ಎಂದು ಸೇನಾಧೀಶ್ವರನಾದ ಯೆಹೋವನೆಂಬ ಹೆಸರಿನ ರಾಜಾಧಿರಾಜನು ಅನ್ನುತ್ತಾನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

57 ಬಾಬಿಲೋನಿನ ರಾಜ್ಯಪಾಲರು, ಮಂತ್ರಿಗಳು, ಅಧಿಪತಿಗಳು, ಅಧಿಕಾರಿಗಳು, ಯೋಧರು, ಇವರೆಲ್ಲರಿಗೆ ತಲೆಗೇರುವ ತನಕ ಕುಡಿಸುವೆನು. ಅವರು ಎಂದೆಂದಿಗೂ ಎಚ್ಚರಗೊಳ್ಳದೆ ಚಿರನಿದ್ರೆ ಮಾಡುವರು ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರನೆಂಬ ರಾಜಾಧಿರಾಜರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

57 ನಾನು ಅದರ ಪ್ರಧಾನರು, ಮಂತ್ರಿಗಳು, ಅಧಿಪತಿಗಳು, ಅಧಿಕಾರಿಗಳು, ಬಲಿಷ್ಠರು, ಇವರೆಲ್ಲರಿಗೂ ತಲೆಗೇರ ಕುಡಿಸುವೆನು; ಅವರು ಎಂದಿಗೂ ಎಚ್ಚರಗೊಳ್ಳದೆ ದೀರ್ಘನಿದ್ರೆಮಾಡುವರು ಎಂದು ಸೇನಾಧೀಶ್ವರನಾದ ಯೆಹೋವನಾಮಧೇಯದ ರಾಜಾಧಿರಾಜನು ಅನ್ನುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

57 ಬಾಬಿಲೋನಿನ ಮುಖ್ಯ ಅಧಿಕಾರಿಗಳಿಗೂ ಪಂಡಿತರಿಗೂ ದ್ರಾಕ್ಷಾರಸ ಕುಡಿಯುವಂತೆ ಮಾಡುತ್ತೇನೆ. ಅಲ್ಲಿಯ ಅಧಿಪತಿಗಳಿಗೂ ಅಧಿಕಾರಿಗಳಿಗೂ ಸೈನಿಕರಿಗೂ ದ್ರಾಕ್ಷಾರಸ ಕುಡಿಸುತ್ತೇನೆ. ಆಮೇಲೆ ಅವರು ಶಾಶ್ವತವಾಗಿ ಮಲಗಿಬಿಡುತ್ತಾರೆ. ಅವರು ಎಚ್ಚರಗೊಳ್ಳುವುದೇ ಇಲ್ಲ.” ಸರ್ವಶಕ್ತನಾದ ಯೆಹೋವನೆಂಬ ನಾಮಧೇಯದ ರಾಜಾಧಿರಾಜನ ನುಡಿಯಿದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 51:57
20 ತಿಳಿವುಗಳ ಹೋಲಿಕೆ  

“ಸೇನಾಧೀಶ್ವರ ಯೆಹೋವ ದೇವರೆಂದು ಹೆಸರುಳ್ಳ ಅರಸನು ಹೇಳುವುದೇನೆಂದರೆ, ‘ನನ್ನ ಜೀವದಾಣೆ,’ ಬೆಟ್ಟಗಳಲ್ಲಿ ತಾಬೋರಿನಂತೆಯೂ, ಸಮುದ್ರದ ಬಳಿಯಲ್ಲಿ ಕರ್ಮೆಲಿನಂತೆಯೂ ನಿಶ್ಚಯವಾಗಿ ಬರುವನು.


ಮೋವಾಬು ಸೂರೆಯಾಯಿತು. ಅದರ ಪಟ್ಟಣಗಳು ಏರಿ ಹೋದವು, ಅದರ ಶ್ರೇಷ್ಠ ಯೌವನಸ್ಥರು ಹತರಾಗುವುದಕ್ಕೆ ಹೋಗಿದ್ದಾರೆ,” ಎಂದು ಸರ್ವಶಕ್ತ ಯೆಹೋವ ಎಂಬ ಹೆಸರುಳ್ಳ ರಾಜಾಧಿರಾಜರ ನುಡಿ.


“ಆದ್ದರಿಂದ ನೀನು ಅವರಿಗೆ ಹೇಳಬೇಕಾದದ್ದೇನೆಂದರೆ: ‘ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ, ನಾನು ನಿಮ್ಮ ಮಧ್ಯದಲ್ಲಿ ಕಳುಹಿಸುವ ಖಡ್ಗದ ನಿಮಿತ್ತವೇ ಕುಡಿಯಿರಿ, ಮತ್ತರಾಗಿರಿ, ಕಾರಿರಿ, ಬೀಳಿರಿ, ಇನ್ನು ಮೇಲೆ ತಿರುಗಿ ಏಳದಿರಿ.’


ಅವರು ಉರಿಗೊಂಡಿರುವಾಗ, ನಾನು ಅವರಿಗೆ ಔತಣವನ್ನು ಸಿದ್ಧಪಡಿಸಿ, ಅವರು ಅದರಿಂದ ಸಂಭ್ರಮಪಟ್ಟು, ಎಂದಿಗೂ ಎಚ್ಚರಗೊಳ್ಳದೆ, ದೀರ್ಘ ನಿದ್ರೆ ಮಾಡುವಂತೆ ತಲೆಗೇರುವತನಕ ಕುಡಿಸುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.


“ಆಕೆಯೊಂದಿಗೆ ಜಾರತ್ವ ಮಾಡಿರುವ ಭೂರಾಜರು, ಆಕೆಯ ದಹನದಿಂದ ಏರುವ ಹೊಗೆಯನ್ನು ಕಂಡಾಗೆಲ್ಲಾ ಆಕೆಗಾಗಿ ಅಳುತ್ತಾ ಗೋಳಾಡುವರು.


“ಆದರೆ ತನ್ನ ಮಂದೆಯಲ್ಲಿ ದೋಷವಿಲ್ಲದ ಗಂಡು ಪಶು ಇರಲಾಗಿ ಅದನ್ನು ಅರ್ಪಿಸಲು ಪ್ರಮಾಣಮಾಡಿ, ಯೆಹೋವ ದೇವರಿಗೆ ದೋಷವುಳ್ಳದ್ದನ್ನು ಅರ್ಪಿಸುವ ಮೋಸಗಾರನಿಗೆ ಶಾಪ, ಏಕೆಂದರೆ ನಾನು ಮಹಾ ಅರಸನು, ನನ್ನ ಹೆಸರು ಇತರ ಜನಾಂಗಗಳಲ್ಲಿ ಭಯಭಕ್ತಿಯುಳ್ಳದ್ದಾಗಿರಬೇಕು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ಅವರು ಮುಳ್ಳುಗಳಲ್ಲಿ ಸಿಕ್ಕಿಕೊಳ್ಳುವರು, ತಮ್ಮ ದ್ರಾಕ್ಷಾರಸದಿಂದ ಮತ್ತರಾಗುವರು. ಪೂರ್ಣವಾಗಿ ಒಣಗಿದ ಕೂಳೆಯಂತೆ ಅವರು ಸುಟ್ಟು ಹೋಗುವರು.


ಆಗ ಯೆಹೋವ ದೇವರ ದೂತನು ಹೊರಟುಬಂದು ಅಸ್ಸೀರಿಯದ ದಂಡಿನಲ್ಲಿದ್ದ 1,85,000 ಜನರನ್ನು ಸಂಹರಿಸಿದನು. ಉದಯದಲ್ಲಿ ಜನರು ಎದ್ದಾಗ, ಇಗೋ, ಅವರೆಲ್ಲರು ಸತ್ತು ಹೆಣಗಳಾಗಿದ್ದರು.


ಆಗ ನಾನು, “ಅಯ್ಯೋ, ನಾನು ನಾಶವಾದೆನಲ್ಲಾ! ಏಕೆಂದರೆ, ನಾನು ಅಶುದ್ಧ ತುಟಿಯವನು. ನಾನು ಅಶುದ್ಧ ತುಟಿಯುಳ್ಳವರ ಮಧ್ಯದಲ್ಲಿ ವಾಸಿಸುವವನು. ನನ್ನ ಕಣ್ಣುಗಳು ರಾಜಾಧಿರಾಜರೂ ಸೇನಾಧೀಶ್ವರ ಯೆಹೋವ ದೇವರನ್ನು ಕಂಡವು!” ಎಂದೆನು.


ಸುಳ್ಳುಗಾರರ ಗುರುತುಗಳನ್ನು ನಿರರ್ಥಕ ಮಾಡುವವನೂ ಮತ್ತು ಕಣಿ ಹೇಳುವವರನ್ನು ಹುಚ್ಚರನ್ನಾಗಿ ಮಾಡುವವನೂ ಜ್ಞಾನಿಗಳನ್ನು ಹಿಂದಕ್ಕೆ ತಳ್ಳಿ, ಅವರ ತಿಳುವಳಿಕೆಯನ್ನು ಬುದ್ಧಿಹೀನವಾಗ ಮಾಡುವವನೂ


ಆಗ ನೀನು ಅವರಿಗೆ ಹೇಳಬೇಕಾದದ್ದೇನೆಂದರೆ: ‘ಯೆಹೋವ ದೇವರು ಹೀಗೆ ಹೇಳುತ್ತಾರೆ, ಇಗೋ, ನಾನು ಈ ದೇಶದ ನಿವಾಸಿಗಳನ್ನೆಲ್ಲಾ ದಾವೀದನ ಸಿಂಹಾಸನದಲ್ಲಿ ಕುಳಿತುಕೊಳ್ಳುವ ಅರಸರನ್ನೂ, ಯಾಜಕರನ್ನೂ, ಪ್ರವಾದಿಗಳನ್ನೂ, ಯೆರೂಸಲೇಮಿನ ನಿವಾಸಿಗಳೆಲ್ಲರನ್ನೂ ಅಮಲಿನಿಂದ ತುಂಬಿಸುವೆನು.


ಆದ್ದರಿಂದ ಅದರ ಯೌವನಸ್ಥರು ಬೀದಿಗಳಲ್ಲಿ ಬೀಳುವರು; ಅದರ ಸೈನಿಕರೆಲ್ಲಾ ಆ ದಿವಸದಲ್ಲಿ ಸುಮ್ಮನಾಗುವರು,” ಎಂದು ಯೆಹೋವ ದೇವರು ಹೇಳುತ್ತಾರೆ.


ಸಾರ್ವಭೌಮ ಯೆಹೋವ ದೇವರು ಹೇಳುವುದೇನೆಂದರೆ, ನನ್ನ ಜೀವದಾಣೆ, ನಿಶ್ಚಯವಾಗಿ ಬಲವಾದ ಕೈಯಿಂದಲೂ, ಚಾಚಿದ ತೋಳಿನಿಂದಲೂ, ಸುರಿಸಿದ ರೋಷದಿಂದಲೂ ನಾನು ನಿಮ್ಮ ಮೇಲೆ ಅಧಿಕಾರ ನಡೆಸುತ್ತೇನೆ.


ಅಸ್ಸೀರಿಯದ ಅರಸನೇ, ನಿನ್ನ ಕುರುಬರು ತೂಕಡಿಸುತ್ತಾರೆ. ನಿನ್ನ ಪ್ರಧಾನರು ವಿಶ್ರಾಂತಿಗೈಯುತ್ತಿದ್ದಾರೆ. ಕೂಡಿಸುವವರು ಯಾರೂ ಇಲ್ಲದಂತೆ ನಿನ್ನ ಜನರೆಲ್ಲರೂ ಬೆಟ್ಟಗಳಲ್ಲಿ ಚದರಿಹೋಗಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು