Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 51:58 - ಕನ್ನಡ ಸಮಕಾಲಿಕ ಅನುವಾದ

58 ಮಾತ್ರವಲ್ಲದೆ ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ: “ಬಾಬಿಲೋನಿನ ಅಗಲವಾದ ಪೌಳಿಗೋಡೆ ಪೂರ್ಣವಾಗಿ ನೆಲಸಮವಾಗುವುದು. ಅವಳ ಎತ್ತರವಾದ ಬಾಗಿಲುಗಳು ಬೆಂಕಿಯಿಂದ ಸುಟ್ಟುಹೋಗುವುವು; ಜನರು ವ್ಯರ್ಥಕ್ಕಾಗಿಯೂ, ಪ್ರಜೆಗಳು ಬೆಂಕಿಗಾಗಿಯೂ ಕಷ್ಟಪಟ್ಟು ಆಯಾಸಪಡುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

58 ಸೇನಾಧೀಶ್ವರನಾದ ಯೆಹೋವನು, “ಬಾಬೆಲಿನ ಗಾತ್ರವಾದ ಪೌಳಿಗೋಡೆಯು ಸಂಪೂರ್ಣವಾಗಿ ನೆಲಸಮವಾಗುವುದು. ಅದರ ಉನ್ನತದ್ವಾರಗಳು ಬೆಂಕಿಯಿಂದ ಸುಟ್ಟುಹೋಗುವವು; ಜನಾಂಗಗಳು ಪಟ್ಟ ಪರಿಶ್ರಮ ವ್ಯರ್ಥ, ಜನಗಳು ಆಯಾಸಗೊಂಡು ದುಡಿದದ್ದು ಬೆಂಕಿಗೆ ತುತ್ತಾಗುವುದು” ಎಂದು ನುಡಿಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

58 ಸೇನಾಧೀಶ್ವರ ಸರ್ವೇಶ್ವರ ಹೀಗೆನ್ನುತ್ತಾರೆ: ಬಾಬಿಲೋನಿನ ದೊಡ್ಡ ಪೌಳಿಗೋಡೆ ಪೂರ್ಣವಾಗಿ ನೆಲಸಮವಾಗುವುದು. ಅದರ ಉನ್ನತ ದ್ವಾರಗಳು ಬೆಂಕಿಯಿಂದ ಸುಟ್ಟುಹೋಗುವುವು ರಾಷ್ಟ್ರಗಳು ದುಡಿದದ್ದು ಬೆಂಕಿಗೆ ತುತ್ತಾಗುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

58 ಸೇನಾಧೀಶ್ವರನಾದ ಯೆಹೋವನು ಹೀಗೆ ನುಡಿಯುತ್ತಾನೆ - ಬಾಬೆಲಿನ ಗಾತ್ರವಾದ ಪೌಳಿ ಗೋಡೆಯು ಸಂಪೂರ್ಣವಾಗಿ ನೆಲಸಮವಾಗುವದು, ಅದರ ಉನ್ನತದ್ವಾರಗಳು ಬೆಂಕಿಯಿಂದ ಸುಟ್ಟುಹೋಗುವವು; ಜನಾಂಗಗಳು ಪಟ್ಟ ಪರಿಶ್ರಮ ವ್ಯರ್ಥ, ಜನಗಳು ಆಯಾಸಗೊಂಡು ದುಡಿದದ್ದು ಬೆಂಕಿಗೆ ತುತ್ತಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

58 ಸರ್ವಶಕ್ತನಾದ ಯೆಹೋವನು ಹೀಗೆನ್ನುವನು: “ಬಾಬಿಲೋನಿನ ಅಗಲವಾದ ಮತ್ತು ಸುಭದ್ರವಾದ ಗೋಡೆಯನ್ನು ಬೀಳಿಸಲಾಗುವುದು. ಅದರ ಎತ್ತರವಾದ ಬಾಗಿಲುಗಳನ್ನು ಸುಟ್ಟುಹಾಕಲಾಗುವುದು. ಬಾಬಿಲೋನಿನ ಜನರು ನಗರವನ್ನು ರಕ್ಷಿಸಲು ಬಹಳ ಕಷ್ಟಪಡುವರು. ಆದರೆ ಅದು ನಿಷ್ಪ್ರಯೋಜಕವಾಗುವುದು. ನಗರವನ್ನು ರಕ್ಷಿಸುವ ಪ್ರಯತ್ನದಲ್ಲಿ ಅವರು ತುಂಬಾ ಶ್ರಮವಹಿಸುವರು. ಆದರೆ ಅವರು ಕೇವಲ ಅಗ್ನಿಗೆ ಆಹುತಿಯಾಗುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 51:58
13 ತಿಳಿವುಗಳ ಹೋಲಿಕೆ  

ಜನರ ಶ್ರಮೆಯು ಬೆಂಕಿಗೆ ತುತ್ತಾಗುವುದು. ಜನಾಂಗಗಳು ವ್ಯರ್ಥವಾಗಿ ದಣಿದುಕೊಳ್ಳುತ್ತವೆ. ಇದು ಸೇನಾಧೀಶ್ವರ ಯೆಹೋವ ದೇವರ ಚಿತ್ತವಷ್ಟೆ.


ಹೀಗೆ ಹೇಳು, ‘ಈ ಪ್ರಕಾರ ಬಾಬಿಲೋನ್ ಮುಳುಗಿ ಹೋಗುವುದು. ನಾನು ಅವಳ ಮೇಲೆ ತರುವ ಕೇಡಿನೊಳಗಿಂದ ಏಳದು. ಅವರು ಬೀಳುವರು.’ ” ಇಲ್ಲಿಯ ತನಕ ಯೆರೆಮೀಯನ ವಾಕ್ಯಗಳು.


ಏಕೆಂದರೆ ನಾನು ಬಾಬಿಲೋನಿನಲ್ಲಿರುವ ಬೇಲ್‌ನನ್ನು ದಂಡಿಸಿ, ಅವನು ನುಂಗಿದ್ದನ್ನು ಅವನ ಬಾಯೊಳಗಿಂದ ಹೊರಗೆ ಕಕ್ಕಿಸುವೆನು. ಇನ್ನು ಮೇಲೆ ಜನಾಂಗಗಳು ಅವನ ಬಳಿಗೆ ಪ್ರವಾಹವಾಗಿ ಬರುವುದಿಲ್ಲ. ಹೌದು, ಬಾಬಿಲೋನಿನ ಗೋಡೆ ಬೀಳುವುದು.


ಸುತ್ತಲೂ ಅದಕ್ಕೆ ವಿರೋಧವಾಗಿ ಆರ್ಭಟಿಸಿರಿ; ಅದರ ಬುರುಜುಗಳು ಬಿದ್ದು ಹೋದವು; ಅದರ ಪೌಳಿಗೋಡೆಯನ್ನು ಕೆಡವಲಾಯಿತು. ಅದು ಯೆಹೋವ ದೇವರ ಪ್ರತಿದಂಡನೆ; ಆದ್ದರಿಂದ ನೀವೂ ಅದಕ್ಕೆ ಮುಯ್ಯಿತೀರಿಸಿರಿ. ಅದು ಇತರರಿಗೆ ಮಾಡಿದ ಹಾಗೆಯೇ ಅದಕ್ಕೆ ಮಾಡಿರಿ.


ಬಾಬಿಲೋನಿನ ಪರಾಕ್ರಮಶಾಲಿಗಳು ಯುದ್ಧಮಾಡುವುದನ್ನು ಬಿಟ್ಟಿದ್ದಾರೆ; ಅವರ ಭದ್ರಸ್ಥಾನಗಳಲ್ಲಿ ನಿಂತಿದ್ದಾರೆ. ಅವರ ಪರಾಕ್ರಮತನ ತಪ್ಪಿತು; ಅವರು ಬಲಹೀನರಾಗಿದ್ದಾರೆ. ಆ ದೇಶದ ನಿವಾಸಗಳನ್ನು ಸುಟ್ಟಿದ್ದಾರೆ; ಅದರ ಹೆಬ್ಬಾಗಿಲುಗಳು ಮುರಿದುಹೋಗಿವೆ.


“ ‘ನಾವು ಬಾಬಿಲೋನನ್ನು ವಾಸಿಮಾಡಲು ಪ್ರಯತ್ನಿಸಿದೆವು; ಆದರೆ ಅದು ವಾಸಿಯಾಗಲಿಲ್ಲ; ಅದನ್ನು ಬಿಡು, ನಮ್ಮ ಸ್ವಂತ ದೇಶಗಳಿಗೆ ಹೋಗೋಣ; ಅದರ ನ್ಯಾಯ ತೀರ್ವಿಕೆಯು ಆಕಾಶಗಳಿಗೆ ಮುಟ್ಟುತ್ತದೆ; ಆಕಾಶಗಳವರೆಗೂ ಏರುತ್ತದೆ.’


ಯೆಹೋವ ದೇವರು ಮನೆಯನ್ನು ಕಟ್ಟದೆ ಇದ್ದರೆ, ಅದನ್ನು ಕಟ್ಟುವವರು ವ್ಯರ್ಥವಾಗಿ ಪ್ರಯಾಸಪಡುತ್ತಾರೆ; ಯೆಹೋವ ದೇವರು ಪಟ್ಟಣವನ್ನು ಕಾಯದೆ ಇದ್ದರೆ, ಅದನ್ನು ಕಾಯುವವರು ವ್ಯರ್ಥವಾಗಿ ಕಾಯುತ್ತಾರೆ.


ಅವರು ವ್ಯರ್ಥವಾಗಿ ದುಡಿಯರು. ಕಷ್ಟವನ್ನು ಎದುರುಗೊಳ್ಳುವುದಿಲ್ಲ. ಏಕೆಂದರೆ ಅವರು ಯೆಹೋವ ದೇವರ ಆಶೀರ್ವಾದ ಹೊಂದಿದವರ ಸಂತಾನವಾಗಿದ್ದಾರೆ. ಅವರ ಸಂಗಡ ಅವರ ಸಂತತಿಯು ಸಹ ಆಶೀರ್ವಾದ ಹೊಂದುವುದು.


ಶತ್ರುಗಳು ಬಂದು ಶ್ರೇಷ್ಠರ ದ್ವಾರಗಳೊಳಗೆ ಹೋಗುವಂತೆ ಎತ್ತರವಾದ ಪರ್ವತದ ಮೇಲೆ ನೀವು ಧ್ವಜವನ್ನೆತ್ತಿ ಅವರಿಗೆ ನಿಮ್ಮ ಶಬ್ದವನ್ನು ಕೇಳಿಸುವಂತೆ ಜೋರಾಗಿ ಕೂಗಿ ಕರೆಯಿರಿ.


ನೀನು ನಿನ್ನ ಬಹಳವಾದ ಆಲೋಚನೆಗಳಿಂದ ಆಯಾಸಗೊಂಡಿದ್ದೀ. ಖಗೋಳಜ್ಞರು, ಜೋಯಿಸರು, ಪಂಚಾಂಗದವರು, ಇವರೆಲ್ಲರೂ ನಿಂತುಕೊಂಡು ನಿನಗೆ ಬರುವ ವಿಪತ್ತುಗಳಿಂದ ನಿನ್ನನ್ನು ರಕ್ಷಿಸಲಿ.


ತಮ್ಮ ತಮ್ಮ ನೆರೆಯವರಿಗೆ ವಂಚನೆಮಾಡಿ ಸತ್ಯವನ್ನು ಮಾತನಾಡರು. ಸುಳ್ಳುಗಳನ್ನು ಹೇಳುವುದಕ್ಕೆ ಅವರು ತಮ್ಮ ನಾಲಿಗೆಗೆ ಬೋಧಿಸಿದ್ದಾರೆ. ಪಾಪದಿಂದ ತಮ್ಮನ್ನು ಸುಸ್ತಾಗಿಸಿಕೊಳ್ಳುತ್ತಾರೆ.


ನಮ್ಮನ್ನು ಹಿಂಬಾಲಿಸುವವರು ನಮ್ಮ ನೆರಳಿನಲ್ಲೇ ಇದ್ದಾರೆ; ನಾವು ದಣಿದಿದ್ದೇವೆ ಮತ್ತು ವಿಶ್ರಾಂತಿಯನ್ನು ಕಾಣುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು