ಯೆರೆಮೀಯ 51:59 - ಕನ್ನಡ ಸಮಕಾಲಿಕ ಅನುವಾದ59 ಪ್ರವಾದಿಯಾದ ಯೆರೆಮೀಯನು ಮಹ್ಸೇಯನ ಮಗನಾದ ನೇರೀಯನ ಮಗ ಸೆರಾಯನಿಗೆ, ಅವನು ಯೆಹೂದದ ಅರಸನಾದ ಚಿದ್ಕೀಯನ ಸಂಗಡ, ಇವನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಬಾಬಿಲೋನಿಗೆ ಹೋದಾಗ ಆಜ್ಞಾಪಿಸಿದ ವಾಕ್ಯವು. ಆ ಸೆರಾಯನು ಅಂಗರಕ್ಷಕ ಸೇನೆಯ ನಾಯಕನಾಗಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201959 ಮಹ್ಸೇಯನ ಮೊಮ್ಮಗನೂ ನೇರೀಯನ ಮಗನೂ ಆದ ಸೆರಾಯನು ಯೆಹೂದದ ಅರಸನಾದ ಚಿದ್ಕೀಯನ ಆಳ್ವಿಕೆಯ ನಾಲ್ಕನೆಯ ವರ್ಷ ಚಿದ್ಕೀಯನೊಡನೆ ಬಾಬಿಲೋನಿಗೆ ಪ್ರಯಾಣಮಾಡಿದಾಗ ಪ್ರವಾದಿಯಾದ ಯೆರೆಮೀಯನು ಅವನಿಗೆ ಕೊಟ್ಟ ಅಪ್ಪಣೆ. (ಸೆರಾಯನು ಯಾರೆಂದರೆ ಸೇನೆಯ ಪ್ರಧಾನ ಅಧಿಕಾರಿ.) ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)59 ಮಸ್ಸೇಯನ ಮೊಮ್ಮಗನೂ ನೇರೀಯನ ಮಗನೂ ಆದ ಸೆರಾಯನು ಜುದೇಯದ ಅರಸ ಚಿದ್ಕೀಯನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಚಿದ್ಕೀಯನೊಡನೆ ಬಾಬಿಲೋನಿಗೆ ಪ್ರಯಾಣಮಾಡಿದನು. ಆಗ ಪ್ರವಾದಿ ಯೆರೆಮೀಯನು ಸೆರಾಯನಿಗೆ ಒಂದು ಅಪ್ಪಣೆಯನ್ನು ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)59 ಮಹ್ಸೇಯನ ಮೊಮ್ಮಗನೂ ನೇರೀಯನ ಮಗನೂ ಆದ ಸೆರಾಯನು ಯೆಹೂದದ ಅರಸನಾದ ಚಿದ್ಕೀಯನ ಆಳಿಕೆಯ ನಾಲ್ಕನೆಯ ವರುಷ ಚಿದ್ಕೀಯನೊಡನೆ ಬಾಬೆಲಿಗೆ ಪ್ರಯಾಣಮಾಡಿದಾಗ ಪ್ರವಾದಿಯಾದ ಯೆರೆಮೀಯನು ಅವನಿಗೆ ಕೊಟ್ಟ ಅಪ್ಪಣೆ. (ಸೆರಾಯನು ಯಾರಂದರೆ ಸರಬರಾಯಿ ಕಾರುಬಾರಿ.) ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್59 ಯೆರೆಮೀಯನು ಸೆರಾಯ ಎಂಬ ಅಧಿಕಾರಿಯ ಕೈಗೆ ಕೊಟ್ಟ ಸಂದೇಶವಿದು. ಸೆರಾಯನು ಯೆಹೂದದ ನೇರೀಯನ ಮಗ. ನೇರೀಯನು ಮಹ್ಸೇಯನ ಮಗನು. ಸೆರಾಯನು ಯೆಹೂದದ ರಾಜನಾದ ಚಿದ್ಕೀಯನ ಜೊತೆಗೆ ಬಾಬಿಲೋನಿಗೆ ಹೋದನು. ಈ ಸಂಗತಿ ಯೆಹೂದದಲ್ಲಿ ಚಿದ್ಕೀಯನ ಆಳ್ವಿಕೆಯ ನಾಲ್ಕನೇ ವರ್ಷದಲ್ಲಿ ನಡೆದದ್ದು. ಆ ಸಮಯದಲ್ಲಿ ಯೆರೆಮೀಯನು ಸೆರಾಯನೆಂಬ ಅಧಿಕಾರಿಯ ಕೈಗೆ ಈ ಸಂದೇಶವನ್ನು ಕೊಟ್ಟನು. ಅಧ್ಯಾಯವನ್ನು ನೋಡಿ |