Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 52:1 - ಕನ್ನಡ ಸಮಕಾಲಿಕ ಅನುವಾದ

1 ಚಿದ್ಕೀಯನು ಅರಸನಾದಾಗ ಇಪ್ಪತ್ತೊಂದು ವರ್ಷದವನಾಗಿದ್ದು; ಅವನು ಯೆರೂಸಲೇಮಿನಲ್ಲಿ ಹನ್ನೊಂದು ವರ್ಷ ಆಳಿದನು. ಅವನ ತಾಯಿ ಲಿಬ್ನದ ಯೆರೆಮೀಯನ ಮಗಳಾದ ಹಮೂಟಲ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಚಿದ್ಕೀಯನು ಅರಸನಾದಾಗ ಇಪ್ಪತ್ತೊಂದು ವರ್ಷದವನಾಗಿದ್ದನು; ಇವನು ಯೆರೂಸಲೇಮಿನಲ್ಲಿ ಹನ್ನೊಂದು ವರ್ಷ ಆಳಿದನು. ಲಿಬ್ನದ ಯೆರೆಮೀಯನ ಮಗಳು ಆದ ಹಮೂಟಲ್ ಎಂಬಾಕೆಯು ಅವನ ತಾಯಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಚಿದ್ಕೀಯನು ಅರಸನಾದಾಗ ಅವನಿಗೆ ಇಪ್ಪತ್ತೊಂದು ವರ್ಷ. ಅವನು ಜೆರುಸಲೇಮನ್ನು ಹನ್ನೊಂದು ವರ್ಷ ಆಳಿದ. ಅವನ ತಾಯಿ ಲಿಬ್ನದ ಯೆರೆಮೀಯನ ಮಗಳಾದ ಹಮೂಟಲ್ ಎಂಬಾಕೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಚಿದ್ಕೀಯನು ಅರಸನಾದಾಗ ಇಪ್ಪತ್ತೊಂದು ವರುಷದವನಾಗಿದ್ದನು. ಇವನು ಯೆರೂಸಲೇವಿುನಲ್ಲಿ ಹನ್ನೊಂದು ವರುಷ ಆಳಿದನು. ಲಿಬ್ನದ ಯೆರೆಮೀಯನ ಮಗಳು ಆದ ಹಮೂಟಲ್ ಎಂಬಾಕೆಯು ಅವನ ತಾಯಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಚಿದ್ಕೀಯನು ಯೆಹೂದದ ರಾಜನಾದಾಗ ಇಪ್ಪತ್ತೊಂದು ವರ್ಷದವನಾಗಿದ್ದನು. ಚಿದ್ಕೀಯನು ಜೆರುಸಲೇಮಿನಲ್ಲಿ ಹನ್ನೊಂದು ವರ್ಷ ಆಳಿದನು. ಅವನ ತಾಯಿಯ ಹೆಸರು ಹಮೂಟಲ್. ಈಕೆ ಯೆರೆಮೀಯನ ಮಗಳು. ಹಮೂಟಲಳ ಮನೆತನದವರು ಲಿಬ್ನ ಪಟ್ಟಣದ ನಿವಾಸಿಗಳಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 52:1
12 ತಿಳಿವುಗಳ ಹೋಲಿಕೆ  

ಚಿದ್ಕೀಯನು ಅರಸನಾದಾಗ ಇಪ್ಪತ್ತೊಂದು ವರ್ಷದವನಾಗಿದ್ದು, ಅವನು ಯೆರೂಸಲೇಮಿನಲ್ಲಿ ಹನ್ನೊಂದು ವರ್ಷ ಆಳಿದನು. ಅವನ ತಾಯಿ ಲಿಬ್ನದ ಯೆರೆಮೀಯನ ಮಗಳಾದ ಹಮೂಟಲ್.


ಆಗ ಯೆಹೋಶುವನೂ ಅವನ ಸಂಗಡ ಇದ್ದ ಸಮಸ್ತ ಇಸ್ರಾಯೇಲರೆಲ್ಲರೂ ಮಕ್ಕೇದದಿಂದ ಲಿಬ್ನಕ್ಕೆ ಹೋಗಿ, ಅದರ ಮೇಲೆ ಯುದ್ಧಮಾಡಿದರು.


ಚಿದ್ಕೀಯನು ಅರಸನಾದಾಗ ಇಪ್ಪತ್ತೊಂದು ವರ್ಷದವನಾಗಿದ್ದು, ಅವನು ಯೆರೂಸಲೇಮಿನಲ್ಲಿ ಹನ್ನೊಂದು ವರ್ಷ ಆಳಿದನು.


ಯೆಹೂದ್ಯರಿಗೆ ವಿರೋಧವಾಗಿ ದಂಗೆಯೆದ್ದ ಎದೋಮ್ಯರು ಅಂದಿನಿಂದ ಇಂದಿನವರೆಗೂ ಸ್ವತಂತ್ರರಾಗಿದ್ದಾರೆ. ಅದೇ ಕಾಲದಲ್ಲಿ ಲಿಬ್ನದವರೂ ಸ್ವತಂತ್ರರಾದರು.


ಇದಲ್ಲದೆ ಲಿಬ್ನಾ, ಎತೆರ್, ಆಷಾನ್,


ಯೆಹೋವಾಹಾಜನು ಅರಸನಾದಾಗ ಇಪ್ಪತ್ತಮೂರು ವರ್ಷದವನಾಗಿದ್ದು, ಅವನು ಯೆರೂಸಲೇಮಿನಲ್ಲಿ ಮೂರು ತಿಂಗಳು ಆಳಿದನು. ಅವನ ತಾಯಿ ಲಿಬ್ನ ಊರಿನ ಯೆರೆಮೀಯನ ಮಗಳಾದ ಹಮೂಟಲ್.


ಹೀಗೆ ಸೈನ್ಯಾಧಿಕಾರಿಯು ಅಸ್ಸೀರಿಯದ ಅರಸನು ಲಾಕೀಷನ್ನು ಬಿಟ್ಟು ಹೊರಟಿದ್ದಾನೆಂದು ಕೇಳಿದಾಗ, ಅವನು ಲಿಬ್ನಕ್ಕೆ ಹೋಗಿ, ಅಲ್ಲಿ ಅರಸನು ಲಿಬ್ನದವರೊಂದಿಗೆ ಯುದ್ಧಮಾಡುತ್ತಿರುವುದನ್ನು ಕಂಡನು.


ಅರಸನಾದ ಚಿದ್ಕೀಯನು ಮಲ್ಕೀಯನ ಮಗ ಪಷ್ಹೂರನನ್ನೂ, ಮಾಸೇಯನ ಮಗನಾದ ಯಾಜಕನಾದ ಚೆಫನ್ಯನನ್ನೂ ಯೆರೆಮೀಯನ ಬಳಿಗೆ ಕಳುಹಿಸಿ,


ಪ್ರವಾದಿಯಾದ ಯೆರೆಮೀಯನು ಮಹ್ಸೇಯನ ಮಗನಾದ ನೇರೀಯನ ಮಗ ಸೆರಾಯನಿಗೆ, ಅವನು ಯೆಹೂದದ ಅರಸನಾದ ಚಿದ್ಕೀಯನ ಸಂಗಡ, ಇವನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಬಾಬಿಲೋನಿಗೆ ಹೋದಾಗ ಆಜ್ಞಾಪಿಸಿದ ವಾಕ್ಯವು. ಆ ಸೆರಾಯನು ಅಂಗರಕ್ಷಕ ಸೇನೆಯ ನಾಯಕನಾಗಿದ್ದನು.


ಚಿದ್ಕೀಯನ ಆಳ್ವಿಕೆಯ ಒಂಬತ್ತನೆಯ ವರ್ಷದ ಹತ್ತನೆಯ ತಿಂಗಳಿನ ಹತ್ತನೆಯ ದಿವಸದಲ್ಲಿ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ತನ್ನ ಸಮಸ್ತ ಸೈನ್ಯ ಸಮೇತ ಯೆರೂಸಲೇಮಿಗೆ ವಿರೋಧವಾಗಿ ಬಂದು, ಅದಕ್ಕೆ ಎದುರಾಗಿ ದಂಡಿಳಿದು ಅದರ ಸುತ್ತಲೂ ಮಣ್ಣಿನ ದಿಬ್ಬಗಳನ್ನು ಮಾಡಿಸಿದನು.


ಯೆಹೂದದ ಅರಸನಾದ ಚಿದ್ಕೀಯನ ಒಂಬತ್ತನೆಯ ವರ್ಷದ ಹತ್ತನೆಯ ತಿಂಗಳಿನ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ತನ್ನ ಸಮಸ್ತ ಸೈನ್ಯದೊಂದಿಗೆ ಯೆರೂಸಲೇಮಿಗೆ ವಿರೋಧವಾಗಿ ಬಂದು, ಅದನ್ನು ಮುತ್ತಿಗೆ ಹಾಕಿದರು.


ಹೀಗಿರುವುದರಿಂದ ನಿರಂತರವಾಗಿ ಅವರು ತಮ್ಮ ಬಲೆಯನ್ನು ಬರಿದುಮಾಡಿ, ಕರುಣೆ ಇಲ್ಲದೆ ಜನಾಂಗಗಳನ್ನು ನಾಶ ಮಾಡುತ್ತಾ ಅವನು ಹೋಗಬೇಕೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು