Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 52:11 - ಕನ್ನಡ ಸಮಕಾಲಿಕ ಅನುವಾದ

11 ಇದಲ್ಲದೆ ಚಿದ್ಕೀಯನ ಕಣ್ಣುಗಳನ್ನು ಕೀಳಿಸಿ, ಅವನಿಗೆ ಬೇಡಿಹಾಕಿಸಿ, ಬಾಬಿಲೋನಿಗೆ ತೆಗೆದುಕೊಂಡುಹೋಗಿ, ಜೀವನಾವಧಿಯವರೆಗೆ ಅವನನ್ನು ಸೆರೆಯಲ್ಲಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಇದಲ್ಲದೆ ಬಾಬೆಲಿನ ಅರಸನು ಚಿದ್ಕೀಯನ ಎರಡು ಕಣ್ಣುಗಳನ್ನೂ ಕಿತ್ತು, ಅವನಿಗೆ ಬೇಡಿ ಹಾಕಿ ಬಾಬಿಲೋನಿಗೆ ತೆಗೆದುಕೊಂಡು ಹೋಗಿ, ಅವನು ಜೀವದಿಂದ ಇರುವವರೆಗೆ ಸೆರೆಯಲ್ಲಿ ಇಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಇದಲ್ಲದೆ ಬಾಬಿಲೋನಿಯದ ಆ ಅರಸನು ಚಿದ್ಕೀಯನ ಎರಡು ಕಣ್ಣುಗಳನ್ನು ಕಿತ್ತು ಅವನಿಗೆ ಬೇಡಿ ಹಾಕಿ ಬಾಬಿಲೋನಿಗೆ ತೆಗೆದುಕೊಂಡು ಹೋಗಿ ಜೀವನಾವಧಿಯವರೆಗೆ ಅವನನ್ನು ಸೆರೆಯಲ್ಲಿಟ್ಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಇದಲ್ಲದೆ ಬಾಬೆಲಿನ ಅರಸನು ಚಿದ್ಕೀಯನ ಎರಡು ಕಣ್ಣುಗಳನ್ನೂ ಕಿತ್ತು ಅವನಿಗೆ ಬೇಡಿ ಹಾಕಿ ಬಾಬೆಲಿಗೆ ತೆಗೆದುಕೊಂಡು ಹೋಗಿ ಅವನು ಜೀವದಿಂದಿರುವವರೆಗೆ ಸೆರೆಯಲ್ಲಿ ಇಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ತರುವಾಯ ಬಾಬಿಲೋನಿನ ರಾಜನು ಚಿದ್ಕೀಯನ ಕಣ್ಣುಗಳನ್ನು ಸಹ ಕೀಳಿಸಿದನು. ಅವನಿಗೆ ಕಂಚಿನ ಸರಪಳಿಗಳನ್ನು ಬಿಗಿಸಿದನು. ಆಮೇಲೆ ಚಿದ್ಕೀಯನನ್ನು ಬಾಬಿಲೋನಿಗೆ ತೆಗೆದುಕೊಂಡು ಹೋದನು. ಬಾಬಿಲೋನಿನಲ್ಲಿ ಚಿದ್ಕೀಯನನ್ನು ಸೆರೆಮನೆಯಲ್ಲಿ ಇಟ್ಟನು. ಚಿದ್ಕೀಯನು ಸಾಯುವವರೆಗೆ ಸೆರೆಮನೆಯಲ್ಲಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 52:11
7 ತಿಳಿವುಗಳ ಹೋಲಿಕೆ  

ನನ್ನ ಬಲೆಯನ್ನೂ ಸಹ ನಾನು ಅವನ ಮೇಲೆ ಹರಡುವೆನು. ಅವನು ನನ್ನ ಉರುಲಿನಲ್ಲಿ ಸಿಕ್ಕಿಬೀಳುವನು. ನಾನು ಅವನನ್ನು ಕಸ್ದೀಯರ ನಾಡಾದ ಬಾಬಿಲೋನಿಗೆ ಒಯ್ಯುವೆನು. ಆದರೆ ಅವನು ಅದನ್ನು ನೋಡದೆ ಅಲ್ಲಿಯೇ ಸಾಯುವನು.


ಇದಲ್ಲದೆ ಚಿದ್ಕೀಯನ ಕಣ್ಣುಗಳನ್ನು ಕೀಳಿಸಿ, ಅವನಿಗೆ ಕಂಚಿನ ಬೇಡಿಹಾಕಿಸಿ, ಬಾಬಿಲೋನಿಗೆ ಸಾಗಿಸಿದನು.


“ ‘ನಿಶ್ಚಯವಾಗಿ ಯಾವನಿಂದ ಅರಸನಾಗಿ ಆಯ್ಕೆಗೊಂಡನೋ ಎಂದರೆ ಯಾವನ ಪ್ರಮಾಣವನ್ನು ತಿರಸ್ಕರಿಸಿದನೋ, ಯಾವನ ಒಡಂಬಡಿಕೆಯನ್ನು ಮೀರಿದನೋ, ನನ್ನ ಜೀವದಾಣೆ ಅವನು ಇರುವಲ್ಲಿಯೇ ಬಾಬಿಲೋನಿನ ಮಧ್ಯದಲ್ಲಿ ಇವನು ಸಾಯುವನು, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.


ಯೆಹೋವ ದೇವರು ಹೇಳುವುದೇನೆಂದರೆ, ತರುವಾಯ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ, ಅವನ ಸೇವಕರನ್ನೂ, ಜನರನ್ನೂ ಈ ಪಟ್ಟಣದಲ್ಲಿ ವ್ಯಾಧಿಯಿಂದಲೂ, ಖಡ್ಗದಿಂದಲೂ, ಕ್ಷಾಮದಿಂದಲೂ ಉಳಿದವರನ್ನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಕೈಗೂ, ಅವರ ಶತ್ರುಗಳ ಕೈಗೂ ಒಪ್ಪಿಸುವೆನು. ಅವನು ಅವರನ್ನು ಖಡ್ಗದ ಬಾಯಿಂದ ಹೊಡೆಯುವನು. ಅವರ ಮೇಲೆ ಕರುಣೆ ಇಡುವುದಿಲ್ಲ, ಕನಿಕರಿಸುವುದಿಲ್ಲ, ಅಂತಃಕರಣ ಪಡುವುದಿಲ್ಲ.’


ಅವರು ತನ್ನ ಗುಡಾರವನ್ನು ತೋಟದಂತೆ ಬಲಾತ್ಕಾರವಾಗಿ ತೆಗೆದುಹಾಕಿದ್ದಾರೆ. ಅವರು ತನ್ನ ಸಭಾ ಸ್ಥಾನಗಳನ್ನು ನಾಶಮಾಡಿದ್ದಾರೆ. ಯೆಹೋವ ದೇವರು ಚೀಯೋನಿಗೆ ಪವಿತ್ರ ಹಬ್ಬಗಳನ್ನೂ, ಸಬ್ಬತ್ ದಿನಗಳನ್ನೂ ಮರೆತುಬಿಡುವಂತೆ ಮಾಡಿದ್ದಾರೆ. ತನ್ನ ಕೋಪದ ಉರಿಯಲ್ಲಿ ಅರಸನನ್ನೂ, ಯಾಜಕನನ್ನೂ ತುಚ್ಛೀಕರಿಸಿದ್ದಾರೆ.


ಅವರು ರಥಗಳ ಸಂಗಡವಾಗಿಯೂ ಬಂಡಿಗಳ ಸಂಗಡವಾಗಿಯೂ ಜನಗಳ ಸಮೂಹದ ಸಂಗಡವಾಗಿಯೂ ಬಲವುಳ್ಳವರಾಗಿ ತಮ್ಮ ಆಯುಧಗಳೊಂದಿಗೆ ನಿನಗೆ ವಿರುದ್ಧವಾಗಿ ಬರುವರು. ಸುತ್ತಲೂ ಖೇಡ್ಯವನ್ನೂ ಗುರಾಣಿಯನ್ನೂ ಶಿರಸ್ತ್ರಾಣವನ್ನೂ ಹಿಡಿದು ನಿನಗೆ ವಿರುದ್ಧವಾಗಿರುವೆನು. ಇದಲ್ಲದೆ ನಾನು ಅವರಿಗೆ ನ್ಯಾಯತೀರ್ಪಿನ ಅಧಿಕಾರ ಕೊಡುವೆನು. ಅವರು ತಮ್ಮ ನ್ಯಾಯಗಳ ಪ್ರಕಾರ ನಿನಗೆ ನ್ಯಾಯತೀರಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು