ಯೆರೆಮೀಯ 52:20 - ಕನ್ನಡ ಸಮಕಾಲಿಕ ಅನುವಾದ20 ಅರಸನಾದ ಸೊಲೊಮೋನನು ಯೆಹೋವ ದೇವರ ಆಲಯಕ್ಕಾಗಿ ಮಾಡಿಸಿದ್ದ ಎರಡು ಕಂಬಗಳು, ನೀರನ್ನು ಸಂಗ್ರಹಿಸಲು ಮಾಡಿದ ದೊಡ್ಡ ಕಂಚಿನ ಪಾತ್ರೆ, ಪೀಠಗಳನ್ನು ಹೊರುವ ಹನ್ನೆರಡು ಕಂಚಿನ ಹೋರಿಗಳು, ಇವುಗಳನ್ನು ಮಾಡುವುದಕ್ಕೆ ತೂಕ ಮಾಡಲಾರದಷ್ಟು ಕಂಚು ಹಿಡಿದಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಅರಸನಾದ ಸೊಲೊಮೋನನು ಯೆಹೋವನ ಆಲಯಕ್ಕೋಸ್ಕರ ಮಾಡಿಸಿದ ಎರಡು ಕಂಬಗಳು, ಸಮುದ್ರವೆನಿಸಿಕೊಂಡ ಪಾತ್ರೆಯು, ಪೀಠಗಳನ್ನು ಹೊರುವ ಹನ್ನೆರಡು ತಾಮ್ರದ ಹೋರಿಗಳು, ಇವುಗಳಿಗೆ ಲೆಕ್ಕವಿಲ್ಲದಷ್ಟು ತಾಮ್ರ ಹಿಡಿದಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಅರಸ ಸೊಲೊಮೋನನು ಸರ್ವೇಶ್ವರನಾಲಯಕ್ಕಾಗಿ ಮಾಡಿಸಿದ ಎರಡು ಕಂಬಗಳು, ಕಂಚಿನ ಕಡಲೆಂಬ ಪಾತ್ರೆ, ಪೀಠಗಳನ್ನು ಹೊರುವ ಹನ್ನೆರಡು ಕಂಚಿನ ಹೋರಿಗಳು, ಇವುಗಳನ್ನು ಮಾಡುವುದಕ್ಕೆ ಎಷ್ಟೋ ಕಂಚು ಹಿಡಿದಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಅರಸನಾದ ಸೊಲೊಮೋನನು ಯೆಹೋವನ ಆಲಯಕ್ಕೋಸ್ಕರ ಮಾಡಿಸಿದ ಎರಡು ಕಂಬಗಳು, ಸಮುದ್ರವೆನಿಸಿಕೊಂಡ ಪಾತ್ರೆಯು, ಪೀಠಗಳನ್ನು ಹೊರುವ ಹನ್ನೆರಡು ತಾಮ್ರದ ಹೋರಿಗಳು, ಇವುಗಳಿಗೆ ಲೆಕ್ಕವಿಲ್ಲದಷ್ಟು ತಾಮ್ರ ಹಿಡಿದಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಎರಡು ಕಂಬಗಳು, ಸಮುದ್ರವೆನಿಸಿಕೊಂಡ ಪಾತ್ರೆಯು, ಅದನ್ನು ಹೊತ್ತುಕೊಂಡಿರುವ ಹನ್ನೆರಡು ಕಂಚಿನ ಹೋರಿಗಳು ಮತ್ತು ಚಲಿಸಬಲ್ಲ ಅಡ್ಡಣಿಗಳು ಬಹಳ ಭಾರವಾಗಿದ್ದವು. ರಾಜನಾದ, ಸೊಲೊಮೋನನು ಯೆಹೋವನ ಆಲಯಕ್ಕೋಸ್ಕರ ಆ ವಸ್ತುಗಳನ್ನು ಮಾಡಿಸಿದ್ದನು. ಆ ವಸ್ತುಗಳಿಗಾಗಿ ಉಪಯೋಗಿಸಲಾದ ಕಂಚು ತೂಕ ಮಾಡಲಾರದಷ್ಟು ಭಾರವಾಗಿತ್ತು. ಅಧ್ಯಾಯವನ್ನು ನೋಡಿ |