Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 52:7 - ಕನ್ನಡ ಸಮಕಾಲಿಕ ಅನುವಾದ

7 ಆಗ ಪಟ್ಟಣದ ಗೋಡೆ ಮುರಿಯಲಾಯಿತು. ಸೈನಿಕರೆಲ್ಲರು ಓಡಿಹೋಗಿ, ಅರಸನ ತೋಟದ ಬಳಿಯಲ್ಲಿದ್ದ ಎರಡು ಗೋಡೆಗಳ ಮಧ್ಯದಲ್ಲಿ ಇದ್ದ ಬಾಗಿಲಿನ ಮಾರ್ಗವಾಗಿ ಹೊರಟು, ಬಾಬಿಲೋನಿನವರು ಪಟ್ಟಣದ ಬಳಿಯಲ್ಲಿ ಇದ್ದದ್ದರಿಂದ ಅವರು ಅರಾಬಾ ಎಂಬ ಕಣಿವೆ ಪ್ರದೇಶದ ಕಡೆಗೆ ಪಲಾಯನ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಪೌಳಿಗೋಡೆಯಲ್ಲಿ ಒಂದು ದ್ವಾರವನ್ನು ಮಾಡಿದ್ದರಿಂದ ಒಳಗಿದ್ದ ಎಲ್ಲಾ ಸೈನಿಕರು ಅದೇ ರಾತ್ರಿ ಅರಸನ ತೋಟದ ಬಳಿಯಲ್ಲಿರುವ ಬಾಗಿಲಿನ ಮೂಲಕ ಪಟ್ಟಣದೊಳಗಿಂದ ಹೊರಟು ಓಡಿ ಹೋದರು; ಆ ಬಾಗಿಲು ಎರಡು ಗೋಡೆಗಳ ಮಧ್ಯದಲ್ಲಿತ್ತು; ಅವರು ಅರಾಬಾ ಎಂಬ ತಗ್ಗಾದ ಪ್ರದೇಶದ ಮಾರ್ಗವಾಗಿ ಪಲಾಯನ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಒಳಗಿದ್ದ ಎಲ್ಲ ಸೈನಿಕರು ಅದೇ ರಾತ್ರಿ ಅರಸನ ತೋಟದ ಬಳಿಯಿದ್ದ ಬಾಗಿಲಿನ ಮೂಲಕ ನಗರದಿಂದ ಓಡಿಹೋದರು. ಆ ಬಾಗಿಲು ಎರಡು ಗೋಡೆಗಳ ಮಧ್ಯೆಯಿತ್ತು. ಅವರು ಅರಾಬಾ ಎಂಬ ಕಣಿವೆ ಪ್ರದೇಶದ ಮಾರ್ಗವಾಗಿ ಪಲಾಯನ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಪೌಳಿಗೋಡೆಯಲ್ಲಿ ಒಂದು ದ್ವಾರವನ್ನು ಮಾಡಿದ್ದರಿಂದ ಒಳಗಿದ್ದ ಎಲ್ಲಾ ಸೈನಿಕರು ಅದೇ ರಾತ್ರಿ ಅರಸನ ತೋಟದ ಬಳಿಯಲ್ಲಿರುವ ಬಾಗಿಲಿನ ಮೂಲಕ ಪಟ್ಟಣದೊಳಗಿಂದ ಹೊರಟು ಓಡಿಹೋದರು; (ಆ ಬಾಗಿಲು ಎರಡು ಗೋಡೆಗಳ ಮಧ್ಯದಲ್ಲಿತ್ತು); ಅವರು ಅರಾಬಾ ಎಂಬ ತಗ್ಗಾದ ಪ್ರದೇಶದ ಮಾರ್ಗವಾಗಿ ಪಲಾಯನಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆ ದಿನ ಬಾಬಿಲೋನಿನ ಸೈನ್ಯವು ಜೆರುಸಲೇಮಿನಲ್ಲಿ ನುಗ್ಗಿತ್ತು. ಜೆರುಸಲೇಮಿನ ಸೈನಿಕರು ಓಡಿಹೋದರು. ಅವರು ರಾತ್ರಿಯ ಸಮಯದಲ್ಲಿ ಎರಡು ಗೋಡೆಗಳ ಮಧ್ಯದ ಬಾಗಿಲಿನಿಂದ ನಗರದಿಂದ ಓಡಿಹೋದರು. ಆ ಬಾಗಿಲು ರಾಜನ ಉದ್ಯಾನವನದ ಹತ್ತಿರ ಇತ್ತು. ಬಾಬಿಲೋನಿನ ಸೈನಿಕರು ಜೆರುಸಲೇಮ್ ನಗರವನ್ನು ಮುತ್ತಿದ್ದರೂ ಜೆರುಸಲೇಮಿನ ಸೈನಿಕರು, ಮರುಭೂಮಿಯ ಕಡೆಗೆ ಓಡಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 52:7
17 ತಿಳಿವುಗಳ ಹೋಲಿಕೆ  

ಹಾಯ್ಗಡಗಳನ್ನು ಹಿಡಿದಿದ್ದಾರೆ, ಜೊಂಡು ಹುಲ್ಲನ್ನು ಸುಟ್ಟುಬಿಟ್ಟಿದ್ದಾರೆ, ರಣವೀರರು ಬೆಚ್ಚಿಬಿದ್ದಿದ್ದಾರೆ.”


ಆಗ ಪಟ್ಟಣದ ಗೋಡೆ ಮುರಿಯಲಾಯಿತು. ಸೈನಿಕರೆಲ್ಲರು ಓಡಿಹೋಗಿ, ಅರಸನ ತೋಟದ ಬಳಿಯಲ್ಲಿದ್ದ ಎರಡು ಗೋಡೆಗಳ ಮಧ್ಯದಲ್ಲಿ ಇದ್ದ ಬಾಗಿಲಿನ ಮಾರ್ಗವಾಗಿ ಹೊರಟು, ಬಾಬಿಲೋನಿನವರು ಪಟ್ಟಣದ ಬಳಿಯಲ್ಲಿ ಇದ್ದದ್ದರಿಂದ ಅವರು ಅರಾಬಾ ಎಂಬ ಕಣಿವೆ ಪ್ರದೇಶದ ಕಡೆಗೆ ಪಲಾಯನ ಮಾಡಿದರು.


ಆದ್ದರಿಂದ ಅದರ ಯೌವನಸ್ಥರು ಅದರ ಚೌಕಗಳಲ್ಲಿ ಬೀಳುವರು; ಯುದ್ಧಭಟರೆಲ್ಲರೂ ಆ ದಿವಸದಲ್ಲಿ ಕಡಿದುಹಾಕಲಾಗುವರು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ಇಸ್ರಾಯೇಲ್ ರಕ್ಷಣಾಬಂಡೆ ಅವರನ್ನು ಮಾರಿ, ಯೆಹೋವ ದೇವರು ಅವರನ್ನು ಕೈಬಿಟ್ಟ ಹೊರತು, ಒಬ್ಬನು ಹೇಗೆ ಸಾವಿರ ಮಂದಿಯನ್ನು ಹಿಂದಟ್ಟುವನು? ಇಬ್ಬರು ಹೇಗೆ ಹತ್ತು ಸಾವಿರ ಮಂದಿಯನ್ನು ಓಡಿಸುವರು?


ಯೆಹೋವ ದೇವರು ನಿಮ್ಮನ್ನು ನಿಮ್ಮ ಶತ್ರುಗಳ ಮುಂದೆ ಸೋಲಿಸಿಬಿಡುವರು. ನೀವು ಒಂದೇ ಮಾರ್ಗದಲ್ಲಿ ಅವರಿಗೆ ವಿರೋಧವಾಗಿ ದಾಳಿಮಾಡಲು ಹೊರಟು, ಏಳು ಮಾರ್ಗಗಳಲ್ಲಿ ಅವರ ಮುಂದೆ ಓಡಿಹೋಗುವಿರಿ. ಭೂಮಿಯ ರಾಜ್ಯಗಳೆಲ್ಲವೂ ಇದನ್ನು ಕಂಡು ಬೆರಗಾಗುವವು.


“ ‘ನಿಮ್ಮಲ್ಲಿ ಯಾರು ಉಳಿದು ಶತ್ರುಗಳ ದೇಶದಲ್ಲಿ ಇರುವರೋ, ಅವರ ಹೃದಯದಲ್ಲಿ ಭೀತಿಯನ್ನು ಹುಟ್ಟಿಸುವೆನು. ಬಡಿದಾಡುವ ಎಲೆಯ ಶಬ್ದವು ಅವರನ್ನು ಓಡಿಸುವುದು. ಖಡ್ಗಕ್ಕೆ ಓಡಿ ಹೋದ ಹಾಗೆ ಓಡಿಹೋಗುವರು.


ನಾನು ನಿಮಗೆ ವಿಮುಖನಾಗಿರುವೆನು. ಆದ್ದರಿಂದ ನೀವು ನಿಮ್ಮ ವೈರಿಗಳಿಂದ ಸೋತುಹೋಗುವಿರಿ. ನಿಮ್ಮ ವೈರಿಗಳು ನಿಮ್ಮ ಮೇಲೆ ದೊರೆತನ ಮಾಡುವರು. ಓಡಿಸುವವನು ಯಾರೂ ಇಲ್ಲದಿರುವಾಗಲೂ ಓಡಿಹೋಗುವಿರಿ.


ಯೆಹೋವ ದೇವರು ಹೇಳುತ್ತಾರೆ, ಇಗೋ, ನಾನು ಆಜ್ಞಾಪಿಸಿ ಅವರನ್ನು ಈ ಪಟ್ಟಣದ ಬಳಿಗೆ ತಿರುಗಿ ಬರಮಾಡುವೆನು; ಅವರು ಅದಕ್ಕೆ ವಿರೋಧವಾಗಿ ಯುದ್ಧಮಾಡಿ, ಅದನ್ನು ಹಿಡಿದು ಬೆಂಕಿಯಿಂದ ಸುಡುವರು ಮತ್ತು ಯೆಹೂದದ ಪಟ್ಟಣಗಳನ್ನು ನಿವಾಸಿಗಳಿಲ್ಲದೆ ಹಾಳಾಗಿ ಮಾಡುವೆನು.”


ಚಿದ್ಕೀಯನ ಹನ್ನೊಂದನೆಯ ವರ್ಷದ ನಾಲ್ಕನೆಯ ತಿಂಗಳಿನ ಒಂಬತ್ತನೆಯ ದಿವಸದಲ್ಲಿ ಪಟ್ಟಣವು ಒಡೆಯಲಾಯಿತು.


“ಅವರ ಮಧ್ಯದಲ್ಲಿರುವ ರಾಜಪುತ್ರನು ಹೆಗಲ ಮೇಲೆ ಹೊರೆಯನ್ನು ಹೊತ್ತುಕೊಂಡು ಮುಸ್ಸಂಜೆಯಲ್ಲಿ ಹೊರಟು ಹೋಗುವನು. ಅವರು ಗೋಡೆಯನ್ನು ಕೊರೆದು, ಆ ಕಿಂಡಿಯ ಮೂಲಕ ತಮ್ಮ ಸಲಕರಣೆಗಳನ್ನು ಹೊರಗೆ ಸಾಗಿಸುವರು. ಅವನು ತನ್ನ ಕಣ್ಣುಗಳಿಂದ ನೆಲವನ್ನು ನೋಡದ ಹಾಗೆ ಮುಖವನ್ನು ಮುಚ್ಚಿಕೊಳ್ಳುವನು.


ನಮ್ಮ ಸೆರೆಯ ಹನ್ನೆರಡನೆಯ ವರ್ಷದ ಹತ್ತನೆಯ ತಿಂಗಳಿನ ಐದನೆಯ ದಿನದಲ್ಲಿ, ಯೆರೂಸಲೇಮಿನಿಂದ ತಪ್ಪಿಸಿಕೊಂಡವನೊಬ್ಬನು ನನ್ನ ಬಳಿಗೆ ಬಂದು, “ಪಟ್ಟಣವು ನಾಶವಾಗಿದೆ,” ಎಂದು ಹೇಳಿದನು.


ಗೋಡೆಯಲ್ಲಿಯ ಬಿರುಕುಗಳ ಮೂಲಕ ನೀವು ಹೊರಟು ಹೋಗುವಿರಿ. ನಿಮ್ಮನ್ನು ಹರ್ಮೋನಿನ ಕಡೆಗೆ ಎಸೆಯಲಾಗುತ್ತದೆ,” ಎಂದು ಯೆಹೋವ ದೇವರು ಹೇಳುತ್ತಾರೆ.


ಏಳಿರಿ, ರಾತ್ರಿಯಲ್ಲಿ ದಾಳಿಮಾಡೋಣ. ಅವಳ ಕೋಟೆಗಳನ್ನು ನಾಶಮಾಡೋಣ.”


ನಿನ್ನ ಸಲಕರಣೆಗಳನ್ನು ತೆಗೆದುಕೊಂಡು ಹೋಗಲು ಅವುಗಳನ್ನು ಹಗಲಿನಲ್ಲಿ ಅವರ ಕಣ್ಣುಗಳ ಮುಂದೆ ಹೊರಗೆ ತರಬೇಕು. ಸಂಜೆಯಲ್ಲಿ ಸೆರೆಗೆ ಹೋಗುವವರ ಹಾಗೆ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು