Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 6:10 - ಕನ್ನಡ ಸಮಕಾಲಿಕ ಅನುವಾದ

10 ನಾನು ಯಾರ ಸಂಗಡ ಮಾತನಾಡಲಿ? ಅವರು ಕೇಳುವ ಹಾಗೆ ಯಾರನ್ನು ಎಚ್ಚರಿಸಲಿ? ಇಗೋ, ಅವರು ಆಲೈಸಲಾರದ ಹಾಗೆ ಅವರ ಕಿವಿ ಮುಚ್ಚಿಹೋಗಿವೆ. ಇಗೋ, ಯೆಹೋವ ದೇವರ ವಾಕ್ಯವು ಅವನಿಗೆ ನಿಂದೆಯಾಗಿದೆ, ಅದರಲ್ಲಿ ಅವರಿಗೆ ಸಂತೋಷವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನಾನು, ಯಾರ ಸಂಗಡ ಮಾತನಾಡಿ ಅವರು ಗಮನಿಸುವಂತೆ ಸಾಕ್ಷಿಕೊಡಲಿ? ಇಗೋ, ಅವರ ಕಿವಿ ಮುಚ್ಚಲ್ಪಟ್ಟಿವೆ. ಅಯ್ಯೋ, ಯೆಹೋವನ ಮಾತು ಅವರಿಗೆ ತಿರಸ್ಕಾರ, ಅದರಲ್ಲಿ ಅವರಿಗೆ ಆನಂದವೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅದಕ್ಕೆ ನಾನು, “ಅಯ್ಯೋ ! ಯಾರ ಸಂಗಡ ನಾನು ಮಾತಾಡಿ ಅವರು ಗಮನಿಸುವಂತೆ ಮಾಡಲಿ? ಅವರ ಕಿವಿ ಮಂದ . ಅವರು ಕೇಳಿಸಿಕೊಳ್ಳುವುದಿಲ್ಲ . ಸರ್ವೇಶ್ವರ ಆದ ನಿಮ್ಮ ಮಾತು ಎಂದರೆ ಅವರಿಗೆ ತಿರಸ್ಕಾರ. ಅದು ಅವರಿಗೆ ರುಚಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 [ಅದಕ್ಕೆ ನಾನು] - ಯಾರ ಸಂಗಡ ಮಾತಾಡಿ ಅವರು ಗಮನಿಸುವಂತೆ ಸಾಕ್ಷಿಕೊಡಲಿ? ಇಗೋ, ಅವರು ಕರ್ಣಶುದ್ಧಿಯಿಲ್ಲದವರು, ಕೇಳಲಾರರು; ಅಯ್ಯೋ, ಯೆಹೋವನ ಮಾತು ಅವರಿಗೆ ತಿರಸ್ಕಾರ, ಅದರಲ್ಲಿ ಅವರಿಗೆ ಆನಂದವೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನಾನು ಯಾರೊಂದಿಗೆ ಮಾತನಾಡಲಿ? ನಾನು ಯಾರಿಗೆ ಎಚ್ಚರಿಕೆಯ ನುಡಿಗಳನ್ನು ಹೇಳಲಿ? ನನ್ನ ಮಾತನ್ನು ಯಾರು ಕೇಳುತ್ತಾರೆ? ಇಸ್ರೇಲಿನ ಜನರು ತಮ್ಮ ಕಿವಿಗಳನ್ನು ಮುಚ್ಚಿಕೊಂಡಿದ್ದಾರೆ. ಅವರು ನನ್ನ ಎಚ್ಚರಿಕೆಯ ನುಡಿಗಳನ್ನು ಕೇಳಲಾರರು. ಜನರಿಗೆ ಯೆಹೋವನ ಉಪದೇಶ ರುಚಿಸುವದಿಲ್ಲ. ಅವರು ಯೆಹೋವನ ನುಡಿಗಳನ್ನು ಕೇಳಬಯಸುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 6:10
40 ತಿಳಿವುಗಳ ಹೋಲಿಕೆ  

“ಹಟಮಾರಿಗಳೇ! ಹೃದಯದಲ್ಲಿಯೂ ಕಿವಿಯಲ್ಲಿಯೂ ಸುನ್ನತಿ ಹೊಂದದವರೇ, ನೀವು ಸಹ ನಿಮ್ಮ ಪಿತೃಗಳಂತೆಯೇ ಯಾವಾಗಲೂ ಪವಿತ್ರಾತ್ಮ ದೇವರನ್ನು ಎದುರಿಸುತ್ತೀರಿ!


ಲೋಕವು ನಿಮ್ಮನ್ನು ದ್ವೇಷಿಸಲಾರದು. ಲೋಕದ ಕ್ರಿಯೆಗಳು ಕೆಟ್ಟವುಗಳಾಗಿವೆ ಎಂದು ಅದರ ವಿಷಯದಲ್ಲಿ ನಾನು ಸಾಕ್ಷಿ ಹೇಳುವುದರಿಂದ, ಅದು ನನ್ನನ್ನು ದ್ವೇಷಿಸುತ್ತದೆ.


ಆದರೂ ಅವರು ನನ್ನ ಮಾತಿಗೆ ಕಿವಿಗೊಡದೆ, ತಮ್ಮನ್ನು ಕಠಿಣ ಮಾಡಿಕೊಂಡು ತಮ್ಮ ಪಿತೃಗಳಿಗಿಂತ ಕೆಟ್ಟದ್ದನ್ನು ಮಾಡಿದರು.’


ನಂಬಿಕೆಯಿಂದಲೇ ನೋಹನು ಇನ್ನೂ ಕಾಣದಿದ್ದವುಗಳ ವಿಷಯವಾಗಿ ದೇವರಿಂದ ಎಚ್ಚರಿಕೆ ಪಡೆದು ಭಕ್ತಿಯಲ್ಲಿ ತನ್ನ ಮನೆಯವರ ರಕ್ಷಣೆಗಾಗಿ ನಾವೆಯನ್ನು ಸಿದ್ಧಮಾಡಿದನು. ಅವನು ಲೋಕದವರನ್ನು ಖಂಡಿಸಿ ತರುವಾಯ ನಂಬಿಕೆಗೆ ಅನುಸಾರವಾಗಿ ನಂಬಿಕೆಯಿಂದ ಬರುವ ನೀತಿಗೆ ಬಾಧ್ಯನಾದನು.


ನಮ್ಮ ಸುದ್ದಿಯನ್ನು ಯಾರು ನಂಬಿದ್ದಾರೆ? ಯೆಹೋವ ದೇವರ ಬಾಹುವು ಯಾರಿಗೆ ಪ್ರಕಟವಾಯಿತು?


ಆದರೆ ಮೋಶೆಯು ಯೆಹೋವ ದೇವರ ಸನ್ನಿಧಿಯಲ್ಲಿ, “ಇಗೋ, ಇಸ್ರಾಯೇಲರೇ ನನ್ನ ಮಾತನ್ನು ಕೇಳದಿರುವಲ್ಲಿ, ತೊದಲು ಮಾತನಾಡುವ ನನ್ನ ಮಾತನ್ನು ಫರೋಹನು ಕೇಳುವುದು ಹೇಗೆ?” ಎಂದನು.


ಏಕೆಂದರೆ ಜನರು ಸ್ವಸ್ಥಬೋಧನೆಯನ್ನು ಸಹಿಸಲಾರದ ಕಾಲವು ಬರುತ್ತದೆ. ಆದರೆ ಅವರು ತಮ್ಮ ಕಿವಿಗಳು ಕೇಳಲು ಆಶೆಪಡುವ ಅನೇಕ ಉಪದೇಶಕರನ್ನು ಕೂಡಿಟ್ಟುಕೊಳ್ಳುವರು.


ಈ ಕ್ರಿಸ್ತ ಯೇಸುವನ್ನೇ ನಾವು ಸಾರುವವರಾಗಿದ್ದೇವೆ; ಪ್ರತಿಯೊಬ್ಬರೂ ಕ್ರಿಸ್ತ ಯೇಸುವಿನಲ್ಲಿ ಪರಿಪಕ್ವತೆಯುಳ್ಳವರಾಗಿ ಸಮರ್ಪಿಸುವಂತೆ, ಪ್ರತಿಯೊಬ್ಬರನ್ನೂ ಎಚ್ಚರಿಸಿ ಎಲ್ಲಾ ಜ್ಞಾನದಲ್ಲಿ ಪ್ರತಿಯೊಬ್ಬರಿಗೂ ಬೋಧಿಸುತ್ತಿದ್ದೇವೆ.


ಏಕೆಂದರೆ ನಾನು ಹೃದಯಪೂರ್ವಕವಾಗಿ ದೇವರ ನಿಯಮದಲ್ಲಿ ಹರ್ಷಗೊಳ್ಳುವವನಾಗಿದ್ದೇನೆ.


ಅನಂತರ ಮೊಣಕಾಲೂರಿ, “ಕರ್ತ ಯೇಸುವೇ, ಈ ಪಾಪವನ್ನು ಅವರ ಮೇಲೆ ಹೊರಿಸಬೇಡ,” ಎಂದು ಗಟ್ಟಿಯಾಗಿ ಕೂಗಿದನು. ಇದನ್ನು ಹೇಳಿದ ಮೇಲೆ, ಪ್ರಾಣಬಿಟ್ಟನು.


ಯೇಸುವಿನೊಂದಿಗಿದ್ದ ಫರಿಸಾಯರಲ್ಲಿ ಕೆಲವರು ಈ ಮಾತುಗಳನ್ನು ಕೇಳಿ, “ನಾವು ಸಹ ಕುರುಡರೋ?” ಎಂದು ಯೇಸುವನ್ನು ಪ್ರಶ್ನಿಸಿದರು.


ಅದೇ ಗಳಿಗೆಯಲ್ಲಿ ನಿಯಮ ಬೋಧಕರೂ ಮುಖ್ಯಯಾಜಕರೂ ಯೇಸುವನ್ನು ಬಂಧಿಸುವುದಕ್ಕೆ ಹವಣಿಸಿದರು. ಏಕೆಂದರೆ ಯೇಸು ತಮಗೆ ವಿರೋಧವಾಗಿಯೇ ಈ ಸಾಮ್ಯವನ್ನು ಹೇಳಿದ್ದಾರೆಂದು ಅವರು ತಿಳಿದುಕೊಂಡರು. ಆದರೂ ಅವರು ಜನರಿಗೆ ಭಯಪಟ್ಟರು.


ನಿಯಮ ಬೋಧಕ ಒಬ್ಬನು ಯೇಸುವಿಗೆ, “ಬೋಧಕರೇ, ನೀವು ಇವುಗಳನ್ನು ಹೇಳುವುದರಿಂದ ನಮ್ಮನ್ನು ಸಹ ಅವಮಾನಪಡಿಸುತ್ತೀರಿ,” ಎಂದನು.


ಆದರೆ ಫರಿಸಾಯರು ಹಾಗೂ ಸದ್ದುಕಾಯರಲ್ಲಿ ಅನೇಕರು ದೀಕ್ಷಾಸ್ನಾನಕ್ಕಾಗಿ ಬರುವುದನ್ನು ಕಂಡು, ಯೋಹಾನನು ಅವರಿಗೆ: “ಎಲೈ ಸರ್ಪಸಂತತಿಯವರೇ! ಮುಂದೆ ಬರುವ ಕೋಪಾಗ್ನಿಯಿಂದ ತಪ್ಪಿಸಿಕೊಳ್ಳಲು ನಿಮ್ಮನ್ನು ಎಚ್ಚರಿಸಿದವರು ಯಾರು?


ಆಗ ಬೇತೇಲಿನ ಯಾಜಕನಾದ ಅಮಚ್ಯನು, ಇಸ್ರಾಯೇಲಿನ ಅರಸನಾದ ಯಾರೊಬ್ಬಾಮನಿಗೆ ಕಳುಹಿಸಿ ಹೇಳಿದ್ದೇನೆಂದರೆ: “ಆಮೋಸನು ಇಸ್ರಾಯೇಲಿನ ಮನೆತನದವರ ಮಧ್ಯದಲ್ಲಿ ನಿನಗೆ ವಿರೋಧವಾಗಿ ಒಳಸಂಚು ಮಾಡಿದ್ದಾನೆ. ದೇಶವು ಅವನ ಎಲ್ಲಾ ಮಾತುಗಳನ್ನು ತಾಳಲಾರದು.


ಆದರೆ ನೀನು ದುಷ್ಟನನ್ನು ಅವನ ದುರ್ಮಾರ್ಗಗಳಿಂದ ತಿರುಗಲು ಎಚ್ಚರಿಸಿದರೂ ಅವನು ತಿರುಗಿಕೊಳ್ಳದೆ ಹೋದರೆ ಅವನು ತನ್ನ ಪಾಪಗಳಿಂದಲೇ ಸಾಯುವನು. ಆದರೆ ನೀನು ನಿನ್ನ ಪ್ರಾಣವನ್ನು ಉಳಿಸಿಕೊಳ್ಳುವೆ.


ಅವನು ಖಡ್ಗವು ದೇಶದ ಮೇಲೆ ಬರುವುದನ್ನು ನೋಡಿ, ಕೊಂಬನ್ನೂದಿ ಜನರನ್ನು ಎಚ್ಚರಿಸಲಿ,


ಯೆಹೂದದವರೇ, ಯೆರೂಸಲೇಮಿನ ನಿವಾಸಿಗಳೇ, ಯೆಹೋವ ದೇವರಿಗೋಸ್ಕರ ಸುನ್ನತಿ ಮಾಡಿಕೊಳ್ಳಿರಿ; ನಿಮ್ಮ ಹೃದಯಗಳ ಮುಂದೊಗಲನ್ನು ತೆಗೆದುಹಾಕಿರಿ. ಇಲ್ಲದಿದ್ದರೆ ನನ್ನ ಉಗ್ರವು ಬೆಂಕಿಯ ಹಾಗೆ ಹೊರಟು, ನಿಮ್ಮ ಕ್ರಿಯೆಗಳ ಕೆಟ್ಟತನದ ನಿಮಿತ್ತ ಯಾರೂ ಆರಿಸಲಾಗದ ಹಾಗೆ ಉರಿಯುವುದು.”


ಯೆಹೋವ ದೇವರೇ, ನಾನು ನಿಮ್ಮ ರಕ್ಷಣೆಗಾಗಿ ಬಯಸುತ್ತಿದ್ದೇನೆ, ನಿಮ್ಮ ನಿಯಮವೇ ನನಗೆ ಆನಂದವಾಗಿದೆ.


ನಾನು ಜೀವಿಸುವಂತೆ ನಿಮ್ಮ ಅನುಕಂಪವು ನನಗೆ ಬರಲಿ, ಏಕೆಂದರೆ ನಿಮ್ಮ ನಿಯಮವೇ ನನ್ನ ಆನಂದವಾಗಿದೆ.


ಅವರ ಹೃದಯವು ಕಠಿಣವೂ ಮಂದವೂ ಆಗಿದೆ, ನಾನಾದರೋ ನಿಮ್ಮ ನಿಯಮದಲ್ಲಿ ಆನಂದಪಡುತ್ತೇನೆ.


ನಿಮ್ಮ ಆಜ್ಞೆಗಳ ಮಾರ್ಗದಲ್ಲಿ ನನ್ನನ್ನು ನಡೆಸಿರಿ, ಏಕೆಂದರೆ ನಾನು ಅದರಲ್ಲಿ ಆನಂದಿಸುತ್ತೇನೆ.


ನಿಮ್ಮ ಶಾಸನಗಳು ನನಗೆ ಉಲ್ಲಾಸಕರವಾಗಿವೆ; ಅವೇ ನನ್ನ ಸಮಾಲೋಚಕರು.


ನಿಮ್ಮ ತೀರ್ಪುಗಳಲ್ಲಿ ಉಲ್ಲಾಸಗೊಂಡು, ನಿಮ್ಮ ವಾಕ್ಯವನ್ನು ತಿರಸ್ಕರಿಸದಿರುವೆನು.


ನನ್ನ ದೇವರೇ, ನಿಮ್ಮ ಚಿತ್ತವನ್ನು ಮಾಡಲು ಬಯಸುತ್ತೇನೆ; ನಿಮ್ಮ ನಿಯಮವು ನನ್ನ ಅಂತರಂಗದಲ್ಲಿ ಇದೆ.”


ಯೆಹೋವ ದೇವರ ನಿಯಮದಲ್ಲಿ ಆನಂದಿಸುತ್ತಾ, ದೇವರ ನಿಯಮವನ್ನು ರಾತ್ರಿ ಹಗಲು ಧ್ಯಾನಿಸುತ್ತಾ ಬದುಕುವವರು ಧನ್ಯರು.


ಆದರೂ ಯೆಹೋವ ದೇವರು ಇಂದಿನವರೆಗೂ ತಿಳಿದುಕೊಳ್ಳುವ ಹೃದಯವನ್ನೂ ನೋಡುವ ಕಣ್ಣುಗಳನ್ನೂ ಕೇಳುವ ಕಿವಿಗಳನ್ನೂ ನಿಮಗೆ ಕೊಡಲಿಲ್ಲವಲ್ಲ!


ಏನೆಂದರೆ, ಓ ಮೂಢ ಬುದ್ಧಿಹೀನ ಜನರೇ, ಕಣ್ಣುಗಳಿದ್ದು ಕಾಣದವರೇ, ಕಿವಿಗಳಿದ್ದು ಕೇಳದವರೇ, ಇದನ್ನು ಕೇಳಿರಿ.


ನೀನು ಅನೇಕ ಸಂಗತಿಗಳನ್ನು ಕಂಡಿದ್ದರೂ, ನಿನಗೆ ಗಮನವಿಲ್ಲ. ಅವನ ಕಿವಿಗಳು ತೆರೆದಿದ್ದರೂ, ಕೇಳನು.”


ಈಗ ಯೆಹೋವ ದೇವರು ಹೇಳುವುದೇನೆಂದರೆ, ನೀವು ಈ ಕೆಲಸಗಳನ್ನೆಲ್ಲಾ ಮಾಡಿದ್ದರಿಂದ ನಾನು ಬೆಳಿಗ್ಗೆ ಎದ್ದು ನಿಮ್ಮನ್ನು ಕರೆದರೂ, ನೀವು ಉತ್ತರ ಕೊಡದೆ ಹೋದಿರಿ.


“ಇಸ್ರಾಯೇಲರ ದೇವರೂ, ಸೇನಾಧೀಶ್ವರ ಯೆಹೋವ ದೇವರೂ ಆದ ನಾನು ಹೇಳುವುದು ಇದು: ನೀನು ಹೋಗಿ ಯೆಹೂದ್ಯರಿಗೂ, ಯೆರೂಸಲೇಮಿನ ನಿವಾಸಿಗಳಿಗೂ ಹೀಗೆಂದು ತಿಳಿಸು: ‘ನೀವು ಬುದ್ಧಿ ತಂದುಕೊಂಡು ನನ್ನ ಮಾತುಗಳನ್ನು ಕೇಳುವುದಿಲ್ಲವೇ?’ ಎಂದು ಯೆಹೋವ ದೇವರು ಕೇಳುತ್ತಾರೆ.


ಆದರೆ ಇಸ್ರಾಯೇಲಿನ ಜನರೋ ನಿನ್ನ ಮಾತನ್ನು ಕೇಳಲು ಸಿದ್ಧರಿಲ್ಲ. ಏಕೆಂದರೆ ಅವರು ನನ್ನ ಮಾತನ್ನು ಕೇಳಲು ಸಿದ್ಧರಿಲ್ಲ. ಅವರೆಲ್ಲರು ಗರ್ವಿಗಳು ಹಾಗೂ ಹಟಮಾರಿಗಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು