Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 6:11 - ಕನ್ನಡ ಸಮಕಾಲಿಕ ಅನುವಾದ

11 ಆದ್ದರಿಂದ ಯೆಹೋವ ದೇವರ ಕೋಪದಿಂದ ನಾನು ತುಂಬಿದ್ದೇನೆ. ಅದನ್ನು ನನ್ನೊಳಗೆ ಹಿಡಿಯುವುದು ನನಗೆ ಸಾಕಾಯಿತು. “ಅದನ್ನು ದೂರ ಇರುವ ಮಕ್ಕಳ ಮೇಲೆ ಮತ್ತು ಯೌವನಸ್ಥರ ಕೂಟ ಸಹಿತವಾಗಿ ಅವರ ಮೇಲೆ ಸುರಿಸುವೆನು. ಏಕೆಂದರೆ, ನಿಶ್ಚಯವಾಗಿ ಗಂಡನ, ಹೆಂಡತಿಯ ಸಂಗಡ, ವೃದ್ಧನ, ದಿನತುಂಬಿದವನ ಸಂಗಡ ಹಿಡಿಯಲಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆದಕಾರಣ ಯೆಹೋವನ ರೋಷವು ನನ್ನಲ್ಲಿ ತುಂಬಿ ತುಳುಕುತ್ತದೆ; ತಡೆದು ತಡೆದು ನನಗೆ ಸಾಕಾಯಿತು. ಬೀದಿಯಲ್ಲಿನ ಮಕ್ಕಳ ಮೇಲೂ, ಯುವಕರ ಸಂಘದ ಮೇಲೂ ಅದನ್ನು ಹೊಯ್ದು ಬಿಡಬೇಕು. ಗಂಡನೂ, ಹೆಂಡತಿಯೂ, ಮುದುಕನೂ, ಮುಪ್ಪಿನ ಮುದುಕನೂ ಅಂತು ಎಲ್ಲರೂ ಅಪಹರಿಸಲ್ಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಆದಕಾರಣವೇ ನಿಮ್ಮ ಕೋಪ ನನ್ನಲ್ಲೂ ತುಂಬಿತುಳುಕುತ್ತಿದೆ. ಅದನ್ನು ತಡೆದು ನನಗೆ ಸಾಕಾಗಿದೆ,” ಎಂದೆನು. ಆಗ ಸರ್ವೇಶ್ವರ ನನಗೆ : “ಹಾಗಾದರೆ ಆ ಕೋಪವನ್ನು ಬೀದಿಯಲ್ಲಿನ ಮಕ್ಕಳ ಮೇಲೂ ಯುವಕರ ಕೂಟ಼ಗಳ ಮೇಲೂ ಕಾರಿಬಿಡು. ಗಂಡಹೆಂಡತಿಯರನ್ನೂ ಮುದುಕರನ್ನೂ ವಯೋವೃದ್ಧರನ್ನೂ ಅಪಹರಿಸಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆದಕಾರಣ ಯೆಹೋವನ ರೋಷವು ನನ್ನಲ್ಲಿ ತುಂಬಿತುಳುಕುತ್ತದೆ; ತಡೆದು ತಡೆದು ನನಗೆ ಸಾಕಾಯಿತು; ಬೀದಿಯಲ್ಲಿನ ಮಕ್ಕಳ ಮೇಲೂ ಯುವಕರ ಸಂಘದ ಮೇಲೂ ಅದನ್ನು ಹೊಯ್ದುಬಿಡಬೇಕು; ಗಂಡನೂ ಹೆಂಡತಿಯೂ ಮುದುಕನೂ ಮುಪ್ಪಿನ ಮುದುಕನೂ (ಅಂತು ಎಲ್ಲರೂ) ಅಪಹರಿಸಲ್ಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಯೆಹೋವನ ರೋಷವು ನನ್ನಲ್ಲಿ ತುಂಬಿತುಳುಕುತ್ತಿದೆ, ತಡೆದುತಡೆದು ನನಗೆ ಸಾಕಾಗಿದೆ. “ಬೀದಿಯಲ್ಲಾಡುವ ಮಕ್ಕಳ ಮೇಲೆ ಅದನ್ನು ಹೊಯ್ದುಬಿಡಬೇಕು. ಒಂದೆಡೆ ಸೇರುವ ತರುಣರ ಮೇಲೆ ಅದನ್ನು ಹೊಯ್ದುಬಿಡಬೇಕು. ಗಂಡಹೆಂಡತಿಯರಿಬ್ಬರನ್ನು ಅಪಹರಿಸಲಾಗುವುದು. ಮುದುಕರನ್ನೂ ಮುಪ್ಪಿನ ಮುದುಕರನ್ನೂ ಅಪಹರಿಸಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 6:11
22 ತಿಳಿವುಗಳ ಹೋಲಿಕೆ  

“ಆಗ ನಾನು ಆತನನ್ನು ಕುರಿತು ಏನೂ ಹೇಳುವುದಿಲ್ಲ. ಆತನ ಹೆಸರಿನಲ್ಲಿ ಇನ್ನು ಮಾತನಾಡುವುದೇ ಇಲ್ಲ,” ಎಂದು ಅಂದುಕೊಂಡೆನು. ಆದರೆ ಆತನ ವಾಕ್ಯವು ನನ್ನ ಎಲುಬುಗಳಲ್ಲಿ ಮುಚ್ಚಲಾಗಿರುವ ಸುಡುವ ಬೆಂಕಿಯ ಹಾಗೆ ನನ್ನ ಹೃದಯದಲ್ಲಿ ಇತ್ತು. ಬಿಗಿ ಹಿಡಿದು ದಣಿದೆನು. ನನ್ನಿಂದ ಆಗದೆ ಹೋಯಿತು.


ಏಕೆಂದರೆ, ಮರಣವು ನಮ್ಮ ಕಿಟಕಿಗಳೊಳಗೆ ಏರಿ ಬಂತು. ನಮ್ಮ ಕೋಟೆಗಳಲ್ಲಿ ಸೇರಿತು. ಹೊರಗಡೆ ಮಕ್ಕಳನ್ನೂ, ಬೀದಿಗಳಲ್ಲಿ ಯೌವನಸ್ಥರನ್ನೂ ಕಡಿದು ಹಾಕುತ್ತದೆ.


ಆದರೆ ನಿಶ್ಚಯವಾಗಿ ನಾನು ಯಾಕೋಬಿನ ಅವನ ಅಪರಾಧವನ್ನೂ ಇಸ್ರಾಯೇಲಿಗೆ ಅವನ ಪಾಪವನ್ನೂ ತಿಳಿಸುವುದಕ್ಕೆ ಯೆಹೋವ ದೇವರ ಆತ್ಮದ ಮುಖಾಂತರ ಶಕ್ತಿಯಿಂದಲೂ ನ್ಯಾಯದಿಂದಲೂ ತ್ರಾಣದಿಂದಲೂ ತುಂಬಿದ್ದೇನೆ.


ಆಗ ದೇವಾಲಯದಿಂದ ಬಂದ ಗಟ್ಟಿಯಾದ ಧ್ವನಿಯು, ಏಳು ದೇವದೂತರಿಗೂ, “ಹೋಗಿರಿ, ಏಳು ಬೋಗುಣಿಗಳಲ್ಲಿರುವ ದೇವರ ಕೋಪವನ್ನು ಭೂಮಿಯ ಮೇಲೆ ಸುರಿದುಬಿಡಿರಿ!” ಎಂದು ಹೇಳುವುದನ್ನು ನಾನು ಕೇಳಿದೆನು.


ಮಕೆದೋನ್ಯದಿಂದ ಸೀಲ ಮತ್ತು ತಿಮೊಥೆ ಬಂದ ತರುವಾಯ, ಪೌಲನು ವಾಕ್ಯವನ್ನು ಬೋಧಿಸುವುದರಲ್ಲಿಯೇ ಸಮರ್ಪಿಸಿಕೊಂಡವನಾಗಿ ಯೇಸುವೇ ಕ್ರಿಸ್ತ ಎಂದು ಯೆಹೂದ್ಯರಿಗೆ ಖಚಿತವಾಗಿ ಸಾಕ್ಷಿಕೊಟ್ಟನು.


ಪೌಲನು ಅವರಿಗಾಗಿ ಕಾಯುತ್ತಾ ಅಥೇನೆಯಲ್ಲಿ ಇದ್ದಾಗ, ಆ ಪಟ್ಟಣವು ವಿಗ್ರಹಗಳಿಂದ ತುಂಬಿಕೊಂಡಿದ್ದನ್ನು ಕಂಡು, ಅವನ ಆತ್ಮವು ಅವನೊಳಗೆ ಕುದಿಯಿತು.


ಏಕೆಂದರೆ ಕಂಡಿದ್ದನ್ನೂ ಕೇಳಿದ್ದನ್ನೂ ಕುರಿತು ನಾವು ಮಾತನಾಡದೆ ಇರಲಾರೆವು,” ಎಂದು ಉತ್ತರಕೊಟ್ಟರು.


ಆ ರಾತ್ರಿಯಲ್ಲಿ ಇಬ್ಬರು ಒಂದೇ ಹಾಸಿಗೆಯಲ್ಲಿ ಇರುವರು; ಒಬ್ಬನನ್ನು ತೆಗೆದುಕೊಳ್ಳಲಾಗುವುದು, ಮತ್ತೊಬ್ಬನನ್ನು ಬಿಡಲಾಗುವುದು.


ವೃದ್ಧ, ಯುವಕ, ಯುವತಿಯರನ್ನು ಮತ್ತು ಎಳೆಗೂಸುಗಳನ್ನು ಮತ್ತು ಹೆಂಗಸರನ್ನು ಕೊಂದುಹಾಕಿರಿ. ಆದರೆ ಗುರುತು ಯಾವನ ಮೇಲೆ ಇದೆಯೋ, ಅವನನ್ನು ಮುಟ್ಟಬೇಡಿರಿ. ನನ್ನ ಪರಿಶುದ್ಧ ಸ್ಥಳದಿಂದಲೇ ಪ್ರಾರಂಭಿಸಿರಿ” ಎಂದಾಗ, ಅವರು ಆಲಯದ ಮುಂದೆ ಇದ್ದ ಹಿರಿಯರಿಂದ ಪ್ರಾರಂಭಿಸಿದರು.


ಹೀಗೆ ದೇವರಾತ್ಮರು ನನ್ನನ್ನು ಎತ್ತಿಕೊಂಡು ಹೋದರು. ನಾನು ಕಹಿತನ ಮತ್ತು ಕೋಪದ ಆತ್ಮದಿಂದ ಮುನ್ನಡೆದೆನು. ಆದರೆ ಯೆಹೋವ ದೇವರ ಕೈ ನನ್ನ ಮೇಲೆ ಬಲವಾಗಿತ್ತು.


ಆದ್ದರಿಂದ ಅವರ ಮಕ್ಕಳನ್ನು ಕ್ಷಾಮಕ್ಕೆ ಕೊಡು. ಖಡ್ಗದ ಬಲದಿಂದ ಅವರ ರಕ್ತವನ್ನು ಸುರಿದುಬಿಡು. ಅವರ ಹೆಂಡತಿಯರು ಮಕ್ಕಳಿಲ್ಲದೆ ವಿಧವೆಯರಾಗಲಿ. ಅವರ ಗಂಡಸರು ಹತರಾಗಲಿ. ಅವರ ಯೌವನಸ್ಥರು ಯುದ್ಧದಲ್ಲಿ ಖಡ್ಗಕ್ಕೆ ತುತ್ತಾಗಲಿ.


“ ‘ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ, ಇಗೋ, ಈ ಸ್ಥಳದ ಮೇಲೆಯೂ, ಮನುಷ್ಯರ ಮೇಲೆಯೂ, ಮೃಗಗಳ ಮೇಲೆಯೂ, ಹೊಲದ ಮರಗಳ ಮೇಲೆಯೂ, ಭೂಮಿಯ ಫಲದ ಮೇಲೆಯೂ ನನ್ನ ಕೋಪ ಮತ್ತು ಉಗ್ರತೆಯು ಹೊಯ್ಯಲಾಗುವುದು. ಅದು ಉರಿಯುವುದು ಮತ್ತು ಆರಿಹೋಗುವುದಿಲ್ಲ.


ಯೌವನಸ್ಥರೋ ದಣಿದು ಬಳಲುವರು ಮತ್ತು ತರುಣರು ಸಂಪೂರ್ಣವಾಗಿ ಬೀಳುವರು.


ನೀನು ನನ್ನನ್ನು ಬಿಟ್ಟುಬಿಟ್ಟಿದ್ದೀ,” ಎಂದು ಯೆಹೋವ ದೇವರು ಹೇಳುತ್ತಾರೆ. “ನೀನು ಹಿಂಜಾರಿದೆ. ಆದ್ದರಿಂದ ನನ್ನ ಕೈಯನ್ನು ನಿನಗೆ ವಿರೋಧವಾಗಿ ಚಾಚಿ, ನಿನ್ನನ್ನು ನಾಶಮಾಡುವೆನು. ನಿನಗೆ ಅನುಕಂಪ ತೋರಿಸುವುದರಲ್ಲಿ ದಣಿದಿದ್ದೇನೆ.


ನಾನು ವಿನೋದಗಾರರ ಕೂಟದಲ್ಲಿ ಕೂತುಕೊಳ್ಳಲಿಲ್ಲ, ಉಲ್ಲಾಸ ಪಡಲೂ ಇಲ್ಲ; ನೀವು ನನ್ನ ಮೇಲೆ ಕೈ ಇಟ್ಟಿದ್ದರಿಂದ ಒಂಟಿಗನಾಗಿ ಕೂತುಕೊಂಡೆನು; ನನ್ನನ್ನು ರೋಷದಿಂದ ತುಂಬಿಸಿದ್ದಿಯಷ್ಟೆ;


ಕರ್ತದೇವರು ನನ್ನ ಶೂರರನ್ನೆಲ್ಲಾ ತಿರಸ್ಕರಿಸಿದ್ದಾರೆ. ಅವರು ನನಗೆ ವಿರುದ್ಧ ಸೈನ್ಯವನ್ನು ಬರಮಾಡಿ, ನನ್ನ ಯುವಕರನ್ನು ಜಜ್ಜಿದ್ದಾರೆ. ಕರ್ತದೇವರು ಯೆಹೂದದ ಕನ್ಯೆಯನ್ನು ದ್ರಾಕ್ಷಿಯ ತೊಟ್ಟಿಯಂತೆ ತುಳಿದಿದ್ದಾರೆ.


ಯುವಕರು ಮತ್ತು ವೃದ್ಧರು ಬೀದಿಗಳ ನೆಲದ ಮೇಲೆ ಮಲಗಿದ್ದಾರೆ. ನನ್ನ ಯುವಕರು, ಯುವತಿಯರು ಖಡ್ಗದಿಂದ ಹತರಾಗಿದ್ದಾರೆ. ನಿನ್ನ ಕೋಪದ ದಿನದಲ್ಲಿ ನೀನು ಅವರನ್ನು ಸಾಯಿಸಿರುವಿರಿ, ಕೊಂದುಹಾಕಿದಿರಿ, ಕನಿಕರಿಸಲಿಲ್ಲ.


ಆಗ ಅವರು ನನಗೆ ಹೇಳಿದ್ದೇನೆಂದರೆ, “ಮನುಷ್ಯಪುತ್ರನೇ, ನಾನು ಕೊಡುವ ಈ ಸುರುಳಿಯನ್ನು ತಿಂದು, ಹೊಟ್ಟೆಯನ್ನು ತುಂಬಿಸಿಕೋ,” ಎಂದರು. ಆಗ ನಾನು ಅದನ್ನು ತಿಂದೆನು. ಅದು ನನ್ನ ಬಾಯಲ್ಲಿ ಜೇನಿನ ಹಾಗೆ ಸಿಹಿಯಾಗಿತ್ತು.


ಇಸ್ರಾಯೇಲರ ಮನೆತನದವರಿಗೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ ಎಂದು ಹೇಳು: ಇಗೋ, ನಾನು ನನ್ನ ಪವಿತ್ರಾಲಯವನ್ನೂ, ನಿಮ್ಮ ಮುಖ್ಯಬಲವನ್ನೂ, ನಿಮ್ಮ ನೇತ್ರಾನಂದಕರವಾದದ್ದನ್ನೂ, ನಿಮ್ಮ ಮನಸ್ಸು ಅಭಿಲಾಷಿಸುವುದನ್ನೂ ನಾನು ಅಪವಿತ್ರಪಡಿಸುವೆನು; ನೀವು ಬಿಟ್ಟಿರುವ ನಿಮ್ಮ ಗಂಡು ಮತ್ತು ಹೆಣ್ಣುಮಕ್ಕಳು ಖಡ್ಗದಿಂದ ಬೀಳುವರು.


ಇವುಗಳ ನಿಮಿತ್ತ ನಾನು ಶಿಕ್ಷಿಸಬಾರದೇ? ಇಂಥಾ ಜನಾಂಗಕ್ಕೆ ನನ್ನ ಪ್ರಾಣವು ಮುಯ್ಯಿಗೆ ಮುಯ್ಯಿ ತೀರಿಸುವುದಿಲ್ಲವೋ? ಎಂದು ಯೆಹೋವ ದೇವರು ಹೇಳುತ್ತಾರೆ.


ಆದ್ದರಿಂದ ಓ ಸ್ತ್ರೀಯರೇ, ಯೆಹೋವ ದೇವರ ವಾಕ್ಯವನ್ನು ಕೇಳಿರಿ. ನಿಮ್ಮ ಕಿವಿಯು ಆತನ ಬಾಯಿಯ ವಾಕ್ಯವನ್ನು ಅಂಗೀಕರಿಸಲಿ. ನಿಮ್ಮ ಪುತ್ರಿಯರಿಗೆ ಗೋಳಾಟವನ್ನೂ, ನಿಮ್ಮ ನಿಮ್ಮ ನೆರೆಯವರಿಗೆ ಪ್ರಲಾಪವನ್ನೂ ಕಲಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು