Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 6:12 - ಕನ್ನಡ ಸಮಕಾಲಿಕ ಅನುವಾದ

12 ಅವರ ಮನೆಗಳೂ ಹೊಲಗಳೂ, ಹೆಂಡತಿಯರೂ ಸಹಿತವಾಗಿ ಬೇರೊಬ್ಬರ ಪಾಲಾಗುವುವು. ಏಕೆಂದರೆ, ದೇಶದ ನಿವಾಸಿಗಳ ಮೇಲೆ ನನ್ನ ಕೈಚಾಚುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅವರ ಹೆಂಡತಿ, ಮನೆ, ಹೊಲ ಮತ್ತು ಗದ್ದೆ ಇವೆಲ್ಲವುಗಳು ಅನ್ಯರ ಪಾಲಾಗುವವು. ದೇಶದ ನಿವಾಸಿಗಳ ಮೇಲೆ ಕೈಮಾಡುವೆನಷ್ಟೆ ಎಂದು ಯೆಹೋವನು ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅವರ ಹೆಂಡತಿ, ಮನೆ, ಹೊಲ, ಗದ್ದೆ ಎಲ್ಲವೂ ಅನ್ಯರ ಪಾಲಾಗುವುದು.” “ನಾಡಿನ ನಿವಾಸಿಗಳ ಮೇಲೆ ಕೈಮಾಡುವೆನೆಂಬುದು ಖಚಿತ. ಇದು ಸರ್ವೇಶ್ವರನಾದ ನನ್ನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅವರ ಹೆಂಡತಿ, ಮನೆ, ಹೊಲಗದ್ದೆ ಇವೆಲ್ಲಾ ಅನ್ಯರ ಪಾಲಾಗುವವು; ದೇಶದ ನಿವಾಸಿಗಳ ಮೇಲೆ ಕೈಮಾಡುವೆನಷ್ಟೆ ಎಂದು ಯೆಹೋವನು ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಅವರ ಮನೆಗಳನ್ನು ಬೇರೆಯವರಿಗೆ ಕೊಡಲಾಗುವುದು. ಅವರ ಹೊಲಗಳನ್ನೂ ಅವರ ಹೆಂಡಂದಿರನ್ನೂ ಬೇರೆಯವರಿಗೆ ಕೊಡಲಾಗುವುದು. ನಾನು ನನ್ನ ಕೈ ಎತ್ತಿ ಯೆಹೂದದ ಜನರನ್ನು ದಂಡಿಸುವೆನು.” ಇದು ಯೆಹೋವನ ಸಂದೇಶ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 6:12
26 ತಿಳಿವುಗಳ ಹೋಲಿಕೆ  

ಆದ್ದರಿಂದ ಅವರ ಹೆಂಡತಿಯರನ್ನು ಬೇರೊಬ್ಬರಿಗೂ, ಅವರ ಹೊಲಗಳನ್ನು ಹೊಸ ಮಾಲಿಕನಿಗೆ ನಾನು ಕೊಟ್ಟುಬಿಡುವೆನು. ಏಕೆಂದರೆ, ಚಿಕ್ಕವನು ಮೊದಲುಗೊಂಡು ದೊಡ್ಡವರತನಕ ಅವರೆಲ್ಲರೂ ಲೋಭಕ್ಕೆ ಒಪ್ಪಿಸಿಕೊಟ್ಟಿದ್ದಾರೆ. ಪ್ರವಾದಿ ಮೊದಲುಗೊಂಡು ಯಾಜಕರವರೆಗೆ ಪ್ರತಿಯೊಬ್ಬನೂ ಮೋಸದಿಂದ ನಡೆದುಕೊಳ್ಳುತ್ತಾನೆ.


ಆದಕಾರಣ ಯೆಹೋವ ದೇವರು ಕೋಪಗೊಂಡು ಜನರಿಗೆ ವಿರೋಧವಾಗಿ ಉರಿಗೊಂಡು ಅವರ ಮೇಲೆ ತಮ್ಮ ಕೈಚಾಚಿ, ಅವರನ್ನು ಹೊಡೆದಿದ್ದಾರೆ, ಬೆಟ್ಟಗುಡ್ಡಗಳು ಕಂಪಿಸಿದವು. ಅವರ ಹೆಣಗಳು ಹರಿದು ಬೀದಿಗಳ ಮಧ್ಯದಲ್ಲಿ ಬಿದ್ದಿರುವುವು. ಇಷ್ಟೆಲ್ಲಾ ಆದರೂ ದೇವರ ಕೋಪವು ತೀರದೆ, ಅವರ ಕೈ ಇನ್ನೂ ಚಾಚಿಯೇ ಇರುವುದು.


ಆದ್ದರಿಂದ ಅವರ ಸಂಪತ್ತು ಕೊಳ್ಳೆಯಾಗುವುದು, ಅವರ ಮನೆಗಳು ಹಾಳಾಗುವುವು. ಅವರು ಮನೆಗಳನ್ನು ಕಟ್ಟಿಕೊಂಡರೂ ಅವುಗಳಲ್ಲಿ ವಾಸಮಾಡರು. ದ್ರಾಕ್ಷಿತೋಟಗಳನ್ನು ನೆಟ್ಟು ಅವುಗಳ ರಸವನ್ನು ಕುಡಿಯರು.”


ಅವರು ಚೀಯೋನಿನಲ್ಲಿ ಸ್ತ್ರೀಯರ ಮೇಲೆ ಮತ್ತು ಯೆಹೂದದ ನಗರಗಳಲ್ಲಿ ಕನ್ಯೆಯರ ದೌರ್ಜನ್ಯ ಮಾಡಲಾಗಿದೆ.


ನಾವು ಅನಾಥರು, ತಂದೆ ಇಲ್ಲದವರು, ನಮ್ಮ ತಾಯಂದಿರು ವಿಧವೆಯರು.


ನಿಶ್ಚಯವಾಗಿ ಅವರು ನನಗೆ ವಿರೋಧವಾಗಿ ತಿರುಗಿದ್ದಾರೆ. ಅವರು ದಿನವೆಲ್ಲಾ ತಮ್ಮ ಕೈಯನ್ನು ನನಗೆ ವಿರೋಧವಾಗಿ ತಿರುಗಿಸಿದ್ದಾರೆ.


ಯೆಹೋವ ದೇವರು ಚೀಯೋನಿನ ಗೋಡೆಯನ್ನು ನಾಶಮಾಡಬೇಕೆಂದು ಉದ್ದೇಶಿಸಿದ್ದಾರೆ. ಅಳತೆಯ ಗೆರೆಯನ್ನು ಎಳೆದಿದ್ದಾರೆ. ತನ್ನ ಕೈಯನ್ನು ಕೆಡಿಸುವುದರಿಂದ ಹಿಂದೆಗೆಯಲಿಲ್ಲ. ಆದ್ದರಿಂದ ಕಲ್ಲಿನ ಪ್ರಾಕಾರವನ್ನು ಮತ್ತು ಗೋಡೆಯನ್ನು ಗೋಳಾಡುವಂತೆ ಆತನು ಮಾಡಿದ್ದಾನೆ. ಅವೆರಡೂ ಜೊತೆಯಾಗಿ ಕುಸಿದು ಹೋಗಿವೆ.


ಇಗೋ, ಯೆಹೂದದ ಅರಸನ ಅರಮನೆಯಲ್ಲಿ ಉಳಿದ ಹೆಂಗಸರೆಲ್ಲರು ಬಾಬಿಲೋನಿನ ಅರಸನ ಪ್ರಧಾನರ ಬಳಿಗೆ ಹೊರಗೆ ಕರೆತರಲಾಗಿ ಹೇಳುವುದೇನೆಂದರೆ, “ನಿನ್ನ ಸ್ನೇಹಿತರು ನಿನ್ನನ್ನು ಪ್ರೇರೇಪಿಸಿ, ನಿನ್ನನ್ನು ಗೆದ್ದಿದ್ದಾರೆ. ನಿನ್ನ ಕಾಲುಗಳು ಕೆಸರಿನಲ್ಲಿ ಹೂತಿರುವುದನ್ನು ನೋಡಿ, ಹಿಂದಿರುಗಿದ್ದಾರೆಂದು ನಿಂದಿಸುವರು.


ನಾನಿಲ್ಲದೆ ಕೈದಿಗಳ ಕೆಳಗೆ ಮುದುರಿಕೊಂಡು, ಹತರಾಗಿರುವವರ ಕೆಳಗೆ ಬಿದ್ದಿರುವುದೇ ಇವರ ಗತಿ. ಏಕೆಂದರೆ, ಇಷ್ಟೆಲ್ಲಾ ಆದರೂ ಅವರ ಕೋಪವು ತೀರದೆ, ಅವರ ಕೈ ಇನ್ನೂ ಚಾಚಿಯೇ ಇದೆ.


ಹೀಗೆ ಮನಸ್ಸೆಯು ಎಫ್ರಾಯೀಮನ್ನು ಮತ್ತು ಎಫ್ರಾಯೀಮು ಮನಸ್ಸೆಯನ್ನು ಹಾನಿ ಮಾಡುತ್ತಿವೆ. ಅವರು ಒಟ್ಟಾಗಿ ಸೇರಿ ಯೆಹೂದಕ್ಕೆ ವಿರೋಧವಾಗಿರುವರು. ಇಷ್ಟೆಲ್ಲಾ ಆದರೂ ಅವರ ಕೋಪವು ತೀರದೆ, ಅವರ ಕೈ ಇನ್ನೂ ಚಾಚಿಯೇ ಇದೆ.


ಹೀಗಿರಲು ಕರ್ತದೇವರು ಅವರ ಯೌವನಸ್ಥರಲ್ಲಿ ಆನಂದಿಸುವುದಿಲ್ಲ. ಅವರ ಅನಾಥರನ್ನೂ, ವಿಧವೆಯರನ್ನೂ ಕರುಣಿಸುವುದಿಲ್ಲ. ಏಕೆಂದರೆ, ಪ್ರತಿಯೊಬ್ಬನು ಕಪಟಿಯೂ, ಕೇಡು ಮಾಡುವವನೂ ಆಗಿದ್ದಾನೆ. ಎಲ್ಲರ ಬಾಯಿಯೂ ಮೂರ್ಖತನದ ಮಾತುಗಳನ್ನು ಆಡುತ್ತದೆ. ಆದ್ದರಿಂದ ಇಷ್ಟೆಲ್ಲಾ ಆದರೂ ದೇವರ ಕೋಪವು ತೀರದೆ, ಅವರ ಕೈ ಇನ್ನೂ ಚಾಚಿಯೇ ಇದೆ.


ಅವನ ಶತ್ರುಗಳಾದ ಪೂರ್ವದಿಂದ ಅರಾಮ್ಯರನ್ನು ಮುಂದೆಯೂ, ಪಶ್ಚಿಮದಿಂದ ಫಿಲಿಷ್ಟಿಯರನ್ನು ಹಿಂದೆಯೂ ಒಟ್ಟುಗೂಡಿಸುವರು. ಅವರು ಇಸ್ರಾಯೇಲನ್ನು ತೆರೆದ ಬಾಯಿಂದ ನುಂಗಿಬಿಡುವರು. ಏಕೆಂದರೆ, ಇಷ್ಟೆಲ್ಲಾ ಆದರೂ ದೇವರ ಕೋಪವು ತೀರದೆ, ಅವರ ಕೈ ಇನ್ನೂ ಚಾಚಿಯೇ ಇದೆ.


ಆಗ ದಾವೀದನು ತನ್ನ ಕಣ್ಣೆತ್ತಿ ಭೂಮಿಗೂ, ಆಕಾಶಕ್ಕೂ ಮಧ್ಯದಲ್ಲಿ ನಿಂತಿರುವ ಯೆಹೋವ ದೇವರ ದೂತನನ್ನು ಕಂಡನು. ಅವನ ಕೈಯಲ್ಲಿ ಯೆರೂಸಲೇಮಿನ ಮೇಲೆ ಚಾಚಿದ್ದ ಹಿರಿದ ಖಡ್ಗ ಇತ್ತು. ಆಗ ದಾವೀದನೂ, ಇಸ್ರಾಯೇಲಿನ ಹಿರಿಯರೂ ಗೋಣಿತಟ್ಟುಗಳನ್ನು ಹೊದ್ದುಕೊಂಡು ಬೋರಲಾಗಿ ಬಿದ್ದರು.


“ ‘ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ, ಇಗೋ, ಈ ಸ್ಥಳದ ಮೇಲೆಯೂ, ಮನುಷ್ಯರ ಮೇಲೆಯೂ, ಮೃಗಗಳ ಮೇಲೆಯೂ, ಹೊಲದ ಮರಗಳ ಮೇಲೆಯೂ, ಭೂಮಿಯ ಫಲದ ಮೇಲೆಯೂ ನನ್ನ ಕೋಪ ಮತ್ತು ಉಗ್ರತೆಯು ಹೊಯ್ಯಲಾಗುವುದು. ಅದು ಉರಿಯುವುದು ಮತ್ತು ಆರಿಹೋಗುವುದಿಲ್ಲ.


ನೀನು ನನ್ನನ್ನು ಬಿಟ್ಟುಬಿಟ್ಟಿದ್ದೀ,” ಎಂದು ಯೆಹೋವ ದೇವರು ಹೇಳುತ್ತಾರೆ. “ನೀನು ಹಿಂಜಾರಿದೆ. ಆದ್ದರಿಂದ ನನ್ನ ಕೈಯನ್ನು ನಿನಗೆ ವಿರೋಧವಾಗಿ ಚಾಚಿ, ನಿನ್ನನ್ನು ನಾಶಮಾಡುವೆನು. ನಿನಗೆ ಅನುಕಂಪ ತೋರಿಸುವುದರಲ್ಲಿ ದಣಿದಿದ್ದೇನೆ.


ನಾನೇ ಚಾಚಿದ ಕೈಯಿಂದಲೂ, ಬಲವಾದ ತೋಳಿನಿಂದಲೂ, ಕೋಪದಿಂದಲೂ, ಉಗ್ರದಿಂದಲೂ, ಮಹಾರೌದ್ರದಿಂದಲೂ ನಿಮಗೆ ವಿರೋಧವಾಗಿ ಯುದ್ಧಮಾಡುವೆನು.


“ಹಾಗೆ ನಿನ್ನ ಹೆಂಡತಿಯರನ್ನೂ, ನಿನ್ನ ಮಕ್ಕಳನ್ನೂ ಕಸ್ದೀಯರ ಬಳಿಗೆ ಹೊರಗೆ ತರುವರು. ನೀನು ಅವರ ಕೈಗೆ ತಪ್ಪಿಸಿಕೊಳ್ಳುವುದಿಲ್ಲ. ಬಾಬಿಲೋನಿನ ಅರಸನ ಕೈಯಿಂದ ಸೆರೆಯಾಗುವೆ. ಈ ಪಟ್ಟಣವು ಬೆಂಕಿಯಿಂದ ಸುಟ್ಟುಹೋಗುವುದು,” ಎಂದನು.


ಅದಕ್ಕೆ ಹೇಳು, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ಸೇಯೀರ್ ಪರ್ವತವೇ, ನಾನು ನಿನಗೆ ವಿರುದ್ಧವಾಗಿದ್ದೇನೆ. ನಾನು ನನ್ನ ಕೈಯನ್ನು ನಿನಗೆ ವಿರುದ್ಧವಾಗಿ ಚಾಚುತ್ತೇನೆ. ನಾನು ನಿನ್ನನ್ನು ಸಂಪೂರ್ಣವಾಗಿ ನಾಶಮಾಡುತ್ತೇನೆ.


ಆ ದಿನದಲ್ಲಿ ಜನರು ನಿಮ್ಮನ್ನು ಅಪಹಾಸ್ಯ ಮಾಡುವರು. ‘ನಾವು ಸಂಪೂರ್ಣವಾಗಿ ಹಾಳಾಗಿದ್ದೇವೆ. ನನ್ನ ಪ್ರಜೆಗಳ ಆಸ್ತಿ ವಿಭಾಗವಾಗಿದೆ. ಆತನು ಅದನ್ನು ನನ್ನಿಂದ ತೆಗೆದುಕೊಳ್ಳುವನು. ಆತನು ನಮ್ಮ ಹೊಲಗಳನ್ನು ದ್ರೋಹಿಗಳಿಗೆ ಹಂಚಿಕೊಟ್ಟಿದ್ದಾನೆ,’ ” ಎಂಬ ದುಃಖದಾಯಕ ಸಂಗೀತದಿಂದ ಹಾಸ್ಯಮಾಡುವರು.


“ಯೆಹೂದದ ಮೇಲೆಯೂ ಯೆರೂಸಲೇಮಿನ ಎಲ್ಲಾ ನಿವಾಸಿಗಳ ಮೇಲೆಯೂ ನನ್ನ ಕೈಚಾಚುವೆನು. ಈ ಸ್ಥಳದಲ್ಲಿ ಬಾಳನ ಪೂಜೆಗಳನ್ನು ಮತ್ತು ಉಳಿದಿರುವ ವಿಗ್ರಹಾರಾಧಕ ಯಾಜಕರ ಹೆಸರುಗಳನ್ನು ತೆಗೆದುಬಿಡುವೆನು.


ನಮ್ಮ ಸ್ವಾಸ್ತ್ಯವು ಅಪರಿಚಿತರಿಗೂ, ನಮ್ಮ ಮನೆಗಳು ಪರರಿಗೂ ವಶವಾದವು.


ಆದಕಾರಣ ನಾನು ಇತರ ಜನಾಂಗಗಳಲ್ಲಿ ಕೆಟ್ಟವರನ್ನು ತರುತ್ತೇನೆ ಮತ್ತು ಅವರು ಅವರ ಮನೆಗಳನ್ನು ವಶಪಡಿಸಿಕೊಳ್ಳುವರು. ನಾನು ಬಲಿಷ್ಠರ ಅಹಂಕಾರವನ್ನು ನಿಲ್ಲಿಸುತ್ತೇನೆ. ಅವರ ಪರಿಶುದ್ಧ ಸ್ಥಳಗಳು ಅಪವಿತ್ರವಾಗುವುವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು