Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 6:15 - ಕನ್ನಡ ಸಮಕಾಲಿಕ ಅನುವಾದ

15 ಅಸಹ್ಯವಾದದ್ದನ್ನು ಮಾಡಿದ ಮೇಲೆ ಅವರು ನಾಚಿಕೆಪಟ್ಟರೋ? ಇಲ್ಲ, ಸ್ವಲ್ಪವಾದರೂ ನಾಚಿಕೆ ಪಡಲಿಲ್ಲ. ಲಜ್ಜೆಯನ್ನೇ ಅರಿಯರು. ಆದ್ದರಿಂದ ಬೀಳುವವರೊಳಗೆ ಅವರು ಬೀಳುವರು. ನಾನು ಅವರನ್ನು ದಂಡಿಸುವ ಕಾಲದಲ್ಲಿ, ಅವರು ಕೆಳಗೆ ಬೀಳುವರು,” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅಸಹ್ಯಕಾರ್ಯಗಳನ್ನು ಮಾಡಿ ಅವಮಾನಕ್ಕೆ ಗುರಿಯಾದರೂ ಎಳ್ಳಷ್ಟೂ ನಾಚಿಕೆಪಡಲಿಲ್ಲ, ಲಜ್ಜೆಯ ಗಂಧವನ್ನೂ ತಿಳಿಯಲಿಲ್ಲ. ಆದಕಾರಣ ನಾನು ದಂಡಿಸುವ ಸಮಯದಲ್ಲಿ ಅವರು ಮುಗ್ಗರಿಸುವರು, ಬೀಳುವವರ ಸಂಗಡ ಬಿದ್ದೇ ಹೋಗುವರು” ಎಂದು ಯೆಹೋವನು ನುಡಿಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಅಸಹ್ಯಕಾರ್ಯಗಳನ್ನು ಮಾಡಿ ಅವಮಾನಕ್ಕೆ ಗುರಿಯಾಗಿದ್ದರೂ ಎಳ್ಳಷ್ಟೂ ನಾಚಿಕೆ ಇಲ್ಲದಿದ್ದಾರೆ. ಅವರಿಗೆ ಲಜ್ಜೆಯ ಗಂಧವೂ ಇಲ್ಲ. ಆದಕಾರಣ ಬೇರೆಯವರಂತೆ ಅವರೂ ಬೀಳುವರು. ನಾನು ದಂಡಿಸುವಾಗ ಅವರು ಏಳಲಾಗದಂತೆ ಮುಗ್ಗರಿಸಿ ಬೀಳುವರು. ಇದು ಸರ್ವೇಶ್ವರನಾದ ನನ್ನ ನುಡಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅಸಹ್ಯಕಾರ್ಯಗಳನ್ನು ಮಾಡಿ ಅವಮಾನಕ್ಕೆ ಗುರಿಯಾದರೂ ಎಳ್ಳಷ್ಟೂ ನಾಚಿಕೆಪಡಲಿಲ್ಲ, ಲಜ್ಜೆಯ ಗಂಧವನ್ನೂ ತಿಳಿಯಲಿಲ್ಲ; ಆದಕಾರಣ ನಾನು ದಂಡಿಸುವ ಸಮಯದಲ್ಲಿ ಅವರು ಮುಗ್ಗರಿಸುವರು, ಬೀಳುವವರ ಸಂಗಡ ಬಿದ್ದೇ ಹೋಗುವರು ಎಂದು ಯೆಹೋವನು ಅನ್ನುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಪ್ರವಾದಿಗಳು ಮತ್ತು ಯಾಜಕರು ತಾವು ಮಾಡುವ ದುಷ್ಕೃತ್ಯಗಳಿಗಾಗಿ ನಾಚಿಕೆಪಡಬೇಕು. ಆದರೆ ಅವರು ನಾಚಿಕೆಪಡುವದೇ ಇಲ್ಲ. ತಮ್ಮ ಪಾಪಕಾರ್ಯಗಳಿಗಾಗಿ ಸಂಕೋಚಪಡುವುದು ಸಹ ಅವರಿಗೆ ಗೊತ್ತಿಲ್ಲ. ಆದ್ದರಿಂದ ಬೇರೆಯವರಂತೆ ಅವರನ್ನೂ ಶಿಕ್ಷಿಸಲಾಗುವುದು. ನಾನು ಅವರನ್ನು ಶಿಕ್ಷಿಸಿದಾಗ ಅವರನ್ನು ನೆಲಕ್ಕೆ ಎಸೆಯಲಾಗುವದು” ಎಂದು ಯೆಹೋವನು ಅನ್ನುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 6:15
29 ತಿಳಿವುಗಳ ಹೋಲಿಕೆ  

ಅಸಹ್ಯವಾದದ್ದನ್ನು ಮಾಡಿದ ಮೇಲೆ ಅವರು ನಾಚಿಕೆಪಟ್ಟರೋ? ಇಲ್ಲ, ಸ್ವಲ್ಪವಾದರೂ ನಾಚಿಕೆ ಪಡಲಿಲ್ಲ, ಲಜ್ಜೆಯನ್ನೇ ಅರಿಯರು. ಆದ್ದರಿಂದ ಬೀಳುವವರೊಳಗೆ ಅವರು ಬೀಳುವರು. ನಾನು ಅವರನ್ನು ದಂಡಿಸುವ ಕಾಲದಲ್ಲಿ, ಅವರು ಕೆಳಗೆ ಬೀಳುವರು, ಎಂದು ಯೆಹೋವ ದೇವರು ಹೇಳುತ್ತಾರೆ.


ಅವರನ್ನು ಬಿಡಿರಿ, ಅವರು ಕುರುಡರಿಗೆ ದಾರಿತೋರಿಸುವ ಕುರುಡರು. ಕುರುಡನು ಕುರುಡನಿಗೆ ದಾರಿತೋರಿಸಿದರೆ ಅವರಿಬ್ಬರೂ ಹಳ್ಳಕ್ಕೆ ಬೀಳುವರು,” ಎಂದು ಹೇಳಿದರು.


ಆದ್ದರಿಂದ ಮಳೆಗಳು ನಿಂತುಹೋದವು, ಹಿಂಗಾರೇ ಆಗಲಿಲ್ಲ. ವೇಶ್ಯೆಯ ನೋಟ ನಿನಗಿತ್ತು. ನಾಚುವುದನ್ನು ನಿರಾಕರಿಸಿದೆ.


ವಿನಾಶನವೇ ಅವರ ಅಂತ್ಯವು. ಹೊಟ್ಟೆಯೇ ಅವರ ದೇವರು. ನಾಚಿಕೆ ಕಾರ್ಯಗಳಲ್ಲಿಯೇ ಅವರ ಪ್ರಭಾವ. ಅವರು ಲೌಕಿಕವಾದವುಗಳ ಮೇಲೆ ಮನಸ್ಸಿಡುತ್ತಾರೆ.


ನೀತಿಯುಳ್ಳ ಯೆಹೋವ ದೇವರು ಅವಳ ಮಧ್ಯದಲ್ಲಿ ಇದ್ದಾರೆ. ಅವರು ಅನ್ಯಾಯ ಮಾಡುವುದಿಲ್ಲ; ಪ್ರತಿ ಬೆಳಿಗ್ಗೆ ತಮ್ಮ ನ್ಯಾಯತೀರ್ಪನ್ನು ಬೆಳಕಿಗೆ ತರುತ್ತಾರೆ; ಅವರು ತಪ್ಪುವವರಲ್ಲ. ಆದರೆ ಅನ್ಯಾಯವಂತನು ನಾಚಿಕೆಯನ್ನು ಅರಿಯನು.


ಅವರಲ್ಲಿ ಉತ್ತಮನು ದತ್ತೂರಿಯ ಹಾಗೆಯೂ ಬಹು ಯಥಾರ್ಥನು ಮುಳ್ಳಿನ ಬೇಲಿಯ ಹಾಗೆಯೂ ಇದ್ದಾನೆ. ದೇವರು ನಿನ್ನನ್ನು ಭೇಟಿಮಾಡುವ ದಿನ ಬಂದಿದೆ, ನಿನ್ನ ಕಾವಲುಗಾರರು ಎಚ್ಚರಿಕೆಯ ಗಂಟೆಯನ್ನು ಬಾರಿಸುತ್ತಾರೆ. ಈಗ ನೀವು ಭಯಭೀತರಾಗುವ ಸಮಯ.


ದರ್ಶನವಿಲ್ಲದೆ, ನಿಮಗೆ ರಾತ್ರಿಯಾಗುವುದು; ಶಕುನವಿಲ್ಲದೆ ನಿಮಗೆ ಕತ್ತಲಾಗುವುದು. ಪ್ರವಾದಿಗಳಿಗೆ ಸೂರ್ಯ ಮುಳುಗುವುದು. ಅವರ ಮೇಲೆ ಹಗಲು ಕತ್ತಲೆಯಾಗುವುದು.


ದಂಡನೆಯ ದಿವಸಗಳು ಬಂದಿವೆ, ಮುಯ್ಯಿ ತೀರಿಸುವ ದಿವಸಗಳೂ ಸಮೀಪವಾಗಿವೆ. ಇಸ್ರಾಯೇಲು ಅದನ್ನು ತಿಳಿದುಕೊಳ್ಳಲಿ. ಏಕೆಂದರೆ ನಿನ್ನ ಪಾಪಗಳು ಬಹಳವಾಗಿರುವುದರಿಂದಲೂ, ದ್ವೇಷವು ಹೆಚ್ಚಾಗಿರುವುದರಿಂದಲೂ, “ಪ್ರವಾದಿ ಮೂರ್ಖನೂ, ಪ್ರೇರಿತ ಮನುಷ್ಯನು ಹುಚ್ಚನೂ,” ಎಂದು ಇಸ್ರಾಯೇಲು ಹೇಳಿಕೊಳ್ಳುತ್ತದೆ.


“ ‘ಅದರ ರಕ್ತವು ಅದರ ಮಧ್ಯದಲ್ಲಿದೆ; ಅದು ಅದನ್ನು ಬಂಡೆಯ ತುದಿಯಲ್ಲಿ ಇಟ್ಟಿದೆ. ಧೂಳು ಮುಚ್ಚುವ ಹಾಗೆ ನೆಲದ ಮೇಲೆ ಚೆಲ್ಲಲಿಲ್ಲ.


ಅವರು ಕಠಿಣ ಹೃದಯದವರು ಮತ್ತು ಹಠಮಾರಿ ಆಗಿದ್ದಾರೆ. ನಾನು ನಿನ್ನನ್ನು ಅವರ ಬಳಿಗೆ ಕಳುಹಿಸುತ್ತೇನೆ. ನೀನು ಅವರಿಗೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ,’ ಎಂದು ಹೇಳಬೇಕು.


“ಆದ್ದರಿಂದ ಅವರ ಮಾರ್ಗವು ಕತ್ತಲೆಯಲ್ಲಿರುವ ಜಾರುವ ಸ್ಥಳಗಳ ಹಾಗಿರುವುದು. ಅವರು ಮುಗ್ಗರಿಸಿಬೀಳುವರು. ನಾನು ಕೇಡನ್ನು ದಂಡನೆಯ ವರ್ಷವನ್ನಾಗಿ ಅವರ ಮೇಲೆ ಬರಮಾಡುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.


ಇವುಗಳ ನಿಮಿತ್ತ ನಾನು ದಂಡಿಸಬಾರದೋ?” ಎಂದು ಯೆಹೋವ ದೇವರು ಹೇಳುತ್ತಾರೆ. “ಇಂಥಾ ಜನಾಂಗಕ್ಕೆ ನನ್ನ ಪ್ರಾಣವು ಮುಯ್ಯಿಗೆ ಮುಯ್ಯಿ ತೀರಿಸುವುದಿಲ್ಲವೋ?


ಇವುಗಳ ನಿಮಿತ್ತ ನಾನು ಶಿಕ್ಷಿಸಬಾರದೇ? ಇಂಥಾ ಜನಾಂಗಕ್ಕೆ ನನ್ನ ಪ್ರಾಣವು ಮುಯ್ಯಿಗೆ ಮುಯ್ಯಿ ತೀರಿಸುವುದಿಲ್ಲವೋ? ಎಂದು ಯೆಹೋವ ದೇವರು ಹೇಳುತ್ತಾರೆ.


ನಾನಿಲ್ಲದೆ ಕೈದಿಗಳ ಕೆಳಗೆ ಮುದುರಿಕೊಂಡು, ಹತರಾಗಿರುವವರ ಕೆಳಗೆ ಬಿದ್ದಿರುವುದೇ ಇವರ ಗತಿ. ಏಕೆಂದರೆ, ಇಷ್ಟೆಲ್ಲಾ ಆದರೂ ಅವರ ಕೋಪವು ತೀರದೆ, ಅವರ ಕೈ ಇನ್ನೂ ಚಾಚಿಯೇ ಇದೆ.


ಅವರ ಮುಖಭಾವವೇ ಅವರಿಗೆ ವಿರುದ್ಧವಾಗಿ ಸಾಕ್ಷಿಯಾಗಿದೆ. ತಮ್ಮ ಪಾಪವನ್ನು ಸೊದೋಮಿನಂತೆ ಮರೆಮಾಡದೆ ಪ್ರಕಟ ಮಾಡುತ್ತಾರೆ. ಅವರಿಗೆ ಕಷ್ಟ! ಏಕೆಂದರೆ ತಮಗೆ ತಾವೇ ಕೇಡನ್ನು ಪ್ರತೀಕಾರವಾಗಿ ಮಾಡಿಕೊಂಡಿದ್ದಾರೆ.


ಅನೇಕಬಾರಿ ಗದರಿಸಿದರೂ ತಗ್ಗದ ಹಟಮಾರಿ ಪರಿಹಾರವಿಲ್ಲದೆ ಫಕ್ಕನೆ ಮುರಿದು ಬೀಳುವನು.


ಆದರೆ ಈಗ ನೀನು ಹೋಗಿ, ಜನರನ್ನು ನಿನಗೆ ನಾನು ಹೇಳಿದ ಸ್ಥಳಕ್ಕೆ ಕರೆದುಕೊಂಡು ಹೋಗು. ಇಗೋ, ನನ್ನ ದೂತನು ನಿನ್ನನ್ನು ಮುನ್ನಡೆಸುವನು. ಆದರೂ ನಾನು ವಿಚಾರಿಸುವ ದಿನ ಬಂದಾಗ ಅವರ ಪಾಪಕ್ಕೆ ತಕ್ಕಂತೆ ಅವರನ್ನು ಶಿಕ್ಷಿಸುತ್ತೇನೆ,” ಎಂದರು.


ಜ್ಞಾನಿಗಳು ನಾಚಿಕೊಂಡಿದ್ದಾರೆ. ದಿಗಿಲುಪಟ್ಟು ಸಿಕ್ಕಿಕೊಂಡಿದ್ದಾರೆ. ಇಗೋ, ಯೆಹೋವ ದೇವರ ವಾಕ್ಯವನ್ನು ನಿರಾಕರಿಸಿದ್ದಾರೆ. ಹಾಗಾದರೆ ಅವರಲ್ಲಿ ಯಾವ ಜ್ಞಾನವಿದೆ.


ಆದರೂ ಯೆಹೋವ ದೇವರೇ, ಅವರು ನನ್ನನ್ನು ಸಾಯಿಸುವುದಕ್ಕೆ ನನಗೆ ವಿರೋಧವಾಗಿ ಮಾಡಿದ ಆಲೋಚನೆಯನ್ನೆಲ್ಲಾ ನೀವು ಬಲ್ಲಿರಿ. ಅವರ ಅಕ್ರಮವನ್ನು ಮನ್ನಿಸಬೇಡಿ. ಅವರ ಪಾಪಗಳನ್ನು ನಿನ್ನ ಸನ್ನಿಧಿಯೊಳಗಿಂದ ಅಳಿಸಿಬಿಡಬೇಡಿರಿ. ಅವರು ನಿಮ್ಮ ಮುಂದೆ ಎಡವಿಬೀಳಲಿ. ನಿಮ್ಮ ಕೋಪದ ಕಾಲದಲ್ಲಿ ಅವರಿಗೆ ತಕ್ಕದ್ದನ್ನು ಮಾಡಿರಿ.


ಈ ದಿನದವರೆಗೂ ಅವರು ತಗ್ಗಿಸಿಕೊಳ್ಳಲಿಲ್ಲ, ಭಯಪಡಲಿಲ್ಲ. ನಾನು ನಿಮ್ಮ ಮುಂದೆಯೂ, ನಿಮ್ಮ ತಂದೆಗಳ ಮುಂದೆಯೂ ಇಟ್ಟ ನನ್ನ ನಿಯಮದಲ್ಲಿ ನಡೆಯಲಿಲ್ಲ.


ನೀವು ಸುಣ್ಣ ಬಳಿದ ಗೋಡೆಯನ್ನು ನಾನು ಈಗ ಕೆಡವಿ, ನೆಲಸಮಮಾಡಿ, ಅದರ ಅಸ್ತಿವಾರವನ್ನು ಕಾಣದ ಹಾಗೆ ಮಾಡುವೆನು. ಅದು ಬಿದ್ದು ಹೋಗುವಾಗ, ನೀವು ಅದರಲ್ಲಿ ನಾಶವಾಗುವಿರಿ. ಆಗ ನಾನೇ ಯೆಹೋವ ದೇವರೆಂದು ನಿಮಗೆ ತಿಳಿದುಬರುವುದು.


ನಾಚಿಕೆ ಇಲ್ಲದ ಜನಾಂಗದವರೇ, ಒಟ್ಟಾಗಿ ಕೂಡಿಕೊಳ್ಳಿರಿ, ನೀವು ಒಟ್ಟಾಗಿ ಕೂಡಿಕೊಳ್ಳಿರಿ,


“ಆ ದಿವಸದಲ್ಲಿ, ಪ್ರವಾದಿಗಳು ಪ್ರವಾದಿಸುವಾಗ, ಅವರು ತಮ್ಮ ತಮ್ಮ ದರ್ಶನಗಳಿಗೆ ನಾಚಿಕೆಪಡುವರು. ಅವರು ಮೋಸಗೊಳಿಸಲು ಪ್ರವಾದಿಯ ಒರಟಾದ ವಸ್ತ್ರವನ್ನು ಧರಿಸುವುದಿಲ್ಲ.


ಮರುದಿನ ಹಿರಿಯವಳು ಚಿಕ್ಕವಳಿಗೆ, “ಕಳೆದ ರಾತ್ರಿ ತಂದೆಯ ಸಂಗಡ ನಾನು ಮಲಗಿಕೊಂಡೆನು. ಈ ರಾತ್ರಿಯಲ್ಲಿಯೂ ಅವನಿಗೆ ದ್ರಾಕ್ಷಾರಸವನ್ನು ಕುಡಿಸಿ, ನೀನು ಹೋಗಿ ಅವನ ಸಂಗಡ ಮಲಗಿಕೋ. ಏಕೆಂದರೆ ನಾವು ನಮ್ಮ ತಂದೆಯ ಸಂತಾನವನ್ನು ಉಳಿಸಬೇಕು,” ಎಂದಳು.


ಆದ್ದರಿಂದ ಯೆಹೋವ ದೇವರು ತಾನು ಕಳುಹಿಸದೆ, ತನ್ನ ಹೆಸರಿನಲ್ಲಿ ಪ್ರವಾದಿಸುವಂಥ ಮತ್ತು, ‘ಈ ದೇಶದಲ್ಲಿ ಖಡ್ಗವೂ ಬರವೂ ಇರುವುದಿಲ್ಲ,’ ಎಂದು ಹೇಳುವಂಥ ಪ್ರವಾದಿಗಳನ್ನು ಕುರಿತು, ಖಡ್ಗದಿಂದಲೂ ಕ್ಷಾಮದಿಂದಲೂ ಆ ಪ್ರವಾದಿಗಳು ತಾವೇ ನಿರ್ಮೂಲವಾಗುತ್ತಾರೆ.


ನೀನು ಹಗಲಿನಲ್ಲಿಯೂ, ರಾತ್ರಿಯಲ್ಲಿಯೂ ಬೀಳುವೆ. ಪ್ರವಾದಿಗಳು ನಿನ್ನ ಸಂಗಡ ಮುಗ್ಗರಿಸಿಬೀಳುವರು. ಆದ್ದರಿಂದ ನಾನು ನಿನ್ನ ತಾಯಿಯನ್ನು ನಾಶಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು