Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 6:16 - ಕನ್ನಡ ಸಮಕಾಲಿಕ ಅನುವಾದ

16 ಯೆಹೋವ ದೇವರು ಹೀಗೆ ಹೇಳುತ್ತಾರೆ: “ಮಾರ್ಗಗಳಲ್ಲಿ ನಿಂತುಕೊಂಡು ನೋಡಿರಿ, ಮೊದಲಿನ ಹಾದಿಗಳನ್ನು ಕೇಳಿಕೊಳ್ಳಿರಿ, ಒಳ್ಳೆಯ ಮಾರ್ಗ ಎಲ್ಲಿದೆಯೋ ಅದರಲ್ಲಿ ನಡೆಯಿರಿ. ಆಗ ನಿಮ್ಮ ಪ್ರಾಣಗಳಿಗೆ ವಿಶ್ರಾಂತಿ ಸಿಕ್ಕುವುದು, ಆದರೆ ಅವರು, ‘ನಾವು ನಡೆಯುವುದಿಲ್ಲ,’ ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಯೆಹೋವನು, “ದಾರಿಗಳು ಕೂಡುವ ಸ್ಥಳದಲ್ಲಿ ನಿಂತುಕೊಂಡು ನೋಡಿ ಪುರಾತನ ಮಾರ್ಗಗಳು ಯಾವುವು. ಆ ಸನ್ಮಾರ್ಗವು ಎಲ್ಲಿ? ಎಂದು ವಿಚಾರಿಸಿ ಅದರಲ್ಲೇ ನಡೆಯಿರಿ; ಇದರಿಂದ ನಿಮ್ಮ ಆತ್ಮಗಳಿಗೆ ವಿಶ್ರಾಂತಿ ಸಿಕ್ಕುವುದು ಎಂದು ಅಪ್ಪಣೆಕೊಟ್ಟಾಗ ಅವರು ‘ಅದರಲ್ಲಿ ನಾವು ನಡೆಯುವುದೇ ಇಲ್ಲ’ ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಸರ್ವೇಶ್ವರ ಸ್ವಾಮಿ ತಮ್ಮ ಜನರಿಗೆ : “ನೀವು ದಾರಿಗಳು ಕೂಡುವ ಸ್ಥಳಗಳಲ್ಲಿ ನಿಂತು ನೋಡಿ. ಸನಾತನ ಮಾರ್ಗಗಳು ಯಾವುವು? ಸನ್ಮಾರ್ಗ ಎಲ್ಲಿದೆ? ಎಂದು ವಿಚಾರಿಸಿರಿ. ಅದರಲ್ಲೆ ಮುನ್ನಡೆಯಿರಿ. ಆಗ ನಿಮಗೆ ಮನನೆಮ್ಮದಿ ದೊರಕುವುದು.” ಆದರೆ ಆ ಜನರು : “ಇಲ್ಲ, ನಾವು ಅದರಲ್ಲಿ ನಡೆಯುವುದೇ ಇಲ್ಲ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಯೆಹೋವನು ಹೀಗೆ ನುಡಿಯುತ್ತಾನೆ - ದಾರಿಗಳು ಕೂಡುವ ಸ್ಥಳದಲ್ಲಿ ನಿಂತುಕೊಂಡು ನೋಡಿ ಪುರಾತನ ಮಾರ್ಗಗಳು ಯಾವವು, ಆ ಸನ್ಮಾರ್ಗವು ಎಲ್ಲಿ ಎಂದು ವಿಚಾರಿಸಿ ಅದರಲ್ಲೇ ನಡೆಯಿರಿ; ಇದರಿಂದ ನಿಮ್ಮ ಆತ್ಮಗಳಿಗೆ ವಿಶ್ರಾಂತಿ ಸಿಕ್ಕುವದು (ಎಂದು ನಾನು ಅಪ್ಪಣೆಕೊಟ್ಟಾಗ) ಅದರಲ್ಲಿ ನಾವು ನಡೆಯುವದೇ ಇಲ್ಲವೆಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಯೆಹೋವನು ಹೀಗೆ ಹೇಳುತ್ತಾನೆ: “ಎರಡು ರಸ್ತೆಗಳು ಕೂಡುವಲ್ಲಿ ನಿಂತು ನೋಡಿರಿ. ‘ಒಳ್ಳೆಯ ರಸ್ತೆ ಎಲ್ಲಿದೆ?’ ಎಂದು ಕೇಳಿರಿ. ಆ ರಸ್ತೆಯನ್ನು ಹಿಡಿದು ನಡೆಯಿರಿ. ಹಾಗೆ ಮಾಡಿದರೆ ನಿಮಗೆ ವಿಶ್ರಾಂತಿ ಸಿಕ್ಕುವದು. ಆದರೆ ‘ನಾವು ಒಳ್ಳೆಯ ಹಾದಿಯ ಮೇಲೆ ನಡೆಯುವುದಿಲ್ಲ’ ಎಂದು ನೀವು ಹೇಳಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 6:16
38 ತಿಳಿವುಗಳ ಹೋಲಿಕೆ  

ನೀವು ಬಲಕ್ಕಾಗಲಿ, ಎಡಕ್ಕಾಗಲಿ ತಿರುಗಿಕೊಳ್ಳುವಾಗ, “ಇದೇ ಮಾರ್ಗ ಇದರಲ್ಲೇ ನಡೆಯಿರಿ,” ಎಂದು ನಿಮ್ಮ ಹಿಂದೆ ಆಡುವ ಮಾತು ನಿಮ್ಮ ಕಿವಿಗೆ ಬೀಳುವುದು.


ನನ್ನ ಜನರಾದರೋ ನನ್ನನ್ನು ಮರೆತುಬಿಟ್ಟಿದ್ದಾರೆ. ವ್ಯರ್ಥವಾದ ವಿಗ್ರಹಗಳಿಗೆ ಧೂಪವನ್ನರ್ಪಿಸಿದ್ದಾರೆ. ಅವು ಪುರಾತನ ಪದ್ಧತಿಯಾದ ಅವರ ಮಾರ್ಗಗಳಲ್ಲಿ ಅವರನ್ನು ಎಡವುವಂತೆ ಮಾಡಿ, ಮಾರ್ಗವಲ್ಲದ ಕಾಲು ದಾರಿಗಳಲ್ಲಿ ಅವರನ್ನು ನಡೆಯುವಂತೆ ಮಾಡಿವೆ.


ಪೂರ್ವದ ದಿವಸಗಳನ್ನು ಜ್ಞಾಪಕಮಾಡಿಕೊಳ್ಳಿರಿ. ತಲತಲಾಂತರಗಳ ವರುಷಗಳನ್ನು ಗ್ರಹಿಸಿಕೊಳ್ಳಿರಿ. ನಿಮ್ಮ ತಂದೆಯನ್ನು ಕೇಳಿದರೆ, ಅವರು ನಿಮಗೆ ತಿಳಿಸುವರು. ನಿಮ್ಮ ಹಿರಿಯರನ್ನು ಕೇಳಿದರೆ, ಅವರು ನಿಮಗೆ ಹೇಳುವರು.


ಆದರೆ ನಾನು ಇದನ್ನು ಅವರಿಗೆ, “ನನ್ನ ಶಬ್ದಕ್ಕೆ ವಿಧೇಯರಾಗಿರಿ. ಆಗ ನಾನು ನಿಮ್ಮ ದೇವರಾಗಿರುವೆನು; ನೀವು ನನ್ನ ಜನರಾಗಿರುವಿರಿ; ನಿಮಗೆ ಒಳ್ಳೆಯದಾಗುವಂತೆ ನಾನು ನಿಮಗೆ ಆಜ್ಞಾಪಿಸಿದ ಎಲ್ಲಾ ಮಾರ್ಗಗಳಲ್ಲಿ ನಡೆಯಿರಿ,” ಎಂದು ಆಜ್ಞಾಪಿಸಿ ಹೇಳಿದೆನು.


ಆದ್ದರಿಂದ ನೀವು ಕ್ರಿಸ್ತ ಯೇಸುವನ್ನು ಕರ್ತ ಎಂದು ಅಂಗೀಕರಿಸಿದಂತೆಯೇ ಅವರಲ್ಲಿ ಬಾಳಿರಿ.


ಯಾಕೋಬಿನ ಮನೆತನದವರೇ ಬನ್ನಿರಿ, ಯೆಹೋವ ದೇವರ ಬೆಳಕಿನಲ್ಲಿ ನಡೆಯೋಣ.


ಆಗ ಯೇಸು ಅವರಿಗೆ, “ಇನ್ನು ಸ್ವಲ್ಪ ಕಾಲವೇ ಬೆಳಕು ನಿಮ್ಮ ನಡುವೆ ಇರುತ್ತದೆ. ಕತ್ತಲು ನಿಮ್ಮನ್ನು ಕವಿಯುವುದಕ್ಕೆ ಮುಂಚೆ, ನಿಮಗೆ ಬೆಳಕಿರುವಾಗಲೇ ನಡೆಯಿರಿ. ಕತ್ತಲಿನಲ್ಲಿ ನಡೆಯುವವನು ತಾನು ಎಲ್ಲಿಗೆ ಹೋಗುತ್ತಾನೆಂದು ತಿಳಿಯದು.


ಆದರೆ ಅವರೋ ಏನೂ ಪ್ರಯೋಜನ ಇಲ್ಲ. ಏಕೆಂದರೆ ಸ್ವಂತ ಆಲೋಚನೆಗಳ ಪ್ರಕಾರ ನಡೆದುಕೊಳ್ಳುವೆವು. ನಾವೆಲ್ಲರೂ ನಮ್ಮ ದುಷ್ಟ ಹೃದಯದ ಮೊಂಡುತನವನ್ನು ಅನುಸರಿಸುತ್ತೇವೆ,’ ಎಂದರು.”


ನಿನ್ನ ಏಳಿಗೆಗೆ ನಿನ್ನ ಸಂಗಡ ಮಾತನಾಡಿದೆನು. ಆದರೆ ನೀನು, ‘ನಾನು ಕೇಳುವುದಿಲ್ಲ,’ ಎಂದೆ. ನನ್ನ ಮಾತಿಗೆ ಕಿವಿಗೊಡದೆ ಇರುವುದೇ ನಿನ್ನ ಯೌವನದ ರೀತಿಯಾಗಿದೆ.


“ಯೆಹೋವ ದೇವರ ಹೆಸರಿನಿಂದ ನೀನು ನಮಗೆ ನುಡಿದ ಮಾತನ್ನು ಕೇಳಲೊಲ್ಲೆವು.


ಹಿರಿಯರು ನಂಬಿಕೆಯಿಂದಲೇ ಒಳ್ಳೆಯ ಸಾಕ್ಷಿಹೊಂದಿದರು.


ನೀವು ಇವುಗಳನ್ನು ತಿಳಿದುಕೊಂಡು ಇದರಂತೆ ಮಾಡಿದರೆ ನೀವು ಧನ್ಯರು.


“ನನ್ನ ಸೇವಕನಾದ ಮೋಶೆಯ ನಿಯಮವನ್ನು ನಾನು ಅವನಿಗೆ ಹೋರೇಬಿನಲ್ಲಿ ಸಮಸ್ತ ಇಸ್ರಾಯೇಲಿಗೋಸ್ಕರ ಆಜ್ಞಾಪಿಸಿದ್ದನ್ನೂ ವಿಧಿ ನಿಯಮಗಳನ್ನೂ ಜ್ಞಾಪಕಮಾಡಿಕೊಳ್ಳಿರಿ.


ನೀವು ಸೋಮಾರಿಗಳಾಗಿರಬಾರದು. ವಿಶ್ವಾಸದಿಂದಲೂ ತಾಳ್ಮೆಯಿಂದಲೂ ವಾಗ್ದಾನಗಳನ್ನು ಬಾಧ್ಯವಾಗಿ ಹೊಂದುವವರನ್ನು ಅನುಸರಿಸುವವರಾಗಿರಬೇಕು.


ದೇವರ ಶಿಕ್ಷಣ ಮತ್ತು ಎಚ್ಚರಿಸುವ ಸಾಕ್ಷಿಯ ವಿಷಯದಲ್ಲಿ ಈ ವಾಕ್ಯದ ಪ್ರಕಾರ ಒಂದು ವೇಳೆ ಅವರು ಹೇಳದಿದ್ದರೆ, ಅವರಲ್ಲಿ ಮುಂಜಾವಿನ ಬೆಳಕು ಮೂಡಿಬರುವುದಿಲ್ಲ.


“ಅದಕ್ಕೆ ಅಬ್ರಹಾಮನು ಅವನಿಗೆ, ‘ಅವರಿಗೆ ಮೋಶೆಯ ಮತ್ತು ಪ್ರವಾದಿಗಳ ಗ್ರಂಥಗಳಿವೆ; ಅದರಲ್ಲಿರುವುದಕ್ಕೆ ಅವರು ಕಿವಿಗೊಡಲಿ,’ ಎಂದನು.


ಆತನು ಮೊದಲು, “ಇದೇ ನಿಮಗೆ ಅವಶ್ಯಕವಾದ ವಿಶ್ರಾಂತಿ, ಬಳಲಿದವರನ್ನು ವಿಶ್ರಮಗೊಳಿಸಿರಿ. ನಿಮಗೆ ಅನುಕೂಲವಾದ ಉಪಶಮನ ಇದೇ,” ಎಂದು ಹೇಳಿದಾಗಲೂ ಅವರು ಕೇಳಲಿಲ್ಲ.


ನೀವು ಪವಿತ್ರ ವೇದದಲ್ಲಿ ನಿತ್ಯಜೀವ ದೊರೆಯುತ್ತದೆ ಎಂದು ನೆನಸಿ, ಅವುಗಳನ್ನು ಪರಿಶೋಧಿಸುತ್ತೀದ್ದಿರಿ. ಆ ಪವಿತ್ರ ವೇದವೇ ನನ್ನ ವಿಷಯವಾಗಿ ಸಾಕ್ಷಿಕೊಡುತ್ತದೆ.


ಬೆರೋಯದಲ್ಲಿದ್ದವರು ಥೆಸಲೋನಿಕದವರಿಗಿಂತ ಹೆಚ್ಚು ಸದ್ಗುಣವುಳ್ಳವರು; ಅವರು ವಾಕ್ಯವನ್ನು ಅತ್ಯಾಸಕ್ತಿಯಿಂದ ಸ್ವೀಕರಿಸಿ, ಇವರು ಹೇಳಿದ್ದು ಸರಿಯಾದದ್ದೋ ಏನೋ ಎಂದು ಅವರು ಪ್ರತಿದಿನವೂ ಪವಿತ್ರ ವೇದಗಳನ್ನು ಪರೀಕ್ಷಿಸುತ್ತಿದ್ದರು.


ನಮ್ಮ ಪಿತೃವಾದ ಅಬ್ರಹಾಮನು ಸುನ್ನತಿ ಹೊಂದಿದವರಿಗೆ ಮಾತ್ರವೇ ತಂದೆಯಾಗಿರದೆ ಅವನಿಗೆ ಸುನ್ನತಿ ಆಗುವ ಮೊದಲು ಇದ್ದ ನಂಬಿಕೆಯ ಹೆಜ್ಜೆಯಲ್ಲಿ ನಡೆಯುವವರಿಗೂ ತಂದೆಯಾಗಿರುತ್ತಾನೆ.


ಆದರೆ ನಾನು, ‘ನಿನ್ನ ಕಾಲು ಸವೆಯದಂತೆಯೂ, ನಿನ್ನ ಗಂಟಲು ಆರದಂತೆಯೂ ತಡೆದುಕೋ,’ ಎಂದೆನು. ಆದರೆ ನೀನು, ‘ಇಲ್ಲ, ನಿರೀಕ್ಷೆ ಇಲ್ಲ, ನಾನು ಅನ್ಯದೇವರುಗಳನ್ನು ಪ್ರೀತಿಸುತ್ತೇನೆ, ಅವುಗಳ ಹಿಂದೆ ನಾನು ಹೋಗುತ್ತೇನೆ,’ ಎಂದು ಹೇಳಿದೆ.


ಆಗ ನೀವು ಪರಲೋಕದಿಂದ ಕೇಳಿ, ನಿಮ್ಮ ಸೇವಕರಾದ ಇಸ್ರಾಯೇಲ್ ಜನರ ಪಾಪವನ್ನು ಮನ್ನಿಸಿ, ಅವರು ನಡೆಯಬೇಕಾದ ಸನ್ಮಾರ್ಗವನ್ನು ಅವರಿಗೆ ಕಲಿಸಿ, ನಿಮ್ಮ ಜನರಿಗೆ ಬಾಧ್ಯತೆಯಾಗಿ ಕೊಟ್ಟ ಭೂಮಿಯ ಮೇಲೆ ಮಳೆಯನ್ನು ಕೊಡಿರಿ.


ನನ್ನ ಮನವೇ, ನೀನು ವಿಶ್ರಾಂತಿಯಿಂದಿರು; ಏಕೆಂದರೆ ಯೆಹೋವ ದೇವರು ನಿನಗೆ ಉಪಕಾರಿಯಾಗಿದ್ದಾರೆ.


ಇವರು ಮೊದಲು ಬಾಳನ ಹೆಸರೆತ್ತಿ ಪ್ರಮಾಣಮಾಡುವ ಅಭ್ಯಾಸವನ್ನು ನನ್ನ ಜನರಿಗೆ ಕಲಿಸಿಕೊಟ್ಟ ಪ್ರಕಾರ, ‘ಈಗ ಯೆಹೋವ ದೇವರ ಜೀವದಾಣೆ,’ ಎಂದು ಹೇಳಿ ನನ್ನ ಹೆಸರಿನ ಆಣೆ ಇಟ್ಟುಕೊಳ್ಳುವುದಕ್ಕೆ ನನ್ನ ಜನರ ಮಾರ್ಗಗಳನ್ನು ಜಾಗ್ರತೆಯಾಗಿ ಕಲಿತುಕೊಂಡರೆ, ಆಗ ಅವರು ನನ್ನ ಜನರ ನಡುವೆ ನೆಲೆಗೊಂಡು ವೃದ್ಧಿಯಾಗುವರು.


“ನಿನಗೋಸ್ಕರ ದಾರಿ ತೋರುವ ಕಂಬಗಳನ್ನೂ ಮತ್ತು ಕೈಮರಗಳನ್ನೂ ನಿಲ್ಲಿಸಿಕೋ ಹೆದ್ದಾರಿಯ ಕಡೆಗೆ ನೀನು ಹೋದ ದಾರಿಗೂ ನಿನ್ನ ಹೃದಯವನ್ನು ಇಟ್ಟುಕೋ. ಇಸ್ರಾಯೇಲಿನ ಕನ್ಯಾ ಸ್ತ್ರೀಯೇ, ತಿರುಗಿಕೋ, ಈ ಪಟ್ಟಣಗಳಿಗೆ ತಿರುಗು.


ನಾವು ನಡೆಯತಕ್ಕ ಮಾರ್ಗವನ್ನೂ, ನಾವು ಮಾಡತಕ್ಕ ಕಾರ್ಯವನ್ನೂ ನಿನ್ನ ದೇವರಾದ ಯೆಹೋವ ದೇವರು ನಮಗೆ ತಿಳಿಸುವ ಹಾಗೆ, ನಿನ್ನ ದೇವರಾದ ಯೆಹೋವ ದೇವರಿಗೆ ಪ್ರಾರ್ಥನೆ ಮಾಡು,” ಎಂದರು.


ಚೀಯೋನಿನ ಕಡೆಗೆ ಅಭಿಮುಖರಾಗಿ ಅದರ ಮಾರ್ಗವನ್ನು ವಿಚಾರಿಸಿ ಬನ್ನಿ; ಮರೆತು ಹೋಗದ ನಿತ್ಯವಾದ ಒಡಂಬಡಿಕೆಯಿಂದ ಯೆಹೋವ ದೇವರನ್ನು ಸೇರಿಕೊಳ್ಳೋಣ, ಅನ್ನುವರು.


ಅವರು ತಮ್ಮ ನ್ಯಾಯಾಧಿಪತಿಗಳ ಮಾತನ್ನು ಕೇಳದೆ, ಅನ್ಯದೇವರುಗಳ ಹಿಂದೆ ಹೋಗಿ, ಅವುಗಳಿಗೆ ಅಡ್ಡಬಿದ್ದು, ತಮ್ಮ ಪಿತೃಗಳು ಯೆಹೋವ ದೇವರ ಆಜ್ಞೆಗಳನ್ನು ಕೇಳಿ ನಡೆದ ಮಾರ್ಗವನ್ನು ಶೀಘ್ರವಾಗಿ ತೊರೆದುಬಿಟ್ಟರು. ಅವರು ಮಾಡಿದ ಪ್ರಕಾರ ಮಾಡಲಿಲ್ಲ.


“ಮುಖ್ಯಯಾಜಕನಾದ ಅಮರ್ಯನು ಯೆಹೋವ ದೇವರ ಸಮಸ್ತ ಕಾರ್ಯಗಳಲ್ಲಿಯೂ, ಯೆಹೂದದ ಮನೆಯ ನಾಯಕನಾಗಿರುವ ಇಷ್ಮಾಯೇಲನ ಮಗ ಜೆಬದ್ಯನು ಅರಸನ ಸಮಸ್ತ ಕಾರ್ಯಗಳಲ್ಲಿಯೂ ಇರುವರು. ಇದಲ್ಲದೆ ಲೇವಿಯರು ನಿಮ್ಮ ಮುಂದೆ ಅಧಿಕಾರಿಗಳಾಗಿರುವರು. ನೀವು ಬಲಗೊಂಡು ಕೆಲಸ ನಡೆಸಿರಿ. ಯೆಹೋವ ದೇವರು ಒಳ್ಳೆಯವರ ಸಂಗಡ ಇರುವರು,” ಎಂದನು.


ಪುರಾತನ ಸಂಗತಿಗಳನ್ನು ಜ್ಞಾಪಿಸಿಕೊಳ್ಳಿರಿ. ಏಕೆಂದರೆ ನಾನೇ ದೇವರು, ಮತ್ತೊಬ್ಬನಿಲ್ಲ. ನಾನೇ ದೇವರು, ನನಗೆ ಸರಿಸಮಾನನು ಇಲ್ಲ.


ಅವರು ಸಮಾಧಾನಕ್ಕೆ ಪ್ರವೇಶಿಸುತ್ತಾರೆ. ಅವರಲ್ಲಿ ನೆಟ್ಟಗೆ ನಡೆಯುವ ಪ್ರತಿಯೊಬ್ಬರೂ ತಮ್ಮ ಮರಣದ ಹಾಸಿಗೆಗಳಲ್ಲಿ ವಿಶ್ರಮಿಸಿಕೊಳ್ಳುತ್ತಾರೆ.


ಇಸ್ರಾಯೇಲಿನ ದೇವರಾಗಿರುವ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ, ನಿಮ್ಮ ಮಾರ್ಗಗಳನ್ನೂ, ನಿಮ್ಮ ಕ್ರಿಯೆಗಳನ್ನೂ ನೆಟ್ಟಗೆಮಾಡಿರಿ. ಆಗ ನಿಮ್ಮನ್ನು ಈ ಸ್ಥಳದಲ್ಲಿ ವಾಸಿಸುವಂತೆ ಮಾಡುವೆನು.


ಆದರೆ ಅವರು ಕೇಳಲಿಲ್ಲ, ಕಿವಿಗೊಡಲಿಲ್ಲ. ಆದರೆ ಅವರು ತಮ್ಮ ದುಷ್ಟ ಹೃದಯದ ಆಲೋಚನೆಯ ಪ್ರಕಾರವೂ, ಕಲ್ಪನೆಯ ಪ್ರಕಾರವೂ ನಡೆದುಕೊಂಡು ಮುಂದಕ್ಕೆ ಅಲ್ಲ, ಹಿಂದಕ್ಕೆ ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು