Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 6:18 - ಕನ್ನಡ ಸಮಕಾಲಿಕ ಅನುವಾದ

18 ಆದ್ದರಿಂದ ಜನಾಂಗಗಳೇ, ಕೇಳಿರಿ; ಓ ಸಾಕ್ಷಿಗಳೇ, ಅವರಲ್ಲಿ ಇರುವಂಥದ್ದನ್ನು ತಿಳಿದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆದಕಾರಣ, ಜನಾಂಗಗಳೇ, ಕೇಳಿರಿ! ಜನಸಮೂಹವೇ, ಅವರಲ್ಲಿ ನಡೆದದ್ದನ್ನು ಮನಸ್ಸಿಗೆ ತಂದುಕೋ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಆದುದರಿಂದ ಸರ್ವೇಶ್ವರ : “ರಾಷ್ಟ್ರಗಳೇ ಆಲಿಸಿ. ನನ್ನ ಜನರಿಗೆ ಸಂಭವಿಸಲಿರುವುದನ್ನು ಗಮನಿಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಆದಕಾರಣ, ಜನಾಂಗಗಳೇ, ಕೇಳಿರಿ! ಜನಸಮೂಹವೇ, ಅವರಲ್ಲಿ ನಡೆದದ್ದನ್ನು ಮನಸ್ಸಿಗೆ ತಂದುಕೋ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆದಕಾರಣ ಸರ್ವಜನಾಂಗಗಳೇ ಕೇಳಿರಿ, ಜನಸಮೂಹಗಳೇ ಗಮನಿಸಿರಿ. ಯೆಹೂದದ ಜನರಿಗೆ ನಾನು ಮಾಡುವುದನ್ನು ಕೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 6:18
9 ತಿಳಿವುಗಳ ಹೋಲಿಕೆ  

ನನ್ನ ಜನರೇ, ಮೋವಾಬಿನ ಅರಸನಾದ ಬಾಲಾಕನು ಯೋಚಿಸಿದ್ದನ್ನೂ ಬೆಯೋರನ ಮಗ ಬಿಳಾಮನು ಅವನಿಗೆ ಉತ್ತರವಾಗಿ ಹೇಳಿದ್ದನ್ನೂ ಶಿಟ್ಟೀಮು ಮೊದಲುಗೊಂಡು ಗಿಲ್ಗಾಲಿನ ವರೆಗೆ ಆದ ನಿಮ್ಮ ಪ್ರಯಾಣವನ್ನೂ ಈಗ ಜ್ಞಾಪಕಮಾಡಿಕೊಳ್ಳಿರಿ. ಆಗ ಯೆಹೋವ ದೇವರ ನೀತಿಯ ಕೃತ್ಯಗಳನ್ನು ತಿಳಿದುಕೊಳ್ಳುವಿರಿ.


“ಜನಾಂಗಗಳೇ, ಯೆಹೋವ ದೇವರ ವಾಕ್ಯವನ್ನು ಕೇಳಿರಿ: ದೂರದಲ್ಲಿರುವ ದ್ವೀಪಗಳಲ್ಲಿ ಅದನ್ನು ಸಾರಿರಿ! ‘ಇಸ್ರಾಯೇಲನ್ನು ಚದರಿಸಿದಾತನೇ ಅವರನ್ನು ಕೂಡಿಸಿ, ಕುರುಬನು ತನ್ನ ಮಂದೆಯನ್ನು ಕಾಯುವ ಹಾಗೆ ಅವರನ್ನು ಕಾಯುವನು’ ಎಂದು ಪ್ರಕಟಿಸಿರಿ.


ಆಗ ನಾನು ಹೇಳಿದ್ದೇನೆಂದರೆ, “ಹಾ, ಸಾರ್ವಭೌಮ ಯೆಹೋವ ದೇವರೇ, ನಿಶ್ಚಯವಾಗಿ ನೀವು ಈ ಜನರಿಗೂ, ಯೆರೂಸಲೇಮಿಗೂ, ‘ನಿಮಗೆ ಸಮಾಧಾನವಾಗುವುದು,’ ಎಂದು ಹೇಳಿ, ಬಹಳ ಮೋಸ ಮಾಡಿದಿರಿ. ಖಡ್ಗವು ಅವರ ಕುತ್ತಿಗೆಗೆ ಬಂದಿದೆ” ಎಂದೆನು.


“ಯೆರೂಸಲೇಮಿನ ನಿವಾಸಿಗಳೇ, ಯೆಹೂದದ ಮನುಷ್ಯರೇ, ನನಗೂ ನನ್ನ ದ್ರಾಕ್ಷಿ ತೋಟಕ್ಕೂ ನ್ಯಾಯತೀರಿಸಿರಿ ಎಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.


ಇದಲ್ಲದೆ ನಿಮ್ಮ ಮೇಲೆ ಕಾವಲುಗಾರರನ್ನು ಇರಿಸಿ, ತುತೂರಿಯ ಶಬ್ದವನ್ನು ಆಲೈಸಿರಿ, ಎಂದೆನು. ಆದರೆ ಅವರು, ‘ನಾವು ಆಲೈಸುವುದಿಲ್ಲ,’ ಎಂದರು.


ಈ ಭೂಮಿಯೇ, ಕೇಳು. ಇಗೋ, ನಾನು ಈ ಜನರ ಮೇಲೆ ಕೇಡನ್ನು ಅಂದರೆ ಅವರ ಕಲ್ಪನೆಗಳ ಫಲವನ್ನೇ ಬರಮಾಡುತ್ತೇನೆ. ಏಕೆಂದರೆ, ಅವರು ನನ್ನ ವಾಕ್ಯಗಳನ್ನು ಆಲೈಸದೆ ಹೋದರು; ನನ್ನ ನಿಯಮವನ್ನು ತಿರಸ್ಕರಿಸಿದರು.


“ಜನಾಂಗಗಳಿಗೆ ತಿಳಿಸಿರಿ. ಇಗೋ, ಯೆರೂಸಲೇಮಿಗೆ ವಿರೋಧವಾಗಿ ತಿಳಿಯಪಡಿಸಿರಿ. ಏನೆಂದರೆ, ‘ಮುತ್ತಿಗೆ ಹಾಕುವ ಸೈನ್ಯದವರು ದೂರದೇಶದಿಂದ ಬರುತ್ತಾರೆ, ಯೆಹೂದದ ಪಟ್ಟಣಗಳಿಗೆ ವಿರೋಧವಾಗಿ ಯುದ್ಧದ ಕೂಗನ್ನು ಎಬ್ಬಿಸುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು