Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 6:2 - ಕನ್ನಡ ಸಮಕಾಲಿಕ ಅನುವಾದ

2 ಸುಂದರಿ ಮತ್ತು ಕೋಮಲಳಾದ ಚೀಯೋನಿನ ಮಗಳನ್ನು ನಾನು ನಾಶಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಚೀಯೋನ್ ನಗರಿಯು ಸೊಂಪಾದ ಹಸುರುಗಾವಲಿಗೆ ಸಮಾನವಾಗಿ ನನಗೆ ಕಾಣುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಸುಂದರವೂ, ಸೊಂಪಾದ ಹಸಿರುಗಾವಲಿಗೆ ಸಮಾನವೂ ಆದ ಸಿಯೋನ್ ನಗರ ನಾಶವಾಗಲಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಚೀಯೋನ್ ನಗರಿಯು ಸೊಂಪಾದ ಹಸುರುಗಾವಲಿಗೆ ಸಮಾನವಾಗಿ ನನಗೆ ಕಾಣುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಚೀಯೋನ್ ಕುಮಾರಿಯೇ, ನೀನು ಬಹು ಸುಂದರವಾಗಿಯೂ ಮೃದುವಾಗಿಯೂ ಇರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 6:2
7 ತಿಳಿವುಗಳ ಹೋಲಿಕೆ  

ಏಕೆಂದರೆ ಪ್ರಸವವೇದನೆ ಪಡುವವಳಂತೆ, ಚೊಚ್ಚಲನ್ನು ಹೆರುವವಳ ಸಂಕಟಕ್ಕೆ ಸಮಾನವಾಗಿರುವ ಚೀಯೋನಿನ ಮಗಳ ಕಿರಿಚುವ ಕೂಗನ್ನು ಕೇಳಿದ್ದೇನೆ. ಆಕೆಯು ಗೋಳಾಡುತ್ತಾಳೆ, ಕೈಗಳನ್ನು ಚಾಚಿ, “ಅಯ್ಯೋ, ನನಗೀಗ ಕಷ್ಟ! ಕೊಲೆಗಾರರ ನಿಮಿತ್ತ ನನ್ನ ಪ್ರಾಣವು ಬೇಸರಗೊಳ್ಳುತ್ತದೆ,” ಎಂದು ಅರಚಿಕೊಳ್ಳುತ್ತಾಳೆ.


ಚೀಯೋನ್ ಪುತ್ರಿಯು ದ್ರಾಕ್ಷಿ ತೋಟದಲ್ಲಿರುವ ಮನೆಯ ಹಾಗೆಯೂ, ಸೌತೆಕಾಯಿಯ ಹೊಲದ ಗುಡಿಸಿಲಿನ ಹಾಗೂ ಮುತ್ತಿಗೆ ಹಾಕಿರುವ ಪಟ್ಟಣದ ಹಾಗೆಯೂ ಇದೆ.


ಯೆರೂಸಲೇಮಿನ ಪುತ್ರಿಯೇ, ನಾನು ಯಾವುದನ್ನು ನಿನಗೆ ಸಾಕ್ಷಿಯನ್ನಾಗಿಡಲಿ? ಯಾವುದನ್ನು ನಿನಗೆ ಸಮಾನ ಮಾಡಲಿ? ಚೀಯೋನಿನ ಕನ್ಯೆಯೇ, ನಿನ್ನನ್ನು ಆದರಿಸುವವರು ಯಾರು?


ಕರ್ತದೇವರು ಹೇಗೆ ತಮ್ಮ ಕೋಪದ ಮೇಘದಿಂದ ಚೀಯೋನಿನ ಮಗಳನ್ನು ಮುಚ್ಚಿ ಇಸ್ರಾಯೇಲಿನ ಸೌಂದರ್ಯವನ್ನು ಆಕಾಶದಿಂದ ಭೂಮಿಗೆ ಎಸೆದರು. ತನ್ನ ಕೋಪದ ದಿನದಲ್ಲಿ, ತನ್ನ ಪಾದಪೀಠವನ್ನು ಜ್ಞಾಪಕ ಮಾಡಿಕೊಳ್ಳಲಿಲ್ಲ.


ನಿಮ್ಮಲ್ಲಿರುವ ಅತ್ಯಂತ ಸೌಮ್ಯಸ್ವಭಾವದವಳೂ, ಬಹಳ ಸೂಕ್ಷ್ಮ ಗುಣವುಳ್ಳವಳೂ, ನೆಲಕ್ಕೆ ಅಂಗಾಲನ್ನು ಸಹ ಇಡದ ಮಹಿಳೆಯು, ತನ್ನ ಮಗ್ಗುಲಲ್ಲಿರುವ ಗಂಡನ ಕಡೆಗೂ ಹೆತ್ತ ಪುತ್ರಪುತ್ರಿಯರ ಕಡೆಗೂ ಕಠಿಣವಾಗಿರುವಳು.


ರುಚಿಯಾದವುಗಳನ್ನು ಒಮ್ಮೆ ತಿಂದವರು ಬೀದಿಗಳಲ್ಲಿ ಹಾಳಾಗಿದ್ದಾರೆ. ಚಿಕ್ಕಂದಿನಿಂದಲೂ ಶ್ರೇಷ್ಠ ವಸ್ತ್ರವನ್ನು ತೊಡುತ್ತಿದ್ದವರು, ತಿಪ್ಪೆಗಳಲ್ಲಿ ಬಿದ್ದುಕೊಂಡಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು