ಯೆರೆಮೀಯ 6:20 - ಕನ್ನಡ ಸಮಕಾಲಿಕ ಅನುವಾದ20 ಶೆಬದಿಂದ ಸಾಂಬ್ರಾಣಿಯೂ ದೂರದೇಶದಿಂದ ಒಳ್ಳೆಯ ಸುಗಂಧವೂ ನನಗೆ ಬರುವುದು ಏತಕ್ಕೆ? ನಿಮ್ಮ ದಹನಬಲಿಗಳು ಮೆಚ್ಚುಗೆಯಾಗಲಿಲ್ಲ. ನಿಮ್ಮ ಬಲಿಗಳು ನನಗೆ ರುಚಿಯಿಲ್ಲ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ನೀವು ಶೆಬದ ಧೂಪವನ್ನು ಮತ್ತು ದೂರ ದೇಶದ ಒಳ್ಳೆಯ ಬಜೆಯನ್ನು ನನಗೆ ಅರ್ಪಿಸುವುದರಿಂದ ಏನು ಪ್ರಯೋಜನ? ನಿಮ್ಮ ಹೋಮಗಳು ನನಗೆ ಮೆಚ್ಚಿಕೆಯಲ್ಲ, ನಿಮ್ಮ ಯಜ್ಞಗಳು ನನಗೆ ಇಷ್ಟವಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಅವರು ಶೆಬದ ಧೂಪವನ್ನಾಗಲಿ, ದೂರದೇಶದ ಒಳ್ಳೆಯ ಸುಗಂಧವನ್ನಾಗಲಿ ತಂದು ನನಗೆ ಅರ್ಪಿಸುವುದರಿಂದ ನನಗೆ ಏನೂ ಪ್ರಯೋಜನವಿಲ್ಲ. ಅವರು ಒಪ್ಪಿಸುವ ದಹನಬಲಿಗಳನ್ನು ನಾನು ಮೆಚ್ಚುವುದಿಲ್ಲ. ಅವರ ಯಜ್ಞಬಲಿಗಳೂ ನನಗೆ ಇಷ್ಟವಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ನೀವು ಶೆಬದ ಧೂಪವನ್ನೂ ದೂರದೇಶದ ಒಳ್ಳೆ ಬಜೆಯನ್ನೂ ನನಗೆ ಅರ್ಪಿಸುವದರಿಂದ ಏನು ಪ್ರಯೋಜನ? ನಿಮ್ಮ ಹೋಮಗಳು ನನಗೆ ಮೆಚ್ಚಿಕೆಯಲ್ಲ, ನಿಮ್ಮ ಯಜ್ಞಗಳು ನನಗೆ ಇಷ್ಟವಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಯೆಹೋವನು ಹೇಳುವುದೇನೆಂದರೆ, “ನೀವು ನನ್ನ ಸಲುವಾಗಿ ಶೆಬ ದೇಶದಿಂದ ಧೂಪವನ್ನು ಏಕೆ ತರುವಿರಿ? ನೀವು ದೂರದೇಶದ ಒಳ್ಳೆಯ ಬಜೆಯನ್ನು ನನಗೆ ಅರ್ಪಿಸುವದರಿಂದ ಪ್ರಯೋಜನವೇನು? ನಿಮ್ಮ ಹೋಮಗಳಿಂದ ನನಗೆ ಸಂತೋಷವಾಗುವದಿಲ್ಲ. ನಿಮ್ಮ ಯಜ್ಞಗಳು ನನಗೆ ಇಷ್ಟವಿಲ್ಲ.” ಅಧ್ಯಾಯವನ್ನು ನೋಡಿ |
ಎತ್ತನ್ನು ಕೊಂದುಹಾಕುವವನು ಮನುಷ್ಯನನ್ನು ಹತ್ಯೆ ಮಾಡುವವನ ಹಾಗಿದ್ದಾನೆ. ಕುರಿಮರಿಯನ್ನು ಬಲಿ ಕೊಡುವವನು, ನಾಯಿಯ ಕುತ್ತಿಗೆಯನ್ನು ಕಡಿಯುವವನ ಹಾಗಿದ್ದಾನೆ. ಕಾಣಿಕೆಯನ್ನು ಅರ್ಪಿಸುವವನು, ಹಂದಿಯ ರಕ್ತವನ್ನು ಅರ್ಪಿಸುವವನ ಹಾಗಿದ್ದಾನೆ. ಧೂಪವನ್ನು ಹಾಕುವವನು, ವಿಗ್ರಹವನ್ನು ಪೂಜಿಸುವವನ ಹಾಗಿದ್ದಾನೆ. ಹೀಗೆ, ಅವರು ಸ್ವಂತ ಮಾರ್ಗಗಳನ್ನು ಆಯ್ದುಕೊಂಡಿದ್ದಾರೆ. ಅವರ ಪ್ರಾಣವು ಅವರ ಅಸಹ್ಯಗಳಲ್ಲಿ ಹರ್ಷಿಸುತ್ತವೆ.