Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 6:21 - ಕನ್ನಡ ಸಮಕಾಲಿಕ ಅನುವಾದ

21 ಆದ್ದರಿಂದ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ನಾನು ಈ ಜನರ ಮುಂದೆ ಅಡೆತಡೆಗಳನ್ನು ಇಡುತ್ತೇನೆ. ತಂದೆಯೂ, ಮಕ್ಕಳೂ ಕೂಡ ಅವುಗಳ ಮೇಲೆ ಬೀಳುವರು. ನೆರೆಯವರೂ, ಅವರ ಸ್ನೇಹಿತರೂ ನಾಶವಾಗುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆದಕಾರಣ ಇಗೋ, ನಾನು ಈ ಜನರ ಮುಂದೆ ಅಡ್ಡಿಆತಂಕಗಳನ್ನು ಒಡ್ಡುವೆನು. ತಂದೆ ಮಕ್ಕಳು ಅವುಗಳನ್ನೂ ಎಡವುವರು, ನೆರೆಹೊರೆಯವರೂ ನಾಶವಾಗುವರು ಇದೇ ಯೆಹೋವನಾದ ನನ್ನ ಮಾತು” ಎಂದು ನುಡಿಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಆದಕಾರಣ ಈ ಜನರಿಗೆ ಅಡ್ಡಿಆತಂಕಗಳನ್ನು ಒಡ್ಡುವೆನು. ಹೆತ್ತವರೂ ಮಕ್ಕಳೂ ಎಡವಿಬೀಳುವರು, ನೆಂಟರಿಷ್ಟರೂ ನಾಶವಾಗಿ ಹೋಗುವರು. ಇದು ಸರ್ವೇಶ್ವರನಾದ ನನ್ನ ನುಡಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಆದಕಾರಣ ಇಗೋ, ನಾನು ಈ ಜನರ ಮುಂದೆ ಆಟಂಕಗಳನ್ನು ಒಡ್ಡುವೆನು; ತಂದೆಗಳೂ ಮಕ್ಕಳೂ ಅವುಗಳನ್ನು ಎಡವುವರು, ನೆರೆಹೊರೆಯವರೂ ನಾಶವಾಗುವರು. ಇದೇ ಯೆಹೋವನಾದ ನನ್ನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 “ನಾನು ಯೆಹೂದದ ಜನರೆದುರಿಗೆ ಸಮಸ್ಯೆಗಳನ್ನು ಒಡ್ಡುವೆನು. ಅವುಗಳು ಜನರು ಎಡವಿಬೀಳುವ ಕಲ್ಲುಗಳಂತಾಗುವವು. ತಂದೆಗಳೂ ಮಕ್ಕಳೂ ಅವುಗಳಿಂದ ಎಡವಿಬೀಳುವರು. ಸ್ನೇಹಿತರು ಮತ್ತು ನೆರೆಹೊರೆಯವರು ಅವುಗಳಿಂದ ನಾಶವಾಗುವರು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 6:21
23 ತಿಳಿವುಗಳ ಹೋಲಿಕೆ  

ಅವರೇ ನಿಮಗೆ ಪರಿಶುದ್ಧ ಸ್ಥಳವಾಗಿರುವರು. ಆದರೆ ಇಸ್ರಾಯೇಲ್ ಮತ್ತು ಯಹೂದ ಎರಡು ಮನೆಗಳಿಗೆ ಎಡವುವ ಕಲ್ಲೂ, ಮುಗ್ಗರಿಸುವ ಬಂಡೆಯೂ, ಯೆರೂಸಲೇಮಿನ ನಿವಾಸಿಗಳಿಗೆ ಬಲೆಯೂ, ಬೋನೂ ಆಗಿರುವರು.


“ಯಾವಾಗ ನೀತಿವಂತನು ತನ್ನ ನೀತಿಯನ್ನು ಬಿಟ್ಟು ಅನ್ಯಾಯ ಮಾಡುವನೋ, ಆಗ ನಾನು ಅವನ ಮುಂದೆ ಅಡತಡೆಯನ್ನು ಇಡುವೆನು, ಅವನು ಸಾಯುವನು. ನೀನು ಅವನನ್ನು ಎಚ್ಚರಿಸದೆ ಇದ್ದುದರಿಂದಲೇ ಅವನು ತನ್ನ ಪಾಪದಲ್ಲಿ ಸಾಯುವನು. ಅವನು ಮಾಡಿರುವ ಸುಕೃತ್ಯಗಳು ಲೆಕ್ಕಕ್ಕೆ ಬರುವುದಿಲ್ಲ. ಆದರೆ ಅವನ ಸಾವಿಗೆ ನೀನೇ ಹೊಣೆಯಾಗುವೆ.


ಅವರು ಕತ್ತಲೆಯನ್ನು ತರುವುದಕ್ಕಿಂತ ಮೊದಲು ನಿಮ್ಮ ಕಾಲುಗಳು ಮೊಬ್ಬಿನ ಬೆಟ್ಟಗಳಲ್ಲಿ ಮುಗ್ಗರಿಸುವುದಕ್ಕಿಂತ ಮುಂಚೆ ನಿಮ್ಮ ದೇವರಾದ ಯೆಹೋವ ದೇವರನ್ನು ಮಹಿಮೆಪಡಿಸಿರಿ. ನೀವು ಬೆಳಕನ್ನು ನಿರೀಕ್ಷಿಸಿದ್ದೀರಿ. ಆದರೆ ಅವರು ಗಾಡಾಂಧಕಾರದ ಗುಡ್ಡಗಳನ್ನು ತಂದಾರು.


ಮತ್ತು, “ಜನರು ಎಡವಲು ಕಾರಣವಾಗುವ ಕಲ್ಲೂ ಅವರು ಬಿದ್ದುಹೋಗುವಂತೆ ಮಾಡುವ ಬಂಡೆಯೂ ಆಗಿರುತ್ತದೆ,” ಅವರು ವಾಕ್ಯಕ್ಕೆ ಅವಿಧೇಯರಾದ್ದರಿಂದ ಆ ಕಲ್ಲನ್ನು ಎಡವಿ ಬೀಳುತ್ತಾರೆ. ಅದಕ್ಕಾಗಿಯೇ ಅವರು ನೇಮಕವಾದರು.


ದಾವೀದನು, “ಅವರ ಊಟವೇ ಅವರಿಗೆ ಉರುಲೂ ಬೋನೂ ಆಗಲಿ. ಅದು ಅಡೆತಡೆಯೂ ಪ್ರತಿಕಾರವೂ ಆಗಲಿ.


ಪವಿತ್ರ ವೇದದಲ್ಲಿ ಹೀಗೆ ಬರೆಯಲಾಗಿದೆ: “ಇಗೋ, ನಾನು ಚೀಯೋನಿನಲ್ಲಿ ಜನರು ಎಡವಿ ಬೀಳುವಂತೆ ಮಾಡುವ ಕಲ್ಲನ್ನೂ ಮುಗ್ಗರಿಸುವ ಬಂಡೆಯನ್ನೂ ಇಡುತ್ತೇನೆ. ಆತನ ಮೇಲೆ ನಂಬಿಕೆಯಿಡುವವನು ಆಶಾಭಂಗಪಡುವದೇ ಇಲ್ಲ.”


ಆದ್ದರಿಂದ ನಿಮ್ಮ ಮಧ್ಯದಲ್ಲಿ ತಂದೆಗಳೇ ಮಕ್ಕಳನ್ನು ತಿನ್ನುವರು. ಮಕ್ಕಳು ಅವರ ತಂದೆಗಳನ್ನು ತಿನ್ನುವರು. ಹೀಗೆ ನಿಮ್ಮಲ್ಲಿ ನ್ಯಾಯತೀರ್ಪನ್ನು ನಡಿಸುವೆನು. ನಿಮ್ಮಲ್ಲಿ ಉಳಿದವರನ್ನೆಲ್ಲಾ ಗಾಳಿ ಬೀಸುವ ಎಲ್ಲಾ ದಿಕ್ಕಿಗೂ ಚದರಿಸುವೆನು.


ಯೆಹೋವ ದೇವರು ಹೇಳುವುದೇನೆಂದರೆ, ತರುವಾಯ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ, ಅವನ ಸೇವಕರನ್ನೂ, ಜನರನ್ನೂ ಈ ಪಟ್ಟಣದಲ್ಲಿ ವ್ಯಾಧಿಯಿಂದಲೂ, ಖಡ್ಗದಿಂದಲೂ, ಕ್ಷಾಮದಿಂದಲೂ ಉಳಿದವರನ್ನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಕೈಗೂ, ಅವರ ಶತ್ರುಗಳ ಕೈಗೂ ಒಪ್ಪಿಸುವೆನು. ಅವನು ಅವರನ್ನು ಖಡ್ಗದ ಬಾಯಿಂದ ಹೊಡೆಯುವನು. ಅವರ ಮೇಲೆ ಕರುಣೆ ಇಡುವುದಿಲ್ಲ, ಕನಿಕರಿಸುವುದಿಲ್ಲ, ಅಂತಃಕರಣ ಪಡುವುದಿಲ್ಲ.’


ಆದ್ದರಿಂದ ಅವರ ಮಕ್ಕಳನ್ನು ಕ್ಷಾಮಕ್ಕೆ ಕೊಡು. ಖಡ್ಗದ ಬಲದಿಂದ ಅವರ ರಕ್ತವನ್ನು ಸುರಿದುಬಿಡು. ಅವರ ಹೆಂಡತಿಯರು ಮಕ್ಕಳಿಲ್ಲದೆ ವಿಧವೆಯರಾಗಲಿ. ಅವರ ಗಂಡಸರು ಹತರಾಗಲಿ. ಅವರ ಯೌವನಸ್ಥರು ಯುದ್ಧದಲ್ಲಿ ಖಡ್ಗಕ್ಕೆ ತುತ್ತಾಗಲಿ.


ಆದ್ದರಿಂದ ದೇವರು ಅವರ ಮೇಲೆ ಕಸ್ದೀಯರ ಅರಸನನ್ನು ಬರಮಾಡಿದರು. ಅವನು ಅವರ ಪರಿಶುದ್ಧ ಸ್ಥಾನವಾದ ಆಲಯದಲ್ಲಿ ಅವರ ಪ್ರಾಯಸ್ಥರನ್ನು ಖಡ್ಗದಿಂದ ಕೊಂದುಹಾಕಿದನು. ಪ್ರಾಯಸ್ಥನ ಮೇಲಾದರೂ, ಕನ್ಯಾಸ್ತ್ರೀಯ ಮೇಲಾದರೂ, ಅತಿವೃದ್ಧನ ಮೇಲಾದರೂ ಕನಿಕರಪಡಲಿಲ್ಲ. ದೇವರು ಸಮಸ್ತ ಜನರನ್ನು ನೆಬೂಕದ್ನೆಚ್ಚರನ ಕೈಯಲ್ಲಿ ಒಪ್ಪಿಸಿದರು.


ಓಡಿಸುವವನಿಲ್ಲದೆ ಒಬ್ಬರ ಮೇಲೊಬ್ಬರು ಖಡ್ಗದ ಭಯದಿಂದಾದ ಹಾಗೆ ಬೀಳುವರು. ನಿಮ್ಮ ಶತ್ರುಗಳಿಗೆದುರಾಗಿ ನಿಂತುಕೊಳ್ಳುವುದು ನಿಮ್ಮಿಂದಾಗದು.


ಅಸಹ್ಯವಾದದ್ದನ್ನು ಮಾಡಿದ ಮೇಲೆ ಅವರು ನಾಚಿಕೆಪಟ್ಟರೋ? ಇಲ್ಲ, ಸ್ವಲ್ಪವಾದರೂ ನಾಚಿಕೆ ಪಡಲಿಲ್ಲ, ಲಜ್ಜೆಯನ್ನೇ ಅರಿಯರು. ಆದ್ದರಿಂದ ಬೀಳುವವರೊಳಗೆ ಅವರು ಬೀಳುವರು. ನಾನು ಅವರನ್ನು ದಂಡಿಸುವ ಕಾಲದಲ್ಲಿ, ಅವರು ಕೆಳಗೆ ಬೀಳುವರು, ಎಂದು ಯೆಹೋವ ದೇವರು ಹೇಳುತ್ತಾರೆ.


ಹಿರಿಕಿರಿಯರಾದ ಎಲ್ಲರನ್ನು ಒಬ್ಬರಿಗೊಬ್ಬರು ಬಡಿದಾಡುವಂತೆ ಮಾಡುವೆನು. ಅವರನ್ನು ಉಳಿಸೆನು, ಕನಿಕರಿಸೆನು, ಕರುಣಿಸೆನು ಹಾಗೂ ನಾಶಮಾಡದೆ ಬಿಡೆನು,’ ಇದು ಯೆಹೋವ ದೇವರಾದ ನನ್ನ ನುಡಿ.”


ಆದರೂ ಯೆಹೋವ ದೇವರೇ, ಅವರು ನನ್ನನ್ನು ಸಾಯಿಸುವುದಕ್ಕೆ ನನಗೆ ವಿರೋಧವಾಗಿ ಮಾಡಿದ ಆಲೋಚನೆಯನ್ನೆಲ್ಲಾ ನೀವು ಬಲ್ಲಿರಿ. ಅವರ ಅಕ್ರಮವನ್ನು ಮನ್ನಿಸಬೇಡಿ. ಅವರ ಪಾಪಗಳನ್ನು ನಿನ್ನ ಸನ್ನಿಧಿಯೊಳಗಿಂದ ಅಳಿಸಿಬಿಡಬೇಡಿರಿ. ಅವರು ನಿಮ್ಮ ಮುಂದೆ ಎಡವಿಬೀಳಲಿ. ನಿಮ್ಮ ಕೋಪದ ಕಾಲದಲ್ಲಿ ಅವರಿಗೆ ತಕ್ಕದ್ದನ್ನು ಮಾಡಿರಿ.


ಅವರಲ್ಲಿ ಅನೇಕರು ಎಡವಿಬೀಳುವರು, ಮುಗ್ಗರಿಸಿ ಮೂಳೆ ಮುರಿದುಕೊಳ್ಳುವರು, ಬಲೆಗೆ ಸಿಕ್ಕಿ ಬೀಳುವರು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು