ಯೆರೆಮೀಯ 6:4 - ಕನ್ನಡ ಸಮಕಾಲಿಕ ಅನುವಾದ4 “ಚೀಯೋನಿಗೆ ವಿರೋಧವಾಗಿ ಯುದ್ಧವನ್ನು ಸಿದ್ಧಮಾಡಿರಿ. ಏಳಿರಿ, ಮಧ್ಯಾಹ್ನದಲ್ಲಿ ದಾಳಿಮಾಡೋಣ. ನಮಗೆ ಕಷ್ಟ! ಏಕೆಂದರೆ ಹೊತ್ತು ಮುಳುಗುತ್ತದೆ; ಸಂಜೆಯ ನೆರಳುಗಳು ಉದ್ದವಾಗುತ್ತವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಇವರು, ಚೀಯೋನಿಗೆ ವಿರುದ್ಧವಾಗಿ ಸನ್ನದ್ಧರಾಗಿರಿ, ಏಳಿರಿ, ಮಧ್ಯಾಹ್ನಕ್ಕೆ ಅದರ ಮೇಲೆ ನುಗ್ಗುವ! ಅಯ್ಯೋ, ಇದೇನು! ನಮಗೆ ಹೊತ್ತು ತಿರುಗಿತಲ್ಲಾ, ಸಂಜೆಯ ನೆರಳುಗಳು ಉದ್ದವಾದವು ಅನ್ನುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಅವರು : “ಸಿಯೋನಿಗೆ ವಿರುದ್ಧ ಯುದ್ಧಸನ್ನದ್ಧರಾಗಿರಿ. ಏಳಿ, ನಡುಮಧ್ಯಾಹ್ನದಲ್ಲೆ ಅದರ ಮೇಲೆ ನುಗ್ಗುವ. ಅಯ್ಯೋ, ಇದೇನು ಹೊತ್ತುಮೀರಿ ಹೋಗುತ್ತಿದೆ ಅಲ್ಲಾ, ಸಂಜೆಯ ನೆರಳು ಉದ್ದುದ್ದವಾಗುತ್ತಿದೆಯಲ್ಲಾ ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 [ಇವರು] - ಚೀಯೋನಿಗೆ ವಿರುದ್ಧವಾಗಿ ಸನ್ನದ್ಧರಾಗಿರಿ; ಏಳಿರಿ, ಮಧ್ಯಾಹ್ನಕ್ಕೆ ಅದರ ಮೇಲೆ ನುಗ್ಗುವ! ಅಯ್ಯೋ, ಇದೇನು! ನಮಗೆ ಹೊತ್ತು ತಿರುಗಿತಲ್ಲಾ, ಸಂಜೆಯ ನೆರಳುಗಳು ಉದ್ದವಾದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 “ಜೆರುಸಲೇಮಿನ ಮೇಲೆ ಧಾಳಿ ಮಾಡುವದಕ್ಕೆ ಸಿದ್ಧರಾಗಿರಿ. ಏಳಿರಿ, ನಾವು ನಗರವನ್ನು ಮಧ್ಯಾಹ್ನದಲ್ಲಿಯೇ ಮುತ್ತೋಣ. ಆದರೆ ಈಗಾಗಲೇ ಹೊತ್ತಾಗಿದೆ. ಸಾಯಂಕಾಲದ ನೆರಳುಗಳು ವಿಸ್ತಾರಗೊಳ್ಳುತ್ತಿವೆ. ಅಧ್ಯಾಯವನ್ನು ನೋಡಿ |