ಯೆರೆಮೀಯ 6:7 - ಕನ್ನಡ ಸಮಕಾಲಿಕ ಅನುವಾದ7 ಬುಗ್ಗೆಯು ನೀರನ್ನು ಹರಿಯ ಮಾಡುವಂತೆ, ಅವಳು ತನ್ನ ಕೆಟ್ಟತನವನ್ನು ಹರಿಯ ಮಾಡುತ್ತಾಳೆ. ಬಲಾತ್ಕಾರವೂ ಸುಲಿಗೆಯೂ ಅವಳಲ್ಲಿ ಕೇಳ ಬರುತ್ತದೆ. ದುಃಖವೂ ಗಾಯಗಳೂ ಯಾವಾಗಲೂ ನನ್ನ ಮುಂದೆ ಇವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ತೊಟ್ಟಿಯು ತನ್ನಲ್ಲಿನ ನೀರನ್ನು ತಿಳಿಯಾಗಿ ಇಟ್ಟುಕೊಳ್ಳುವಂತೆ ಈ ಪಟ್ಟಣವು ತನ್ನಲ್ಲಿನ ದುಷ್ಟತನವನ್ನು ನಿಚ್ಚಳವಾಗಿ ಇಟ್ಟುಕೊಂಡಿದೆ. ಅಲ್ಲಿ ಬಲಾತ್ಕಾರದ ಮತ್ತು ಕೊಳ್ಳೆಯ ಸುದ್ದಿಯೇ ಕೇಳಿಬರುತ್ತದೆ; ರೋಗಗಳೂ, ಗಾಯಗಳೂ ಸದಾ ನನ್ನ ಕಣ್ಣಿಗೆ ಬೀಳುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ತೊಟ್ಟಿ ತನ್ನಲ್ಲಿನ ನೀರನ್ನು ತಿಳಿಯಾಗಿ ಇಟ್ಟುಕೊಳ್ಳುವಂತೆ ಈ ನಗರ ತನ್ನಲ್ಲಿನ ನೀಚತನವನ್ನು ನಿಚ್ಚಳವಾಗಿ ಇಟ್ಟುಕೊಂಡಿದೆ. ಇಲ್ಲಿಂದ ಕೇಳಿಬರುವುದೆಲ್ಲ ಹಿಂಸಾಚಾರದ ಹಾಗೂ ಕೊಳ್ಳೆಯ ಸುದ್ದಿಯೆ. ರೋಗ ರುಜಿನಗಳೂ ಗಾಯಹುಣ್ಣುಗಳೂ ಸದಾ ನನ್ನ ಕಣ್ಣಿಗೆ ಬೀಳುತ್ತಿವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ತೊಟ್ಟಿಯು ತನ್ನಲ್ಲಿನ ನೀರನ್ನು ತಿಳಿಯಾಗಿ ಇಟ್ಟುಕೊಳ್ಳುವಂತೆ ಈ ಪಟ್ಟಣವು ತನ್ನಲ್ಲಿನ ದುಷ್ಟತನವನ್ನು ನಿಚ್ಚಳವಾಗಿ ಇಟ್ಟುಕೊಂಡಿದೆ; ಅಲ್ಲಿ ಬಲಾತ್ಕಾರದ ಮತ್ತು ಕೊಳ್ಳೆಯ ಸುದ್ದಿಯೇ ಕೇಳಬರುತ್ತದೆ; ರೋಗಗಳೂ ವ್ರಣಗಳೂ ಸದಾ ನನ್ನ ಕಣ್ಣಿಗೆ ಬೀಳುತ್ತವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಬಾವಿಯಲ್ಲಿ ಹೊಸ ನೀರು ಬರುವಂತೆ ಜೆರುಸಲೇಮಿನಲ್ಲಿ ಹೊಸಹೊಸ ದುಷ್ಟತನ ಉಂಟಾಗುತ್ತದೆ. ಈ ಪಟ್ಟಣದಲ್ಲಿ ಬಲಾತ್ಕಾರ ಮತ್ತು ವಿನಾಶಗಳೇ ಕೇಳಿಬರುತ್ತವೆ. ನನಗೆ ಯಾವಾಗಲೂ ಜೆರುಸಲೇಮಿನ ರೋಗ ಮತ್ತು ಗಾಯಗಳು ಕಣ್ಣಿಗೆ ಬೀಳುತ್ತವೆ. ಅಧ್ಯಾಯವನ್ನು ನೋಡಿ |