ಯೆರೆಮೀಯ 6:9 - ಕನ್ನಡ ಸಮಕಾಲಿಕ ಅನುವಾದ9 ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ, “ಇಸ್ರಾಯೇಲಿನ ಶೇಷವನ್ನು ದ್ರಾಕ್ಷಿ ಗಿಡದ ಹಾಗೆ ಪೂರ್ಣವಾಗಿ ಹಕ್ಕಲಾಯುವರು; ದ್ರಾಕ್ಷಿ ಕೂಡಿಸುವವನ ಹಾಗೆ ನಿನ್ನ ಕೈಯನ್ನು ರೆಂಬೆಗಳಲ್ಲಿ ಹಿಂದಕ್ಕೆ ತಿರುಗಿಸು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಸೇನಾಧೀಶ್ವರನಾದ ಯೆಹೋವನು, ಇಸ್ರಾಯೇಲಿನ ಶೇಷವನ್ನು ದ್ರಾಕ್ಷಿಯ ಹಕ್ಕಲನ್ನೋ ಎಂಬಂತೆ ಆಯಬೇಕು; ದ್ರಾಕ್ಷಿಯ ಹಣ್ಣನ್ನು ಕೀಳುವವನಂತೆ ನೀನು ನಿನ್ನ ಕೈಯನ್ನು ತಿರುಗಿ ರೆಂಬೆಗಳಲ್ಲಿ ಹಾಕು ಎಂದು ಹೇಳುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಸರ್ವಶಕ್ತರಾದ ಸರ್ವೇಶ್ವರ ಸ್ವಾಮಿ ನನಗೆ ಹೀಗೆಂದರು : “ಇಸ್ರಯೇಲಿನ ಅಳಿದುಳಿದವರನ್ನು ದ್ರಾಕ್ಷಿಯ ಹಕ್ಕಲನ್ನೋ ಎಂಬಂತೆ ಆಯ್ದುಕೊ. ದ್ರಾಕ್ಷಿಯ ಹಣ್ಣನ್ನು ಕೀಳುವವನಂತೆ ನಿನ್ನ ಕೈಯನ್ನು ಮತ್ತೆ ರೆಂಬೆಗಳಿಗೆ ಹಾಕು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಸೇನಾಧೀಶ್ವರನಾದ ಯೆಹೋವನು ಹೀಗನ್ನುತ್ತಾನೆ - ಇಸ್ರಾಯೇಲಿನ ಶೇಷವನ್ನು ದ್ರಾಕ್ಷೆಯ ಹಕ್ಕಲನ್ನೋ ಎಂಬಂತೆ ಆಯಬೇಕು; ದ್ರಾಕ್ಷೆಯ ಹಣ್ಣನ್ನು ಕೀಳುವವನಂತೆ ನೀನು ನಿನ್ನ ಕೈಯನ್ನು ತಿರಿಗಿ ರೆಂಬೆಗಳಲ್ಲಿ ಹಾಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಸರ್ವಶಕ್ತನಾದ ಯೆಹೋವನು ಹೀಗೆ ಹೇಳುತ್ತಾನೆ: “ದೇಶದಲ್ಲಿ ಅಳಿದುಳಿದ ಇಸ್ರೇಲಿಯರನ್ನು ಒಟ್ಟಾಗಿ ಸೇರಿಸಿರಿ. ದ್ರಾಕ್ಷಿತೋಟದಲ್ಲಿ ಕೊನೆಯ ದ್ರಾಕ್ಷಿಯನ್ನು ಕೀಳುವಂತೆ ಅವರನ್ನು ಒಟ್ಟಾಗಿ ಸೇರಿಸಿ. ಕೊಯ್ಲುಗಾರನು ಪ್ರತಿಯೊಂದು ಬಳ್ಳಿಯನ್ನು ನೋಡಿ ದ್ರಾಕ್ಷಿಕೀಳುವಂತೆ ನೀವು ಸೂಕ್ಷ್ಮವಾಗಿ ಗಮನಿಸಿ ಅವರನ್ನು ಒಟ್ಟಾಗಿ ಸೇರಿಸಿರಿ.” ಅಧ್ಯಾಯವನ್ನು ನೋಡಿ |