Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 7:17 - ಕನ್ನಡ ಸಮಕಾಲಿಕ ಅನುವಾದ

17 ಯೆಹೂದದ ಪಟ್ಟಣಗಳಲ್ಲಿಯೂ, ಯೆರೂಸಲೇಮಿನ ಬೀದಿಗಳಲ್ಲಿಯೂ ಅವರು ಮಾಡುವುದನ್ನು ನೀನು ನೋಡುವುದಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಇವರು ಯೆಹೂದದ ಪಟ್ಟಣಗಳಲ್ಲಿಯೂ, ಯೆರೂಸಲೇಮಿನ ಬೀದಿಗಳಲ್ಲಿಯೂ ಮಾಡುವುದನ್ನು ನೀನು ನೋಡಲಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಇವರು ಜುದೇಯ ಪಟ್ಟಣಗಳಲ್ಲೂ ಜೆರುಸಲೇಮಿನ ಬೀದಿಗಳಲ್ಲೂ ಮಾಡುವುದನ್ನು ನೀನೆ ನೋಡಿರುವೆ ಅಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಇವರು ಯೆಹೂದದ ಪಟ್ಟಣಗಳಲ್ಲಿಯೂ ಯೆರೂಸಲೇವಿುನ ಬೀದಿಗಳಲ್ಲಿಯೂ ಮಾಡುವದನ್ನು ನೀನು ನೋಡಲಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆ ಜನರು ಯೆಹೂದದ ಪಟ್ಟಣಗಳಲ್ಲಿಯೂ ಜೆರುಸಲೇಮಿನ ಬೀದಿಗಳಲ್ಲಿಯೂ ಏನು ಮಾಡುತ್ತಿದ್ದಾರೆಂಬುದು ನಿನಗೆ ಗೊತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 7:17
11 ತಿಳಿವುಗಳ ಹೋಲಿಕೆ  

ನೀವು ಅವರ ದುರ್ಮಾರ್ಗಗಳನ್ನೂ ದುಷ್ಕೃತ್ಯಗಳನ್ನೂ ನೋಡುವಾಗ ಅದರಿಂದಲೇ ನಿಮಗೆ ಸಮಾಧಾನವಾಗುವುದು; ನಾನು ಅದರೊಳಗೆ ಮಾಡಿದ್ದೆಲ್ಲಾ ಕಾರಣವಿಲ್ಲದೆ ಮಾಡಲಿಲ್ಲವೆಂದು ತಿಳಿದುಕೊಳ್ಳುವಿರಿ, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.”


“ನೀನು ನನ್ನ ಜನರ ಮಾರ್ಗವನ್ನು ಪರೀಕ್ಷಿಸಿ ತಿಳಿದುಕೊಳ್ಳುವಂತೆ, ನಾನು ನಿನ್ನನ್ನು ನನ್ನ ಜನವೆಂಬ ಅದುರಿಗೆ ಲೋಹ ಶೋಧಕನನ್ನಾಗಿ ನೇಮಿಸಿದ್ದೇನೆ.


“ಆದ್ದರಿಂದ ನೀನು ಈ ಜನರಿಗೋಸ್ಕರ ಪ್ರಾರ್ಥನೆ ಮಾಡಬೇಡ. ಅವರಿಗೋಸ್ಕರ ಮೊರೆಯನ್ನೂ, ಪ್ರಾರ್ಥನೆಯನ್ನೂ ಎತ್ತಬೇಡ. ಇಲ್ಲವೆ ನನಗೆ ವಿಜ್ಞಾಪನೆ ಮಾಡಬೇಡ. ಏಕೆಂದರೆ ನಾನು ಅದನ್ನು ಕೇಳಿಸಿಕೊಳ್ಳುವುದಿಲ್ಲ.


‘ಗಗನದ ಒಡತಿ,’ ಎಂದು ಇವರು ಕರೆಯುವ ದೇವತೆಗೆ ಹೋಳಿಗೆಗಳನ್ನು ಮಾಡುವುದಕ್ಕಾಗಿ ಅವರ ಮಕ್ಕಳು ಸೌದೆಯನ್ನು ಆಯ್ದು ತರುತ್ತಾರೆ. ಗಂಡಸರು ಬೆಂಕಿ ಹೊತ್ತಿಸುತ್ತಾರೆ. ಹೆಂಗಸರು ಹಿಟ್ಟನ್ನು ನಾದುತ್ತಾರೆ. ನನ್ನನ್ನು ಕೆಣಕಬೇಕೆಂದೇ ಅನ್ಯ ದೇವತೆಗಳಿಗೆ ಪಾನ ನೈವೇದ್ಯವನ್ನು ಅರ್ಪಿಸುತ್ತಾರೆ.”


ಆದ್ದರಿಂದ ನನ್ನ ರೌದ್ರವೂ ನನ್ನ ಕೋಪವೂ ಸುರಿದು, ಯೆಹೂದದ ಪಟ್ಟಣಗಳಲ್ಲಿಯೂ, ಯೆರೂಸಲೇಮಿನ ಬೀದಿಗಳಲ್ಲಿಯೂ ಉರಿಯಿತು. ಅವು ಈ ದಿನದವರೆಗೂ ಹಾಳೂ, ಬೀಳೂ ಆದವು.


ನನ್ನನ್ನು ಬಿಟ್ಟು ಬೇರೆ ದೇವರುಗಳಿಗೆ ಧೂಪವನ್ನರ್ಪಿಸಿ ತಮ್ಮ ಸ್ವಂತ ಕೈಕೆಲಸಗಳಿಗೆ ಅಡ್ಡಬಿದ್ದಿದ್ದಾರೆ. ಅವರ ಎಲ್ಲಾ ಕೆಟ್ಟತನದ ನಿಮಿತ್ತ ಅವರಿಗೆ ವಿರೋಧವಾಗಿ ನನ್ನ ನ್ಯಾಯತೀರ್ಪುಗಳನ್ನು ನುಡಿಯುವೆನು.


ಈ ಪಟ್ಟಣಕ್ಕೆ ವಿರೋಧವಾಗಿ ಯುದ್ಧಮಾಡುವ ಬಾಬಿಲೋನಿಯರು ಬಂದು, ಈ ಪಟ್ಟಣಕ್ಕೆ ಬೆಂಕಿ ಹಚ್ಚಿ; ಅದನ್ನೂ ಮತ್ತು ಯಾವ ಮನೆಗಳ ಮಾಳಿಗೆಗಳ ಮೇಲೆ ಬಾಳನಿಗೆ ಧೂಪವನ್ನರ್ಪಿಸಿ, ನನಗೆ ಕೋಪೋದ್ರೇಕ ಎಬ್ಬಿಸುವ ಹಾಗೆ, ಬೇರೆ ದೇವರುಗಳಿಗೆ ಪಾನದ ಅರ್ಪಣೆಗಳನ್ನು ಹೊಯ್ದಿದ್ದಾರೋ ಅವುಗಳನ್ನೂ ಸುಟ್ಟುಬಿಡುವರು.


ಇಸ್ರಾಯೇಲರೂ, ಯೆಹೂದದ ಮಕ್ಕಳೂ, ಅವರೂ, ಅವರ ಅರಸರೂ, ಅವರ ಪ್ರಧಾನರೂ, ಅವರ ಯಾಜಕರೂ, ಅವರ ಪ್ರವಾದಿಗಳೂ, ಯೆಹೂದದ ಜನರೂ, ಯೆರೂಸಲೇಮಿನ ನಿವಾಸಿಗಳೂ ಸಹಿತವಾಗಿ ನನಗೆ ಕೋಪೋದ್ರೇಕ ಎಬ್ಬಿಸುವ ಹಾಗೆ ಮಾಡಿದರು


ಆದರೂ ನಾನು ನಿಮ್ಮ ಬಳಿಗೆ ನನ್ನ ಸೇವಕರಾದ ಪ್ರವಾದಿಗಳೆಲ್ಲರನ್ನು ಪುನಃ ಕಳುಹಿಸಿ, ‘ನಾನು ಹಗೆ ಮಾಡುವ ಈ ಅಸಹ್ಯವಾದ ಕಾರ್ಯವನ್ನು ಮಾಡಲೇಬೇಡಿರಿ!’ ಎಂದು ಹೇಳಿದೆನು.


ಆದರೆ ಸ್ವಂತ ಬಾಯಿಂದ ಹೊರಡುವವೆಲ್ಲವನ್ನೂ ಖಂಡಿತವಾಗಿ ಮಾಡುತ್ತೇವೆ. ಗಗನದ ಒಡತಿಗೆ ಧೂಪ ಸುಡುತ್ತೇವೆ. ಪಾನಾರ್ಪಣೆಗಳನ್ನು ಅವಳಿಗೆ ಹೊಯ್ಯುತ್ತೇವೆ. ನಾವೂ, ನಮ್ಮ ತಂದೆಗಳೂ, ನಮ್ಮ ಅರಸರೂ, ನಮ್ಮ ಪ್ರಧಾನರೂ ಯೆಹೂದದ ಪಟ್ಟಣಗಳಲ್ಲಿಯೂ, ಯೆರೂಸಲೇಮಿನ ಬೀದಿಗಳಲ್ಲಿಯೂ ಮಾಡಿದ ಪ್ರಕಾರವೇ ಮಾಡುವೆವು. ಆಗ ಆಹಾರದಿಂದ ಚೆನ್ನಾಗಿದ್ದೆವು, ಕೇಡು ನೋಡಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು