Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 7:19 - ಕನ್ನಡ ಸಮಕಾಲಿಕ ಅನುವಾದ

19 ಯೆಹೋವ ದೇವರು ಅನ್ನುತ್ತಾನೆ: “ಇವರು ಮಾಡುತ್ತಿರುವ ಕೇಡು ನನಗೋ? ಲಜ್ಜೆಯಿಂದ ಮುಖ ಮುಚ್ಚಿಕೊಳ್ಳುವಷ್ಟು ಕೇಡನ್ನು ತಮಗೆ ತಾವೇ ತಂದುಕೊಳ್ಳುತ್ತಿದ್ದಾರಲ್ಲವೇ?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅವರು ನನಗೆ ಕೇಡುಮಾಡುತ್ತಾರೋ, ಅವಮಾನವು ತಮ್ಮ ಮುಖವನ್ನು ಮುಚ್ಚುವಷ್ಟರ ಮಟ್ಟಿಗೆ ತಮಗೇ ಕೇಡುಮಾಡಿಕೊಳ್ಳುತ್ತಾರಲ್ಲಾ” ಎಂದು ಯೆಹೋವನು ನುಡಿಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಇವರು ಮಾಡುತ್ತಿರುವ ಕೇಡು ನನಗೋ? ಲಜ್ಜೆಯಿಂದ ಮುಖಮುಚ್ಚಿಕೊಳ್ಳುವಷ್ಟು ಕೇಡನ್ನು ತಮಗೆ ತಾವೇ ತಂದುಕೊಳ್ಳುತ್ತಿದ್ದಾರಲ್ಲವೆ?” ಎನ್ನುತ್ತಾರೆ ಸರ್ವೇಶ್ವರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅವರು ನನಗೆ ಕೇಡುಮಾಡುತ್ತಾರೋ, ಅವಮಾನವು ತಮ್ಮ ಮುಖವನ್ನು ಮುಚ್ಚುವಷ್ಟರ ಮಟ್ಟಿಗೆ ತಮಗೇ ಕೇಡುಮಾಡಿಕೊಳ್ಳುತ್ತಾರಲ್ಲಾ ಎಂದು ಯೆಹೋವನು ಅನ್ನುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ನಿಜವಾಗಿ ಹೇಳುವುದಾದರೆ, ಯೆಹೂದದ ಜನರು ನನಗೆ ಕೇಡುಮಾಡುತ್ತಿಲ್ಲ, ಅವರು ತಮಗೇ ಕೇಡುಮಾಡಿಕೊಳ್ಳುತ್ತಿದ್ದಾರೆ. ಅವರು ತಮಗೆ ನಾಚಿಕೆಯಾಗುವಂತೆ ಮಾಡುತ್ತಿದ್ದಾರೆ” ಎಂದು ಯೆಹೋವನು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 7:19
21 ತಿಳಿವುಗಳ ಹೋಲಿಕೆ  

ನಾವು ಹೀಗೆ ದೇವರನ್ನು ಅಸೂಯೆಗೆಬ್ಬಿಸಬಹುದೇ? ನಾವು ದೇವರಿಗಿಂತಲೂ ಬಲಿಷ್ಠರಾಗಿದ್ದೇವೆಯೋ?


ಆದರೆ ಯೆಹೋವ ದೇವರು ಭಯಂಕರವಾದ ಪರಾಕ್ರಮಶಾಲಿಯ ಹಾಗೆ ನನ್ನ ಸಂಗಡ ಇದ್ದಾರೆ. ಆದ್ದರಿಂದ ನನ್ನನ್ನು ಹಿಂಸಿಸುವವರು ಎಡವುವರು, ಗೆಲ್ಲುವುದಿಲ್ಲ. ಅನುಕೂಲವಾಗದೆ ಇದ್ದುದರಿಂದ ಅವರು ಬಹಳವಾಗಿ ನಾಚಿಕೆಪಡುವರು. ಅವರ ಅವಮಾನವು ಎಂದಿಗೂ ಮರೆಯದ ಅವಮಾನವಾಗಿರುವುದು.


‘ನಾವು ಹೇಗೆ ಹಾಳಾದೆವು, ನಾವು ದೇಶವನ್ನು ಬಿಟ್ಟದ್ದರಿಂದಲೂ, ನಮ್ಮ ನಿವಾಸಗಳು ನಮ್ಮನ್ನು ಹೊರಗೆ ಹಾಕಿದ್ದರಿಂದಲೂ ಬಹಳವಾಗಿ ನಾಚಿಕೆ ಪಡುತ್ತೇವೆ, ಎಂಬ ಗೋಳಾಟದ ಶಬ್ದವು ಚೀಯೋನಿನಿಂದ ಕೇಳಿಬಂತು.’ ”


ನಿನ್ನ ಕೆಟ್ಟತನವೇ ನಿನ್ನನ್ನು ತಿದ್ದುವುದು. ನಿನ್ನ ಹಿಂಜಾರಿಕೆಗಳೇ ನಿನ್ನನ್ನು ಗದರಿಸುವುದು. ಹೀಗಿರುವುದರಿಂದ ನೀನು ನಿನ್ನ ದೇವರಾದ ಯೆಹೋವ ದೇವರನ್ನು ಬಿಟ್ಟದ್ದೂ, ನನ್ನ ಭಯವು ನಿನ್ನಲ್ಲಿ ಇಲ್ಲದಿರುವುದೂ, ಕೆಟ್ಟದ್ದೂ, ಕಹಿಯಾದದ್ದೂ ಎಂದು ತಿಳಿದುಕೊಂಡು ನೋಡು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ಅವರೆಲ್ಲರೂ ನಾಚಿಕೆಪಟ್ಟು ನಿಂದಿತರಾಗುವರು. ವಿಗ್ರಹಗಳನ್ನು ಮಾಡುವವರು ಒಟ್ಟಾಗಿ ಗಲಿಬಿಲಿಗೆ ಒಳಗಾಗುವರು.


ಆದ್ದರಿಂದ ಸರ್ವಶಕ್ತರಾದ ದೇವರೂ, ಇಸ್ರಾಯೇಲಿನ ಪರಾಕ್ರಮಿಯೂ ಆದ ಯೆಹೋವ ದೇವರು ಹೇಳುವುದೇನೆಂದರೆ, “ಆಹಾ! ನನ್ನ ವೈರಿಗಳ ಮೇಲೆ ನನ್ನ ಕೋಪವನ್ನು ಹೊರಹಾಕುತ್ತೇನೆ ಮತ್ತು ನನ್ನ ಶತ್ರುಗಳ ಮೇಲೆ ಸೇಡು ತೀರಿಸಿಕೊಳ್ಳುತ್ತೇನೆ.


ಆದರೆ ನೀವು ತಿರಸ್ಕರಿಸಿ ತಿರುಗಿಬಿದ್ದರೆ, ಖಡ್ಗದ ಬಾಯಿಗೆ ತುತ್ತಾಗುವಿರಿ,” ಏಕೆಂದರೆ ಯೆಹೋವ ದೇವರೇ ಇದನ್ನು ನುಡಿದಿದ್ದಾರೆ.


ನೀನು ಪಾಪಮಾಡಿದರೆ, ಅದು ದೇವರನ್ನು ಹೇಗೆ ಬಾಧಿಸುತ್ತದೆ? ನಿನ್ನ ಪಾಪಗಳು ಹೆಚ್ಚಾಗಿದ್ದರೆ, ಅದು ದೇವರಿಗೆ ಏನು ಮಾಡುವುದು?


ನಮ್ಮ ತಂದೆಗಳ ದಿವಸಗಳು ಮೊದಲ್ಗೊಂಡು ಈ ದಿವಸದವರೆಗೆ ದೊಡ್ಡ ಅಪರಾಧಕ್ಕೊಳಗಾಗಿದ್ದೇವೆ. ಇಂದಿನ ಪ್ರಕಾರವೇ ನಾವು ಅನ್ಯದೇಶಗಳ ಅರಸರ ಕೈಗೆ ಸಿಕ್ಕಿಬಿದ್ದೆವು. ನಮ್ಮ ಅಕ್ರಮಗಳಿಗೋಸ್ಕರ ನಾವೂ, ನಮ್ಮ ಅರಸರೂ ನಮ್ಮ ಯಾಜಕರೂ ಖಡ್ಗವೂ ಸೆರೆಗೂ ಕೊಳ್ಳೆಗೂ ನಾಚಿಕೆಗೂ ಗುರಿಯಾಗಿದ್ದೇವೆ.


ಅನ್ಯದೇವತೆಗಳಿಂದ ದೇವರಿಗೆ ಅವರು ರೋಷ ಹುಟ್ಟಿಸಿದರು. ಅಸಹ್ಯವಾದವುಗಳಿಂದ ದೇವರಿಗೆ ಕೋಪವನ್ನು ಎಬ್ಬಿಸಿದರು.


ಆತನು ನಿನ್ನನ್ನು ದಾರಿಯಲ್ಲಿ ನಡೆಸುತ್ತಿರುವಾಗ ನೀನು ನಿನ್ನ ದೇವರಾದ ಯೆಹೋವ ದೇವರನ್ನು ಬಿಟ್ಟಿದ್ದರಿಂದಲೇ ಇದನ್ನು ನಿನಗೆ ನೀನೇ ಮಾಡಿಕೊಂಡೆಯಲ್ಲವೋ?


ದೂರದೇಶದಿಂದ ನನ್ನ ಜನರು ಕೂಗುವ ಮೊರೆಯಿದು: “ಯೆಹೋವ ದೇವರು ಚೀಯೋನಿನಲ್ಲಿ ಇಲ್ಲವೋ? ಅವಳ ಅರಸನು ಅವಳಲ್ಲಿ ಇಲ್ಲವೋ?” ಎಂಬುದೇ ಆದರೂ ಅವರು ತಮ್ಮ ವಿಗ್ರಹಗಳಿಂದಲೂ, ವಿಚಿತ್ರವಾದ ವ್ಯರ್ಥತ್ವಗಳಿಂದಲೂ ನನಗೆ ಕೋಪವನ್ನೆಬ್ಬಿಸಿದ್ದು ಏಕೆ?


ಏಳುಮಂದಿಯನ್ನು ಹೆತ್ತವಳು ಕುಂದುತ್ತಾಳೆ. ತನ್ನ ಪ್ರಾಣವನ್ನು ಬಿಡುತ್ತಾಳೆ. ಹಗಲಿರುವಾಗಲೇ ಅವಳ ಸೂರ್ಯನು ಅಸ್ತಮಿಸುತ್ತಾನೆ. ಅವಳು ನಾಚಿಕೆಪಡುತ್ತಾಳೆ, ಅವಮಾನಗೊಳ್ಳುತ್ತಾಳೆ. ಇದಲ್ಲದೆ ಅವರ ಶೇಷವನ್ನು ಅವರ ಶತ್ರುಗಳ ಮುಂದೆ ಖಡ್ಗಕ್ಕೆ ಒಪ್ಪಿಸುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.


ನಿನ್ನ ಕುರುಬರನ್ನೆಲ್ಲಾ ಗಾಳಿ ಅಟ್ಟಿಸಿಕೊಂಡು ಹೋಗುವುದು. ನಿನ್ನ ಜೊತೆಗಾರರು ಸೆರೆಗೆ ಹೋಗುವರು. ನಿಶ್ಚಯವಾಗಿ ಆಗ ನಿನ್ನ ಎಲ್ಲಾ ಕೆಟ್ಟತನದ ನಿಮಿತ್ತ ನಿನಗೆ ನಾಚಿಕೆಯೂ, ಅವಮಾನವೂ ಆಗುವುದು.


“ಆದರೂ ನೀವು ನನಗೆ ಕಿವಿಗೊಡದೆ, ನಿಮಗೆ ಕೇಡು ಬರುವ ಹಾಗೆ ನಿಮ್ಮ ಕೈಕೆಲಸಗಳಿಂದ ನನಗೆ ಕೋಪವನ್ನೆಬ್ಬಿಸಿದ್ದೀರಿ,” ಎಂದು ಯೆಹೋವ ದೇವರು ಹೇಳುತ್ತಾರೆ.


ಅವರು ನನಗೆ ಕೋಪವನ್ನು ಎಬ್ಬಿಸುವ ಹಾಗೆ ನೀವೂ ನಿಮ್ಮ ಪೂರ್ವಜರೂ ಅರಿಯದ ಬೇರೆ ದೇವರುಗಳನ್ನು ಸೇವಿಸಿ, ಧೂಪ ಸುಟ್ಟು ಮಾಡಿದ ಕೆಟ್ಟತನದ ನಿಮಿತ್ತ ಇಗೋ, ಅವು ಈ ಹೊತ್ತು ಹಾಳಾಗಿವೆ. ಅವುಗಳಲ್ಲಿ ವಾಸಮಾಡುವವನು ಯಾರೂ ಇಲ್ಲ.


ಇದಲ್ಲದೆ ಅತಿಕಾಮಿಗಳಾದ ನಿನ್ನ ನೆರೆಯವರಾದ ಈಜಿಪ್ಟಿನವರ ಸಂಗಡ ವ್ಯಭಿಚಾರ ಮಾಡಿದೆ; ನನ್ನನ್ನು ರೇಗಿಸುವ ಹಾಗೆ ವ್ಯಭಿಚಾರವನ್ನು ಹೆಚ್ಚಿಸಿದೆ;


ನಮ್ಮ ನಾಚಿಕೆಯಲ್ಲಿ ಮಲಗಿಕೊಳ್ಳುತ್ತೇವೆ. ನಮ್ಮ ಗಲಭೆ ನಮ್ಮನ್ನು ಮುಚ್ಚಿಕೊಳ್ಳುತ್ತದೆ. ಏಕೆಂದರೆ ನಾವೂ, ನಮ್ಮ ಪೂರ್ವಜರೂ ನಮ್ಮ ಚಿಕ್ಕತನದಿಂದ ಇಂದಿನವರೆಗೂ ನಮ್ಮ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿದ್ದೇವೆ. ನಮ್ಮ ಯೆಹೋವ ದೇವರ ಸ್ವರಕ್ಕೆ ಕಿವಿಗೊಡಲಿಲ್ಲ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು