Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 7:20 - ಕನ್ನಡ ಸಮಕಾಲಿಕ ಅನುವಾದ

20 “ ‘ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ, ಇಗೋ, ಈ ಸ್ಥಳದ ಮೇಲೆಯೂ, ಮನುಷ್ಯರ ಮೇಲೆಯೂ, ಮೃಗಗಳ ಮೇಲೆಯೂ, ಹೊಲದ ಮರಗಳ ಮೇಲೆಯೂ, ಭೂಮಿಯ ಫಲದ ಮೇಲೆಯೂ ನನ್ನ ಕೋಪ ಮತ್ತು ಉಗ್ರತೆಯು ಹೊಯ್ಯಲಾಗುವುದು. ಅದು ಉರಿಯುವುದು ಮತ್ತು ಆರಿಹೋಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಹೀಗಿರಲು ಕರ್ತನಾದ ಯೆಹೋವನ ಈ ಮಾತನ್ನು ಕೇಳಿರಿ, “ಆಹಾ, ನನ್ನ ಕೋಪವೆಂಬ ರೋಷಾಗ್ನಿಯು ಈ ಸ್ಥಳದಲ್ಲಿ ಸುರಿಯಲ್ಪಡುವುದು; ಮನುಷ್ಯರ ಮೇಲೆಯೂ, ಪಶುಗಳ ಮೇಲೆಯೂ, ಕಾಡುಮರಗಳ ಮೇಲೆಯೂ, ಭೂಮಿಯ ಬೆಳೆಯ ಮೇಲೆಯೂ ಅದನ್ನು ಸುರಿಯುವೆನು; ಅದು ಆರದೆ ದಹಿಸುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 “ಸರ್ವೇಶ್ವರನಾದ ನಾನು ಹೇಳುವುದನ್ನು ಗಮನಿಸಿರಿ; ಇಗೋ, ನನ್ನ ಕೋಪವೆಂಬ ರೋಷಾಗ್ನಿಯನ್ನು ಈ ಸ್ಥಳದ ಮೇಲೆ ಸುರಿಸುವೆನು. ನರಮಾನವರ ಮೇಲೂ ಪಶುಪ್ರಾಣಿಗಳ ಮೇಲೂ ಕಾಡುಮರಗಳ ಮೇಲೂ ಭೂಮಿಯ ಬೆಳೆಯ ಮೇಲೂ ಅದನ್ನು ಕಾರುವೆನು. ಅದು ಆರದೆ ದಹಿಸುವುದು!”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಹೀಗಿರಲು ಕರ್ತನಾದ ಯೆಹೋವನ ಈ ಮಾತನ್ನು ಕೇಳಿರಿ - ಆಹಾ, ನನ್ನ ಕೋಪವೆಂಬ ರೋಷಾಗ್ನಿಯು ಈ ಸ್ಥಳದಲ್ಲಿ ಸುರಿಯಲ್ಪಡುವದು; ಮನುಷ್ಯರ ಮೇಲೆಯೂ ಪಶುಗಳ ಮೇಲೆಯೂ ಕಾಡುಮರಗಳ ಮೇಲೆಯೂ ಭೂವಿುಯ ಬೆಳೆಯ ಮೇಲೆಯೂ ಅದನ್ನು ಸುರಿಯುವೆನು; ಆರದೆ ದಹಿಸುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಯೆಹೋವನು ಹೀಗೆಂದನು: “ನಾನು ಈ ಸ್ಥಳಕ್ಕೆ ವಿರೋಧವಾಗಿ ನನ್ನ ಕೋಪವನ್ನು ತೋರಿಸುವೆನು. ನಾನು ಜನರನ್ನೂ ಪ್ರಾಣಿಗಳನ್ನೂ ದಂಡಿಸುವೆನು. ಕಾಡಿನ ಮರಗಳನ್ನೂ ಹೊಲದ ಬೆಳೆಗಳನ್ನೂ ದಂಡಿಸುವೆನು. ನನ್ನ ಕೋಪವು ಉರಿಯುವ ಬೆಂಕಿಯಂತಿರುವದು; ಅದನ್ನು ತಡೆಯಲು ಯಾರಿಗೂ ಸಾಧ್ಯವಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 7:20
35 ತಿಳಿವುಗಳ ಹೋಲಿಕೆ  

ಇಸ್ರಾಯೇಲಿನ ದೇವರೂ, ಸರ್ವಶಕ್ತರೂ ಆದ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ನನ್ನ ರೌದ್ರ ಕೋಪಾಗ್ನಿಯು ಯೆರೂಸಲೇಮಿನ ಮೇಲೆ ಹೇಗೆ ಸುರಿಯಿತೋ, ಹಾಗೆಯೇ ನೀವು ಈಜಿಪ್ಟಿನಲ್ಲಿ ಕಾಲಿಟ್ಟ ಕೂಡಲೇ, ನನ್ನ ಕೋಪಾಗ್ನಿ ನಿಮ್ಮ ಮೇಲೆಯೂ ಸುರಿಯುವುದು. ನೀವು ಅಪವಾದ, ಅಪಹಾಸ್ಯಕ್ಕೂ, ಶಾಪ, ನಿಂದೆ, ದೂಷಣೆಗಳಿಗೂ ಗುರಿಯಾಗುವಿರಿ. ಈ ಸ್ಥಳವನ್ನು ನೀವು ಮತ್ತೆ ನೋಡಲಾರಿರಿ.’


ಆದರೆ ನೀವು ಸಬ್ಬತ್ ದಿನವನ್ನು ಪರಿಶುದ್ಧಮಾಡದೆ, ಸಬ್ಬತ್ ದಿನದಲ್ಲಿ ಹೊರೆಯನ್ನು ಹೊತ್ತುಕೊಂಡು, ಯೆರೂಸಲೇಮಿನ ಬಾಗಿಲುಗಳಲ್ಲಿ ಪ್ರವೇಶಿಸಿದರೆ ಯೆರೂಸಲೇಮಿನ ದ್ವಾರಗಳಲ್ಲಿ ಬೆಂಕಿಯನ್ನು ಹಚ್ಚುವೆನು. ಅದು ಆರಿಹೋಗದೆ, ಯೆರೂಸಲೇಮಿನ ಕೋಟೆಗಳನ್ನು ದಹಿಸಿಬಿಡುವುದು.’ ”


ಆದ್ದರಿಂದ ಆತನು ತನ್ನ ಯುದ್ಧದ ರೌದ್ರವನ್ನು ಮತ್ತು ರೋಷಾಗ್ನಿಯನ್ನು ಅವನ ಮೇಲೆ ಸುರಿಸಿದನು. ಅದು ಅವನ ಸುತ್ತಲೂ ಉರಿಯು ಹತ್ತಿದರೂ, ಅವನಿಗೆ ತಿಳಿಯಲಿಲ್ಲ. ಅದು ಅವನನ್ನು ಸುಟ್ಟರೂ, ಅವನು ಮನಸ್ಸಿಗೆ ತಂದುಕೊಳ್ಳಲಿಲ್ಲ.


ಅವರ ರೌದ್ರದ ಎದುರಿಗೆ ಯಾರು ನಿಲ್ಲುವರು? ಅವರ ರೋಷಾಗ್ನಿಯಲ್ಲಿ ಯಾರು ನಿಂತುಕೊಳ್ಳುವರು? ಅವರ ಕೋಪಾಗ್ನಿ ಬೆಂಕಿಯ ಹಾಗೆ ಸುರಿಸಲಾಗಿದೆ; ಬಂಡೆಗಳು ಆತನ ಮುಂದೆ ಕೆಡವಲಾಗಿವೆ.


ಬೆಳ್ಳಿಯು ಕುಲುಮೆಯಲ್ಲಿ ಕರಗುವ ಹಾಗೆ ನೀವು ನನ್ನ ರೋಷಾಗ್ನಿಯಲ್ಲಿ ಕರಗುವಿರಿ. ನಿನ್ನ ಮೇಲೆ ರೋಷಾಗ್ನಿಯನ್ನು ಸುರಿಸಿದವರು ಯೆಹೋವ ದೇವರಾದ ನಾನೇ ಎಂದು ನಿಮಗೆ ತಿಳಿಯುತ್ತದೆ.’ ”


ಯೆಹೋವ ದೇವರು ತಮ್ಮ ರೋಷವನ್ನು ತೀರಿಸಿದ್ದಾರೆ. ಅವರು ತಮ್ಮ ಉಗ್ರವಾದ ಕೋಪವನ್ನು ಸುರಿದಿದ್ದಾರೆ. ಚೀಯೋನಿನಲ್ಲಿ ಹೊತ್ತಿಸಿದ ಬೆಂಕಿಯು ಅದರ ಅಸ್ತಿವಾರಗಳನ್ನು ತಿಂದುಬಿಟ್ಟಿತು.


ಆದ್ದರಿಂದ ನನ್ನ ರೌದ್ರವೂ ನನ್ನ ಕೋಪವೂ ಸುರಿದು, ಯೆಹೂದದ ಪಟ್ಟಣಗಳಲ್ಲಿಯೂ, ಯೆರೂಸಲೇಮಿನ ಬೀದಿಗಳಲ್ಲಿಯೂ ಉರಿಯಿತು. ಅವು ಈ ದಿನದವರೆಗೂ ಹಾಳೂ, ಬೀಳೂ ಆದವು.


“ಅವರು ಮುಂದೆ ಹೋಗಿ ನನಗೆ ವಿರೋಧವಾಗಿ ದ್ರೋಹಮಾಡಿದ ಮನುಷ್ಯರ ಹೆಣಗಳನ್ನು ನೋಡುವರು. ಅವುಗಳನ್ನು ಕಡಿಯುವ ಹುಳ ಸಾಯುವುದಿಲ್ಲ, ಸುಡುವ ಬೆಂಕಿಯು ಆರುವುದಿಲ್ಲ, ಅವರು ಎಲ್ಲಾ ಮನುಷ್ಯರಿಗೆ ಹೇಸಿಗೆಯಾಗುವರು.”


ಏಕೆಂದರೆ ಅವರು ನನ್ನನ್ನು ಬಿಟ್ಟುಬಿಟ್ಟು, ತಮ್ಮ ಸಮಸ್ತ ಕ್ರಿಯೆಗಳಿಂದ ನನಗೆ ಕೋಪವನ್ನು ಎಬ್ಬಿಸುವಂತೆ ಇತರ ದೇವರುಗಳಿಗೆ ಧೂಪವನ್ನು ಸುಟ್ಟಿದ್ದಾರೆ. ಆದ್ದರಿಂದ ನನ್ನ ಕೋಪವು ಈ ಸ್ಥಳದ ಮೇಲೆ ಹೊತ್ತಿ ಉರಿಯುತ್ತಿದೆ, ಅದು ಆರಿಹೋಗುವುದಿಲ್ಲ.’


ಅವನೂ ಸಹ ದೇವರ ಕೋಪವೆಂಬ ಪಾತ್ರೆಯಲ್ಲಿ ಏನೂ ಬೆರೆಸದೆ ಹಾಕಿದ ಅವರ ಕೋಪವೆಂಬ ದ್ರಾಕ್ಷಾರಸವನ್ನು ಕುಡಿಯುವನು. ಪರಿಶುದ್ಧ ದೇವದೂತರ ಮುಂದೆಯೂ ಕುರಿಮರಿಯಾಗಿರುವವರ ಮುಂದೆಯೂ ಬೆಂಕಿಯಿಂದಲೂ ಗಂಧಕದಿಂದಲೂ ಯಾತನೆಪಡುವನು.


“ಖಂಡಿತವಾಗಿ ಆ ದಿನ ಬರುತ್ತದೆ, ಅದು ಒಲೆಯಂತೆ ಉರಿಯುತ್ತದೆ. ಆಗ ಗರ್ವಿಷ್ಠರೆಲ್ಲರೂ ಕೆಟ್ಟದ್ದನ್ನು ಮಾಡುವವರೆಲ್ಲರೂ ಹುಲ್ಲಿನಂತಿರುವರು. ಬರುವ ಆ ದಿನವು ಅವರನ್ನು ಸುಟ್ಟುಬಿಡುವುದು. ಬೇರನ್ನಾದರೂ, ಕೊಂಬೆಯನ್ನಾದರೂ ಅವರಿಗೆ ಬಿಡದು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ಎಲ್ಲಾ ಇಸ್ರಾಯೇಲರು ನಿಮ್ಮ ನಿಯಮವನ್ನು ಮೀರಿ ನಿಮಗೆ ವಿಧೇಯರಾಗದೇ ತೊಲಗಿ ಹೋದರು. “ಆದ್ದರಿಂದ ಶಾಪವೂ, ದೇವರ ಸೇವಕನಾದ ಮೋಶೆಯು ನಿಯಮದಲ್ಲಿ ಬರೆದ ನ್ಯಾಯ ತೀರ್ಪುಗಳೂ ಅವರಿಗೆ ವಿರುದ್ಧವಾಗಿ ನಾವು ಮಾಡಿದ ಪಾಪದ ನಿಮಿತ್ತ, ನಮ್ಮ ಮೇಲೆ ಸುರಿಯಲಾಗಿದೆ.


ಅವರು ಪ್ರವಾದಿಸುವ ಜನರು ಕ್ಷಾಮದ ಮತ್ತು ಖಡ್ಗದ ನಿಮಿತ್ತ ಯೆರೂಸಲೇಮಿನ ಬೀದಿಪಾಲಾಗುವರು. ಅವರನ್ನೂ, ಅವರ ಹೆಂಡತಿಯರನ್ನೂ, ಅವರ ಪುತ್ರಪುತ್ರಿಯರನ್ನೂ ಹೂಳಿಡುವುದಕ್ಕೆ ಯಾರೂ ಇರುವುದಿಲ್ಲ. ಏಕೆಂದರೆ ಅವರಿಗೆ ಅರ್ಹವಾದ ಆಪತ್ತನ್ನು ನಾನು ಅವರ ಮೇಲೆ ಸುರಿಯುತ್ತೇನೆ.


ಇನ್ನೆಷ್ಟರವರೆಗೆ ಎಲ್ಲಾ ಸೀಮೆಯ ಹುಲ್ಲು, ಸೊಪ್ಪು ಒಣಗಿ ದೇಶವು ದುಃಖಿಸುತ್ತಿರುವುದು? ಅಲ್ಲಿನ ನಿವಾಸಿಗಳು ದುಷ್ಟರಾಗಿರುವುದರಿಂದ ಮೃಗ ಪಕ್ಷಿಗಳು ಬಡಿದುಕೊಂಡು ಹೋಗಿವೆ; ಆಹಾ, ಅವನು ನಮ್ಮ ಅಂತ್ಯ ಗತಿಯನ್ನು ನೋಡುವುದೇ ಇಲ್ಲ, ಎಂದು ಹೇಳಿದ್ದಾರಷ್ಟೆ.


ಮೊರವು ಅವರ ಕೈಯಲ್ಲಿದೆ, ಅವರು ತಮ್ಮ ಕಣದಲ್ಲಿಯ ರಾಶಿಯನ್ನು ತೂರಿ ಶುದ್ಧಮಾಡಿ ಗೋಧಿಯನ್ನು ಕಣಜದಲ್ಲಿ ತುಂಬಿಕೊಂಡು, ಹೊಟ್ಟನ್ನು ಆರಿಸಲಾಗದ ಬೆಂಕಿಯಲ್ಲಿ ಸುಟ್ಟುಹಾಕುವರು,” ಎಂದು ಹೇಳಿದನು.


ಇಸ್ರಾಯೇಲಿನ ಬೆಳಕು ಬೆಂಕಿಯಾಗುವುದು, ಅದರ ಪರಿಶುದ್ಧರು ಜ್ವಾಲೆಯಂತಿರುವರು, ಅದು ಒಂದೇ ದಿನದಲ್ಲಿ ಅವನ ಮುಳ್ಳು, ದತ್ತೂರಿಗಳನ್ನು ದಹಿಸಿ ನುಂಗಿಬಿಡುವುದು.


ಆದ್ದರಿಂದ ಯೆಹೋವ ದೇವರ ಕೋಪದಿಂದ ನಾನು ತುಂಬಿದ್ದೇನೆ. ಅದನ್ನು ನನ್ನೊಳಗೆ ಹಿಡಿಯುವುದು ನನಗೆ ಸಾಕಾಯಿತು. “ಅದನ್ನು ದೂರ ಇರುವ ಮಕ್ಕಳ ಮೇಲೆ ಮತ್ತು ಯೌವನಸ್ಥರ ಕೂಟ ಸಹಿತವಾಗಿ ಅವರ ಮೇಲೆ ಸುರಿಸುವೆನು. ಏಕೆಂದರೆ, ನಿಶ್ಚಯವಾಗಿ ಗಂಡನ, ಹೆಂಡತಿಯ ಸಂಗಡ, ವೃದ್ಧನ, ದಿನತುಂಬಿದವನ ಸಂಗಡ ಹಿಡಿಯಲಾಗುವರು.


ಅವರ ಮನೆಗಳೂ ಹೊಲಗಳೂ, ಹೆಂಡತಿಯರೂ ಸಹಿತವಾಗಿ ಬೇರೊಬ್ಬರ ಪಾಲಾಗುವುವು. ಏಕೆಂದರೆ, ದೇಶದ ನಿವಾಸಿಗಳ ಮೇಲೆ ನನ್ನ ಕೈಚಾಚುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.


“ ‘ನಾನು ಅವರ ಫಸಲನ್ನು ನಿರ್ಮೂಲ ಮಾಡಿಬಿಡುವೆನು, ಎಂದು ಯೆಹೋವ ದೇವರು ಹೇಳುತ್ತಾರೆ. ದ್ರಾಕ್ಷಿ ಗಿಡದಲ್ಲಿ ದ್ರಾಕ್ಷಿ ಹಣ್ಣುಗಳು ಇರುವುದಿಲ್ಲ. ಅಂಜೂರ ಮರದಲ್ಲಿ ಅಂಜೂರ ಹಣ್ಣುಗಳು ಇರುವುದಿಲ್ಲ. ಎಲೆಯು ಬಾಡುವುದು. ನಾನು ಅವರಿಗೆ ಕೊಟ್ಟವುಗಳು ಅವರನ್ನು ಬಿಟ್ಟು ಹೋಗುವುವು.’ ”


ಸೌಂದರ್ಯವಾದ ಒಳ್ಳೆಯ ಹಣ್ಣುಳ್ಳ ಹಸುರಾದ ಓಲಿವ್ ಗಿಡವೆಂದು ಯೆಹೋವ ದೇವರು ನಿನಗೆ ಹೆಸರಿಟ್ಟರು. ದೊಡ್ಡ ಗದ್ದಲದಿಂದ ಅದರ ಮೇಲೆ ಬೆಂಕಿ ಹತ್ತಿಸುವನು. ಅದರ ಕೊಂಬೆಗಳು ಮುರಿದು ಹೋಗುವುವು.


ಆಗ ನಿನ್ನ ದೋಷದಿಂದಲೇ ನೀನು ನಾನು ನಿನಗೆ ಕೊಟ್ಟ ಸೊತ್ತನ್ನು ಬಿಟ್ಟು ಬಿಡುವೆ. ನಿನಗೆ ತಿಳಿಯದ ದೇಶದಲ್ಲಿ ನಿನ್ನನ್ನು ನಿನ್ನ ಶತ್ರುಗಳಿಗೆ ದಾಸರನ್ನಾಗಿ ಮಾಡುವೆನು. ಏಕೆಂದರೆ ನೀವು ನನ್ನ ರೋಷಾಗ್ನಿಯನ್ನು ಹತ್ತಿಸಿದ್ದೀರಿ. ಅದು ನಿತ್ಯವೂ ಪ್ರಜ್ವಲಿಸುತ್ತಿರುವುದು.”


ಆದರೂ ಯೆಹೋವ ದೇವರೇ, ಅವರು ನನ್ನನ್ನು ಸಾಯಿಸುವುದಕ್ಕೆ ನನಗೆ ವಿರೋಧವಾಗಿ ಮಾಡಿದ ಆಲೋಚನೆಯನ್ನೆಲ್ಲಾ ನೀವು ಬಲ್ಲಿರಿ. ಅವರ ಅಕ್ರಮವನ್ನು ಮನ್ನಿಸಬೇಡಿ. ಅವರ ಪಾಪಗಳನ್ನು ನಿನ್ನ ಸನ್ನಿಧಿಯೊಳಗಿಂದ ಅಳಿಸಿಬಿಡಬೇಡಿರಿ. ಅವರು ನಿಮ್ಮ ಮುಂದೆ ಎಡವಿಬೀಳಲಿ. ನಿಮ್ಮ ಕೋಪದ ಕಾಲದಲ್ಲಿ ಅವರಿಗೆ ತಕ್ಕದ್ದನ್ನು ಮಾಡಿರಿ.


ದಾವೀದನ ಮನೆಯವರೇ, ಯೆಹೋವ ದೇವರು ಹೇಳುವುದೇನೆಂದರೆ, “ ‘ಬೆಳಿಗ್ಗೆ ನ್ಯಾಯತೀರಿಸಿರಿ, ಸುಲಿಗೆಯಾದವನನ್ನು ಬಲಾತ್ಕಾರಿಯ ಕೈಯೊಳಗಿಂದ ತಪ್ಪಿಸಿರಿ. ಇಲ್ಲದಿದ್ದರೆ ನನ್ನ ಕೋಪವು ಬೆಂಕಿಯ ಹಾಗೆ ಹೊರಟು, ನಿಮ್ಮ ಕ್ರಿಯೆಗಳ ಕೆಟ್ಟತನದ ನಿಮಿತ್ತ ಯಾರೂ ಆರಿಸಲಾಗದ ಹಾಗೆ ಉರಿಯುವುದು.


ಯೆಹೋವ ದೇವರು ಹೇಳುವುದೇನೆಂದರೆ, “ನಾನು ದೇಶದೊಳಗಿಂದ ಎಲ್ಲವುಗಳನ್ನು ಸಂಪೂರ್ಣವಾಗಿ ನಾಶಮಾಡುವೆನು.”


ನಾನು ಕೋಪದಿಂದ ನಿಮಗೆ ವಿರೋಧವಾಗಿ ನಡೆದು, ನಿಮ್ಮ ಪಾಪಗಳ ನಿಮಿತ್ತ ನಾನೇ ನಿಮ್ಮನ್ನು ಏಳರಷ್ಟಾಗಿ ಶಿಕ್ಷಿಸುವೆನು.


ಸಮಯವು ಬಂತು, ದಿನವು ಬಂದೇಬಿಟ್ಟಿತು. ಕೊಂಡುಕೊಳ್ಳುವವನಿಗೆ ಸಂತೋಷವಿಲ್ಲದಿರಲಿ, ಮಾರುವವನು ದುಃಖಿಸದಿರಲಿ. ಏಕೆಂದರೆ ಆ ಎಲ್ಲಾ ಜನಸಮೂಹದ ಮೇಲೆ ನನ್ನ ರೌದ್ರವಿದೆ.


“ ‘ಅವರು ಕಹಳೆಯನ್ನೂದಿ ಎಲ್ಲವನ್ನೂ ಸಿದ್ಧ ಮಾಡಿಕೊಂಡಿದ್ದಾರೆ. ಆದರೆ ಯಾರೂ ಯುದ್ಧಕ್ಕೆ ಹೋಗುವುದಿಲ್ಲ. ಏಕೆಂದರೆ ಆ ಎಲ್ಲಾ ಜನಸಮೂಹದ ಮೇಲೆ ನನ್ನ ಕೋಪವಿದೆ.


“ಮನುಷ್ಯರನ್ನೂ ಮೃಗಗಳನ್ನೂ ನಾಶಮಾಡುವೆನು. ಆಕಾಶದ ಪಕ್ಷಿಗಳನ್ನೂ ಸಮುದ್ರದ ಮೀನುಗಳನ್ನೂ ನಾಶಮಾಡುವೆನು.” “ಮನುಷ್ಯರನ್ನು ದೇಶದೊಳಗಿಂದ ಕಡಿದು ಬಿಡುವಾಗ ದುಷ್ಟರಿಗೆ ಉಳಿಯುವುದು ಕಸದರಾಶಿಯೇ,” ಎಂದು ಯೆಹೋವ ದೇವರು ಹೇಳುತ್ತಾರೆ.


ಅವರು ನಿಯಮವನ್ನೂ, ಸರ್ವಶಕ್ತದರಾದ ಯೆಹೋವ ದೇವರು ತಮ್ಮ ಆತ್ಮದ ಮುಖಾಂತರ ಪೂರ್ವದ ಪ್ರವಾದಿಗಳ ಕೈಯಿಂದ ಕಳುಹಿಸಿದ ವಾಕ್ಯಗಳನ್ನೂ ಕೇಳದ ಹಾಗೆ, ತಮ್ಮ ಹೃದಯಗಳನ್ನು ವಜ್ರದ ಕಲ್ಲಿನಂತೆ ಕಠಿಣಮಾಡಿಕೊಂಡರು. ಆದ್ದರಿಂದ ಸರ್ವಶಕ್ತರಾದ ಯೆಹೋವ ದೇವರ ಮಹಾಕೋಪಕ್ಕೆ ಗುರಿಯಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು