Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 7:22 - ಕನ್ನಡ ಸಮಕಾಲಿಕ ಅನುವಾದ

22 ಏಕೆಂದರೆ, ನಾನು ನಿಮ್ಮ ಪಿತೃಗಳನ್ನು ಈಜಿಪ್ಟ್ ದೇಶದೊಳಗಿಂದ ಹೊರಗೆ ಬರಮಾಡಿದ ದಿವಸದಲ್ಲಿ, ದಹನಬಲಿಗಳ ಮತ್ತು ಬಲಿಗಳ ವಿಷಯ ನಾನು ಅವರ ಸಂಗಡ ಮಾತನಾಡಲಿಲ್ಲ; ಇಲ್ಲವೆ ಅವರಿಗೆ ಆಜ್ಞಾಪಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ನಿಮ್ಮ ಪೂರ್ವಿಕರನ್ನು ಐಗುಪ್ತ ದೇಶದೊಳಗಿಂದ ಬರಮಾಡಿದಾಗ ಸರ್ವಾಂಗಹೋಮದ ಮತ್ತು ಯಜ್ಞದ ವಿಷಯವಾಗಿ ನಾನು ಅವರಿಗೆ ಏನೂ ಹೇಳಲಿಲ್ಲ, ಯಾವ ಅಪ್ಪಣೆಯನ್ನು ಕೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ನಿಮ್ಮ ಪೂರ್ವಜರನ್ನು ಈಜಿಪ್ಟ್ ದೇಶದಿಂದ ಬರಮಾಡಿದಾಗ ದಹನಬಲಿಯ ವಿಷಯವಾಗಿಯಾಗಲಿ, ಯಜ್ಞಬಲಿಯ ವಿಷಯವಾಗಿಯಾಗಲಿ ನಾನು ಅವರಿಗೆ ಏನೂ ಹೇಳಲಿಲ್ಲ; ಯಾವ ಕಟ್ಟಳೆಯನ್ನೂ ಕೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ನಿಮ್ಮ ಪಿತೃಗಳನ್ನು ಐಗುಪ್ತದೇಶದೊಳಗಿಂದ ಬರಮಾಡಿದಾಗ ಸರ್ವಾಂಗಹೋಮದ ಮತ್ತು ಯಜ್ಞದ ವಿಷಯವಾಗಿ ನಾನು ಅವರಿಗೆ ಏನೂ ಹೇಳಲಿಲ್ಲ, ಯಾವ ಅಪ್ಪಣೆಯನ್ನೂ ಕೊಡಲಿಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ನಾನು ನಿಮ್ಮ ಪೂರ್ವಿಕರನ್ನು ಈಜಿಪ್ಟಿನಿಂದ ಹೊರತಂದೆ. ನಾನು ಅವರೊಂದಿಗೆ ಮಾತನಾಡಿದೆ. ಆದರೆ ನಾನು ಅವರಿಗೆ ಸರ್ವಾಂಗಹೋಮಗಳ ಬಗ್ಗೆಯಾಗಲಿ ಯಜ್ಞಗಳ ಬಗ್ಗೆಯಾಗಲಿ ಯಾವ ಆಜ್ಞೆಯನ್ನೂ ಕೊಟ್ಟಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 7:22
9 ತಿಳಿವುಗಳ ಹೋಲಿಕೆ  

ಏಕೆಂದರೆ ನಾನು ಯಜ್ಞವನ್ನಲ್ಲ, ಕರುಣೆಯನ್ನೇ ಅಪೇಕ್ಷಿಸುತ್ತೇನೆ. ದಹನಬಲಿಗಳಿಗಿಂತ ದೇವರ ಅಂಗೀಕಾರವನ್ನೇ ಅಪೇಕ್ಷಿಸುತ್ತೇನೆ.


ಅದಕ್ಕೆ ಸಮುಯೇಲನು ಹೇಳಿದ್ದೇನೆಂದರೆ, “ಯೆಹೋವ ದೇವರ ವಾಕ್ಯಕ್ಕೆ ವಿಧೇಯನಾದರೆ, ಯೆಹೋವ ದೇವರಿಗೆ ಆಗುವ ಸಂತೋಷ ದಹನಬಲಿಗಳಲ್ಲಿಯೂ ಯಜ್ಞಗಳಲ್ಲಿಯೂ ಆಗುವುದೋ? ಇಗೋ, ಯಜ್ಞಕ್ಕಿಂತ ವಿಧೇಯತೆಯು, ಟಗರುಗಳ ಕೊಬ್ಬಿಗಿಂತ ಮಾತುಕೇಳುವುದೇ ಉತ್ತಮವಾಗಿರುವುದು.


ಆದರೆ ನೀವು ಹೋಗಿ, ‘ನಾನು ಯಜ್ಞವನ್ನಲ್ಲ, ಕರುಣೆಯನ್ನೇ ಅಪೇಕ್ಷಿಸುತ್ತೇನೆ,’ ಎಂಬುದರ ಅರ್ಥವನ್ನು ಕಲಿತುಕೊಳ್ಳಿರಿ. ಏಕೆಂದರೆ ನಾನು ನೀತಿವಂತರನ್ನಲ್ಲ, ಪಾಪಿಗಳನ್ನು ಕರೆಯಲು ಬಂದಿದ್ದೇನೆ,” ಎಂದು ಹೇಳಿದರು.


ಯಜ್ಞ ಮತ್ತು ಅರ್ಪಣೆಯನ್ನು ನೀವು ಇಷ್ಟಪಡಲಿಲ್ಲ. ಆದರೆ ನೀವು ನನ್ನ ಕಿವಿಗಳನ್ನು ತೆರೆದಿರುವಿರಿ. ದಹನಬಲಿಗಳನ್ನೂ ಪಾಪ ಪರಿಹಾರದ ಬಲಿಗಳನ್ನೂ ನೀವು ಬಯಸಲಿಲ್ಲ.


ಅವರನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಮನಸ್ಸಿನಿಂದಲೂ ನಿನ್ನ ಪೂರ್ಣಶಕ್ತಿಯಿಂದಲೂ ಪ್ರೀತಿಸಿ, ತನ್ನ ನೆರೆಯವನನ್ನು ತನ್ನಂತೆಯೇ ಪ್ರೀತಿಸುವುದು ಎಲ್ಲಾ ದಹನಬಲಿಗಳಿಗಿಂತಲೂ ಯಜ್ಞಗಳಿಗಿಂತಲೂ ಹೆಚ್ಚಿನದಾಗಿದೆ,” ಎಂದನು.


ಅಂದರೆ, ಸೂರ್ಯನನ್ನಾಗಲಿ, ಚಂದ್ರನನ್ನಾಗಲಿ, ಆಕಾಶದ ನಕ್ಷತ್ರಗಳನ್ನಾಗಲಿ, ಬೇರೆ ದೇವರುಗಳನ್ನಾಗಲಿ, ನನ್ನ ಆಜ್ಞೆಗೆ ವಿರೋಧವಾಗಿ ಅವುಗಳನ್ನು ಆರಾಧಿಸಿದರೆ,


“ಏಕೆಂದರೆ ಇಸ್ರಾಯೇಲರೂ, ಯೆಹೂದದ ಮಕ್ಕಳೂ ತಮ್ಮ ಚಿಕ್ಕಂದಿನಿಂದ ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾತ್ರ ಮಾಡಿದ್ದಾರೆ. ಇಸ್ರಾಯೇಲರೂ ತಮ್ಮ ಕೈಕೆಲಸಗಳಿಂದ ನನಗೆ ಕೋಪೋದ್ರೇಕವನ್ನೂ ಎಬ್ಬಿಸಿದ್ದಾರೆ, ಎಂದು ಯೆಹೋವ ದೇವರು ಹೇಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು