Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 7:30 - ಕನ್ನಡ ಸಮಕಾಲಿಕ ಅನುವಾದ

30 “ ‘ಯೆಹೂದನ ಮಕ್ಕಳು ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದ್ದಾರೆಂದು ಯೆಹೋವ ದೇವರು ಹೇಳುತ್ತಾರೆ. ನನ್ನ ಹೆಸರನ್ನು ಹೊಂದಿರುವ ಆಲಯದಲ್ಲಿ ಅದನ್ನು ಅಪವಿತ್ರ ಮಾಡುವುದಕ್ಕೆ ತಮ್ಮ ಅಸಹ್ಯವಾದವುಗಳನ್ನು ಇಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಯೆಹೋವನು ಹೀಗೆನ್ನುತ್ತಾನೆ, “ಯೆಹೂದ್ಯರು ನನ್ನ ಚಿತ್ತಕ್ಕೆ ವಿರುದ್ಧವಾದದ್ದನ್ನೇ ನಡೆಸಿದ್ದಾರೆ, ನನ್ನ ಹೆಸರಿನಿಂದ ಖ್ಯಾತಿಗೊಂಡ ಆಲಯದಲ್ಲಿ ತಮ್ಮ ಅಸಹ್ಯವಸ್ತುಗಳನ್ನು ಇಟ್ಟು ಅದನ್ನು ಹೊಲೆಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಸರ್ವೇಶ್ವರನ ನುಡಿ : “ಯೆಹೂದ್ಯರು ನನ್ನ ಚಿತ್ತಕ್ಕೆ ವಿರುದ್ಧವಾದುದನ್ನೆ ಮಾಡಿದ್ದಾರೆ. ನನ್ನ ಹೆಸರಿನಿಂದ ಪ್ರಖ್ಯಾತಗೊಂಡ ದೇವಾಲಯದಲ್ಲಿ ತಮ್ಮ ಅಸಹ್ಯವಸ್ತುಗಳನ್ನು ಇಟ್ಟು ಅದನ್ನು ಹೊಲೆಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಯೆಹೋವನು ಹೀಗನ್ನುತ್ತಾನೆ - ಯೆಹೂದ್ಯರು ನನ್ನ ಚಿತ್ತಕ್ಕೆ ವಿರುದ್ಧವಾದದ್ದನ್ನೇ ನಡಿಸಿದ್ದಾರೆ, ನನ್ನ ಹೆಸರಿನಿಂದ ಖ್ಯಾತಿಗೊಂಡ ಆಲಯದಲ್ಲಿ ತಮ್ಮ ಅಸಹ್ಯ ವಸ್ತುಗಳನ್ನು ಇಟ್ಟು ಅದನ್ನು ಹೊಲೆಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ನೀನು ಹಾಗೆ ಮಾಡಲೇಬೇಕು ಯಾಕೆಂದರೆ, ಯೆಹೂದದ ಜನರು ಮಾಡುವ ದುಷ್ಕೃತ್ಯಗಳನ್ನು ನಾನು ನೋಡಿದ್ದೇನೆ.” ಯೆಹೋವನು ಹೀಗೆನ್ನುತ್ತಾನೆ: “ಅವರು ತಮ್ಮ ವಿಗ್ರಹಗಳನ್ನು ಸ್ಥಾಪಿಸಿದ್ದಾರೆ. ನಾನು ಆ ವಿಗ್ರಹಗಳನ್ನು ದ್ವೇಷಿಸುತ್ತೇನೆ. ನನ್ನ ಹೆಸರಿನಿಂದ ಖ್ಯಾತಿಪಡೆದ ಆಲಯದಲ್ಲಿ ಅವರು ವಿಗ್ರಹಗಳನ್ನು ಸ್ಥಾಪಿಸಿದ್ದಾರೆ. ಅವರು ನನ್ನ ಆಲಯವನ್ನು ‘ಮಲಿನ’ಗೊಳಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 7:30
20 ತಿಳಿವುಗಳ ಹೋಲಿಕೆ  

ಅವರ ಆಭರಣಗಳ ಚಂದವು ಅವರಿಗೆ ಗರ್ವಕ್ಕೆ ಆಸ್ಪದವಾಯಿತು. ಇದಲ್ಲದೆ ಹೇಯವೂ ಅಸಹ್ಯವೂ ಆದ ತಮ್ಮ ದೇವತೆಗಳ ಪ್ರತಿಮೆಗಳನ್ನು ಬೆಳ್ಳಿಬಂಗಾರದಿಂದ ರೂಪಿಸುತ್ತಿದ್ದರು. ಆದಕಾರಣ ಅದನ್ನು ಅವರಿಗೆ ಅಶುದ್ಧಪದಾರ್ಥವನ್ನಾಗಿ ಮಾಡಿ


ಆದರೆ ನನ್ನ ಹೆಸರಿನಿಂದ ಕರೆಯಲಾಗಿರುವ ಮನೆಯಲ್ಲಿ ಅದನ್ನು ಅಪವಿತ್ರ ಮಾಡುವ ಹಾಗೆ ತಮ್ಮ ಅಸಹ್ಯ ವಸ್ತುಗಳನ್ನು ಇಟ್ಟಿದ್ದಾರೆ.


ಅವನು ಒಂದು ವಾರಕ್ಕಾಗಿ ಬಹಳ ಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು. ವಾರದ ಅರ್ಧದಲ್ಲಿ ಯಜ್ಞವನ್ನೂ, ಅರ್ಪಣೆಯನ್ನೂ ನಿಲ್ಲಿಸುವನು. ದೇವಾಲಯದಲ್ಲಿ ಹಾಳುಮಾಡುವ ಅಸಹ್ಯ ವಸ್ತುವನ್ನು ಅವನು ಸ್ಥಾಪಿಸುವನು. ಇದು ಅವನ ಮೇಲೆ ನಿರ್ಣಯವಾದದ್ದು, ಸುರಿಯುವ ತನಕ ಇರುವುದು,” ಎಂದು ಹೇಳಿದನು.


ಮನಸ್ಸೆಯು ತಾನು ಮಾಡಿದ ವಿಗ್ರಹವನ್ನು ದೇವರ ಆಲಯದಲ್ಲಿ ಇಟ್ಟನು. ಆ ಆಲಯದ ಬಗ್ಗೆ ದೇವರು ದಾವೀದನಿಗೂ ಅವನ ಮಗನಾದ ಸೊಲೊಮೋನನಿಗೂ ಹೇಳಿದ್ದೇನೆಂದರೆ, “ನಾನು ಈ ಆಲಯದಲ್ಲಿ ಮತ್ತು ಇಸ್ರಾಯೇಲಿನ ಸಕಲ ಗೋತ್ರಗಳಲ್ಲಿ ನಾನು ಆಯ್ದುಕೊಂಡ ಯೆರೂಸಲೇಮಿನಲ್ಲಿ ನನ್ನ ನಾಮವನ್ನು ಶಾಶ್ವತವಾಗಿ ಸ್ಥಾಪಿಸುತ್ತೇನೆ.


“ಈ ಆಲಯದಲ್ಲಿಯೂ, ಇಸ್ರಾಯೇಲಿನ ಸಕಲ ಗೋತ್ರಗಳಲ್ಲಿಯೂ, ನಾನು ಆಯ್ದುಕೊಂಡ ಯೆರೂಸಲೇಮಿನಲ್ಲಿಯೂ, ನನ್ನ ನಾಮವನ್ನು ಯುಗಯುಗಕ್ಕೂ ಇರುವಂತೆ ಮಾಡುವೆನು,” ಎಂದು ಯೆಹೋವ ದೇವರು ದಾವೀದನಿಗೂ, ಅವನ ಮಗನಾದ ಸೊಲೊಮೋನನಿಗೂ ಯಾವುದನ್ನು ಕುರಿತು ಹೇಳಿದ್ದರೋ, ಆ ಆಲಯದಲ್ಲಿ ತಾನು ಮಾಡಿದ ಅಶೇರ ವಿಗ್ರಹಸ್ತಂಭವನ್ನು ಇಟ್ಟನು.


ಇದಲ್ಲದೆ, “ಯೆರೂಸಲೇಮಿನಲ್ಲಿ ನನ್ನ ಹೆಸರನ್ನು ಸ್ಥಾಪಿಸುವೆನು,” ಎಂದು ಯೆಹೋವ ದೇವರು ಯಾವುದನ್ನು ಕುರಿತು ಹೇಳಿದ್ದರೋ, ಆ ಆಲಯದಲ್ಲಿ ಅವನು ಬಲಿಪೀಠಗಳನ್ನು ಕಟ್ಟಿಸಿದನು.


“ಪ್ರವಾದಿಯೂ ಯಾಜಕನೂ ಕೂಡ ಭ್ರಷ್ಟರೇ. ಹೌದು, ನನ್ನ ಆಲಯದಲ್ಲಿ ಅವರ ಕೆಟ್ಟತನವನ್ನು ಕಂಡಿದ್ದೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ.


ಅವನು ಅನ್ಯದೇವರುಗಳನ್ನೂ, ಯೆಹೋವ ದೇವರ ಆಲಯದಲ್ಲಿರುವ ವಿಗ್ರಹವನ್ನೂ ಯೆಹೋವ ದೇವರ ಆಲಯದ ಪರ್ವತದಲ್ಲಿಯೂ, ಯೆರೂಸಲೇಮಿನಲ್ಲಿಯೂ ತಾನು ಕಟ್ಟಿಸಿದ ಸಮಸ್ತ ಬಲಿಪೀಠಗಳನ್ನೂ ತೆಗೆದುಹಾಕಿ, ಅವುಗಳನ್ನು ಪಟ್ಟಣದ ಹೊರಗೆ ಬಿಸಾಡಿ ಬಿಟ್ಟನು.


ಯೆಹೂದದ ಅರಸರು ಮಾಡಿದ ಆಹಾಜನ ಮೇಲು ಮಾಳಿಗೆಯ ಮೇಲೆ ಇದ್ದ ಬಲಿಪೀಠಗಳನ್ನೂ, ಮನಸ್ಸೆಯು ಯೆಹೋವ ದೇವರ ಮನೆಯ ಎರಡು ಅಂಗಳಗಳಲ್ಲಿ ಮಾಡಿದ ಬಲಿಪೀಠಗಳನ್ನೂ ಅರಸನು ಕೆಡವಿಸಿ, ಅಲ್ಲಿಂದ ಅದರ ಧೂಳನ್ನು ಕಿದ್ರೋನ್ ಕಣಿವೆಯಲ್ಲಿ ಹಾಕಿಸಿಬಿಟ್ಟನು.


ಅವನು ತನ್ನ ತಂದೆಯಾದ ಹಿಜ್ಕೀಯನು ನಾಶಮಾಡಿದ ಉನ್ನತ ಪೂಜಾಸ್ಥಳಗಳನ್ನು ಮತ್ತೆ ಸ್ಥಾಪಿಸಿ, ಬಾಳನಿಗೆ ಬಲಿಪೀಠಗಳನ್ನು ಕಟ್ಟಿಸಿ, ಇಸ್ರಾಯೇಲಿನ ಅರಸನಾದ ಅಹಾಬನು ಮಾಡಿದ ಅಶೇರ ವಿಗ್ರಹಸ್ತಂಭಗಳನ್ನು ನಿಲ್ಲಿಸಿ, ಸಮಸ್ತ ನಕ್ಷತ್ರಮಂಡಲಕ್ಕೆ ಅಡ್ಡಬಿದ್ದು ಅವುಗಳನ್ನು ಪೂಜಿಸಿದನು.


ಅವನು ತನ್ನ ತಂದೆಯಾದ ಹಿಜ್ಕೀಯನು ನಾಶಮಾಡಿದ ಉನ್ನತ ಪೂಜಾಸ್ಥಳಗಳನ್ನು ಮತ್ತೆ ಸ್ಥಾಪಿಸಿ, ಬಾಳನಿಗೆ ಬಲಿಪೀಠಗಳನ್ನು ಕಟ್ಟಿಸಿ, ಅಶೇರ ವಿಗ್ರಹಸ್ತಂಭಗಳನ್ನು ನಿಲ್ಲಿಸಿ, ಸಮಸ್ತ ನಕ್ಷತ್ರಮಂಡಲಕ್ಕೆ ಅಡ್ಡಬಿದ್ದು ಅವುಗಳನ್ನು ಪೂಜಿಸಿದನು.


ಅದಕ್ಕೆ ತಕ್ಕಂತೆ ನಾನು ಇವರಿಗೋಸ್ಕರ ಕುತಂತ್ರಗಳನ್ನು ಆರಿಸಿಕೊಂಡು, ಇವರು ಅಂಜುತ್ತಿದ್ದ ವಿಪತ್ತುಗಳನ್ನು ಬರಮಾಡುವೆನು. ಏಕೆಂದರೆ ನಾನು ಕೂಗಿದಾಗ, ಯಾರು ಉತ್ತರ ಕೊಡಲಿಲ್ಲ. ನಾನು ಹೇಳಿದಾಗ, ಇವರು ಕೇಳಲಿಲ್ಲ. ನನ್ನ ಚಿತ್ತಕ್ಕೆ ವಿರುದ್ಧವಾದದ್ದನ್ನು ನಡೆಸಿ, ನನಗೆ ಇಷ್ಟವಲ್ಲದ್ದನ್ನು ಆರಿಸಿಕೊಂಡರು.”


ಆದರೆ ಮೊದಲು ನಾನು ಅವರ ಅಕ್ರಮಕ್ಕೂ, ಅವರ ಪಾಪಕ್ಕೂ ಎರಡಷ್ಟು ಪ್ರತಿಫಲ ಕೊಡುತ್ತೇನೆ. ಅವರು ನನ್ನ ದೇಶವನ್ನು ತಮ್ಮ ದುಷ್ಕೃತ್ಯಗಳಿಂದ ಅಪವಿತ್ರ ಮಾಡಿ, ನನ್ನ ಸೊತ್ತನ್ನು ತಮ್ಮ ಅಸಹ್ಯ ವಿಗ್ರಹಗಳಿಂದ ತುಂಬಿಸಿದ್ದಾರೆ,” ಎಂದು ಯೆಹೋವ ದೇವರು ಹೇಳುತ್ತಾರೆ.


ತಮ್ಮ ಗಂಡು ಹೆಣ್ಣು ಮಕ್ಕಳನ್ನು ಮೋಲೆಕ್ ದೇವತೆಗೆ ಆಹುತಿ ಕೊಡುವುದಕ್ಕಾಗಿ ಬೆನ್ ಹಿನ್ನೋಮ್ ತಗ್ಗಿನಲ್ಲಿ ಬಾಳ್ ದೇವತೆಗೆ ಪೂಜಾಸ್ಥಳಗಳನ್ನು ಕಟ್ಟಿಸಿದ್ದಾರೆ. ಹೀಗೆ ಯೆಹೂದ ಕುಲವನ್ನೇ ಪಾಪಕ್ಕೆ ಸಿಕ್ಕಿಸಿದ್ದಾರೆ. ನಾನು ಇಂಥ ಅಸಹ್ಯ ಕಾರ್ಯವನ್ನು ವಿಧಿಸಲಿಲ್ಲ. ಅದರ ಯೋಚನೆ ಕೂಡ ನನ್ನ ಮನಸ್ಸಿನಲ್ಲಿ ಸುಳಿಯಲಿಲ್ಲ.


ಅವನು ಕೂಡಿಸುವ ಸೈನ್ಯವು ಆಶ್ರಯದುರ್ಗವಾದ ಪವಿತ್ರಾಲಯವನ್ನು ಹೊಲಸುಮಾಡಿ, ನಿತ್ಯ ಯಜ್ಞವನ್ನು ನಿಲ್ಲಿಸುವುದು. ಹಾಳುಮಾಡುವ ಅಸಹ್ಯವಾದವುಗಳನ್ನು ಪ್ರತಿಷ್ಠಿಸುವುದು.


ಕೈಯ ಹಾಗಿರುವ ಹಸ್ತವನ್ನು ಚಾಚಿ, ನನ್ನ ತಲೆಯ ಕೂದಲಿನಿಂದ ನನ್ನನ್ನು ಹಿಡಿದನು. ಆಗ ದೇವರಾತ್ಮರು ದೇವದರ್ಶನದಲ್ಲಿ ಯೆರೂಸಲೇಮಿನ ಉತ್ತರದ ಕಡೆಗೆ ಎದುರಾಗಿರುವ ಒಳ ಅಂಗಳದ ಕಡೆಗೆ, ರೋಷಗೊಳಿಸುವ ವಿಗ್ರಹವು ಇದ್ದಲ್ಲಿಗೆ ನನ್ನನ್ನು ಎತ್ತಿಕೊಂಡು ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು