Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 7:34 - ಕನ್ನಡ ಸಮಕಾಲಿಕ ಅನುವಾದ

34 ಆಗ ನಾನು ಯೆಹೂದದ ಪಟ್ಟಣಗಳಲ್ಲಿಯೂ, ಯೆರೂಸಲೇಮಿನ ಬೀದಿಗಳಲ್ಲಿಯೂ ಉಲ್ಲಾಸದ ಶಬ್ದವನ್ನೂ, ಸಂತೋಷ ಶಬ್ದವನ್ನೂ, ಮದುಮಗನ ಶಬ್ದವನ್ನೂ, ಮದುಮಗಳ ಶಬ್ದವನ್ನೂ ನಿಲ್ಲಿಸುವೆನು. ಏಕೆಂದರೆ, ದೇಶವು ಹಾಳಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಯೆಹೂದದ ಪಟ್ಟಣಗಳಲ್ಲಿಯೂ ಮತ್ತು ಯೆರೂಸಲೇಮಿನ ಬೀದಿಗಳಲ್ಲಿಯೂ ಹರ್ಷಸಂಭ್ರಮಗಳ ಧ್ವನಿಯನ್ನೂ, ವಧೂವರರ ಸ್ವರವನ್ನೂ ನಿಲ್ಲಿಸಿಬಿಡುವೆನು, ದೇಶವು ಹಾಳೇ ಹಾಳಾಗುವುದು” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಜುದೇಯದ ಪಟ್ಟಣಗಳಲ್ಲಿಯೂ ಜೆರುಸಲೇಮಿನ ಬೀದಿಗಳಲ್ಲಿಯೂ ಹರ್ಷಾಡಂಬರಗಳು ಕೇಳಿಬರುವುದಿಲ್ಲ. ವಧೂವರರ ಸೊಲ್ಲನ್ನು ನಿಲ್ಲಿಸಿಬಿಡುವೆನು, ನಾಡಿಗೆ ನಾಡೇ ಹಾಳಾಗುವುದು. ಇದು ಸರ್ವೇಶ್ವರನಾದ ನನ್ನ ನುಡಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಯೆಹೂದದ ಪಟ್ಟಣಗಳಲ್ಲಿಯೂ ಯೆರೂಸಲೇವಿುನ ಬೀದಿಗಳಲ್ಲಿಯೂ ಹರ್ಷಸಂಭ್ರಮಗಳ ಧ್ವನಿಯನ್ನೂ ವಧೂವರರ ಸ್ವರವನ್ನೂ ನಿಲ್ಲಿಸಿಬಿಡುವೆನು, ದೇಶವು ಹಾಳೇ ಹಾಳಾಗುವದು. ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಜೆರುಸಲೇಮಿನ ಬೀದಿಗಳಲ್ಲಿಯೂ ಯೆಹೂದದ ಪಟ್ಟಣಗಳಲ್ಲಿಯೂ ಸಂತೋಷ ಮತ್ತು ಸಂಭ್ರಮದ ಧ್ವನಿಯನ್ನೂ ವಧುವರರ ಸ್ವರವನ್ನೂ ಬರದಂತೆ ಮಾಡುತ್ತೇನೆ. ಈ ಪ್ರದೇಶವು ಬರಿದಾದ ಮರಳುಗಾಡಾಗುವದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 7:34
23 ತಿಳಿವುಗಳ ಹೋಲಿಕೆ  

ದೀಪದ ಬೆಳಕು ನಿನ್ನಲ್ಲಿ ಎಂದೂ ಪ್ರಕಾಶಿಸದು. ವಧೂವರರ ಸ್ವರವು ಮತ್ತೆ ನಿನ್ನಲ್ಲಿ ಎಂದೂ ಕೇಳಿಬರದು. ಏಕೆಂದರೆ ನಿನ್ನ ವರ್ತಕರು ಭೂಮಿಯ ಮಹಾ ಪುರುಷರಾಗಿದ್ದು, ನಿನ್ನ ಮಾಂತ್ರಿಕ ಶಕ್ತಿಯ ದೆಸೆಯಿಂದ ಎಲ್ಲಾ ದೇಶಗಳವರು ವಂಚಿತರಾದರು.


ನಾನು ಅವಳಿಗೆ ಉಲ್ಲಾಸಕರವಾದ ಅವಳ ಹಬ್ಬ, ಅವಳ ಅಮಾವಾಸ್ಯೆ, ಅವಳ ಸಬ್ಬತ್ ದಿನದ ಆಚರಣೆ, ಅವಳ ಸಭಾ ಸಮಾರಂಭ ಇವುಗಳನ್ನೆಲ್ಲಾ ನಿಲ್ಲಿಸಿಬಿಡುವೆನು.


ಆಗ ನಿನ್ನ ಹಾಡುಗಳ ಶಬ್ದವನ್ನು ನಿಲ್ಲಿಸುವೆನು. ನಿನ್ನ ಕಿನ್ನರಿಗಳ ಧ್ವನಿ ಇನ್ನು ಕೇಳಿಸುವುದಿಲ್ಲ.


ನಾನು ಈ ದೇಶಗಳಿಂದ ಸಂತೋಷದ ಶಬ್ದ ಮತ್ತು ಸಂತೋಷದ ಶಬ್ದವನ್ನು ಮಾತ್ರ ತೆಗೆದುಹಾಕುತ್ತೇನೆ, ವಧು ಅಥವಾ ವಧುವಿನ ಧ್ವನಿ ಅಲ್ಲಿ ಕೇಳಿಸುವುದಿಲ್ಲ, ಬೀಸುಕಲ್ಲಿನ ಸದ್ದನ್ನು ಅಡಗಿಸುವೆನು. ದೀಪಕ್ಕೆ ಎಣ್ಣೆ ಇಲ್ಲದಂತೆ ಮಾಡುವೆನು.


ಇಸ್ರಾಯೇಲಿನ ದೇವರಾಗಿರುವ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನು ನಿಮ್ಮ ಕಣ್ಣುಗಳ ಮುಂದೆ ನಿಮ್ಮ ದಿನಗಳಲ್ಲಿಯೇ ಉಲ್ಲಾಸದ ಸ್ವರವನ್ನೂ, ಸಂತೋಷದ ಸ್ವರವನ್ನೂ, ಮದುಮಗನ ಸ್ವರವನ್ನೂ, ಮದುಮಗಳ ಸ್ವರವನ್ನೂ ಈ ಸ್ಥಳದೊಳಗಿಂದ ನಿಲ್ಲಿಸಿಬಿಡುವೆನು.


ನಿಮ್ಮ ದೇಶವು ಹಾಳಾಗಿದೆ. ನಿಮ್ಮ ಪಟ್ಟಣಗಳು ಬೆಂಕಿಯಿಂದ ಸುಟ್ಟುಹೋಗಿವೆ. ನಿಮ್ಮ ಹೊಲಗಳನ್ನು ಪರರು ನಿಮ್ಮೆದುರಿಗೆ ನುಂಗಿಬಿಡುತ್ತಿದ್ದಾರೆ. ಅದು ಇತರ ಜನರಿಂದ ಕೆಡವಿಬಿದ್ದು ಹಾಳಾಗಿದೆ.


ನಿಮ್ಮನ್ನು ಜನಾಂಗಗಳಲ್ಲಿ ಚದರಿಸಿ, ನಿಮ್ಮ ಹಿಂದೆ ಖಡ್ಗವನ್ನು ಬೀಸುವೆನು. ನಿಮ್ಮ ಭೂಮಿ ಹಾಳಾಗಿರುವುದು, ನಿಮ್ಮ ಪಟ್ಟಣಗಳು ನಾಶವಾಗಿರುವುವು.


ಆದರೂ ದೇಶವು ಅದರ ನಿವಾಸಿಗಳ ನಿಮಿತ್ತ ಅವರ ದುಷ್ಕ್ರಿಯೆಗಳ ಫಲದಿಂದ ಹಾಳಾಗುವುದು.


ಏಕೆಂದರೆ ಯೆಹೋವ ದೇವರು ಹೀಗೆ ಹೇಳಿದ್ದಾರೆ: “ದೇಶವೆಲ್ಲಾ ಹಾಳಾಗುವುದು. ಆದರೂ ನಾನು ಅದನ್ನು ಪೂರ್ಣ ನಾಶ ಮಾಡಿಲ್ಲ.


ಚೀಯೋನ್ ಬಾಗಿಲುಗಳಲ್ಲಿ ಪ್ರಲಾಪವು, ದುಃಖವು ತುಂಬಿರುವುದು. ಅವಳು ನಿರ್ಗತಿಕಳಾಗಿ ನೆಲದ ಮೇಲೆ ಕುಳಿತುಕೊಳ್ಳುವಳು.


“ಯೆಹೋವ ದೇವರು ಹೇಳುವುದೇನೆಂದರೆ: ‘ “ಮನುಷ್ಯರೂ ಪಶುಗಳೂ ಇಲ್ಲದೆ ಹಾಳಾಯಿತು,” ಎಂದು ನೀವು ಹೇಳುವ ಈ ಸ್ಥಳದಲ್ಲಿಯೂ ಮನುಷ್ಯರೂ ನಿವಾಸಿಗಳೂ ಪಶುಗಳೂ ಇಲ್ಲದೆ ನಾಶವಾದ ಯೆಹೂದದ ಪಟ್ಟಣಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ


ಆಗ ನಾನು, “ಯೆಹೋವ ದೇವರೇ, ಇದು ಎಷ್ಟರವರೆಗೆ?” ಎಂದೆನು. ಅದಕ್ಕೆ ಅವರು ಹೀಗೆ ಉತ್ತರಕೊಟ್ಟರು, “ಪಟ್ಟಣಗಳು ನಿವಾಸಿಗಳಿಲ್ಲದೆ, ಮನೆಗಳು ಮನುಷ್ಯನಿಲ್ಲದೆ, ಹೊಲಗಳು ಸಂಪೂರ್ಣವಾಗಿ ಹಾಳಾಗುವವರೆಗೂ,


ಅವರ ಯುವಕರನ್ನು ಬೆಂಕಿಯು ದಹಿಸಿಬಿಟ್ಟಿತು. ಅವರ ಕನ್ಯೆಯರು ವಿವಾಹ ಗೀತೆಗಳನ್ನು ಹಾಡಲಿಲ್ಲ.


ಯೆಹೋವ ದೇವರು ಯೆಹೂದದ ಅರಸನ ಅರಮನೆಗೆ ಹೀಗೆ ಹೇಳುತ್ತಾರೆ: “ನೀನು ನನಗೆ ಗಿಲ್ಯಾದೂ, ಲೆಬನೋನಿನ ಗಿರಿಶೃಂಗ ಆಗಿದ್ದೀ. ಆದರೂ ನಿಶ್ಚಯವಾಗಿ ನಿನ್ನನ್ನು ಮರುಭೂಮಿಯಾಗಿಯೂ, ನಿವಾಸಿಗಳಿಲ್ಲದ ಪಟ್ಟಣಗಳನ್ನಾಗಿಯೂ ಮಾಡುವೆನು.


ಅವರಿಗೆ ನೀವು ಕಿವಿಗೊಡಲೇಬಾರದು. ಬಾಬಿಲೋನಿಯದ ಅರಸನಿಗೆ ಅಡಿಯಾಳಾಗಿರಿ. ಆಗ ಬದುಕುವಿರಿ. ಈ ನಗರವೇಕೆ ನಾಶವಾಗಬೇಕು?


ಆದ್ದರಿಂದ ನನ್ನ ರೌದ್ರವೂ ನನ್ನ ಕೋಪವೂ ಸುರಿದು, ಯೆಹೂದದ ಪಟ್ಟಣಗಳಲ್ಲಿಯೂ, ಯೆರೂಸಲೇಮಿನ ಬೀದಿಗಳಲ್ಲಿಯೂ ಉರಿಯಿತು. ಅವು ಈ ದಿನದವರೆಗೂ ಹಾಳೂ, ಬೀಳೂ ಆದವು.


ಪಟ್ಟಣದ ದ್ವಾರದಿಂದ ಹಿರಿಯರು ಹೋಗಿದ್ದಾರೆ. ಯುವಜನರು ತಮ್ಮ ಸಂಗೀತವನ್ನು ನಿಲ್ಲಿಸಿದ್ದಾರೆ.


ಇಗೋ ಆ ರಾತ್ರಿಯು ಬಂಜೆಯಾಗಲಿ; ಅದರಲ್ಲಿ ಆನಂದ ಧ್ವನಿಯು ಕೇಳದಿರಲಿ.


ನಾನು ನೋಡಿದೆನು, ಇಗೋ, ಫಲವುಳ್ಳ ಸ್ಥಳವು ಮರುಭೂಮಿಯಾಯಿತು; ಅದರ ಪಟ್ಟಣಗಳೆಲ್ಲಾ ಯೆಹೋವ ದೇವರ ಮುಂದೆಯೂ, ಅವರ ಉಗ್ರಕೋಪದ ಉರಿಯ ಮುಂದೆಯೂ ಬಿದ್ದು ಹೋಗಿದ್ದವು.


ಹರ್ಷಧ್ವನಿ, ಉಲ್ಲಾಸ, ಕೋಲಾಹಲ, ವಧೂವರರ ಸ್ವರ ಮತ್ತು ಹಾಡುತ್ತಾ ಕೃತಜ್ಞತಾ ಬಲಿಯನ್ನು ಯೆಹೋವ ದೇವರ ಆಲಯಕ್ಕೆ ತರುವವರ ಸ್ವರ ಹೀಗೆ ಹೇಳುವವು, “ ‘ “ಸೇನಾಧೀಶ್ವರ ಯೆಹೋವ ದೇವರಿಗೆ ಕೃತಜ್ಞತಾ ಸ್ತೋತ್ರಮಾಡಿರಿ, ಏಕೆಂದರೆ ಯೆಹೋವ ದೇವರು ಒಳ್ಳೆಯವರು. ಆತನ ಪ್ರೀತಿ ಶಾಶ್ವತವಾಗಿರುತ್ತದೆ.” ಏಕೆಂದರೆ ನಾನು ಈ ದೇಶದ ಸಮೃದ್ಧಿಯನ್ನು ಮೊದಲಿನಂತೆ ಪುನಃಸ್ಥಾಪಿಸುವೆನು,’ ಎಂದು ಯೆಹೋವ ದೇವರು ಹೇಳುತ್ತಾರೆ.


ಬಲಾತ್ಕಾರವು ದುಷ್ಟತನದ ಕೋಲಿನಲ್ಲಿ ಬೆಳೆದಿತ್ತು. ಅವರಲ್ಲಿಯೂ ಅವರ ಜನಸಮೂಹದಲ್ಲಿಯೂ, ಅವರ ಸಂಪತ್ತಿನಲ್ಲಿಯೂ ಏನೂ ಉಳಿಯುವುದಿಲ್ಲ, ಅವರಲ್ಲಿ ಯಾವ ಮೌಲ್ಯವು ಇರುವುದಿಲ್ಲ.


ತರುವಾಯ ಅವಳು ನನ್ನನ್ನು ಮರೆತು ಕಿವಿಯೋಲೆ ಮೊದಲಾದ ಒಡವೆಗಳಿಂದ ಸಿಂಗರಿಸಿಕೊಂಡು, ಅವಳ ಪ್ರೇಮಿಗಳ ಹಿಂದೆ ಹೋಗಿ, ಬಾಳ್ ದೇವತೆಗಳಿಗೆ ಧೂಪ ಸುಟ್ಟ ದಿವಸಗಳಿಗಾಗಿ ನಾನು ಅವಳನ್ನು ದಂಡಿಸುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು