Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 7:7 - ಕನ್ನಡ ಸಮಕಾಲಿಕ ಅನುವಾದ

7 ನಾನು ನಿಮ್ಮನ್ನು ಈ ಸ್ಥಳದಲ್ಲಿ ಎಂದರೆ, ನಾನು ನಿಮ್ಮ ಪಿತೃಗಳಿಗೆ ಕೊಟ್ಟ ದೇಶದಲ್ಲಿ ಎಂದೆಂದಿಗೂ ವಾಸಿಸುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಾನು ನಿಮ್ಮನ್ನು ಈ ಸ್ಥಳದಲ್ಲಿ, ನಾನೇ ನಿಮ್ಮ ಪೂರ್ವಿಕರಿಗೆ ಶಾಶ್ವತವಾಗಿ ದಯಪಾಲಿಸಿದ ಈ ದೇಶದಲ್ಲಿ ನೆಲೆಗೊಳಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆಗ ನಾನು ನಿಮ್ಮನ್ನು ಈ ಸ್ಥಳದಲ್ಲೆ ನೆಲೆಗೊಳಿಸುವೆನು. ನಿಮ್ಮ ಪೂರ್ವಜರಿಗೆ ನಾನು ಶಾಶ್ವತವಾಗಿ ದಯಪಾಲಿಸಿದ ಈ ನಾಡಿನಲ್ಲೆ ನೆಲೆಗೊಳಿಸುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನಾನು ನಿಮ್ಮನ್ನು ಈ ಸ್ಥಳದಲ್ಲಿ, ನಾನೇ ನಿಮ್ಮ ಪಿತೃಗಳಿಗೆ ಶಾಶ್ವತವಾಗಿ ದಯಪಾಲಿಸಿದ ಈ ದೇಶದಲ್ಲಿ ನೆಲೆಗೊಳಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನೀವು ನನ್ನ ಆಜ್ಞೆಯನ್ನು ಪಾಲಿಸಿದರೆ ಇಲ್ಲಿರಲು ನಾನು ನಿಮಗೆ ಆಸ್ಪದ ಕೊಡುತ್ತೇನೆ. ನಾನು ಈ ಪ್ರದೇಶವನ್ನು ನಿಮ್ಮ ಪೂರ್ವಿಕರಿಗೆ ಶಾಶ್ವತವಾದ ಸ್ವಾಸ್ತ್ಯವಾಗಿ ಕೊಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 7:7
12 ತಿಳಿವುಗಳ ಹೋಲಿಕೆ  

ನಿಮಗೂ, ನಿಮ್ಮ ತರುವಾಯ ನಿಮ್ಮ ಮಕ್ಕಳಿಗೂ ಒಳ್ಳೆಯದು ಆಗುವ ಹಾಗೆಯೂ, ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಸದಾಕಾಲಕ್ಕೆ ಕೊಡುವ ಭೂಮಿಯ ಮೇಲೆ ನೀವು ಬಹಳ ದಿವಸವಿರುವ ಹಾಗೆಯೂ, ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ದೇವರ ನಿಯಮಗಳನ್ನೂ, ಆಜ್ಞೆಗಳನ್ನೂ ಅನುಸರಿಸಿರಿ.


ಅವರು ಹೇಳಿದ್ದೇನೆಂದರೆ: “ನಿಮ್ಮ ನಿಮ್ಮ ಕೆಟ್ಟ ಮಾರ್ಗವನ್ನೂ, ನಿಮ್ಮ ಕೆಟ್ಟ ದೃಶ್ಯಗಳ ಕೆಟ್ಟತನವನ್ನೂ ಬಿಟ್ಟು ಮತ್ತೆ ತಿರುಗಿಕೊಳ್ಳಿರಿ. ಆಗ ಯೆಹೋವ ದೇವರು ನಿಮಗೂ, ನಿಮ್ಮ ತಂದೆಗಳಿಗೂ ಕೊಟ್ಟ ದೇಶದಲ್ಲಿ ಎಂದೆಂದಿಗೂ ವಾಸಿಸುವಿರಿ.


ಆ ಕಾಲದಲ್ಲಿ ಯೆಹೂದದ ವಂಶವು ಇಸ್ರಾಯೇಲ್ ವಂಶದೊಡನೆ ಜೊತೆಯಾಗಿ ಬಾಳುವುದು. ಈ ಎರಡು ವಂಶಗಳೂ ಉತ್ತರ ಪ್ರಾಂತಗಳನ್ನು ಬಿಟ್ಟು, ನಾನು ನಿಮ್ಮ ಪೂರ್ವಜರಿಗೆ ಬಾಧ್ಯವಾಗಿ ಕೊಟ್ಟ ನಾಡಿಗೆ ಬರುವುವು.”


ನಾನು ಮೋಶೆಯ ಮುಖಾಂತರ ಆಜ್ಞಾಪಿಸಿದ ಎಲ್ಲಾ ಅಪ್ಪಣೆಗಳನ್ನೂ, ಕಾನೂನುಗಳನ್ನೂ, ವಿಧಿಗಳನ್ನೂ ಕೈಗೊಂಡು ನಡೆಯುವುದರಲ್ಲಿ ಅವರು ಜಾಗರೂಕರಾಗಿದ್ದರೆ, ನಾನು ಅವರ ಪಿತೃಗಳಿಗೆ ನೇಮಕ ಮಾಡಿದ ದೇಶವನ್ನು ಪುನಃ ಇಸ್ರಾಯೇಲರು ಬಿಟ್ಟುಹೋಗುವಂತೆ ಮಾಡುವುದಿಲ್ಲ,” ಎಂದು ಹೇಳಿದ್ದರು.


“ಯಾವ ವಿಧವೆಯನ್ನು, ದಿಕ್ಕಿಲ್ಲದ ಮಗುವನ್ನು ಬಾಧಿಸಬೇಡಿರಿ.


“ಇಸ್ರಾಯೇಲೇ, ನೀನು ಹಿಂದಿರುಗುವಿಯಾದರೆ ನನ್ನ ಕಡೆ ಹಿಂದಿರುಗಿ ಬಾ,” ಎಂದು ಯೆಹೋವ ದೇವರು ನುಡಿಯುತ್ತಾರೆ. “ನೀನು ನಿನ್ನ ಅಸಹ್ಯಗಳನ್ನು ನನ್ನ ಎದುರಿನಿಂದ ತೆಗೆದುಬಿಟ್ಟರೆ, ಅಲೆದಾಡದೆ ಇರುವೆ.


ಇದಲ್ಲದೆ, ನಾನು ನನ್ನ ದಾಸರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ನಿರಂತರವಾಗಿ ಕಳುಹಿಸುತ್ತಾ ಬಂದೆ. “ನೀವೆಲ್ಲರೂ ನಿಮ್ಮ ನಿಮ್ಮ ದುರ್ಮಾರ್ಗಗಳಿಂದ ಹಿಂದಿರುಗಿ, ನಿಮ್ಮ ನಡತೆಗಳನ್ನು ಸರಿಪಡಿಸಿಕೊಳ್ಳಿರಿ. ಅನ್ಯದೇವತೆಗಳನ್ನು ಹಿಂಬಾಲಿಸಿ ಪೂಜಿಸದಿರಿ. ಹಾಗೆ ಮಾಡಿದರೆ ನಾನು ನಿಮಗೂ, ನಿಮ್ಮ ಪೂರ್ವಜರಿಗೂ ಅನುಗ್ರಹಿಸಿದ ನಾಡಿನಲ್ಲಿ ವಾಸಿಸುವಿರಿ ಎಂದು ಅವರ ಮುಖಾಂತರ ಎಚ್ಚರಿಸಿದೆ.” ಆದರೆ ನೀವು ಕೇಳಲಿಲ್ಲ. ಕಿವಿಗೊಡಲೂ ಇಲ್ಲ.


‘ನಿಶ್ಚಯವಾಗಿ ನೀನು ನನಗೆ ಭಯಪಟ್ಟು ಶಿಕ್ಷಣವನ್ನು ಹೊಂದುವೆ,’ ಹೀಗೆ ನಾನು ಅವರಿಗೆ ಶಿಕ್ಷೆ ವಿಧಿಸಿದರೂ ಅವರ ನಿವಾಸವು ನಾಶವಾಗುವುದಿಲ್ಲ. ಆದರೆ ಅವರು ಬೇಗನೆ ಎದ್ದು ತಮ್ಮ ನಡತೆಯನ್ನೆಲ್ಲಾ ಕೆಡಿಸಿಕೊಂಡರು.


ನೀವು ಒಪ್ಪಿ ವಿಧೇಯರಾದರೆ ದೇಶದ ಸತ್ಫಲವನ್ನು ಸವಿಯುವಿರಿ.


ಹೀಗಿರುವುದರಿಂದ ನಿಮ್ಮ ಮಾರ್ಗಗಳನ್ನೂ, ನಿಮ್ಮ ಕೃತ್ಯಗಳನ್ನೂ ತಿದ್ದಿಕೊಳ್ಳಿರಿ. ನಿಮ್ಮ ದೇವರಾದ ಯೆಹೋವ ದೇವರ ಮಾತಿಗೆ ವಿಧೇಯರಾಗಿರಿ. ಆಗ ಯೆಹೋವ ದೇವರು ನಿಮಗೆ ವಿರೋಧವಾಗಿ ಮಾತನಾಡಿದ ಕೇಡಿನ ವಿಷಯಕ್ಕಾಗಿ ತಮ್ಮ ಮನಸ್ಸನ್ನು ಬದಲಾಯಿಸಿಕೊಳ್ಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು