Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 7:8 - ಕನ್ನಡ ಸಮಕಾಲಿಕ ಅನುವಾದ

8 ನೀವು ಪ್ರಯೋಜನವಿಲ್ಲದ ಮೋಸಕರ ಮಾತುಗಳಲ್ಲಿ ನಂಬಿಕೆ ಇಡುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆಹಾ, ನೀವು ನಿಷ್ಪ್ರಯೋಜಕವಾದ ಸುಳ್ಳುಮಾತುಗಳಲ್ಲಿ ಭರವಸವಿಟ್ಟಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ನಿಷ್ಪ್ರಯೋಜಕವಾದ ಹಾಗೂ ಮೋಸದ ಮಾತುಗಳಲ್ಲಿ ನೀವು ಭರವಸೆ ಇಟ್ಟಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆಹಾ, ನೀವು ನಿಷ್ಪ್ರಯೋಜನವಾದ ಸುಳ್ಳುಮಾತುಗಳಲ್ಲಿ ಭರವಸವಿಟ್ಟಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 “‘ನೀವು ಸುಳ್ಳುಗಳನ್ನು ನಂಬುತ್ತಿದ್ದೀರಿ, ಆ ಸುಳ್ಳುಗಳು ಹುರುಳಿಲ್ಲದವುಗಳಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 7:8
14 ತಿಳಿವುಗಳ ಹೋಲಿಕೆ  

“ಮರಣದ ಸಂಗಡ ಒಡಂಬಡಿಕೆಯನ್ನು ಮಾಡಿದ್ದೇವೆ. ಪಾತಾಳದ ಸಂಗಡ ಒಪ್ಪಂದ ಮಾಡಿಕೊಂಡಿದ್ದೇವೆ. ವಿಪರೀತವಾದ ಶಿಕ್ಷೆಯು ಹಾದುಹೋಗುವಾಗ, ಅದು ನಮ್ಮನ್ನು ಮುಟ್ಟದು; ನಮ್ಮ ಅಸತ್ಯವನ್ನು ಆಶ್ರಯವಾಗಿ ಮಾಡಿಕೊಂಡು, ಮೋಸದಲ್ಲಿ ಅಡಗಿಕೊಂಡಿದ್ದೇವೆ,” ಎನ್ನುತ್ತೀರಲ್ಲಾ?


ಸುಳ್ಳಿನ ಕನಸುಗಳನ್ನು ಪ್ರವಾದಿಸಿ, ತಮ್ಮ ಸುಳ್ಳುಗಳಿಂದಲೂ ತಮ್ಮ ನಿರರ್ಥಕವಾದ ವಿಚಾರಗಳಿಂದಲೂ ನನ್ನ ಜನರು ತಪ್ಪುವಂತೆ ಮಾಡುವವರಿಗೆ ವಿರೋಧವಾಗಿದ್ದೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ. “ನಾನು ಅವರನ್ನು ಕಳುಹಿಸಲಿಲ್ಲ, ಅವರಿಗೆ ಅಪ್ಪಣೆ ಕೊಡಲಿಲ್ಲ. ಆದ್ದರಿಂದ ಅವರು ಹೇಗೂ ಈ ಜನರಿಗೆ ಪ್ರಯೋಜನವಾಗಿರುವುದೇ ಇಲ್ಲ,” ಎಂದು ಯೆಹೋವ ದೇವರು ನುಡಿಯುತ್ತಾರೆ.


ಸುಳ್ಳು ಪ್ರವಾದಿಸುವ ಪ್ರವಾದಿಗಳ ಹೃದಯದಲ್ಲಿ ಇದು ಎಷ್ಟರವರೆಗೆ ಇರುವುದು? ಹೌದು, ಅವರು ತಮ್ಮ ಮನಸ್ಸಿನ ಭ್ರಮೆಗಳನ್ನು ಪ್ರವಾದಿಸುವವರೇ.


ಆದ್ದರಿಂದ ಅವರ ಹೆಂಡತಿಯರನ್ನು ಬೇರೊಬ್ಬರಿಗೂ, ಅವರ ಹೊಲಗಳನ್ನು ಹೊಸ ಮಾಲಿಕನಿಗೆ ನಾನು ಕೊಟ್ಟುಬಿಡುವೆನು. ಏಕೆಂದರೆ, ಚಿಕ್ಕವನು ಮೊದಲುಗೊಂಡು ದೊಡ್ಡವರತನಕ ಅವರೆಲ್ಲರೂ ಲೋಭಕ್ಕೆ ಒಪ್ಪಿಸಿಕೊಟ್ಟಿದ್ದಾರೆ. ಪ್ರವಾದಿ ಮೊದಲುಗೊಂಡು ಯಾಜಕರವರೆಗೆ ಪ್ರತಿಯೊಬ್ಬನೂ ಮೋಸದಿಂದ ನಡೆದುಕೊಳ್ಳುತ್ತಾನೆ.


“ಇವುಗಳೇ ಯೆಹೋವ ದೇವರ ದೇವಾಲಯ, ಯೆಹೋವ ದೇವರ ದೇವಾಲಯ, ಯೆಹೋವ ದೇವರ ದೇವಾಲಯ,” ಎಂದು ಹೇಳುವ ಮೋಸಕರ ಮಾತುಗಳಲ್ಲಿ ನಂಬಿಕೆ ಇಡಬೇಡಿರಿ.


ಏನೆಂದರೆ, ಪ್ರವಾದಿಗಳು ಸುಳ್ಳಾಗಿ ಪ್ರವಾದಿಸುತ್ತಾರೆ. ಯಾಜಕರು ತಮ್ಮ ಅಧಿಕಾರದಿಂದ ದೊರೆತನ ಮಾಡುತ್ತಾರೆ. ನನ್ನ ಜನರು ಅದನ್ನು ಪ್ರೀತಿ ಮಾಡುತ್ತಾರೆ. ಆದರೆ ಅಂತ್ಯದಲ್ಲಿ ನೀವು ಏನು ಮಾಡುವಿರಿ?


ಆಗ ನಾನು ಹೇಳಿದ್ದೇನೆಂದರೆ, “ಹಾ, ಸಾರ್ವಭೌಮ ಯೆಹೋವ ದೇವರೇ, ನಿಶ್ಚಯವಾಗಿ ನೀವು ಈ ಜನರಿಗೂ, ಯೆರೂಸಲೇಮಿಗೂ, ‘ನಿಮಗೆ ಸಮಾಧಾನವಾಗುವುದು,’ ಎಂದು ಹೇಳಿ, ಬಹಳ ಮೋಸ ಮಾಡಿದಿರಿ. ಖಡ್ಗವು ಅವರ ಕುತ್ತಿಗೆಗೆ ಬಂದಿದೆ” ಎಂದೆನು.


ಅವರು ನೋಡುವವರಿಗೆ, “ನೋಡಬೇಡಿರಿ,” ಎಂದು ಪ್ರವಾದಿಗಳಿಗೆ, “ನಿಮಗೆ ದರ್ಶನವಾಗದಿರಲಿ,” ಎನ್ನುತ್ತಾರೆ. ಪ್ರವಾದಿಗಳಿಗೆ, ನಮಗೆ ನ್ಯಾಯವಾದವುಗಳನ್ನು ಪ್ರವಾದಿಸಬೇಡಿರಿ. ನಯವಾದವುಗಳನ್ನೇ ನುಡಿಯಿರಿ. ಮಾಯವಾದವುಗಳನ್ನೇ ಪ್ರವಾದಿಸಿರಿ ಎನ್ನುತ್ತಾರೆ.


ನೀತಿಗೋಸ್ಕರ ಕರೆಯುವವನು ಯಾವನೂ ಇಲ್ಲ, ಸತ್ಯಕ್ಕೋಸ್ಕರ ನ್ಯಾಯ ವಿಚಾರಿಸುವವನು ಒಬ್ಬನೂ ಇಲ್ಲ. ವ್ಯರ್ಥತ್ವದಲ್ಲಿ ವಿಶ್ವಾಸ ಇಡುತ್ತಾರೆ. ಸುಳ್ಳನ್ನು ಮಾತನಾಡುತ್ತಾರೆ. ಕೇಡನ್ನು ಗರ್ಭಧರಿಸಿ, ಅಕ್ರಮವನ್ನು ಹೆರುತ್ತಾರೆ.


ಆಗ ಪ್ರವಾದಿಯಾದ ಯೆರೆಮೀಯನು ಪ್ರವಾದಿಯಾದ ಹನನ್ಯನಿಗೆ ಹೇಳಿದ್ದೇನೆಂದರೆ, “ಹನನೀಯನೇ, ಕೇಳು. ಯೆಹೋವ ದೇವರು ನಿನ್ನನ್ನು ಕಳುಹಿಸಲಿಲ್ಲ. ಆದರೆ ನೀನು ಈ ಜನರನ್ನು ಸುಳ್ಳಿನಲ್ಲಿ ಭರವಸೆ ಇಡುವಂತೆ ಮಾಡುತ್ತೀ.


ಇದೇ ನಿನ್ನ ಭಾಗವು, ನನ್ನಿಂದ ನಿನಗೆ ಅಳತೆ ಮಾಡಿದ ಪಾಲು,” ಎಂದು ಯೆಹೋವ ದೇವರು ಹೇಳುತ್ತಾರೆ. “ಏಕೆಂದರೆ ನನ್ನನ್ನು ಮರೆತುಬಿಟ್ಟು, ಸುಳ್ಳು ದೇವರುಗಳಲ್ಲಿ ಭರವಸೆಯಿಟ್ಟಿದ್ದೀಯೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು