Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 8:1 - ಕನ್ನಡ ಸಮಕಾಲಿಕ ಅನುವಾದ

1 “ ‘ಯೆಹೋವ ದೇವರು ಹೇಳುವುದೇನೆಂದರೆ, ಆ ಕಾಲದಲ್ಲಿ ಅವರು ಯೆಹೂದದ ಅರಸರ ಎಲುಬುಗಳನ್ನೂ, ಅದರ ಪ್ರಧಾನರ ಎಲುಬುಗಳನ್ನೂ, ಯಾಜಕರ ಎಲುಬುಗಳನ್ನೂ, ಪ್ರವಾದಿಗಳ ಎಲುಬುಗಳನ್ನೂ, ಯೆರೂಸಲೇಮಿನ ನಿವಾಸಿಗಳ ಎಲುಬುಗಳನ್ನೂ ಅವರ ಸಮಾಧಿಗಳೊಳಗಿಂದ ಹೊರಗೆ ತರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನು ಹೀಗೆನ್ನುತ್ತಾನೆ, “ಆ ಕಾಲದಲ್ಲಿ ಯೆಹೂದದ ಅರಸರು, ಅಧಿಪತಿಗಳು, ಯಾಜಕರು, ಪ್ರವಾದಿಗಳು, ಯೆರೂಸಲೇಮಿನ ನಿವಾಸಿಗಳು, ಇವರೆಲ್ಲರ ಎಲುಬುಗಳನ್ನು ಸಮಾಧಿಗಳೊಳಗಿಂದ ತೆಗೆದುಬಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 “ಆ ಕಾಲ ಬಂದಾಗ ಜುದೇಯದ ಅರಸರು, ಅಧಿಪತಿಗಳು, ಯಾಜಕರು, ಪ್ರವಾದಿಗಳು ಹಾಗು ಜೆರುಸಲೇಮಿನ ನಿವಾಸಿಗಳು ಇವರೆಲ್ಲರ ಎಲುಬುಗಳನ್ನು ಗೋರಿಯಿಂದ ಅಗೆದು ತೆಗೆದುಬಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನು ಹೀಗನ್ನುತ್ತಾನೆ - ಆ ಕಾಲದಲ್ಲಿ ಯೆಹೂದದ ಅರಸರು, ಅಧಿಪತಿಗಳು, ಯಾಜಕರು, ಪ್ರವಾದಿಗಳು, ಯೆರೂಸಲೇವಿುನ ನಿವಾಸಿಗಳು, ಇವರೆಲ್ಲರ ಎಲುಬುಗಳನ್ನು ಗೋರಿಗಳೊಳಗಿಂದ ತೆಗೆದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನು ಹೀಗೆನ್ನುತ್ತಾನೆ: “ಆಗ ಜನರು ಯೆಹೂದದ ರಾಜರ ಮತ್ತು ಪ್ರಮುಖ ಅಧಿಪತಿಗಳ ಎಲುಬುಗಳನ್ನು ಅವರ ಗೋರಿಗಳಿಂದ ಹೊರತೆಗೆಯುವರು. ಅವರು ಯಾಜಕರ ಮತ್ತು ಪ್ರವಾದಿಗಳ ಎಲುಬುಗಳನ್ನು ಅವರ ಗೋರಿಗಳಿಂದ ಹೊರತೆಗೆಯುವರು. ಅವರು ಜೆರುಸಲೇಮಿನ ಎಲ್ಲಾ ಜನರ ಎಲುಬುಗಳನ್ನು ಅವರ ಗೋರಿಗಳಿಂದ ಹೊರತೆಗೆಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 8:1
12 ತಿಳಿವುಗಳ ಹೋಲಿಕೆ  

ಇಸ್ರಾಯೇಲರ ಹೆಣಗಳನ್ನು ದೇವತಾ ವಿಗ್ರಹಗಳ ಮುಂದೆ ಹಾಕುವೆನು. ನಿಮ್ಮ ಬಲಿಪೀಠಗಳ ಸುತ್ತಲೂ ನಿಮ್ಮ ಎಲುಬುಗಳನ್ನು ಎರಚಿ ಬಿಡುವೆನು.


ಯೆಹೋವ ದೇವರು ಹೀಗೆ ಹೇಳುತ್ತಾನೆ: “ಮೋವಾಬಿನವರು ಮಾಡಿರುವ ಮೂರು ಹೌದು ನಾಲ್ಕು ಪಾಪಗಳಿಗಾಗಿ, ಆಗಬೇಕಾದ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅವನು ಎದೋಮಿನ ಅರಸನ ಎಲುಬುಗಳನ್ನು, ಸುಟ್ಟು ಸುಣ್ಣ ಮಾಡಿದ್ದಾನೆ.


ಯೆಹೋವ ದೇವರ ಕೈ ನನ್ನ ಮೇಲೆ ಇತ್ತು; ಅದು ಆತನ ಆತ್ಮದ ಮೂಲಕ ನನ್ನನ್ನು ಹೊರಗೆ ತಂದು ಪೂರ್ತಿಯಾಗಿ ಎಲುಬುಗಳು ತುಂಬಿರುವ ಕಣಿವೆಯಲ್ಲಿ ಇಳಿಸಿತು.


ಅಲ್ಲಿದ್ದ ಉನ್ನತ ಪೂಜಾಸ್ಥಳಗಳ ಯಾಜಕರನ್ನೆಲ್ಲಾ ಬಲಿಪೀಠಗಳ ಮೇಲೆ ಕೊಂದುಹಾಕಿ, ಅವುಗಳ ಮೇಲೆ ಮನುಷ್ಯರ ಎಲುಬುಗಳನ್ನು ಸುಟ್ಟು, ಯೋಷೀಯನು ಯೆರೂಸಲೇಮಿಗೆ ತಿರುಗಿಬಂದನು.


ಯೋಷೀಯನು ತಿರುಗಿಕೊಂಡು ಅಲ್ಲಿ ಬೆಟ್ಟದಲ್ಲಿದ್ದ ಸಮಾಧಿಗಳನ್ನು ಕಂಡು, ಸಮಾಧಿಗಳಿಂದ ಎಲುಬುಗಳನ್ನು ತೆಗೆದುಕೊಂಡು, ದೇವರ ಮನುಷ್ಯನು ಹೇಳಿದ ಈ ಮಾತುಗಳನ್ನು ಯೆಹೋವ ದೇವರ ವಾಕ್ಯದ ಪ್ರಕಾರ, ಬಲಿಪೀಠದ ಮೇಲೆ ಅವುಗಳನ್ನು ಸುಟ್ಟು ಅದನ್ನು ಅಶುದ್ಧ ಮಾಡಿದನು.


ಅವನು ಯೆಹೋವ ದೇವರ ಅಪ್ಪಣೆಯಿಂದ ಆ ಪೀಠವನ್ನು ಕುರಿತು: “ಪೀಠವೇ, ಪೀಠವೇ! ದಾವೀದನ ಸಂತಾನದಲ್ಲಿ ಯೋಷೀಯ ಎಂಬ ಹೆಸರುಳ್ಳ ಒಬ್ಬ ಮಗನು ಹುಟ್ಟುವನು. ಅವನು ನಿನ್ನ ಮೇಲೆ ಧೂಪವನ್ನರ್ಪಿಸುವ ಪೂಜಾಸ್ಥಳಗಳ ಯಾಜಕರನ್ನು ಹಿಡಿದು ಬಲಿಯಾಗಿ ಅರ್ಪಿಸುವನು. ಮನುಷ್ಯರ ಎಲುಬುಗಳನ್ನು ನಿನ್ನ ಮೇಲೆ ಸುಡಲಾಗುವವು,” ಎಂದು ಯೆಹೋವ ದೇವರು ಹೇಳುತ್ತಾರೆ ಎಂದನು.


ಇದಲ್ಲದೆ ಇದೇ ಈಜೆಬೆಲಳೆಂದು ಗುರುತು ಸಿಕ್ಕದ ಹಾಗೆ ಇಜ್ರೆಯೇಲಿನ ಹೊಲದಲ್ಲಿ ಈಜೆಬೆಲಳ ಹೆಣ ಗೊಬ್ಬರದ ಹಾಗೆ ಇರುವುದು,” ಎಂದನು.


ಭಯವಿಲ್ಲದಿರುವಲ್ಲಿ ಅವರು ಭಯಭ್ರಾಂತರಾದರು; ಏಕೆಂದರೆ ನಿಮಗೆ ವಿರೋಧವಾಗಿ ದಂಡು ಇಳಿಸುವವರನ್ನು ದೇವರು ಚದರಿಸಿಬಿಟ್ಟಿದ್ದಾರೆ. ನೀವು ಅವರನ್ನು ನಾಚಿಕೆಪಡಿಸಿದ್ದೀರಿ. ಏಕೆಂದರೆ ದೇವರು ಅವರನ್ನು ತಿರಸ್ಕರಿಸಿದ್ದಾರೆ.


ಅವರು ಪ್ರವಾದಿಸುವ ಜನರು ಕ್ಷಾಮದ ಮತ್ತು ಖಡ್ಗದ ನಿಮಿತ್ತ ಯೆರೂಸಲೇಮಿನ ಬೀದಿಪಾಲಾಗುವರು. ಅವರನ್ನೂ, ಅವರ ಹೆಂಡತಿಯರನ್ನೂ, ಅವರ ಪುತ್ರಪುತ್ರಿಯರನ್ನೂ ಹೂಳಿಡುವುದಕ್ಕೆ ಯಾರೂ ಇರುವುದಿಲ್ಲ. ಏಕೆಂದರೆ ಅವರಿಗೆ ಅರ್ಹವಾದ ಆಪತ್ತನ್ನು ನಾನು ಅವರ ಮೇಲೆ ಸುರಿಯುತ್ತೇನೆ.


ನಿಮ್ಮ ಯಜ್ಞವೇದಿಗಳು ಹಾಳಾಗುವುವು. ನಿಮ್ಮ ಧೂಪವೇದಿಗಳು ಚೂರುಚೂರಾಗುವುವು. ನಿಮ್ಮ ಜನರು ನಿಮ್ಮ ವಿಗ್ರಹಗಳ ಮುಂದೆ ಹತರಾಗಿ ಬೀಳುವಂತೆ ಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು