Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 8:11 - ಕನ್ನಡ ಸಮಕಾಲಿಕ ಅನುವಾದ

11 ಏಕೆಂದರೆ, ಅವರು ನನ್ನ ಜನರ ಗಾಯವನ್ನು ಹಗುರವಾಗಿ ಸ್ವಸ್ಥಮಾಡಿದ್ದಾರೆ. ಸಮಾಧಾನವಿಲ್ಲದಿರುವಾಗ, “ಸಮಾಧಾನ, ಸಮಾಧಾನ,” ಎಂದು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಸಮಾಧಾನವಿಲ್ಲದ್ದಿದ್ದರೂ, ‘ಸಮಾಧಾನ’ ಎಂದು ಹೇಳಿ ನನ್ನ ಪ್ರಜೆಯೆಂಬಾಕೆಯ ಗಾಯವನ್ನು ಮೇಲೆ ಮೇಲೆ ವಾಸಿಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ನನ್ನ ಜನರ ಗಾಯಗಳು ಗುಣವಾಗದಿದ್ದರೂ ಅವು ಮಚ್ಚೆಗಳೋ ಎಂಬಂತೆ ‘ಎಲ್ಲ ಚೆನ್ನಾಗಿದೆ’ ಎಂದು ಸಮಾಧಾನ ಹೇಳಿ ವಂಚಿಸುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಮೇಲಾಗದಿದ್ದರೂ ಮೇಲು ಮೇಲು ಎಂದು ಹೇಳಿ ನನ್ನ ಪ್ರಜೆಯೆಂಬಾಕೆಯ ಗಾಯವನ್ನು ಮೇಲೆ ಮೇಲೆ ವಾಸಿಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಪ್ರವಾದಿಗಳು ಮತ್ತು ಯಾಜಕರು ನಮ್ಮ ಜನರ ಆಳವಾದ ಗಾಯಗಳನ್ನು ಕೇವಲ ಅಲ್ಪಗಾಯಗಳಂತೆ ಪರಿಗಣಿಸಿ ಚಿಕಿತ್ಸೆ ಕೊಡುತ್ತಿದ್ದಾರೆ. “ಎಲ್ಲಾ ಚೆನ್ನಾಗಿದೆ, ಎಲ್ಲಾ ಚೆನ್ನಾಗಿದೆ” ಎಂದು ಅವರು ಹೇಳುತ್ತಾರೆ. ಆದರೆ ಎಲ್ಲಾ ಚೆನ್ನಾಗಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 8:11
14 ತಿಳಿವುಗಳ ಹೋಲಿಕೆ  

ಅವರು ನನ್ನ ಜನರ ಗಾಯವನ್ನು ಹಗುರವಾಗಿ ಸ್ವಸ್ಥಮಾಡಿದ್ದಾರೆ. ಸಮಾಧಾನವಿಲ್ಲದಿರುವಾಗ, ‘ಸಮಾಧಾನ, ಸಮಾಧಾನ,’ ಎಂದು ಹೇಳುತ್ತಾರೆ.


ನಿನ್ನ ಪ್ರವಾದಿಗಳು ನಿನಗಾಗಿ ವ್ಯರ್ಥವಾದ ಮತ್ತು ಮೂರ್ಖತನದ ದರ್ಶನಗಳನ್ನು ನೋಡಿದ್ದಾರೆ. ಅವರು ನಿನ್ನ ಬಂಧನವನ್ನು ನೀಗಿಸುವುದಕ್ಕಾಗಿ ನಿನ್ನ ಪಾಪವನ್ನು ಬಯಲಿಗೆ ತರಲಿಲ್ಲ. ಆದರೆ ನಿನಗಾಗಿ ಸುಳ್ಳಿನ ಪ್ರವಾದನೆಗಳನ್ನು ಕೊಟ್ಟು ಗಡಿಪಾರು ಮಾಡುವುದಕ್ಕೆ ಕಾರಣರಾಗಿದ್ದಾರೆ.


ಒಬ್ಬ ಸುಳ್ಳುಗಾರನೂ ಮೋಸಗಾರನೂ ಬಂದು, ‘ನಿನಗೆ ದ್ರಾಕ್ಷಾರಸವೂ ಮದ್ಯಪಾನವೂ ಯಥೇಚ್ಛವಾಗಿ ದೊರೆಯುವುದೆಂದು ನಾನು ಪ್ರವಾದಿಸುವೆನು,’ ಎಂದು ಹೇಳಿದರೆ, ಇವನೇ ಈ ಜನರಿಗೆ ಪ್ರವಾದಿಯಾಗಿರುವನು.


ಏಕೆಂದರೆ ನಾನು ಯಾವನನ್ನು ದುಃಖಪಡಿಸಲಿಲ್ಲವೋ, ಆ ನೀತಿವಂತರ ಹೃದಯಕ್ಕೆ ನೀವು ಸುಳ್ಳಾಡಿ ದುಃಖಪಡಿಸಿದ್ದೀರಿ; ದುಷ್ಟನು ತನ್ನ ದುರ್ಮಾರ್ಗವನ್ನು ಬಿಟ್ಟು, ಪ್ರಾಣವನ್ನು ಉಳಿಸಿಕೊಳ್ಳದಂತೆ ನೀವು ಅವರನ್ನು ಪ್ರೋತ್ಸಾಹಿಸಿದ್ದೀರಿ.


ಆದರೆ ಮೀಕಾಯನನ್ನು ಕರೆಯಲು ಹೋದ ದೂತನು ಅವನಿಗೆ, “ನೋಡು, ಎಲ್ಲ ಪ್ರವಾದಿಗಳು ಏಕಮನಸ್ಸಿನಿಂದ ಅರಸನಿಗೆ ಒಳ್ಳೆಯದನ್ನೇ ಪ್ರವಾದಿಸಿದ್ದಾರೆ. ನಿನ್ನ ಮಾತು ಅವರಲ್ಲಿ ಒಬ್ಬನ ಮಾತಿನ ಹಾಗೆಯೇ ಇರಲಿ; ಒಳ್ಳೆಯ ಮಾತು ಆಡು,” ಎಂದನು.


ಆಗ ಇಸ್ರಾಯೇಲಿನ ಅರಸನು ಹೆಚ್ಚು ಕಡಿಮೆ ನಾನೂರು ಮಂದಿ ಪ್ರವಾದಿಗಳನ್ನು ಕೂಡಿಸಿ, ಅವರಿಗೆ, “ನಾನು ಗಿಲ್ಯಾದಿನ ರಾಮೋತಿನ ಮೇಲೆ ಯುದ್ಧಕ್ಕೆ ಹೋಗಬಹುದೋ, ಬೇಡವೋ?” ಎಂದು ಕೇಳಿದನು. ಅದಕ್ಕವರು, “ಹೋಗು, ಯೆಹೋವ ದೇವರು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವರು,” ಎಂದರು.


ಆದರೆ, “ಸಮಾಧಾನ, ಸುರಕ್ಷಿತ,” ಎಂದು ಜನರು ಹೇಳುತ್ತಿರುವಾಗಲೇ, ಅವರ ಮೇಲೆ ವಿನಾಶವು ಗರ್ಭಿಣಿಗೆ ಪ್ರಸವವೇದನೆ ಬರುವಂತೆ ಫಕ್ಕನೆ ಬರುವುದು. ಅವರು ಹೇಗೂ ತಪ್ಪಿಸಿಕೊಳ್ಳಲಾರರು.


ಸಮಾಧಾನಕ್ಕೆ ಕಾದುಕೊಂಡೆವು, ಆದರೆ ಒಳ್ಳೆಯದೇನೂ ಬರಲಿಲ್ಲ. ಆರೋಗ್ಯದ ಸಮಯಕ್ಕೆ ಕಾದಿದ್ದೆವು. ಆದರೆ ಇಗೋ, ಆತಂಕವನ್ನು ನೋಡುತ್ತೇವೆ.


ಆಗ ನಾನು, “ಹಾ, ಸಾರ್ವಭೌಮ ಯೆಹೋವ ದೇವರೇ, ಇಗೋ, ಪ್ರವಾದಿಗಳು ಅವರಿಗೆ: ‘ನೀವು ಖಡ್ಗವನ್ನು ನೋಡುವುದಿಲ್ಲ. ನಿಮಗೆ ಕ್ಷಾಮವು ಬಾರದು. ಆದರೆ ಯೆಹೋವ ದೇವರು ನಿಮಗೆ ಈ ಸ್ಥಳದಲ್ಲಿ ಸ್ಥಿರಸಮಾಧಾನ ಕೊಡುತ್ತಾರೆ,’ ಎಂದು ಹೇಳುತ್ತಾರೆ,” ಎಂದೆನು.


ಆದರೂ ನನ್ನನ್ನು ಅಸಹ್ಯಿಸುವವರಿಗೆ, ಅವರು, ‘ನಿಮಗೆ ಸಮಾಧಾನವಾಗುವುದು, ಎಂದು ಯೆಹೋವ ದೇವರು ಹೇಳಿದ್ದಾರೆ,’ ಎಂದು ಹೇಳುತ್ತಲೇ ಇದ್ದಾರೆ. ತಮ್ಮ ಹೃದಯದ ಹಟದ ಪ್ರಕಾರ ನಡೆದುಕೊಳ್ಳುವವರೆಲ್ಲರಿಗೆ ‘ನಿಮ್ಮ ಮೇಲೆ ಕೇಡು ಬರುವುದಿಲ್ಲ,’ ಎನ್ನುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು