ಯೆರೆಮೀಯ 8:6 - ಕನ್ನಡ ಸಮಕಾಲಿಕ ಅನುವಾದ6 ನಾನು ಕಿವಿಗೊಟ್ಟು ಕೇಳಿದೆನು. ಆದರೆ ಅವರು ಯಥಾರ್ಥವಾಗಿ ಮಾತನಾಡಲಿಲ್ಲ. ಯಾವನಾದರೂ, “ನಾನು ಎಂಥಾ ಕೆಲಸ ಮಾಡಿದ್ದೇನೆ,” ಎಂದುಕೊಂಡು ತನ್ನ ಕೆಟ್ಟತನದ ನಿಮಿತ್ತ ಪಶ್ಚಾತ್ತಾಪ ಪಡಲಿಲ್ಲ. ಕುದುರೆ ಯುದ್ಧಕ್ಕೆ ರಭಸವಾಗಿ ಓಡುವ ಪ್ರಕಾರ, ಪ್ರತಿಯೊಬ್ಬನೂ ತನ್ನ ದಾರಿಗೆ ತಿರುಗಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ನಾನು ಕಿವಿಗೊಟ್ಟು ಕೇಳುವಾಗ ಅವರು ಯಥಾರ್ಥವಾಗಿ ಮಾತನಾಡಿಕೊಳ್ಳುತ್ತಿರಲಿಲ್ಲ; ಯಾರು ತನ್ನ ಅಧರ್ಮದ ವಿಷಯವಾಗಿ ಪಶ್ಚಾತ್ತಾಪಪಟ್ಟು ‘ಆಹಾ, ನಾನು ಎಂಥಾ ಕೆಲಸ ಮಾಡಿದೆ’ ಎಂದುಕೊಳ್ಳುತ್ತಿರಲಿಲ್ಲ; ಯುದ್ಧದಲ್ಲಿ ರಭಸವಾಗಿ ಓಡುವ ಕುದುರೆಯಂತೆ ಪ್ರತಿಯೊಬ್ಬನೂ ತನ್ನ ತನ್ನ ಮಾರ್ಗಕ್ಕೆ ತ್ವರೆಪಡುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ನಾನು ಕಿವಿಗೊಟ್ಟು ಕೇಳಿದೆ. ಅವರು ಸತ್ಯವಾದುದನ್ನು ನುಡಿಯುತ್ತಿರಲಿಲ್ಲ. ಯಾವನೂ ತನ್ನ ಅಕ್ರಮಕ್ಕಾಗಿ ಪಶ್ಚಾತ್ತಾಪಪಟ್ಟು, ‘ಅಯ್ಯೋ ನಾನು ಎಂಥ ಕೆಲಸ ಮಾಡಿಬಿಟ್ಟೆ !’ ಎಂದುಕೊಳ್ಳುತ್ತಿರಲಿಲ್ಲ. ಯುದ್ಧದಲ್ಲಿ ರಭಸವಾಗಿ ಓಡುವ ಕುದುರೆಗಳಂತೆ ಪ್ರತಿಯೊಬ್ಬನೂ ತನ್ನ ತನ್ನ ಮಾರ್ಗದಲ್ಲೆ ದೌಡಾಯಿಸುತ್ತಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ನಾನು ಕಿವಿಗೊಟ್ಟು ಕೇಳುವಾಗ ಅವರು ಯಥಾರ್ಥವಾಗಿ ಮಾತಾಡಿಕೊಳ್ಳುತ್ತಿರಲಿಲ್ಲ; ಯಾವನೂ ತನ್ನ ಅಧರ್ಮದ ವಿಷಯವಾಗಿ ಪಶ್ಚಾತ್ತಾಪಪಟ್ಟು - ಆಹಾ, ನಾನು ಎಂಥಾ ಕೆಲಸ ಮಾಡಿದೆ ಎಂದು ಕೊಳ್ಳುತ್ತಿರಲಿಲ್ಲ; ಯುದ್ಧದಲ್ಲಿ ರಭಸವಾಗಿ ಓಡುವ ಕುದುರೆಯಂತೆ ಪ್ರತಿಯೊಬ್ಬನೂ ತನ್ನ ತನ್ನ ಮಾರ್ಗಕ್ಕೇ ತ್ವರೆಪಡುತ್ತಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ನಾನು ಎಚ್ಚರವಹಿಸಿ ಅವರು ಹೇಳುವದನ್ನು ಕೇಳಿದ್ದೇನೆ. ಆದರೆ ಅವರು ಸರಿಯಾದುದನ್ನು ಹೇಳುವದಿಲ್ಲ. ತಾವು ಮಾಡಿದ ಪಾಪಕ್ಕಾಗಿ ಅವರು ಪಶ್ಚಾತ್ತಾಪಪಡುವದಿಲ್ಲ. ಅವರು ಮಾಡಿದ ದುಷ್ಕೃತ್ಯದ ಬಗ್ಗೆ ಅವರು ಯೋಚಿಸುವದಿಲ್ಲ. ಜನರು ವಿಚಾರ ಮಾಡದೆ ಕೆಲಸಮಾಡುತ್ತಾರೆ. ಅವರು ಯುದ್ಧದಲ್ಲಿ ಓಡುವ ಕುದುರೆಯಂತಿದ್ದಾರೆ. ಅಧ್ಯಾಯವನ್ನು ನೋಡಿ |