ಯೆರೆಮೀಯ 8:7 - ಕನ್ನಡ ಸಮಕಾಲಿಕ ಅನುವಾದ7 ಹೌದು, ಆಕಾಶದಲ್ಲಿಯ ಬಕಪಕ್ಷಿಯು ತನ್ನ ನಿಯಮಿತ ಕಾಲಗಳನ್ನು ತಿಳಿಯುತ್ತದೆ. ಪಾರಿವಾಳವೂ, ಬಾನಕ್ಕಿಯೂ, ಕೊಕ್ಕರೆಯೂ ತಮ್ಮ ಗಮನಾಗಮನದ ಸಮಯವನ್ನು ಗಮನಿಸುತ್ತವೆ. ಆದರೆ ನನ್ನ ಜನರು ಯೆಹೋವ ದೇವರು ಅಪೇಕ್ಷಿಸುವುದನ್ನು ಅರಿಯರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆಕಾಶದಲ್ಲಿ ಹಾರುವ ಬಕವೂ ತನ್ನ ನಿಯಮಿತ ಕಾಲಗಳನ್ನು ತಿಳಿದುಕೊಂಡಿದೆ. ಬೆಳವಕ್ಕಿಯೂ, ಬಾನಕ್ಕಿಯೂ, ಕೊಕ್ಕರೆಯೂ ತಮ್ಮ ಗಮನಾಗಮನ ಸಮಯಗಳನ್ನು ಗಮನಿಸುತ್ತವೆ. ಆದರೆ ನನ್ನ ಜನರಾದರೋ ಯೆಹೋವನ ನಿಯಮವನ್ನು ತಿಳಿಯರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಆಕಾಶದಲ್ಲಿ ಹಾರುವ ಬಕಪಕ್ಷಿಯು ತನ್ನ ನಿಯಮಿತ ಕಾಲಗಳನ್ನು ತಿಳಿದುಕೊಂಡಿದೆ. ಬೆಳವಕ್ಕಿ, ಬಾನಕ್ಕಿ, ಕೊಕ್ಕರೆ ಇವು ತಮ್ಮ ಗಮನಾಗಮನದ ಸಮಯಗಳನ್ನು ತಿಳಿದಿರುತ್ತವೆ. ಆದರೆ ನನ್ನ ಜನರು ಸರ್ವೇಶ್ವರನಾದ ನನ್ನ ನಿಯಮಗಳನ್ನೆ ತಿಳಿಯರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಆಕಾಶದಲ್ಲಿ ಹಾರುವ ಬಕವೂ ತನ್ನ ನಿಯವಿುತ ಕಾಲಗಳನ್ನು ತಿಳಿದುಕೊಂಡಿದೆ, ಬೆಳವಕ್ಕಿಯೂ ಬಾನಕ್ಕಿಯೂ ಕೊಕ್ಕರೆಯೂ ತಮ್ಮ ಗಮನಾಗಮನ ಸಮಯಗಳನ್ನು ಗಮನಿಸುತ್ತವೆ; ನನ್ನ ಜನರಾದರೋ ಯೆಹೋವನ ನಿಯಮವನ್ನು ತಿಳಿಯರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಆಕಾಶದಲ್ಲಿ ಹಾರಾಡುವ ಬಕಪಕ್ಷಿಗಳಿಗೂ ಸಹ ಆಯಾ ಕೆಲಸ ಮಾಡುವ ಸರಿಯಾದ ಸಮಯ ಗೊತ್ತಿದೆ. ಬೆಳವಕ್ಕಿಯೂ ಬಾನಕ್ಕಿಯೂ ಕೊಕ್ಕರೆಯೂ ಹೊಸ ಮನೆಗೆ ಹೋಗಬೇಕಾದ ಕಾಲವನ್ನು ಬಲ್ಲವು. ಆದರೆ ನನ್ನ ಜನರಿಗೆ ತಮ್ಮ ಯೆಹೋವನು ಅವರಿಂದ ಏನನ್ನು ಬಯಸುತ್ತಾನೆ ಎಂಬುದು ಗೊತ್ತಿಲ್ಲ. ಅಧ್ಯಾಯವನ್ನು ನೋಡಿ |