Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 9:15 - ಕನ್ನಡ ಸಮಕಾಲಿಕ ಅನುವಾದ

15 ಈ ಕಾರಣದಿಂದ ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ನಾನು ಅವರಿಗೆ ಹೌದು, ಈ ಜನರಿಗೆ ಮಾಚಿಪತ್ರೆಯನ್ನು ತಿನ್ನುವುದಕ್ಕೆ ಕೊಡುತ್ತೇನೆ. ವಿಷದ ನೀರನ್ನು ಅವರಿಗೆ ಕುಡಿಯಲು ಕೊಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆದುದರಿಂದ ಆಹಾ, ನಾನು ಈ ಜನರಿಗೆ ವಿಷದ ಆಹಾರವನ್ನು ಮತ್ತು ಕಹಿಯಾದ ಪಾನಗಳನ್ನು ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಆದುದರಿಂದ ಈ ಜನರು ಕಹಿಯಾದ ಇಟ್ಟಿಕಾಯನ್ನು ತಿನ್ನುವಂತೆ ಮಾಡುವೆನು; ವಿಷ ಬೆರೆತ ನೀರನ್ನು ಕುಡಿಯುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆಹಾ, ನಾನು ಈ ಜನರಿಗೆ ಕಹಿಯಾದ ಆಹಾರಪಾನಗಳನ್ನು ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಇಸ್ರೇಲಿನ ದೇವರಾದ ಸರ್ವಶಕ್ತನಾದ ಯೆಹೋವನ ಸಂದೇಶವಿದು: “ಯೆಹೂದದ ಜನರು ಕಹಿಯಾದ ಆಹಾರವನ್ನು ತಿನ್ನುವಂತೆ ನಾನು ಬೇಗನೆ ಮಾಡುವೆನು; ಅವರು ವಿಷಮಿಶ್ರಿತ ನೀರನ್ನು ಕುಡಿಯುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 9:15
19 ತಿಳಿವುಗಳ ಹೋಲಿಕೆ  

ನಾವು ಏಕೆ ಸುಮ್ಮನೆ ಕೂತುಕೊಳ್ಳುತ್ತೇವೆ? ನೀವು ಕೂಡಿಕೊಳ್ಳಿರಿ, ಕೋಟೆಯುಳ್ಳ ಪಟ್ಟಣಗಳಲ್ಲಿ ಪ್ರವೇಶಿಸೋಣ, ಅಲ್ಲಿ ನಾಶವಾಗೋಣ. ಏಕೆಂದರೆ, ನಾವು ನಮ್ಮ ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿದ ಕಾರಣ, ನಮ್ಮ ದೇವರಾದ ಯೆಹೋವ ದೇವರು ನಮ್ಮನ್ನು ನಾಶಮಾಡಿ, ನಮಗೆ ವಿಷದ ನೀರನ್ನು ಕುಡಿಯಲು ಕೊಟ್ಟಿದ್ದಾರೆ.


ಅವರು ನನ್ನನ್ನು ಕಹಿಯಿಂದ ತುಂಬಿಸಿ, ವಿಷ ಸಸ್ಯಗಳಿಂದ ನನ್ನನ್ನು ತಣಿಸಿದ್ದಾರೆ.


ರೋದನವೇ ನಮ್ಮ ಅನ್ನವಾಗುವಂತೆಯೂ ಅಶ್ರುಧಾರೆಯೇ ಪಾನವಾಗುವಂತೆಯೂ ಅನುಮತಿಸಿದ್ದೀರಿ.


ಆದ್ದರಿಂದ ಸೇನಾಧೀಶ್ವರ ಯೆಹೋವ ದೇವರು ಪ್ರವಾದಿಗಳ ವಿಷಯವಾಗಿ ಹೇಳುವುದೇನೆಂದರೆ: “ನಾನು ಅವರಿಗೆ ಕಹಿಯಾದ ಆಹಾರ ತಿನ್ನುವುದಕ್ಕೆ ಕೊಡುವೆನು. ವಿಷದ ನೀರನ್ನು ಕುಡಿಯ ಕೊಡುವೆನು. ಏಕೆಂದರೆ ಯೆರೂಸಲೇಮಿನ ಪ್ರವಾದಿಗಳ ಕಡೆಯಿಂದ ಭ್ರಷ್ಟತ್ವವು ದೇಶಕ್ಕೆಲ್ಲಾ ಹರಡಿದೆ.”


ಆ ನಕ್ಷತ್ರದ ಹೆಸರು, ಮಾಚಿಪತ್ರೆ, ಆಗ ಮೂರರಲ್ಲಿ ಒಂದು ಭಾಗವು ಕಹಿಯಾಯಿತು ಮತ್ತು ಆ ನೀರು ಕಹಿಯಾದ್ದರಿಂದ ಅನೇಕ ಜನರು ಸತ್ತರು.


ನನ್ನ ಸಂಕಟವನ್ನು, ನನ್ನ ಅಲೆದಾಡುವಿಕೆಯನ್ನು, ನನ್ನ ಕಹಿಯನ್ನು, ನನ್ನ ವಿಷತನವನ್ನು ನಾನು ಜ್ಞಾಪಕಮಾಡಿಕೊಂಡಿದ್ದೇನೆ.


ಇಸ್ರಾಯೇಲಿನ ದೇವರಾದ ಯೆಹೋವ ದೇವರು ನನಗೆ ಹೀಗೆಂದರು: “ಈ ರೌದ್ರದ ದ್ರಾಕ್ಷಾರಸದ ಪಾತ್ರೆಯನ್ನು, ನಾನು ನಿನ್ನನ್ನು ಕಳುಹಿಸುವ ಎಲ್ಲಾ ಜನಾಂಗಗಳು ಅದನ್ನು ಕುಡಿಯುವಂತೆ ನನ್ನ ಕೈಯಿಂದ ತೆಗೆದುಕೋ.


ಉಸಿರು ಇರುವವರೆಗೆ ಬದುಕುವ ನರಮಾನವನ ಮೇಲಿನ ಭರವಸೆಯನ್ನು ಬಿಟ್ಟುಬಿಡಿರಿ. ಏಕೆಂದರೆ ಅವನ ಗಣನೆ ಎಷ್ಟರವರೆಗೆ?


ಜನರ ಅಟ್ಟಹಾಸವು ತಗ್ಗಿಹೋಗುವುದು. ಆ ದಿನದಲ್ಲಿ ಯೆಹೋವ ದೇವರೊಬ್ಬರೇ ಉನ್ನತವಾಗಿರುವರು.


ಯೆಹೋವ ದೇವರ ಕೈಯಲ್ಲಿ ಒಂದು ಪಾತ್ರೆಯು ಇದೆ. ಔಷಧಿಮಿಶ್ರವಾಗಿ ಉಕ್ಕುವ ದ್ರಾಕ್ಷಾರಸದಿಂದ ತುಂಬಿ ಇದೆ. ಅದನ್ನು ಅವರು ಹೊಯ್ಯುತ್ತಾರೆ. ಅದರ ಮಡ್ಡಿಯನ್ನು ಸಹ ಭೂಮಿಯ ದುಷ್ಟರೆಲ್ಲರೂ ಹೀರಿಕೊಂಡು ಕುಡಿಯುವರು.


ನನ್ನ ಆಹಾರಕ್ಕಾಗಿ ಕಹಿಯಾದದ್ದನ್ನು ಕೊಟ್ಟರು. ನನ್ನ ದಾಹಕ್ಕಾಗಿ ನನಗೆ ಹುಳಿರಸವನ್ನು ಕುಡಿಯಲು ಕೊಟ್ಟರು.


ನಿಮ್ಮ ಜನರಿಗೆ ಕಠಿಣ ಕಾಲಗಳನ್ನು ನೀವು ತೋರಿಸಿದ್ದೀರಿ. ನಾವು ಭ್ರಮಣಗೊಳಿಸುವ ದ್ರಾಕ್ಷಾರಸವನ್ನು ಕುಡಿದವರಂತೆ ಆದೆವು.


ಈ ಹೊತ್ತು ನಮ್ಮ ದೇವರಾದ ಯೆಹೋವ ದೇವರನ್ನು ಬಿಟ್ಟು ಆ ಜನಾಂಗಗಳ ದೇವರುಗಳಿಗೆ ಸೇವೆ ಮಾಡುವುದಕ್ಕೆ ತಿರುಗಿಕೊಳ್ಳುವ ಹೃದಯವುಳ್ಳ ಪುರುಷನಾದರೂ ಸ್ತ್ರೀಯಾದರೂ ಕುಟುಂಬವಾದರೂ ಗೋತ್ರವಾದರೂ ಇರಬಾರದು. ಈ ಘೋರ ವಿಷವನ್ನೂ, ಬೆಳೆಸುವ ಬೇರೂ ನಿಮ್ಮಲ್ಲಿ ಇರಬಾರದು.


ಯೆಹೋವ ದೇವರು ನಿಮ್ಮನ್ನೂ, ನೀವು ನಿಮ್ಮ ಮೇಲೆ ನೇಮಿಸಿಕೊಳ್ಳುವ ಅರಸನನ್ನೂ, ನೀವೂ, ನಿಮ್ಮ ಪಿತೃಗಳೂ ಅರಿಯದ ಜನಾಂಗದ ಬಳಿಗೆ ಹೋಗುವಂತೆ ಮಾಡುವರು. ಅಲ್ಲಿ ಮರವೂ, ಕಲ್ಲೂ ಆಗಿರುವ ಬೇರೆ ದೇವರುಗಳನ್ನೂ ನೀವು ಪೂಜಿಸುವಿರಿ.


ನಾನು ಅವರಿಗೂ, ಅವರ ತಂದೆಗಳಿಗೂ ಕೊಟ್ಟ ದೇಶದೊಳಗಿಂದ ಅವರು ನಾಶವಾಗುವವರೆಗೂ ಖಡ್ಗವನ್ನೂ, ಕ್ಷಾಮವನ್ನೂ, ವ್ಯಾಧಿಯನ್ನೂ ಅವರಲ್ಲಿ ಕಳುಹಿಸುವೆನು.’ ”


ನಾನು ಒಳ್ಳೆಯದಕ್ಕಾಗಿ ಅಲ್ಲ; ಕೆಟ್ಟದ್ದಕ್ಕಾಗಿ ಅವರ ಮೇಲೆ ಎಚ್ಚರವಾಗಿರುವೆನು. ಈಜಿಪ್ಟ್ ದೇಶದಲ್ಲಿರುವ ಯೆಹೂದದ ಮನುಷ್ಯರೆಲ್ಲರೂ ಮುಗಿದು ಅಂತ್ಯವಾಗುವವರೆಗೆ ಖಡ್ಗದಿಂದಲೂ ಬರದಿಂದಲೂ ನಾಶವಾಗುವರು.


ಏಕೆಂದರೆ ಏಲಾಮನ್ನು ಅವರ ಶತ್ರುಗಳ ಮುಂದೆಯೂ, ಅವರ ಪ್ರಾಣವನ್ನು ಹುಡುಕುವವರ ಮುಂದೆಯೂ ಹೆದರುವಂತೆ ಮಾಡುವೆನು; ಅವರ ಮೇಲೆ ಕೇಡನ್ನೂ, ನನ್ನ ಕೋಪದ ಉಗ್ರವನ್ನೂ ಬರಮಾಡುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ. “ಅವನನ್ನು ಮುಗಿಸಿಬಿಡುವವರೆಗೆ ಖಡ್ಗವನ್ನು ಅವರ ಹಿಂದೆ ಕಳುಹಿಸುವೆನು.


ಅದರ ಮೂರನೆಯ ಒಂದು ಪಾಲನ್ನು ನಗರದ ಮಧ್ಯದಲ್ಲಿ ಮುತ್ತಿಗೆಯ ದಿವಸಗಳು ಮುಗಿದ ಮೇಲೆ ಬೆಂಕಿಯಿಂದ ಸುಡಬೇಕು. ಮೂರನೆಯ ಒಂದು ಪಾಲನ್ನು ತೆಗೆದುಕೊಂಡು ಖಡ್ಗದಿಂದ ಸುತ್ತಲೂ ಕಡಿಯಬೇಕು. ಉಳಿದ ಮೂರನೆಯ ಪಾಲನ್ನು ಗಾಳಿಗೆ ಚೆಲ್ಲಬೇಕು ಮತ್ತು ನಾನು ಅವುಗಳ ಹಿಂದೆ ಖಡ್ಗವನ್ನು ಬೀಸುವೆನು.


ನಿನ್ನಲ್ಲಿಯ ಮೂರನೆಯ ಒಂದು ಪಾಲು ಜನರು ವ್ಯಾಧಿಗಳಿಂದ ಸಾಯುವರು, ಕ್ಷಾಮದಿಂದ ನಿಮ್ಮಲ್ಲಿ ಅವರು ನಾಶವಾಗುವರು. ಮೂರನೆಯ ಒಂದು ಪಾಲು ನಿಮ್ಮ ಸುತ್ತಲೂ ಖಡ್ಗ ಹಿಡಿದು ಬೀಳುವರು. ಮೂರನೆಯ ಒಂದು ಪಾಲನ್ನು ಎಲ್ಲಾ ದಿಕ್ಕುಗಳಿಗೆ ಗಾಳಿಗೆ ತೂರಿ ಚದರಿಸಿ, ಅವರ ಮೇಲೆ ಖಡ್ಗವನ್ನು ಬೀಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು