Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 9:22 - ಕನ್ನಡ ಸಮಕಾಲಿಕ ಅನುವಾದ

22 ಯೆಹೋವ ದೇವರು ನನಗೆ ಹೀಗೆಂದರು: “ ‘ಮನುಷ್ಯರ ಹೆಣಗಳು ಗೊಬ್ಬರದಂತೆ ಬಯಲಿನಲ್ಲಿ ಬೀಳುವುವು. ಧಾನ್ಯ ಕೊಯ್ಯುವವನು ಉಳಿಸಿದ ಕೈಹಿಡಿಯಂತೆ ಕೂಡಿಸುವವನಿಲ್ಲದೆ ಬೀಳುವುವು.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 “ಈ ಜನರ ಹೆಣಗಳು ನೆಲದ ಮೇಲೆ ಬಿದ್ದು ಗೊಬ್ಬರವಾಗುವುದು; ಅವು ಹೊಲ ಕೊಯ್ಯುವವನ ಹಿಂದೆ ಯಾರೂ ಕೂಡಿಸದೆ ಬಿದ್ದಿರುವ ಸಿವುಡಿನಂತೆ ಇರುವವು, ಯೆಹೋವನ ಈ ಮಾತನ್ನು ಸಾರು” ಎಂದು ನನಗೆ ಅಪ್ಪಣೆಯಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಜನರ ಹೆಣಗಳು ನೆಲದ ಮೇಲೆ ಬಿದ್ದು ಗೊಬ್ಬರವಾಗುವುವು ಅವು ಹೊಲ ಕೊಯ್ಯುವವನ ಹಿಂದೆ ಯಾರೂ ಕೂಡಿಸದೆ ಬಿದ್ದಿರುವ ಅರಿಗಳಂತಿರುವುವು - ಈ ಮಾತುಗಳನ್ನು ಸಾರುವಂತೆ ಸರ್ವೇಶ್ವರನಿಂದ ನನಗೆ ಅಪ್ಪಣೆಯಾಯಿತು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಯೆಹೋವನ ಈ ಮಾತನ್ನು ಸಾರು ಎಂದು ನನಗೆ ಅಪ್ಪಣೆಯಾಯಿತು - ಜನರ ಹೆಣಗಳು ನೆಲದ ಮೇಲೆ ಬಿದ್ದು ಗೊಬ್ಬರವಾಗುವವು; ಅವು ಹೊಲಕೊಯ್ಯುವವನ ಹಿಂದೆ ಯಾರೂ ಕೂಡಿಸದೆ ಬಿದ್ದಿರುವ ಅರಿಗಳಂತಿರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಯೆರೆಮೀಯನೇ, ಯೆಹೋವನು ಹೀಗೆ ಹೇಳುತ್ತಾನೆಂದು ಹೇಳು: “‘ಹೊಲಗಳಲ್ಲಿ ಗೊಬ್ಬರ ಬಿದ್ದಂತೆ ಹೆಣಗಳು ಬೀಳುವವು. ಆ ಶವಗಳು ಹೊಲ ಕೊಯ್ಯುವವನ ಹಿಂದೆ ಯಾರೂ ಎತ್ತದೆ ಬಿದ್ದಿರುವ ಮೆದೆಗಳಂತೆ ಬಿದ್ದಿರುವವು.’”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 9:22
17 ತಿಳಿವುಗಳ ಹೋಲಿಕೆ  

ಅವರು ಪ್ರೀತಿ ಮಾಡಿದಂಥ, ಸೇವಿಸಿದಂಥ, ಹಿಂಬಾಲಿಸಿದಂಥ, ಹುಡುಕಿದಂಥ, ಆರಾಧಿಸಿದಂಥ, ಸೂರ್ಯನ ಮುಂದೆಯೂ, ಚಂದ್ರನ ಮುಂದೆಯೂ, ಸಮಸ್ತ ಆಕಾಶ ಸೈನ್ಯದ ಮುಂದೆಯೂ ಅವುಗಳನ್ನು ತೆರೆದಿಡುವರು; ಹೌದು, ಅವುಗಳನ್ನು ಯಾರೂ ಕೂಡಿಸಿ ಮತ್ತೆ ಹೂಣಿಡುವುದಿಲ್ಲ. ಅವು ಭೂಮಿಯ ಮೇಲೆ ಗೊಬ್ಬರವಾಗುವುವು.


ಆ ದಿವಸದಲ್ಲಿ ಭೂಮಿಯ ಈ ಮೇರೆಯಿಂದ ಭೂಮಿಯ ಆ ಮೇರೆಯವರೆಗೆ ಯೆಹೋವ ದೇವರಿಂದ ಹತರಾದವರು ಇರುವರು. ಅವರಿಗೋಸ್ಕರ ಗೋಳಾಡುವುದಿಲ್ಲ. ಅವರನ್ನು ಕೂಡಿಸುವುದಿಲ್ಲ. ಅವರನ್ನು ಹೂಳಿಡುವುದಿಲ್ಲ. ಅವರು ಭೂಮಿಯ ಮೇಲೆ ಗೊಬ್ಬರದಂತಿರುವರು.


“ನಾನು ಮನುಷ್ಯರ ಮೇಲೆ ಇಕ್ಕಟ್ಟು ತರಿಸುವೆನು. ಅವರು ಕುರುಡರ ಹಾಗೆ ತಡಕುವರು. ಏಕೆಂದರೆ ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿದ್ದಾರೆ. ಅವರ ರಕ್ತವು ಧೂಳಿನಂತೆಯೂ ಅವರ ಮಾಂಸವು ಗೊಬ್ಬರದಂತೆಯೂ ಸುರಿದಿರುವುದು.


“ಅವರು ಮರಣಕರವಾದ ಬೇನೆಗಳಿಂದ ಸಾಯುವರು. ಅವರಿಗೋಸ್ಕರ ಗೋಳಾಟ ಆಗುವುದಿಲ್ಲ. ಅವರಿಗೆ ಸಮಾಧಿಯಾಗುವುದಿಲ್ಲ. ಭೂಮಿಯ ಮೇಲೆ ಅವರು ಗೊಬ್ಬರವಾಗುವರು. ಖಡ್ಗದಿಂದಲೂ ಕ್ಷಾಮದಿಂದಲೂ ಸಂಹಾರವಾಗುವರು. ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ ಕಾಡುಮೃಗಗಳಿಗೂ ಆಹಾರವಾಗುವುವು.”


ಆದಕಾರಣ ಯೆಹೋವ ದೇವರು ಕೋಪಗೊಂಡು ಜನರಿಗೆ ವಿರೋಧವಾಗಿ ಉರಿಗೊಂಡು ಅವರ ಮೇಲೆ ತಮ್ಮ ಕೈಚಾಚಿ, ಅವರನ್ನು ಹೊಡೆದಿದ್ದಾರೆ, ಬೆಟ್ಟಗುಡ್ಡಗಳು ಕಂಪಿಸಿದವು. ಅವರ ಹೆಣಗಳು ಹರಿದು ಬೀದಿಗಳ ಮಧ್ಯದಲ್ಲಿ ಬಿದ್ದಿರುವುವು. ಇಷ್ಟೆಲ್ಲಾ ಆದರೂ ದೇವರ ಕೋಪವು ತೀರದೆ, ಅವರ ಕೈ ಇನ್ನೂ ಚಾಚಿಯೇ ಇರುವುದು.


ಅವರು ಎಂದೋರಿನಲ್ಲಿ ನಾಶವಾಗಿ ಭೂಮಿಗೆ ಗೊಬ್ಬರವಾದರು.


ಈ ಜನರ ಹೆಣಗಳು ಆಕಾಶದ ಪಕ್ಷಿಗಳಿಗೂ ಕಾಡುಮೃಗಗಳಿಗೂ ಆಹಾರವಾಗುವುವು. ಯಾರೂ ಅವುಗಳನ್ನು ಬೆದರಿಸುವುದಿಲ್ಲ.


ಇದಲ್ಲದೆ ಇದೇ ಈಜೆಬೆಲಳೆಂದು ಗುರುತು ಸಿಕ್ಕದ ಹಾಗೆ ಇಜ್ರೆಯೇಲಿನ ಹೊಲದಲ್ಲಿ ಈಜೆಬೆಲಳ ಹೆಣ ಗೊಬ್ಬರದ ಹಾಗೆ ಇರುವುದು,” ಎಂದನು.


ಆದ್ದರಿಂದ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ನಾನು ಈ ಜನರ ಮುಂದೆ ಅಡೆತಡೆಗಳನ್ನು ಇಡುತ್ತೇನೆ. ತಂದೆಯೂ, ಮಕ್ಕಳೂ ಕೂಡ ಅವುಗಳ ಮೇಲೆ ಬೀಳುವರು. ನೆರೆಯವರೂ, ಅವರ ಸ್ನೇಹಿತರೂ ನಾಶವಾಗುವರು.”


ನಿಮ್ಮ ದೇವರಾದ ಯೆಹೋವ ದೇವರನ್ನು ಮರೆತು, “ನಮ್ಮ ಹಸ್ತ ಬಲ ಸಾಮರ್ಥ್ಯವೇ ನಮಗೆ ಈ ಆಸ್ತಿಯನ್ನು ಸಂಪಾದಿಸಿತು,” ಎಂದು ನಿಮ್ಮ ಹೃದಯದಲ್ಲಿ ಹೇಳಿಕೊಳ್ಳದ ಹಾಗೆ ನೋಡಿಕೊಳ್ಳಿರಿ.


ಹಿಜ್ಕೀಯನು ಅವರ ಮಾತು ಕೇಳಿ ಅವರಿಗೆ ಬೆಳ್ಳಿ, ಬಂಗಾರ, ಸುಗಂಧದ್ರವ್ಯ, ಪರಿಮಳ ತೈಲ ಮೊದಲಾದ ಅಮೂಲ್ಯ ಪದಾರ್ಥಗಳಿರುವ ಮನೆಯನ್ನೂ, ಆಯುಧ ಶಾಲೆಯನ್ನೂ, ತನ್ನ ಭಂಡಾರದಲ್ಲಿ ಇರುವುದೆಲ್ಲವನ್ನೂ ತೋರಿಸಿದನು. ಹೀಗೆ ಹಿಜ್ಕೀಯನು ತನ್ನ ಅರಮನೆಯಲ್ಲಿಯೂ, ತನ್ನ ಸಮಸ್ತ ರಾಜ್ಯದಲ್ಲಿಯೂ ಅವರಿಗೆ ತೋರಿಸದಿದ್ದ ವಸ್ತುವು ಒಂದೂ ಇರಲಿಲ್ಲ.


ಅದಕ್ಕೆ ಯೆಶಾಯನು ಪುನಃ ಅವನನ್ನು, “ಅವರು ನಿನ್ನ ಅರಮನೆಯಲ್ಲಿ ಏನನ್ನು ನೋಡಿದರು?” ಎಂದು ಕೇಳಿದನು. ಹಿಜ್ಕೀಯನು, “ನನ್ನ ಅರಮನೆಯಲ್ಲಿ ಇರುವುದೆಲ್ಲವನ್ನು ಅವರು ನೋಡಿದರು, ನನ್ನ ಭಂಡಾರದಲ್ಲಿ ನಾನು ಅವರಿಗೆ ತೋರಿಸದೆ ಇದ್ದದ್ದು ಏನೂ ಇಲ್ಲ,” ಎಂದು ಉತ್ತರಕೊಟ್ಟನು.


ದೇವರು ಜ್ಞಾನಿಗಳನ್ನು ಅವರ ಯುಕ್ತಿಯಲ್ಲಿಯೇ ಹಿಡಿಯುತ್ತಾರೆ, ಮತ್ತು ಕುತಂತ್ರಿಯ ಯೋಜನೆಗಳನ್ನು ನಿರರ್ಥಕಮಾಡುತ್ತಾರೆ.


ಯಾರೂ ಇನ್ನೊಬ್ಬರ ಜೀವವನ್ನು ವಿಮೋಚಿಸಲಾರರು; ಅಥವಾ ಇತರರಿಗಾಗಿ ಯಾರೂ ದೇವರಿಗೆ ಈಡು ಕೊಡಲಾರರು.


ಧನವಂತರ ಸಂಪತ್ತು ಅವರಿಗೆ ಬಲವಾದ ಪಟ್ಟಣವೂ ಅವನ ಕಲ್ಪನೆಯಲ್ಲಿ ಅದು ಸುರಕ್ಷತೆಯ ಎತ್ತರವಾದ ಗೋಡೆಯೂ ಆಗಿದೆ.


ಐಶ್ವರ್ಯವಂತನಾಗುವುದಕ್ಕೆ ಪ್ರಯಾಸಪಡಬೇಡ; ಅದಕ್ಕಾಗಿ ಸ್ವಬುದ್ಧಿಯನ್ನೇ ಆಶ್ರಯಿಸಬೇಡ.


ಬಿರುಗಾಳಿಯಂತೆ ಕೊಚ್ಚಿಕೊಳ್ಳುತ್ತಾ ಮುಂದೆ ಸಾಗುವರು. ಅಪರಾಧಿ ಜನರವರು. ಅವರ ಸ್ವಂತ ಬಲ, ಅವರ ದೇವರು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು