ಯೆರೆಮೀಯ 9:25 - ಕನ್ನಡ ಸಮಕಾಲಿಕ ಅನುವಾದ25-26 “ಇಗೋ, ನಾನು ಸುನ್ನತಿ ಇಲ್ಲದವರ ಸಂಗಡ ಸುನ್ನತಿ ಉಳ್ಳವರೆಲ್ಲರನ್ನೂ, ಈಜಿಪ್ಟನ್ನೂ, ಯೆಹೂದವನ್ನೂ, ಎದೋಮನ್ನೂ, ಅಮ್ಮೋನನ ಮಕ್ಕಳನ್ನೂ, ಮೋವಾಬನ್ನೂ, ಮರುಭೂಮಿಯ ನಿವಾಸಿಗಳಾಗಿರುವ ಕಟ್ಟಕಡೆಯ ಮೂಲೆಯಲ್ಲಿ ಇರುವವರನ್ನೂ ನಾನು ಶಿಕ್ಷಿಸುವ ದಿವಸಗಳು ಬರುತ್ತವೆ. ಏಕೆಂದರೆ ಈ ಜನಾಂಗಗಳವರು ಸುನ್ನತಿಯಿಲ್ಲದವರು. ಇಸ್ರಾಯೇಲಿನ ಮನೆತನದವರೆಲ್ಲರೂ ಹೃದಯದಲ್ಲಿ ಸುನ್ನತಿ ಇಲ್ಲದವರಾಗಿದ್ದಾರೆ,” ಎಂದು ಯೆಹೋವ ದೇವರು ಅನ್ನುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 “ಆಹಾ, ಐಗುಪ್ತರು, ಯೆಹೂದ್ಯರು, ಎದೋಮ್ಯರು, ಅಮ್ಮೋನ್ಯರು, ಮೋವಾಬ್ಯರು, ಚಂಡಿಕೆಯನ್ನು ಬಿಟ್ಟುಕೊಂಡಿರುವ ಅರಣ್ಯದ ನಿವಾಸಿಗಳು, ಅಂತು ಸುನ್ನತಿಯುಳ್ಳವರಾದರೂ ಸುನ್ನತಿಯಿಲ್ಲದ ಇವರೆಲ್ಲರನ್ನೂ ನಾನು ದಂಡಿಸುವ ದಿನಗಳು ಬರುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 “ಈಜಿಪ್ಟರು, ಯೆಹೂದ್ಯರು, ಎದೋಮ್ಯರು, ಅಮ್ಮೋನ್ಯರು, ಮೊವಾಬ್ಯರು, ಮುಂದಲೆ ಕೂದಲನ್ನು ಕತ್ತರಿಸಿಕೊಳ್ಳುವ ಅರಣ್ಯವಾಸಿಗಳು, ಅಂತು ದೇಹದಲ್ಲಿ ಮಾತ್ರ ಸುನ್ನತಿಯುಳ್ಳವರು, ಇವರೆಲ್ಲರನ್ನು ದಂಡಿಸುವ ದಿನಗಳು ಬರುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಆಹಾ, ಐಗುಪ್ತ್ಯರು ಯೆಹೂದ್ಯರು ಎದೋಮ್ಯರು ಅಮ್ಮೋನ್ಯರು ಮೋವಾಬ್ಯರು ಚಂಡಿಕೆಬಿಟ್ಟುಕೊಂಡಿರುವ ಅರಣ್ಯನಿವಾಸಿಗಳು, ಅಂತು ಸುನ್ನತಿಯುಳ್ಳವರಾದರೂ ಸುನ್ನತಿಯಿಲ್ಲದ ಇವರೆಲ್ಲರನ್ನೂ ನಾನು ದಂಡಿಸುವ ದಿನಗಳು ಬರುತ್ತವೆ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 “ಕೇವಲ ದೈಹಿಕವಾಗಿ ಸುನ್ನತಿಯನ್ನು ಮಾಡಿಕೊಂಡ ಜನರನ್ನು ನಾನು ಶಿಕ್ಷಿಸುವ ಕಾಲ ಬರಲಿದೆ. ಅಧ್ಯಾಯವನ್ನು ನೋಡಿ |