Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 1:10 - ಕನ್ನಡ ಸಮಕಾಲಿಕ ಅನುವಾದ

10 ಸೊದೋಮಿನ ಅಧಿಪತಿಗಳೇ, ನೀವು ಯೆಹೋವ ದೇವರ ಮಾತನ್ನು ಕೇಳಿರಿ. ಗೊಮೋರದ ಪ್ರಜೆಗಳೇ! ನಮ್ಮ ದೇವರ ನಿಯಮಕ್ಕೆ ಕಿವಿಗೊಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಸೊದೋಮಿನ ಅಧಿಪತಿಗಳೇ, ಯೆಹೋವನ ಮಾತನ್ನು ಆಲಿಸಿರಿ. ಗೊಮೋರದ ಪ್ರಜೆಗಳೇ ನಮ್ಮ ದೇವರ ಧರ್ಮೋಪದೇಶವನ್ನು ಕೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಸೊದೋಮಿನ ಅಧಿಪತಿಗಳಂತಿರುವವರೇ, ಸರ್ವೇಶ್ವರಸ್ವಾಮಿಯ ಮಾತನ್ನು ಕೇಳಿರಿ. ಗೊಮೋರದ ಪ್ರಜೆಗಳನ್ನು ಹೋಲುವವರೇ, ನಮ್ಮ ದೇವರ ಉಪದೇಶಕ್ಕೆ ಕಿವಿಗೊಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಸೊದೋವಿುನ ಅಧಿಪತಿಗಳೇ, ಯೆಹೋವನ ಮಾತನ್ನು ಆಲಿಸಿರಿ; ಗೊಮೋರದ ಪ್ರಜೆಗಳೇ, ನಮ್ಮ ದೇವರ ಧರ್ಮೋಪದೇಶವನ್ನು ಕೇಳಿರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಸೊದೋಮಿನ ಅಧಿಪತಿಗಳೇ, ಯೆಹೋವನ ಸಂದೇಶವನ್ನು ಕೇಳಿರಿ. ಗೊಮೋರದ ಜನರೇ, ಆತನ ಉಪದೇಶವನ್ನು ಕೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 1:10
21 ತಿಳಿವುಗಳ ಹೋಲಿಕೆ  

ಈ ಸಾಕ್ಷಿಗಳ ಶವಗಳು ಮಹಾ ಪಟ್ಟಣದ ಬೀದಿಯಲ್ಲಿ ಬಿದ್ದಿರುವವು. ಆ ಪಟ್ಟಣಗಳು ಸಾಂಕೇತಿಕವಾಗಿ ಸೊದೋಮ್ ಹಾಗೂ ಈಜಿಪ್ಟ್ ಎಂದೂ ಹೆಸರುಗಳಿರುವುದು. ಇವರ ಒಡೆಯ ಆಗಿರುವವರನ್ನು ಸಹ ಅಲ್ಲಿಯೇ ಶಿಲುಬೆಗೆ ಹಾಕಲಾಗಿತ್ತು.


“ ‘ಸೊದೋಮ್ ಎಂಬ ನಿನ್ನ ತಂಗಿಯ ಪಾಪವನ್ನು ನೋಡು; ಗರ್ವವ, ಅತಿ ಭೋಜನ, ಸ್ವಾರ್ಥತೆ; ಇವು ಆಕೆಯಲ್ಲಿಯೂ ಆಕೆಯ ಪುತ್ರಿಯರಲ್ಲಿಯೂ ಇದ್ದವು. ಆಕೆಯು ದೀನ ದರಿದ್ರರಿಗೆ ಸಹಾಯ ಮಾಡಲಿಲ್ಲ.


“ಇಸ್ರಾಯೇಲರೇ, ನೀವು ನನಗೆ ಕೂಷ್ಯರ ಮಕ್ಕಳ ಹಾಗಲ್ಲವೇ? ನಾನು ನಿಮ್ಮನ್ನು ಈಜಿಪ್ಟಿನಿಂದಲೂ ಫಿಲಿಷ್ಟಿಯರನ್ನು ಕಫ್ತೋರಿನಿಂದಲೂ ಅರಾಮ್ಯರನ್ನು ಕೀರಿನಿಂದಲೂ ತರಲಿಲ್ಲವೇ?” ಎಂದು ಯೆಹೋವ ದೇವರು ಹೇಳುತ್ತಾರೆ.


ನಿನ್ನ ಉತ್ತರ ದಿಕ್ಕಿನಲ್ಲಿ ಪುತ್ರಿಯರೊಂದಿಗೆ ವಾಸಿಸುವ ಸಮಾರ್ಯವೇ ನಿನ್ನ ಅಕ್ಕ. ದಕ್ಷಿಣ ದಿಕ್ಕಿನಲ್ಲಿ ಪುತ್ರಿಯರೊಂದಿಗೆ ವಾಸಿಸುವ ಸೊದೋಮ್ ನಿನ್ನ ತಂಗಿ.


ಯೆರೂಸಲೇಮಿನ ಪ್ರವಾದಿಗಳಲ್ಲಿ ಭಯಂಕರವಾದದ್ದನ್ನು ನೋಡಿದ್ದೇನೆ. ಅವರು ವ್ಯಭಿಚಾರ ಮಾಡಿ, ಸುಳ್ಳಿನಲ್ಲಿ ನಡೆದುಕೊಂಡದ್ದಲ್ಲದೆ, ದುಷ್ಟರು ತಮ್ಮ ದುಷ್ಟತ್ವವನ್ನು ಬಿಟ್ಟು ತಿರುಗದ ಹಾಗೆ ಅವರ ಕೈಗಳನ್ನು ಬಲಪಡಿಸುತ್ತಾರೆ. ಅವರೆಲ್ಲರೂ ನನಗೆ ಸೊದೋಮಿನ ಹಾಗೆಯೂ, ಅದರ ನಿವಾಸಿಗಳು ಗೊಮೋರದ ಹಾಗೆಯೂ ಇದ್ದಾರೆ.”


ಅವರ ಮುಖಭಾವವೇ ಅವರಿಗೆ ವಿರುದ್ಧವಾಗಿ ಸಾಕ್ಷಿಯಾಗಿದೆ. ತಮ್ಮ ಪಾಪವನ್ನು ಸೊದೋಮಿನಂತೆ ಮರೆಮಾಡದೆ ಪ್ರಕಟ ಮಾಡುತ್ತಾರೆ. ಅವರಿಗೆ ಕಷ್ಟ! ಏಕೆಂದರೆ ತಮಗೆ ತಾವೇ ಕೇಡನ್ನು ಪ್ರತೀಕಾರವಾಗಿ ಮಾಡಿಕೊಂಡಿದ್ದಾರೆ.


ಏಕೆಂದರೆ ಸೊದೋಮಿನ ದ್ರಾಕ್ಷಿಗಿಡದಿಂದಲೂ, ಗೊಮೋರದ ತೋಟದೊಳಗಿಂದಲೂ ಅವರ ದ್ರಾಕ್ಷಿಗಿಡ ಉಂಟಾಯಿತು. ಅವರ ಹಣ್ಣುಗಳು, ವಿಷದ ಹಣ್ಣುಗಳು, ಆ ಹಣ್ಣುಗಳ ಗೊಂಚಲು ಕಹಿಯಾಗಿವೆ.


ಯೆಶಾಯನು ಈ ಹಿಂದೆ, “ಸೇನಾಧೀಶ್ವರರಾದ ದೇವರು ನಮಗೆ ಸಂತತಿಯನ್ನು ಉಳಿಸದೆ ಹೋಗಿದ್ದರೆ, ನಾವು ಸೊದೋಮಿನಂತೆ ಆಗುತ್ತಿದ್ದೆವು, ಗೊಮೋರದ ಹಾಗೆ ಇರುತ್ತಿದ್ದೆವು.” ಎಂದು ಹೇಳಿದ್ದಾನೆ.


ಸಿಂಹವು ಗರ್ಜಿಸಿದರೆ ಭಯಪಡದೆ ಇರುವವರು ಯಾರು? ಸಾರ್ವಭೌಮ ಯೆಹೋವ ದೇವರು ನುಡಿದಿದ್ದಾರೆ, ಅವರ ನುಡಿಯನ್ನು ಪ್ರವಾದಿಸದವರು ಯಾರು?


ಇಸ್ರಾಯೇಲರೇ, ಯೆಹೋವ ದೇವರು ನಿಮಗೆ ವಿರೋಧವಾಗಿ ಹೇಳುವ ವಾಕ್ಯವನ್ನು ಕೇಳಿರಿ. ನಾನು ಈಜಿಪ್ಟ್ ದೇಶದೊಳಗಿಂದ ಕರೆದುತಂದ ಸಮಸ್ತ ಕುಟುಂಬಕ್ಕೆ ಹೇಳುವುದೇನೆಂದರೆ:


ಆದಕಾರಣ ಯೆರೂಸಲೇಮಿನಲ್ಲಿರುವ ಈ ಜನರನ್ನು ಆಳುವ ಹಾಸ್ಯದ ಜನರಾದ ನೀವು ಯೆಹೋವ ದೇವರ ಮಾತನ್ನು ಕೇಳಿರಿ.


ದೇವರ ಶಿಕ್ಷಣ ಮತ್ತು ಎಚ್ಚರಿಸುವ ಸಾಕ್ಷಿಯ ವಿಷಯದಲ್ಲಿ ಈ ವಾಕ್ಯದ ಪ್ರಕಾರ ಒಂದು ವೇಳೆ ಅವರು ಹೇಳದಿದ್ದರೆ, ಅವರಲ್ಲಿ ಮುಂಜಾವಿನ ಬೆಳಕು ಮೂಡಿಬರುವುದಿಲ್ಲ.


ಸೊದೋಮಿನ ಜನರು ದುಷ್ಟರಾಗಿದ್ದರು ಮತ್ತು ಯೆಹೋವ ದೇವರ ವಿರುದ್ಧ ಬಹಳ ಪಾಪಮಾಡುತ್ತಿದ್ದರು.


ಏನೆಂದರೆ ಇವರು ತಿರುಗಿಬೀಳುವ ಜನರೇ. ಸುಳ್ಳಾಡುವ ಮಕ್ಕಳು. ಯೆಹೋವ ದೇವರ ಉಪದೇಶಕ್ಕೆ ಕಿವಿಗೊಡದ ಮಕ್ಕಳೇ.


ಏಕೆಂದರೆ ಯೆಹೋವ ದೇವರು ನಮ್ಮ ನ್ಯಾಯಾಧಿಪತಿಯಾಗಿದ್ದಾರೆ. ಯೆಹೋವ ದೇವರು ನಮಗೆ ಆಜ್ಞೆಕೊಡುವವರು. ಯೆಹೋವ ದೇವರೇ, ನಮ್ಮ ರಾಜ. ಯೆಹೋವ ದೇವರೇ ನಮ್ಮನ್ನು ರಕ್ಷಿಸುವವರು.


“ನರಪುತ್ರನೇ, ಪ್ರವಾದಿಸುತ್ತಿರುವ ಇಸ್ರಾಯೇಲಿನ ಮನೆತನದ ಪ್ರವಾದಿಗಳಿಗೆ ವಿರುದ್ಧವಾಗಿ ನೀನು ಪ್ರವಾದಿಸಿ, ತಮ್ಮ ಸ್ವಂತ ಕಲ್ಪನೆಗಳಿಂದ ಪ್ರವಾದಿಸುತ್ತಿರುವವರಿಗೆ ಹೀಗೆ ಹೇಳು: ‘ಯೆಹೋವ ದೇವರ ವಾಕ್ಯವನ್ನು ಕೇಳಿರಿ;


ಆಗ ನಾನು, “ಯಾಕೋಬಿನ ಮುಖ್ಯಸ್ಥರೇ, ಇಸ್ರಾಯೇಲಿನ ಮನೆತನದ ಪ್ರಧಾನರೇ, ಈಗ ಕೇಳಿರಿ. ನೀವು ನ್ಯಾಯವನ್ನು ಪ್ರೀತಿಸಬಾರದೇ.


“ ‘ಆದಕಾರಣ ವ್ಯಭಿಚಾರಿಣಿಯೇ, ನೀನು ಯೆಹೋವ ದೇವರ ವಾಕ್ಯವನ್ನು ಕೇಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು