Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 1:13 - ಕನ್ನಡ ಸಮಕಾಲಿಕ ಅನುವಾದ

13 ಇನ್ನು ವ್ಯರ್ಥವಾದ ಕಾಣಿಕೆಗಳನ್ನು ತರಬೇಡಿರಿ! ನಿಮ್ಮ ಧೂಪವು ನನಗೆ ಅಸಹ್ಯ. ಅಮಾವಾಸ್ಯೆಗಳು, ಸಬ್ಬತ್ ದಿನಗಳು, ಸಭೆಗಳು ಕೂಡುವುದು ಇವು ಬೇಡ. ದುಷ್ಟತನದಿಂದ ಕೂಡಿದ ವಿಶೇಷ ಕೂಟವನ್ನು ಸಹ ಸಹಿಸಲಾರೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ವ್ಯರ್ಥವಾದ ಕಾಣಿಕೆಗಳನ್ನು ಇನ್ನು ತರಬೇಡಿ; ಧೂಪವು ನನಗೆ ಅಸಹ್ಯ; ಅಮಾವಾಸ್ಯೆ, ಹುಣ್ಣಿಮೆಹಬ್ಬ, ಸಬ್ಬತ್ ದಿನ, ಕೂಟ ಪ್ರಕಟಣೆ ಇವು ಬೇಡ; ಅಧರ್ಮದಿಂದ ಕೂಡಿದ ಸಂಘವನ್ನು ನಾನು ಸಹಿಸಲಾರೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ನಿಮ್ಮ ನೈವೇದ್ಯಗಳನ್ನು ಇನ್ನು ತರಬೇಡಿ, ಅವು ವ್ಯರ್ಥ. ನಿಮ್ಮ ಧೂಪಾರತಿ ನನಗೆ ಅಸಹ್ಯ. ನೀವು ಆಚರಿಸುವ ಹಬ್ಬ ಹುಣ್ಣಿಮೆ, ಸಬ್ಬತ್ ವಿಶ್ರಾಂತಿ, ನಿಮ್ಮ ಸಭೆಕೂಟಗಳು ನನಗೆ ಬೇಡ. ಅಧರ್ಮದಿಂದ ಕೂಡಿದ ಇಂಥ ಸಮಾರಂಭಗಳು ನನಗೆ ಇಷ್ಟವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ವ್ಯರ್ಥನೈವೇದ್ಯವನ್ನು ಇನ್ನು ತಾರದಿರಿ, ಧೂಪವು ನನಗೆ ಅಸಹ್ಯ; ಅಮಾವಾಸ್ಯೆ, ಸಬ್ಬತ್‍ದಿನ, ಕೂಟಪ್ರಕಟನೆ, ಇವು ಬೇಡ; ಅಧರ್ಮದಿಂದ ಕೂಡಿದ ಸಂಘವನ್ನು ನಾನು ಸಹಿಸಲಾರೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 “ನಿಮ್ಮ ಅಯೋಗ್ಯವಾದ ಯಜ್ಞಗಳನ್ನು ನನ್ನ ಬಳಿಗೆ ತರಬೇಡಿ; ನಿಮ್ಮ ಧೂಪವು ನನಗೆ ಅಸಹ್ಯ; ನಿಮ್ಮ ಅಮಾವಾಸ್ಯೆಯನ್ನಾಗಲಿ ಹಬ್ಬವನ್ನಾಗಲಿ ಸಬ್ಬತ್ತನ್ನಾಗಲಿ ನಾನು ಸಹಿಸಲಾರೆ. ನಿಮ್ಮ ಪವಿತ್ರಕೂಟಗಳಲ್ಲಿ ನೀವು ಮಾಡುವ ದುಷ್ಟತನವನ್ನು ನಾನು ಸಹಿಸಲಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 1:13
25 ತಿಳಿವುಗಳ ಹೋಲಿಕೆ  

ಎತ್ತನ್ನು ಕೊಂದುಹಾಕುವವನು ಮನುಷ್ಯನನ್ನು ಹತ್ಯೆ ಮಾಡುವವನ ಹಾಗಿದ್ದಾನೆ. ಕುರಿಮರಿಯನ್ನು ಬಲಿ ಕೊಡುವವನು, ನಾಯಿಯ ಕುತ್ತಿಗೆಯನ್ನು ಕಡಿಯುವವನ ಹಾಗಿದ್ದಾನೆ. ಕಾಣಿಕೆಯನ್ನು ಅರ್ಪಿಸುವವನು, ಹಂದಿಯ ರಕ್ತವನ್ನು ಅರ್ಪಿಸುವವನ ಹಾಗಿದ್ದಾನೆ. ಧೂಪವನ್ನು ಹಾಕುವವನು, ವಿಗ್ರಹವನ್ನು ಪೂಜಿಸುವವನ ಹಾಗಿದ್ದಾನೆ. ಹೀಗೆ, ಅವರು ಸ್ವಂತ ಮಾರ್ಗಗಳನ್ನು ಆಯ್ದುಕೊಂಡಿದ್ದಾರೆ. ಅವರ ಪ್ರಾಣವು ಅವರ ಅಸಹ್ಯಗಳಲ್ಲಿ ಹರ್ಷಿಸುತ್ತವೆ.


“ನನ್ನ ಬಲಿಪೀಠದ ಮೇಲೆ ವ್ಯರ್ಥವಾಗಿ ಬೆಂಕಿ ಹಚ್ಚುವುದಕ್ಕಿಂತ, ಬಾಗಿಲು ಮುಚ್ಚುವುದು ಒಳ್ಳೆಯದು. ನಿಮ್ಮಲ್ಲಿ ನನಗೆ ಇಷ್ಟವಿಲ್ಲ ಮತ್ತು ನಿಮ್ಮ ಕೈಯಿಂದ ನಾನು ಕಾಣಿಕೆಯನ್ನು ಅಂಗೀಕರಿಸುವುದಿಲ್ಲ.


ಅವರು ಮನುಷ್ಯರ ಆಜ್ಞೆಗಳನ್ನು ಉಪದೇಶಗಳನ್ನಾಗಿ ಬೋಧಿಸುವುದರಿಂದ ನನ್ನನ್ನು ಆರಾಧಿಸುವುದು ವ್ಯರ್ಥ.’”


“ ‘ನಿಮ್ಮ ವಿಷಯವಾಗಿ, ಓ ಇಸ್ರಾಯೇಲಿನ ಮನೆತನದವರೇ, ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಹೋಗಿರಿ, ನಿಮ್ಮ ನಿಮ್ಮ ವಿಗ್ರಹಗಳನ್ನು ಸೇವಿಸಿರಿ. ಆದರೆ ನಂತರ ನೀವು ಖಂಡಿತವಾಗಿಯೂ ನನ್ನ ಮಾತನ್ನು ಕೇಳುತ್ತೀರಿ ಮತ್ತು ನಿಮ್ಮ ದಾನಗಳಿಂದಲೂ, ನಿಮ್ಮ ವಿಗ್ರಹಗಳಿಂದಲೂ ಇನ್ನು ಮೇಲೆ ನನ್ನ ಪರಿಶುದ್ಧ ಹೆಸರನ್ನು ಅಪವಿತ್ರಪಡಿಸಬೇಡಿರಿ.


“ಫರಿಸಾಯರೇ, ನಿಮಗೆ ಕಷ್ಟ, ಏಕೆಂದರೆ ನೀವು ಪುದೀನ, ಸದಾಪು ಮತ್ತು ಸಕಲ ವಿಧವಾದ ಸೊಪ್ಪುಗಳಲ್ಲಿ ದಶಮಭಾಗವನ್ನು ಕೊಟ್ಟು, ನ್ಯಾಯವನ್ನೂ ದೇವರ ಪ್ರೀತಿಯನ್ನೂ ಲಕ್ಷಿಸದೆ ಹೋಗುತ್ತೀರಿ. ಅವುಗಳನ್ನು ಮಾಡಿದ ನೀವು ಇವುಗಳನ್ನೂ ಅವಶ್ಯವಾಗಿ ಮಾಡಬೇಕಾಗಿತ್ತು.


ಚೀಯೋನಿನಲ್ಲಿ ಕೊಂಬು ಊದಿರಿ; ಪವಿತ್ರ ಉಪವಾಸವನ್ನು ಸಾರಿರಿ; ಪವಿತ್ರ ಸಭೆಯನ್ನು ಕರೆಯಿರಿ.


ಅವರು ತನ್ನ ಗುಡಾರವನ್ನು ತೋಟದಂತೆ ಬಲಾತ್ಕಾರವಾಗಿ ತೆಗೆದುಹಾಕಿದ್ದಾರೆ. ಅವರು ತನ್ನ ಸಭಾ ಸ್ಥಾನಗಳನ್ನು ನಾಶಮಾಡಿದ್ದಾರೆ. ಯೆಹೋವ ದೇವರು ಚೀಯೋನಿಗೆ ಪವಿತ್ರ ಹಬ್ಬಗಳನ್ನೂ, ಸಬ್ಬತ್ ದಿನಗಳನ್ನೂ ಮರೆತುಬಿಡುವಂತೆ ಮಾಡಿದ್ದಾರೆ. ತನ್ನ ಕೋಪದ ಉರಿಯಲ್ಲಿ ಅರಸನನ್ನೂ, ಯಾಜಕನನ್ನೂ ತುಚ್ಛೀಕರಿಸಿದ್ದಾರೆ.


ದೇವರ ಪವಿತ್ರಾತ್ಮರನ್ನು ದುಃಖ ಪಡಿಸಬೇಡಿರಿ. ಆ ಆತ್ಮನಲ್ಲಿಯೇ ವಿಮೋಚನೆಯ ದಿನಕ್ಕಾಗಿ ಮುದ್ರೆ ಹೊಂದಿದ್ದೀರಲ್ಲಾ.


ನಿಮ್ಮನ್ನು ಹೊಗಳುವುದಕ್ಕಾಗಿ ಈ ಮಾರ್ಗದರ್ಶನಗಳನ್ನು ನಾನು ನಿಮಗೆ ತಿಳಿಸುತ್ತಾಯಿಲ್ಲ. ಏಕೆಂದರೆ, ನಿಮ್ಮ ಕೂಟಗಳಿಂದ ಮೇಲಾಗುವುದಕ್ಕಿಂತ ಹೆಚ್ಚು ಕೇಡಾಗುತ್ತಲಿದೆ.


ಪವಿತ್ರ ಉಪವಾಸವನ್ನು ಘೋಷಿಸಿರಿ. ಪವಿತ್ರ ಸಭೆಯನ್ನು ಕರೆಯಿರಿ. ಹಿರಿಯರನ್ನೂ ದೇಶದ ನಿವಾಸಿಗಳೆಲ್ಲರನ್ನೂ ನಿಮ್ಮ ಯೆಹೋವ ದೇವರ ಆಲಯದಲ್ಲಿ ಕೂಡಿಸಿ, ಯೆಹೋವ ದೇವರಿಗೆ ಮೊರೆಯಿಡಿರಿ.


ದುಷ್ಟರ ಯಜ್ಞವು ಅಸಹ್ಯ; ಅದನ್ನು ದುರ್ಬುದ್ಧಿಯಿಂದ ಅರ್ಪಿಸಿದರೆ, ಇನ್ನೂ ಎಷ್ಟೋ ಅಸಹ್ಯಕರ.


ಎಷ್ಟೋ ಸಾರಿ ಜನರು ಮರುಭೂಮಿಯಲ್ಲಿ ದೇವರಿಗೆ ಬೇಸರಮಾಡಿದರು. ಕಾಡಿನಲ್ಲಿ ದೇವರನ್ನು ದುಃಖಪಡಿಸಿದರು.


ಯೆಹೋವ ದೇವರ ಮುಂದೆ ನಿರಂತರವಾಗಿ ಅವರಿಗೆ ಆಜ್ಞಾಪಿಸಿದ ಕಟ್ಟಳೆಯ ಪ್ರಕಾರವಾಗಿ ಸಬ್ಬತ್ ದಿನಗಳಲ್ಲಿಯೂ ಅಮಾವಾಸ್ಯೆಗಳಲ್ಲಿಯೂ ನೇಮಕವಾದ ಹಬ್ಬಗಳಲ್ಲಿಯೂ ಲೆಕ್ಕದ ಪ್ರಕಾರ ಎಲ್ಲಾ ದಹನಬಲಿಗಳನ್ನು ಅರ್ಪಿಸುವುದು.


ಇದಲ್ಲದೆ ಮೊದಲನೆಯ ದಿನದಲ್ಲಿ ಪರಿಶುದ್ಧ ದೇವಾರಾಧನೆಗಾಗಿ ಸಭೆ ಸೇರಬೇಕು, ಏಳನೆಯ ದಿನದಲ್ಲಿ ದೇವಾರಾಧನೆಗಾಗಿ ಸಭೆ ಸೇರಬೇಕು. ಊಟಕ್ಕೆ ಬೇಕಾದದ್ದನ್ನು ಮಾಡುವುದನ್ನು ಬಿಟ್ಟು, ಆ ದಿನಗಳಲ್ಲಿ ಯಾವ ತರವಾದ ಕೆಲಸವನ್ನೂ ಮಾಡಬಾರದು.


ಕೆಲವರು ಅಸೂಯೆಯಿಂದಲೂ ಸ್ಪರ್ಧೆಯ ಮನೋಭಾವನೆಯಿಂದಲೂ ಕ್ರಿಸ್ತನನ್ನು ಸಾರುವುದು ನಿಜ. ಆದರೆ ಇತರರು ಒಳ್ಳೆಯ ಮನೋಭಾವದಿಂದ ಕ್ರಿಸ್ತ ಯೇಸುವನ್ನು ಸಾರುತ್ತಿದ್ದಾರೆ.


“ನಕ್ಷೆಯ ಕೆಲಸದಿಂದ ಹೊಡೆದು ಮಾಡಿದ ಬೆಳ್ಳಿಯ ತಗಡಿನ ಎರಡು ತುತೂರಿಗಳನ್ನು ನೀನು ಮಾಡಿಸಬೇಕು. ಸಭೆಯನ್ನು ಕರೆಯುವುದಕ್ಕಾಗಿಯೂ, ಪಾಳೆಯಗಳ ಪ್ರಯಾಣಕ್ಕಾಗಿಯೂ ನೀನು ಅವುಗಳನ್ನು ಉಪಯೋಗಿಸಬೇಕು.


ಇದಾದ ಮೇಲೆ, “ಪ್ರತಿಯೊಂದು ಅಮಾವಾಸ್ಯೆಯಲ್ಲಿಯೂ ಒಂದೊಂದು ಸಬ್ಬತ್ ದಿನದಲ್ಲಿಯೂ ಮನುಷ್ಯರೆಲ್ಲಾ ನನ್ನ ಮುಂದೆ ಆರಾಧಿಸುವುದಕ್ಕೆ ಬರುವರು” ಎಂದು ಯೆಹೋವ ದೇವರು ಹೇಳುತ್ತಾರೆ.


ನಾನು ಅವಳಿಗೆ ಉಲ್ಲಾಸಕರವಾದ ಅವಳ ಹಬ್ಬ, ಅವಳ ಅಮಾವಾಸ್ಯೆ, ಅವಳ ಸಬ್ಬತ್ ದಿನದ ಆಚರಣೆ, ಅವಳ ಸಭಾ ಸಮಾರಂಭ ಇವುಗಳನ್ನೆಲ್ಲಾ ನಿಲ್ಲಿಸಿಬಿಡುವೆನು.


ನಿಮ್ಮ ಪಟ್ಟಣಗಳನ್ನು ನಾನು ಕೆಡವಿಹಾಕಿ, ನಿಮ್ಮ ಪರಿಶುದ್ಧ ಸ್ಥಳಗಳನ್ನು ಹಾಳು ಮಾಡಿ, ನಿಮ್ಮ ಸುವಾಸನೆಗಳನ್ನು ಮೂಸಿ ನೋಡದೆ ಇರುವೆನು.


ಅದಕ್ಕೆ ಅವನು, “ಇದು ಅಮಾವಾಸ್ಯೆ ಅಲ್ಲ, ಸಬ್ಬತ್ ದಿನವೂ ಅಲ್ಲ. ನೀನು ಏಕೆ ಈ ಹೊತ್ತು ಅವನ ಬಳಿಗೆ ಹೋಗುತ್ತೀ?” ಎಂದನು. ಅದಕ್ಕವಳು, “ಅಡ್ಡಿಯೇನಿಲ್ಲ,” ಎಂದಳು.


“ಈ ದಿವಸ ನನ್ನ ಹರಕೆಗಳನ್ನು ನಾನು ಸಲ್ಲಿಸಿದ್ದೇನೆ. ನಾನು ನನ್ನ ಸಮಾಧಾನದ ಯಜ್ಞವನ್ನು ಅರ್ಪಿಸಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು