Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 1:17 - ಕನ್ನಡ ಸಮಕಾಲಿಕ ಅನುವಾದ

17 ಒಳ್ಳೆಯದನ್ನು ಮಾಡಲು ಕಲಿತುಕೊಳ್ಳಿರಿ. ನ್ಯಾಯವನ್ನು ಹುಡುಕಿರಿ. ಹಿಂಸೆಪಡುವವರನ್ನು ಉಪಚರಿಸಿರಿ. ಅನಾಥರಿಗೆ ನ್ಯಾಯತೀರಿಸಿರಿ. ವಿಧವೆಯರ ಪರವಾಗಿ ವಾದಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಸದಾಚಾರವನ್ನು ಅಭ್ಯಾಸ ಮಾಡಿಕೊಳ್ಳಲು ಕಲಿಯಿರಿ, ನ್ಯಾಯವನ್ನು ಅನುಸರಿಸಿ ನಡೆಯಿರಿ. ಹಿಂಸೆಗೆ ಒಳಗಾದವನಿಗೆ ಸಹಾಯಮಾಡಿರಿ. ಅನಾಥನಿಗೆ ನ್ಯಾಯತೀರಿಸಿರಿ. ವಿಧವೆಯ ಪಕ್ಷವಾಗಿ ವಾದಿಸಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಕೇಡನ್ನು ಬಿಟ್ಟು ಒಳಿತನ್ನು ಕೈಗೊಳ್ಳಿರಿ. ನ್ಯಾಯನೀತಿಗಳಲ್ಲಿ ನಿರತರಾಗಿರಿ. ಹಿಂಸಾತ್ಮಕರನ್ನು ತಿದ್ದಿ ಸರಿಪಡಿಸಿರಿ. ಅನಾಥರಿಗೆ ನ್ಯಾಯ ದೊರಕಿಸಿರಿ. ವಿಧವೆಯರ ಪರವಾಗಿ ವಾದಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಸದಾಚಾರವನ್ನು ಅಭ್ಯಾಸಮಾಡಿರಿ; ನ್ಯಾಯನಿರತರಾಗಿರಿ, ಹಿಂಸಕನನ್ನು ತಿದ್ದಿ ಸರಿಪಡಿಸಿರಿ, ಅನಾಥನಿಗೆ ನ್ಯಾಯತೀರಿಸಿರಿ, ವಿಧವೆಯ ಪಕ್ಷವಾಗಿ ವಾದಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಒಳ್ಳೆಯದನ್ನೇ ಮಾಡಲು ಅಭ್ಯಾಸಮಾಡಿಕೊಳ್ಳಿರಿ. ಬೇರೆಯವರೊಂದಿಗೆ ನ್ಯಾಯವಂತರಾಗಿರಿ; ಕೆಡುಕರಿಗೆ ದಂಡನೆ ವಿಧಿಸಿರಿ; ಅನಾಥರಿಗೆ ಸಹಾಯಮಾಡಿರಿ; ವಿಧವೆಯರಿಗೂ ಸಹಾಯಮಾಡಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 1:17
24 ತಿಳಿವುಗಳ ಹೋಲಿಕೆ  

ಮನುಷ್ಯನೇ, ಒಳ್ಳೆಯದೇನೆಂದು ನಿನಗೆ ದೇವರು ತೋರಿಸಿದ್ದಾರೆ. ಹೌದು, ನ್ಯಾಯವನ್ನು ಕೈಗೊಳ್ಳುವದೂ ಕರುಣೆಯನ್ನು ಪ್ರೀತಿಸುವುದೂ ನಿನ್ನ ದೇವರ ಮುಂದೆ ನಮ್ರನಾಗಿ ನಡೆದುಕೊಳ್ಳುವದೂ ಇದನ್ನೇ ಹೊರತು ಯೆಹೋವ ದೇವರು ನಿನ್ನಿಂದ ಇನ್ನೇನನ್ನು ಅಪೇಕ್ಷಿಸುತ್ತಾರೆ?


ಯೆಹೋವ ದೇವರು ಹೇಳುವುದೇನೆಂದರೆ: ನ್ಯಾಯವನ್ನೂ, ನೀತಿಯನ್ನೂ ನಡೆಸಿರಿ. ಸುಲಿಗೆಯಾದವನನ್ನು ಬಲಾತ್ಕಾರಿಯ ಕೈಯೊಳಗಿಂದ ತಪ್ಪಿಸಿರಿ. ಪರದೇಶಸ್ಥನಿಗೆ, ದಿಕ್ಕಿಲ್ಲದವನಿಗೆ ಮತ್ತು ವಿಧವೆಗೆ ಉಪದ್ರವವನ್ನಾದರೂ, ಬಲಾತ್ಕಾರವನ್ನಾದರೂ ಮಾಡಬೇಡಿರಿ. ಈ ಸ್ಥಳದಲ್ಲಿ ನಿರಪರಾಧದ ರಕ್ತವನ್ನು ಚೆಲ್ಲಬೇಡಿರಿ.


ನಿನ್ನ ಪ್ರಭುಗಳು ಎದುರುಬೀಳುವವರೂ, ಕಳ್ಳರ ಜೊತೆಗಾರರೂ ಆಗಿದ್ದಾರೆ. ಪ್ರತಿಯೊಬ್ಬನೂ ಲಂಚ ಪ್ರಿಯನೂ, ಬಹುಮಾನಗಳನ್ನು ಅಪೇಕ್ಷಿಸುವವನೂ ಆಗಿದ್ದಾನೆ. ಅವರು ಅನಾಥರಿಗೆ ನ್ಯಾಯತೀರಿಸರು, ಇಲ್ಲವೆ ವಿಧವೆಯರ ವ್ಯಾಜ್ಯವು ಅವರ ಬಳಿಗೆ ಬರುವುದಿಲ್ಲ.


ಅವರ ಪರವಾಗಿ ಮಾತನಾಡಿ, ನೀತಿನ್ಯಾಯವನ್ನು ಸ್ಥಾಪಿಸು. ಬಡವರಿಗಾಗಿಯೂ ದಿಕ್ಕಿಲ್ಲದವರಿಗಾಗಿಯೂ ಹಕ್ಕುಬಾಧ್ಯತೆಯನ್ನು ಕಾಪಾಡು.


ನೀವು ಮಾಡತಕ್ಕ ಕಾರ್ಯಗಳು ಇವೇ: ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನೇ ಮಾತನಾಡಲಿ. ನಿಮ್ಮ ನ್ಯಾಯಾಲಯಗಳಲ್ಲಿ ಸತ್ಯವೂ ನ್ಯಾಯವೂ ಶಾಂತಿಯ ಸಾಧನವಾಗಿರಲಿ.


ದೇಶದ ದೀನರೇ, ಅವರ ಆಜ್ಞೆಗಳನ್ನು ಕೈಕೊಂಡು ನಡೆಯುವವರೆಲ್ಲರೇ ಯೆಹೋವ ದೇವರನ್ನು ಹುಡುಕಿರಿ. ನೀತಿಯನ್ನು ಹುಡುಕಿರಿ, ವಿನಯವನ್ನು ಹುಡುಕಿರಿ. ಒಂದು ವೇಳೆ ಯೆಹೋವ ದೇವರ ಕೋಪದ ದಿವಸದಲ್ಲಿ ಆಶ್ರಯ ಹೊಂದುವಿರಿ.


ಆದ್ದರಿಂದ ಅರಸನೇ, ನನ್ನ ಆಲೋಚನೆಯು ನಿನಗೆ ಸರಿಯಾದದ್ದಾಗಿರಲಿ. ಸರಿಯಾದದ್ದನ್ನು ಮಾಡುವುದರಿಂದ ನಿನ್ನ ಪಾಪಗಳನ್ನು ಬಿಟ್ಟುಬಿಡು. ದಬ್ಬಾಳಿಕೆಯಾದವರಿಗೆ ದಯೆ ತೋರುವುದರಿಂದ ನಿನ್ನ ದುಷ್ಟತ್ವವನ್ನು ಬಿಟ್ಟುಬಿಡು. ಹೀಗಾದರೆ ಒಂದು ವೇಳೆ ನಿನ್ನ ಸಮೃದ್ಧಿ ಮುಂದುವರಿಯುವುದು.”


ದಿಕ್ಕಿಲ್ಲದವರನ್ನೂ ವಿಧವೆಯರನ್ನೂ ಅವರ ಸಂಕಟದಲ್ಲಿ ಪರಾಮರಿಸಿ, ತನಗೆ ಪ್ರಪಂಚದ ದೋಷವು ಹತ್ತದಂತೆ ನೋಡಿಕೊಂಡಿರುವುದೇ ತಂದೆ ದೇವರ ಸನ್ನಿಧಾನದಲ್ಲಿ ಶುದ್ಧವೂ ನಿರ್ದೋಷವೂ ಆಗಿರುವ ಭಕ್ತಿ.


ಆಗ ನಿಮ್ಮ ಸಂಗಡ ಪಾಲನ್ನೂ, ಸೊತ್ತನ್ನೂ ಹೊಂದದ ಲೇವಿಯರೂ, ನಿಮ್ಮ ಊರಲ್ಲಿರುವ ಅನ್ಯದೇಶದವರೂ, ದಿಕ್ಕಿಲ್ಲದವರೂ, ವಿಧವೆಯರೂ ಬಂದು ತಿಂದು ತೃಪ್ತರಾಗಲಿ. ಆಗ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನೂ, ನೀವು ಮಾಡುವ ಎಲ್ಲಾ ಪ್ರಯತ್ನಗಳನ್ನೂ ಆಶೀರ್ವದಿಸುವರು.


ಕೇಡಿನಿಂದ ತೊಲಗಿ ಒಳ್ಳೆಯದನ್ನು ಮಾಡು; ಸಮಾಧಾನವನ್ನು ಹುಡುಕಿ ಅದನ್ನು ಹಿಂಬಾಲಿಸು.


ಯೆಹೋವ ದೇವರು ಹೇಳುವುದೇನೆಂದರೆ: “ನ್ಯಾಯವನ್ನು ಕೈಗೊಳ್ಳಿರಿ, ನೀತಿಯಲ್ಲಿ ನಡೆಯಿರಿ. ಏಕೆಂದರೆ ನನ್ನ ರಕ್ಷಣೆಯು ಬರುವುದಕ್ಕೂ, ನನ್ನ ನೀತಿಯು ಪ್ರಕಟವಾಗುವುದಕ್ಕೂ ಸಮೀಪವಾಗಿದೆ.


“ನಾನು ಆಯ್ದುಕೊಳ್ಳುವ ಉಪವಾಸವು ಅನ್ಯಾಯದ ಸರಪಣಿಯನ್ನು ಬಿಚ್ಚುವುದೂ, ಭಾರವಾದ ಹೊರೆಯನ್ನು ಬಿಚ್ಚುವುದೂ, ದಬ್ಬಾಳಿಕೆಯಾದವರನ್ನು ಬಿಡಿಸುವುದೂ, ನೊಗಗಳನ್ನೆಲ್ಲಾ ಮುರಿದುಹಾಕುವುದೂ, ಇವೇ ಅಲ್ಲವೋ?


ದಾವೀದನ ಮನೆಯವರೇ, ಯೆಹೋವ ದೇವರು ಹೇಳುವುದೇನೆಂದರೆ, “ ‘ಬೆಳಿಗ್ಗೆ ನ್ಯಾಯತೀರಿಸಿರಿ, ಸುಲಿಗೆಯಾದವನನ್ನು ಬಲಾತ್ಕಾರಿಯ ಕೈಯೊಳಗಿಂದ ತಪ್ಪಿಸಿರಿ. ಇಲ್ಲದಿದ್ದರೆ ನನ್ನ ಕೋಪವು ಬೆಂಕಿಯ ಹಾಗೆ ಹೊರಟು, ನಿಮ್ಮ ಕ್ರಿಯೆಗಳ ಕೆಟ್ಟತನದ ನಿಮಿತ್ತ ಯಾರೂ ಆರಿಸಲಾಗದ ಹಾಗೆ ಉರಿಯುವುದು.


ಇದಲ್ಲದೆ, ನಾನು ನನ್ನ ದಾಸರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ನಿರಂತರವಾಗಿ ಕಳುಹಿಸುತ್ತಾ ಬಂದೆ. “ನೀವೆಲ್ಲರೂ ನಿಮ್ಮ ನಿಮ್ಮ ದುರ್ಮಾರ್ಗಗಳಿಂದ ಹಿಂದಿರುಗಿ, ನಿಮ್ಮ ನಡತೆಗಳನ್ನು ಸರಿಪಡಿಸಿಕೊಳ್ಳಿರಿ. ಅನ್ಯದೇವತೆಗಳನ್ನು ಹಿಂಬಾಲಿಸಿ ಪೂಜಿಸದಿರಿ. ಹಾಗೆ ಮಾಡಿದರೆ ನಾನು ನಿಮಗೂ, ನಿಮ್ಮ ಪೂರ್ವಜರಿಗೂ ಅನುಗ್ರಹಿಸಿದ ನಾಡಿನಲ್ಲಿ ವಾಸಿಸುವಿರಿ ಎಂದು ಅವರ ಮುಖಾಂತರ ಎಚ್ಚರಿಸಿದೆ.” ಆದರೆ ನೀವು ಕೇಳಲಿಲ್ಲ. ಕಿವಿಗೊಡಲೂ ಇಲ್ಲ.


ನೀವು ಮಾಡುವ ದುಷ್ಕೃತ್ಯಗಳನ್ನೆಲ್ಲಾ ನಿಮ್ಮಿಂದ ಎಸೆದುಬಿಡಿರಿ. ಹೊಸ ಹೃದಯವನ್ನೂ, ಹೊಸ ಆತ್ಮವನ್ನೂ ನೀವು ಪಡೆದುಕೊಳ್ಳಿರಿ. ಇಸ್ರಾಯೇಲಿನ ಮನೆತನದವರೇ, ನೀವು ಸಾಯುವುದೇಕೆ?


“ಪರದೇಶಸ್ಥನನ್ನು ಉಪದ್ರವ ಪಡಿಸಬೇಡಿರಿ ಮತ್ತು ಬಾಧಿಸಲೂ ಬೇಡಿರಿ. ಏಕೆಂದರೆ ನೀವು ಈಜಿಪ್ಟ್ ದೇಶದಲ್ಲಿ ಪರದೇಶಿಗಳಾಗಿದ್ದೀರಿ.


ಯೆಹೋವ ದೇವರು ಗರ್ವಿಷ್ಠರ ಮನೆಯನ್ನು ಕೆಡವಿಬಿಡುವರು, ಆದರೆ ವಿಧವೆಯರ ಮೇರೆಯನ್ನು ಅವರು ನೆಲೆಗೊಳಿಸುವರು.


ಯಜ್ಞಕ್ಕಿಂತ ನೀತಿ ನ್ಯಾಯಗಳನ್ನು ನಡೆಸುವುದು ಯೆಹೋವ ದೇವರಿಗೆ ಎಷ್ಟೋ ಮೆಚ್ಚಿಗೆಯಾಗಿದೆ.


ಇವರು ವಿಧವೆಯರನ್ನು ಸೂರೆಮಾಡಿ, ದಿಕ್ಕಿಲ್ಲದವರಿಂದ ಸುಲಿದುಕೊಂಡು ದೀನರಿಗೆ ನ್ಯಾಯವನ್ನು ತಪ್ಪಿಸಿ, ನನ್ನ ಜನರಲ್ಲಿ ಬಡವರ ನ್ಯಾಯವನ್ನು ತೆಗೆಯಬೇಕೆಂದಿದ್ದಾರೆ.


ನಿನ್ನಲ್ಲಿ ತಂದೆಯನ್ನೂ, ತಾಯಿಯನ್ನೂ ಅಲಕ್ಷ್ಯ ಮಾಡಿದ್ದಾರೆ. ನಿನ್ನಲ್ಲಿ ಅಪರಿಚಿತರಿಗೆ ಬಲಾತ್ಕಾರ ಮಾಡಿದ್ದಾರೆ. ನಿನ್ನಲ್ಲಿ ದಿಕ್ಕಿಲ್ಲದವನನ್ನೂ, ವಿಧವೆಯನ್ನೂ ಪೀಡಿಸಿದ್ದಾರೆ.


“ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಸ್ರಾಯೇಲಿನ ಪ್ರಭುಗಳೇ, ನೀವು ಸಾಕುಮಾಡಿರಿ, ಬಲಾತ್ಕಾರವನ್ನೂ ಸುಲಿಗೆಯನ್ನೂ ಬಿಡಿರಿ. ನ್ಯಾಯವನ್ನೂ ನೀತಿಯನ್ನೂ ನಡೆಸಿರಿ. ನನ್ನ ಜನರನ್ನು ಓಡಿಸಬೇಡಿರಿ ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು