ಯೆಶಾಯ 1:18 - ಕನ್ನಡ ಸಮಕಾಲಿಕ ಅನುವಾದ18 “ಈಗ ಬನ್ನಿರಿ, ನಾವು ಒಟ್ಟಾಗಿ ವಾದಿಸೋಣ,” ಎಂದು ಯೆಹೋವ ದೇವರು ಹೇಳುತ್ತಾರೆ. “ನಿಮ್ಮ ಪಾಪಗಳು ಕಡುಕೆಂಪಾಗಿದ್ದರೂ ಹಿಮದಂತೆ ಬೆಳ್ಳಗಾಗುವುವು. ರಕ್ತದಂತೆ ಕಡುಕೆಂಪಾಗಿದ್ದರೂ ಉಣ್ಣೆಯಂತೆ ಆಗುವುವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 “ಬನ್ನಿರಿ ವಾದಿಸುವ” ಎಂದು ಯೆಹೋವನು ಅನ್ನುತ್ತಾನೆ. “ನಿಮ್ಮ ಪಾಪಗಳು ಕಡುಕೆಂಪಾಗಿದ್ದರೂ, ಹಿಮದ ಹಾಗೆ ಬಿಳುಪಾಗುವವು. ಕಿರಮಂಜಿ ಬಣ್ಣವಾಗಿದ್ದರೂ ಉಣ್ಣೆಯಂತೆ ಬೆಳ್ಳಗಾಗುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಸರ್ವೇಶ್ವರಸ್ವಾಮಿ ಇಂತೆನ್ನುತ್ತಾರೆ: “ಬನ್ನಿರಿ, ಈಗ ವಾದಿಸೋಣ. ನಿಮ್ಮ ಪಾಪಗಳು ಕಡುಗೆಂಪಾಗಿದ್ದರೂ ಹಿಮದಂತೆ ಬಿಳುಪಾಗುವುವು. ರಕ್ತಗೆಂಪಾಗಿದ್ದರೂ ಉಣ್ಣೆಯಂತೆ ಬೆಳ್ಳಗಾಗುವುವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಬನ್ನಿರಿ ವಾದಿಸುವ ಎಂದು ಯೆಹೋವನು ಅನ್ನುತ್ತಾನೆ; ನಿಮ್ಮ ಪಾಪಗಳು ಕಡು ಕೆಂಪಾಗಿದ್ದರೂ ಹಿಮದ ಹಾಗೆ ಬಿಳುಪಾಗುವವು; ಕಿರಮಂಜಿಬಣ್ಣವಾಗಿದ್ದರೂ ಉಣ್ಣೆಯಂತೆ ಬೆಳ್ಳಗಾಗುವವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಯೆಹೋವನು ಹೀಗೆನ್ನುತ್ತಾನೆ: “ಬನ್ನಿರಿ, ನಾವು ಚರ್ಚೆ ಮಾಡೋಣ. ನಿಮ್ಮ ಪಾಪಗಳು ಕಡುಕೆಂಪಾಗಿದ್ದರೂ ಅವುಗಳನ್ನು ತೊಳೆದಾಗ ನೀವು ಹಿಮದಂತೆ ಬಿಳುಪಾಗುವಿರಿ. ನಿಮ್ಮ ಪಾಪಗಳು ಕಿರಮಂಜಿಬಣ್ಣವಾಗಿದ್ದರೂ ನೀವು ಉಣ್ಣೆಯಂತೆ ಬೆಳ್ಳಗಾಗುವಿರಿ. ಅಧ್ಯಾಯವನ್ನು ನೋಡಿ |