ಯೆಶಾಯ 1:26 - ಕನ್ನಡ ಸಮಕಾಲಿಕ ಅನುವಾದ26 ನಿನ್ನ ನ್ಯಾಯಾಧಿಪತಿಗಳನ್ನು ಮುಂಚಿನ ಹಾಗೆಯೂ, ನಿನ್ನ ಆಲೋಚನಾಪರರನ್ನು ಪ್ರಾರಂಭದಲ್ಲಿದ್ದ ಹಾಗೆಯೂ ತಿರುಗಿ ಒದಗಿಸಿ ಕೊಡುವೆನು. ತರುವಾಯ ನೀನು ನೀತಿಯುಳ್ಳ ಪಟ್ಟಣವೆಂದೂ, ನಂಬಿಗಸ್ತಿಕೆಯ ಪಟ್ಟಣವೆಂದೂ ಎನಿಸಿಕೊಳ್ಳುವೆ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಪೂರ್ವದಲ್ಲಿ ನಿನಗಿದ್ದ ನ್ಯಾಯಾಧಿಪತಿಗಳನ್ನು, ಮಂತ್ರಾಲೋಚಕರನ್ನು ಪುನಃ ಒದಗಿಸಿಕೊಡುವೆನು. ಆ ಮೇಲೆ ನೀನು ಸದಾಚಾರದ ನಗರಿ ಎಂತಲೂ, ಸ್ವಾಮಿ ನಿಷ್ಠೆಯುಳ್ಳ ನಗರಿ ಎಂತಲೂ ಕರೆಯಲ್ಪಡುವಿ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಪೂರ್ವದಲ್ಲಿದ್ದಂತೆ ನಿಮಗೆ ನ್ಯಾಯಾಧಿಪತಿಗಳನ್ನೂ ಮಂತ್ರಿಗಳನ್ನೂ ಮತ್ತೆ ನೇಮಿಸುವೆನು. ಆಗ ಜೆರುಸಲೇಮ್ ‘ಧರ್ಮಪುರಿ’, ‘ಸುವ್ರತನಗರಿ’ ಎನಿಸಿಕೊಳ್ಳುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಪೂರ್ವದಲ್ಲಿ ನಿನಗಿದ್ದಂಥ ನ್ಯಾಯಾಧಿಪತಿಗಳನ್ನೂ ಮಂತ್ರಾಲೋಚಕರನ್ನೂ ಪುನಃ ಒದಗಿಸಿಕೊಡುವೆನು; ಆಮೇಲೆ ನೀನು ಧರ್ಮಪುರಿ ಎಂತಲೂ ಸುವ್ರತನಗರಿ ಎಂತಲೂ ಅನ್ನಿಸಿಕೊಳ್ಳುವಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಆರಂಭದಲ್ಲಿ ನಿಮಗಿದ್ದಂತಹ ನ್ಯಾಯಾಧೀಶರನ್ನು ನಾನು ತಿರುಗಿ ಬರಮಾಡುವೆನು. ನಿಮ್ಮ ಸಲಹೆಗಾರರು ಹಿಂದಿನ ಕಾಲದ ಸಲಹೆಗಾರರಂತೆ ಇರುವರು. ಆಗ ನೀನು ‘ನ್ಯಾಯವಾದ ಮತ್ತು ನಂಬಿಗಸ್ತಿಕೆಯುಳ್ಳ ಪಟ್ಟಣ’ವೆಂದು ಕರೆಯಲ್ಪಡುವೆ.” ಅಧ್ಯಾಯವನ್ನು ನೋಡಿ |
ಹರ್ಷಧ್ವನಿ, ಉಲ್ಲಾಸ, ಕೋಲಾಹಲ, ವಧೂವರರ ಸ್ವರ ಮತ್ತು ಹಾಡುತ್ತಾ ಕೃತಜ್ಞತಾ ಬಲಿಯನ್ನು ಯೆಹೋವ ದೇವರ ಆಲಯಕ್ಕೆ ತರುವವರ ಸ್ವರ ಹೀಗೆ ಹೇಳುವವು, “ ‘ “ಸೇನಾಧೀಶ್ವರ ಯೆಹೋವ ದೇವರಿಗೆ ಕೃತಜ್ಞತಾ ಸ್ತೋತ್ರಮಾಡಿರಿ, ಏಕೆಂದರೆ ಯೆಹೋವ ದೇವರು ಒಳ್ಳೆಯವರು. ಆತನ ಪ್ರೀತಿ ಶಾಶ್ವತವಾಗಿರುತ್ತದೆ.” ಏಕೆಂದರೆ ನಾನು ಈ ದೇಶದ ಸಮೃದ್ಧಿಯನ್ನು ಮೊದಲಿನಂತೆ ಪುನಃಸ್ಥಾಪಿಸುವೆನು,’ ಎಂದು ಯೆಹೋವ ದೇವರು ಹೇಳುತ್ತಾರೆ.