Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 1:27 - ಕನ್ನಡ ಸಮಕಾಲಿಕ ಅನುವಾದ

27 ಚೀಯೋನ್ ಪಟ್ಟಣವು ನ್ಯಾಯತೀರ್ಪಿನಿಂದಲೂ, ನೀತಿ ನಂಬಿಕೆಯಿಂದ ಪಶ್ಚಾತ್ತಾಪ ಹೊಂದಿದ ಆಕೆಯ ಜನರೂ ಬಿಡುಗಡೆಯಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಚೀಯೋನ್ ನ್ಯಾಯತೀರ್ಪಿನಿಂದಲೂ, ನೀತಿ ನಂಬಿಕೆಯಿಂದ ಪಶ್ತಾತ್ತಾಪ ಹೊಂದಿದ ಆಕೆಯ ಜನರೂ ಬಿಡುಗಡೆಯಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಸಿಯೋನಿನ ಉದ್ಧಾರ ನ್ಯಾಯನೀತಿಯಿಂದ; ಅದಕ್ಕೆ ಹಿಂದಿರುಗುವವರ ಉದ್ಧಾರ ಸತ್ಸಂಬಂಧದಿಂದ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಚೀಯೋನ್ ಪಟ್ಟಣಕ್ಕೆ [ನನ್ನ] ನ್ಯಾಯದ ಮೂಲಕವೂ ದೇಶಾಂತರದಿಂದ ಬಿಡುಗಡೆಯಾಗಿ ಬರುವ ಅದರ ಪ್ರಜೆಗಳಿಗೆ [ನನ್ನ] ಧರ್ಮದ ಮೂಲಕವೂ ವಿಮೋಚನೆಯಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ದೇವರು ಒಳ್ಳೆಯವನು; ನ್ಯಾಯವನ್ನೇ ಮಾಡುವವನು; ಆತನು ಚೀಯೋನನ್ನೂ ತನ್ನ ಬಳಿಗೆ ಬರುವ ಜನರನ್ನೂ ರಕ್ಷಿಸಿ ಕಾಪಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 1:27
18 ತಿಳಿವುಗಳ ಹೋಲಿಕೆ  

ಏಕೆಂದರೆ ಮುಯ್ಯಿಗೆ ಮುಯ್ಯಿ ತೀರಿಸುವ ದಿವಸವು ನನ್ನ ಹೃದಯದಲ್ಲಿದೆ. ನಾನು ವಿಮೋಚಿಸಿದವರ ವರುಷವು ಬಂತು.


ಆಗ ಅವರು, ಪರಿಶುದ್ಧ ಜನರೂ, ಯೆಹೋವ ದೇವರು ವಿಮೋಚಿಸಿದವರೂ ಎಂದು ಎನಿಸಿಕೊಳ್ಳುವರು ನಿನಗೆ ಹುಡುಕಿದ ಹಾಗೂ ಕೈ ಬಿಡದ ಪಟ್ಟಣ, ಎಂದು ಹೆಸರು ಬರುವುದು.


ಆದರೆ ಸೇನಾಧೀಶ್ವರ ಯೆಹೋವ ದೇವರು ನ್ಯಾಯತೀರ್ಪಿನಲ್ಲಿ ಉನ್ನತವಾಗಿರುವರು. ಪರಿಶುದ್ಧ ದೇವರು ತಮ್ಮ ನ್ಯಾಯದಲ್ಲಿ ಪರಿಶುದ್ಧರೆಂದು ಕಾಣಿಸಿಕೊಳ್ಳುವರು.


ಕ್ರಿಸ್ತ ಯೇಸು ನಮ್ಮನ್ನು ಎಲ್ಲಾ ದುಷ್ಟತನದಿಂದ ವಿಮೋಚಿಸಿ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಂತ ಜನರನ್ನು ತಮಗಾಗಿ ಪರಿಶುದ್ಧ ಮಾಡುವಂತೆ ನಮಗೋಸ್ಕರ ತಮ್ಮನ್ನು ತಾವೇ ಒಪ್ಪಿಸಿಕೊಟ್ಟರು.


ಪಾಪವನ್ನೇ ಅರಿಯದ ಕ್ರಿಸ್ತ ಯೇಸುವನ್ನು ದೇವರು ನಮಗೋಸ್ಕರ ಪಾಪವನ್ನಾಗಿ ಮಾಡಿದರು. ಹೀಗೆ ಕ್ರಿಸ್ತ ಯೇಸುವಿನಲ್ಲಿ ದೇವರ ನೀತಿಯನ್ನಾಗಿ ದೇವರು ನಮ್ಮನ್ನು ಮಾಡಿದರು.


ನೀವು ದೇವರಿಂದಲೇ ಕ್ರಿಸ್ತ ಯೇಸುವಿನಲ್ಲಿದ್ದೀರಿ. ಕ್ರಿಸ್ತ ಯೇಸು ನಮಗೆ ದೇವರ ಕಡೆಯಿಂದ ಜ್ಞಾನವೂ ನೀತಿಯೂ ಶುದ್ಧೀಕರಣವೂ ವಿಮೋಚನೆಯೂ ಆಗಿದ್ದಾರೆ.


ಸಿಂಹವು ಅಲ್ಲಿ ಇರದು, ಇಲ್ಲವೆ ಕ್ರೂರವಾದ ಮೃಗಗಳು ಅದರ ಮೇಲೆ ಹೋಗವು. ಅದು ಅಲ್ಲಿ ಕಾಣುವುದೇ ಇಲ್ಲ. ಆದರೆ ಬಿಡುಗಡೆಯಾದವರೇ ಅಲ್ಲಿ ನಡೆಯುವರು.


ಯೆಹೋವ ದೇವರು ವಿಮೋಚಿಸಿದವರು ಹಿಂದಿರುಗಿಕೊಂಡು ಶಾಶ್ವತ ಸಂತೋಷವೆಂಬ ಕಿರೀಟವನ್ನು ಧರಿಸಿಕೊಂಡು, ಉತ್ಸಾಹ ಧ್ವನಿಯೊಡನೆ ಚೀಯೋನಿಗೆ ಸೇರುವರು. ಅವರು ಹರ್ಷಾನಂದಗಳನ್ನು ಅನುಭವಿಸುವರು. ದುಃಖವೂ, ನಿಟ್ಟುಸಿರೂ ಓಡಿಹೋಗುವುವು.


ನನ್ನ ಜನರೇ, ಕೇಳಿರಿ. ನನ್ನ ಜನಾಂಗವೇ, ನನ್ನ ಕಡೆಗೆ ಕಿವಿಗೊಡಿರಿ. ಏಕೆಂದರೆ ನಿಯಮವು ನನ್ನಿಂದ ಹೊರಡುವುದು ಮತ್ತು ನನ್ನ ನ್ಯಾಯವನ್ನು ಜನಾಂಗಕ್ಕೆ ಬೆಳಕನ್ನಾಗಿ ಮಾಡುವೆನು.


ಏಕೆಂದರೆ ಯೆಹೋವ ದೇವರು ಹೇಳುವುದೇನೆಂದರೆ: “ನಿಮ್ಮನ್ನು ನೀವೇ ನಿಷ್ಪಲವಾಗಿ ಮಾಡಿಕೊಂಡಿರಿ. ಹಣವಿಲ್ಲದೆ ನೀವು ವಿಮೋಚನೆ ಹೊಂದುವಿರಿ.”


ನೀನು ನೀತಿಯಲ್ಲಿ ನೆಲೆಗೊಂಡಿರುವೆ. ಬಾಧೆಯಿಂದ ದೂರವಾಗಿರುವೆ. ನೀನು ಭೀತಿಯಿಂದ ಭಯಪಡುವುದಿಲ್ಲ, ಏಕೆಂದರೆ ಅದು ನಿನ್ನ ಸಮೀಪಕ್ಕೆ ಬಾರದು.


ನಿನ್ನನ್ನು ನನಗೆ ಸದಾಕಾಲಕ್ಕೆ ನಿಶ್ಚಿತಾರ್ಥ ಮಾಡಿಕೊಳ್ಳುವೆನು. ನೀತಿಯಿಂದಲೂ, ನ್ಯಾಯದಿಂದಲೂ, ಪ್ರೀತಿಯಿಂದಲೂ, ಅನುಕಂಪದಿಂದಲೂ, ನಿನ್ನನ್ನು ನನಗೆ ನಿಶ್ಚಿತಾರ್ಥ ಮಾಡಿಕೊಳ್ಳುವೆನು.


ನನ್ನ ಜನರೇ, ಮೋವಾಬಿನ ಅರಸನಾದ ಬಾಲಾಕನು ಯೋಚಿಸಿದ್ದನ್ನೂ ಬೆಯೋರನ ಮಗ ಬಿಳಾಮನು ಅವನಿಗೆ ಉತ್ತರವಾಗಿ ಹೇಳಿದ್ದನ್ನೂ ಶಿಟ್ಟೀಮು ಮೊದಲುಗೊಂಡು ಗಿಲ್ಗಾಲಿನ ವರೆಗೆ ಆದ ನಿಮ್ಮ ಪ್ರಯಾಣವನ್ನೂ ಈಗ ಜ್ಞಾಪಕಮಾಡಿಕೊಳ್ಳಿರಿ. ಆಗ ಯೆಹೋವ ದೇವರ ನೀತಿಯ ಕೃತ್ಯಗಳನ್ನು ತಿಳಿದುಕೊಳ್ಳುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು