Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 1:7 - ಕನ್ನಡ ಸಮಕಾಲಿಕ ಅನುವಾದ

7 ನಿಮ್ಮ ದೇಶವು ಹಾಳಾಗಿದೆ. ನಿಮ್ಮ ಪಟ್ಟಣಗಳು ಬೆಂಕಿಯಿಂದ ಸುಟ್ಟುಹೋಗಿವೆ. ನಿಮ್ಮ ಹೊಲಗಳನ್ನು ಪರರು ನಿಮ್ಮೆದುರಿಗೆ ನುಂಗಿಬಿಡುತ್ತಿದ್ದಾರೆ. ಅದು ಇತರ ಜನರಿಂದ ಕೆಡವಿಬಿದ್ದು ಹಾಳಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಿಮ್ಮ ದೇಶವು ಹಾಳಾಗಿದೆ. ನಿಮ್ಮ ಪಟ್ಟಣಗಳು ಸುಟ್ಟುಹೋಗಿವೆ. ನಿಮ್ಮ ಭೂಮಿಯನ್ನು ಅನ್ಯರು ನಿಮ್ಮೆದುರಿಗೆ ನುಂಗಿಬಿಡುತ್ತಿದ್ದಾರೆ. ಅದು ಅನ್ಯಜನರಿಂದ ಹಾಳಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನಿಮ್ಮ ನಾಡು ಹಾಳುಬಿದ್ದಿದೆ: ನಿಮ್ಮ ಪಟ್ಟಣಗಳು ಸುಟ್ಟು ಭಸ್ಮವಾಗಿವೆ. ನಿಮ್ಮ ಕಣ್ಮುಂದೆಯೆ ನಿಮ್ಮ ಭೂಮಿಯನ್ನು ಅನ್ಯಜನರು ಕಬಳಿಸುತ್ತಿದ್ದಾರೆ. ಅನ್ಯದೇಶಗಳು ನಾಶವಾದಂತೆಯೇ ನಿಮ್ಮ ನಾಡು ಹಾಳಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನಿಮ್ಮ ದೇಶವು ಹಾಳಾಗಿದೆ; ನಿಮ್ಮ ಪಟ್ಟಣಗಳು ಸುಟ್ಟು ಹೋಗಿವೆ; ನಿಮ್ಮ ಭೂವಿುಯನ್ನು ಅನ್ಯರು ನಿಮ್ಮೆದುರಿಗೆ ನುಂಗಿಬಿಡುತ್ತಿದ್ದಾರೆ; ಅನ್ಯದೇಶಗಳು ನಾಶನವಾದಂತೆಯೇ ನಿಮ್ಮ ಭೂವಿುಯೂ ಹಾಳಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನಿಮ್ಮ ದೇಶವು ಹಾಳಾಗಿದೆ; ನಿಮ್ಮ ನಗರಗಳು ಬೆಂಕಿಯಿಂದ ಸುಡಲ್ಪಟ್ಟಿವೆ. ನಿಮ್ಮ ಶತ್ರುಗಳು ನಿಮ್ಮ ದೇಶವನ್ನು ವಶಪಡಿಸಿಕೊಂಡಿದ್ದಾರೆ; ಅನ್ಯದೇಶವು ಶತ್ರುಸೈನ್ಯದಿಂದ ಹಾಳಾಗುವಂತೆಯೇ, ನಿಮ್ಮ ದೇಶವೂ ಹಾಳಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 1:7
37 ತಿಳಿವುಗಳ ಹೋಲಿಕೆ  

ನಮ್ಮ ಸ್ವಾಸ್ತ್ಯವು ಅಪರಿಚಿತರಿಗೂ, ನಮ್ಮ ಮನೆಗಳು ಪರರಿಗೂ ವಶವಾದವು.


ನಿಮ್ಮ ಮಧ್ಯದಲ್ಲಿರುವ ಪರದೇಶದವರು ನಿಮಗಿಂತಲೂ ಹೆಚ್ಚೆಚ್ಚಾಗಿ ಅಭಿವೃದ್ಧಿಯಾಗುವರು. ನೀವಾದರೋ ಕಡಿಮೆಯಾಗುತ್ತಾ ಹೀನಸ್ಥಿತಿಗೆ ಬರುವಿರಿ.


ನಿಮ್ಮ ಭೂಮಿಯ ಫಲವನ್ನೂ, ನಿಮ್ಮ ಎಲ್ಲಾ ಆದಾಯವನ್ನೂ ನಿಮ್ಮನ್ನರಿಯದ ಜನರು ತಿಂದುಬಿಡುವರು. ನೀವು ಯಾವಾಗಲೂ ಬಲಾತ್ಕಾರವನ್ನೂ, ಸಂಕಟವನ್ನೂ ಅನುಭವಿಸುವಿರಿ.


ವಿದೇಶಿಯರು ಅವನ ಶಕ್ತಿಯನ್ನು ಹೀರಿಬಿಟ್ಟಿದ್ದಾರೆ. ಅದು ಅವನಿಗೆ ಗೊತ್ತಿಲ್ಲ. ನರೆಕೂದಲು ಸಹ ಅವನ ಮೇಲೆ ಇದೆ. ಆದರೂ ಅವನು ತಿಳಿಯದೇ ಇದ್ದಾನೆ.


ಇದಲ್ಲದೆ ನಾನು ನದಿಗಳನ್ನು ಒಣಗಿಸಿ ದೇಶವನ್ನು ದುಷ್ಟರ ಕೈಗೆ ಮಾರಿಬಿಡುವೆನು. ದೇಶವನ್ನೂ ಅದರಲ್ಲಿನ ಸಮಸ್ತವನ್ನೂ ವಿದೇಶಿಯರ ಕೈಯಿಂದ ನಾಶಮಾಡಿಸುವೆನು. ಯೆಹೋವ ದೇವರಾದ ನಾನೇ ಇದನ್ನು ನುಡಿದಿದ್ದೇನೆ.


ಆದ್ದರಿಂದ ಆಹಾಜನ ದೇವರಾದ ಯೆಹೋವ ದೇವರು ಅರಾಮಿನ ಅರಸನ ಕೈಯಲ್ಲಿ ಅವನನ್ನು ಒಪ್ಪಿಸಿದರು. ಅರಾಮ್ಯರು ಅವನನ್ನು ಹೊಡೆದು, ಅವರಲ್ಲಿ ಅನೇಕರನ್ನು ಸೆರೆಹಿಡಿದು, ದಮಸ್ಕಕ್ಕೆ ತೆಗೆದುಕೊಂಡು ಹೋದರು. ಇದಲ್ಲದೆ ಆಹಾಜನು ಇಸ್ರಾಯೇಲಿನ ಅರಸನ ಕೈವಶವಾಗಿ, ಅವನಿಂದಲೂ ಕಠಿಣವಾಗಿ ಸೋತು ಹೋದನು.


“ಅವರು ಗಾಳಿಯನ್ನು ಬಿತ್ತಿದ್ದಾರೆ. ಬಿರುಗಾಳಿಯನ್ನು ಕೊಯ್ಯುತ್ತಾರೆ. ಇಸ್ರಾಯೇಲರ ಪೈರು ತೆನೆಗೆ ಬಾರದು. ಮೊಳಕೆಯು ಆಹಾರವನ್ನು ಕೊಡುವುದಿಲ್ಲ. ಒಂದು ವೇಳೆ ಅದು ಕೊಟ್ಟರೂ ವಿದೇಶಿಯರು ಅದನ್ನು ನುಂಗುತ್ತಾರೆ.


ಓ ಯೆರೂಸಲೇಮೇ, ನನ್ನ ಪ್ರಾಣವು ನಿನ್ನ ಕಡೆಯಿಂದ ಹೊರಟು ಹೋಗದ ಹಾಗೆ, ನಾನು ನಿಮ್ಮನ್ನು ಹಾಳಾಗಿಯೂ, ನಿವಾಸಿಗಳಿಲ್ಲದ ದೇಶವಾಗಿಯೂ ಮಾಡದ ಹಾಗೆ ಶಿಕ್ಷಣವನ್ನು ತೆಗೆದುಕೋ.”


ಪ್ರಾಯದ ಸಿಂಹಗಳು ಅವನಿಗೆ ವಿರೋಧವಾಗಿ ಗರ್ಜಿಸಿ, ಅಬ್ಬರಿಸುತ್ತವೆ. ಅವನ ದೇಶವನ್ನು ಹಾಳು ಮಾಡುತ್ತವೆ. ಅವನ ಪಟ್ಟಣಗಳು ನಿವಾಸವಿಲ್ಲದೆ ಸುಟ್ಟುಹೋಗಿವೆ.


ಎದೋಮಿನ ಪ್ರವಾಹಗಳು ಇಳಿಜಾರಾಗಿ ಮಾರ್ಪಡುವುವು. ಅದರ ಧೂಳು ಗಂಧಕವಾಗುವುದು, ದೇಶವು ಉರಿಯುವ ಡಾಂಬರಿನಂತೆ ಇರುವುದು.


ಯುದ್ಧವೀರರ ಪ್ರತಿ ಯುದ್ಧವು ಗಲಿಬಿಲಿಯ ಗದ್ದಲದಿಂದ ರಕ್ತದಲ್ಲಿ ಹೊರಳಾಡಿಸಿದ ವಸ್ತ್ರಗಳು ಆಗಿರುತ್ತವೆ. ಆದರೆ ಇವು ಬೆಂಕಿಗೆ ಆಹುತಿಯಾಗುತ್ತವೆ. ಅದು ಬೆಂಕಿಗೆ ಇಂಧನವಾಗಿರುತ್ತದೆ.


ಆಗ ನಾನು, “ಯೆಹೋವ ದೇವರೇ, ಇದು ಎಷ್ಟರವರೆಗೆ?” ಎಂದೆನು. ಅದಕ್ಕೆ ಅವರು ಹೀಗೆ ಉತ್ತರಕೊಟ್ಟರು, “ಪಟ್ಟಣಗಳು ನಿವಾಸಿಗಳಿಲ್ಲದೆ, ಮನೆಗಳು ಮನುಷ್ಯನಿಲ್ಲದೆ, ಹೊಲಗಳು ಸಂಪೂರ್ಣವಾಗಿ ಹಾಳಾಗುವವರೆಗೂ,


ಪಟ್ಟಣ ಪ್ರದೇಶಗಳು ಹಾಳಾಗಿ ಮೇಕೆಮರಿಗಳಿಗೆ ಹುಲ್ಲುಗಾವಲುಗಳಾಗುವುವು. ಕುರಿಮರಿಗಳು ಅಲ್ಲಿ ಮೇಯುವುವು.


ಸೇನಾಧೀಶ್ವರ ಯೆಹೋವ ದೇವರು ನನ್ನ ಕಿವಿಗಳಲ್ಲಿ ಹೇಳುವುದೇನೆಂದರೆ: “ನಿಜವಾಗಿಯೂ ದೊಡ್ಡ ಮನೆಗಳು ಬರಿದಾಗುವುವು ಸುಂದರ ಭವನಗಳು ನಿವಾಸಿಗಳಿಲ್ಲದೆ ಹಾಳಾಗುವುವು.


ಆದರೆ ಜನರು ಸಂಖ್ಯೆಯಲ್ಲಿ ಕಡಿಮೆಯಾಗಿ ಚಿಂತೆ ಸಂಕಟದಿಂದ ಕುಗ್ಗಿಹೋದರು.


ದೇವರು ಫಲವುಳ್ಳ ಭೂಮಿಯನ್ನು ಬಂಜರಾಗುವಂತೆ ಮಾಡಿದರು. ಇದಕ್ಕೆಲ್ಲ ಕಾರಣ ಅದರ ನಿವಾಸಿಗಳ ಕೆಟ್ಟತನವೇ ಆಗಿತ್ತು.


ಆಗ ನಾಡು ಹಾಳಾಗಿರುವ ಎಲ್ಲಾ ದಿನಗಳಲ್ಲಿಯೂ ನೀವು ನಿಮ್ಮ ಶತ್ರುಗಳ ದೇಶದಲ್ಲಿ ಇರುವವರೆಗೂ, ನಾಡು ತನ್ನ ಸಬ್ಬತ್ ಕಾಲವನ್ನು ಅನುಭವಿಸುವುದು. ಆಗ ನೆಲವು ವಿಶ್ರಮಿಸಿಕೊಂಡು ತನ್ನ ವಿಶ್ರಾಂತಿಯ ಕಾಲವನ್ನು ಅನುಭವಿಸುವುದು.


ನಿಮ್ಮನ್ನು ಜನಾಂಗಗಳಲ್ಲಿ ಚದರಿಸಿ, ನಿಮ್ಮ ಹಿಂದೆ ಖಡ್ಗವನ್ನು ಬೀಸುವೆನು. ನಿಮ್ಮ ಭೂಮಿ ಹಾಳಾಗಿರುವುದು, ನಿಮ್ಮ ಪಟ್ಟಣಗಳು ನಾಶವಾಗಿರುವುವು.


ಯೆಹೋವ ದೇವರು ತಮ್ಮ ದೈವಿಕ ಕೋಪದಲ್ಲಿ ಕೆಡವಿ ಹಾಕಿದ ಸೊದೋಮ್, ಗೊಮೋರ, ಅದ್ಮಾ, ಚೆಬೋಯಿಮ್ ಎಂಬ ಪಟ್ಟಣಗಳಂತೆ ಆ ದೇಶವೆಲ್ಲಾ ಗಂಧಕವೂ, ಉಪ್ಪೂ ಉರಿಯುತ್ತಾ, ವ್ಯವಸಾಯವಾದರೂ ಹುಲ್ಲಾದರೂ ಬೆಳೆಯದೆ ಇರುವುದು.


ಸಾಲಗಾರರು ಅವನಿಗೆ ಇರುವುದನ್ನೆಲ್ಲಾ ದೋಚಿಕೊಳ್ಳಲಿ; ಪರರು ಅವನ ಕಷ್ಟಾರ್ಜಿತವನ್ನು ಸುಲಿದುಕೊಳ್ಳಲಿ.


ಚೀಯೋನ್ ಪುತ್ರಿಯು ದ್ರಾಕ್ಷಿ ತೋಟದಲ್ಲಿರುವ ಮನೆಯ ಹಾಗೆಯೂ, ಸೌತೆಕಾಯಿಯ ಹೊಲದ ಗುಡಿಸಿಲಿನ ಹಾಗೂ ಮುತ್ತಿಗೆ ಹಾಕಿರುವ ಪಟ್ಟಣದ ಹಾಗೆಯೂ ಇದೆ.


ಏಕೆಂದರೆ ಯೆರೂಸಲೇಮು ಹಾಳಾಗಿದೆ, ಯೆಹೂದವು ಬಿದ್ದುಹೋಗಿದೆ. ಅವರ ನಡೆನುಡಿಗಳು ಯೆಹೋವ ದೇವರಿಗೆ ವಿರುದ್ಧವಾಗಿ ದೇವರ ಪ್ರಭಾವದ ದೃಷ್ಟಿಯನ್ನು ಕೆರಳಿಸುತ್ತಾರೆ.


ದುಷ್ಟತ್ವವು ಬೆಂಕಿಯಂತೆ ಉರಿದು ದತ್ತೂರಿ, ಮುಳ್ಳುಗಳನ್ನು ನುಂಗಿಬಿಟ್ಟು, ಅಡವಿಯ ಪೊದೆಗಳನ್ನು ಹತ್ತಿಕೊಳ್ಳಲು, ಅದು ಹೊಗೆ ಹೊಗೆಯಾಗಿ ಸುತ್ತಿಕೊಂಡು ಮೇಲಕ್ಕೆ ಏರುತ್ತದೆ.


“ಏಕೆಂದರೆ ನಿನ್ನ ಹಾಳಾದ ಸ್ಥಳಗಳೂ ನಿನ್ನ ಏಕಾಂತ ಸ್ಥಳಗಳೂ ಕೆಡವಿಬಿದ್ದ ನಿನ್ನ ದೇಶವೂ ಈಗ ನಿವಾಸಿಗಳಿಗೆ ಇಕ್ಕಟ್ಟಾಗುವುವು. ನಿನ್ನನ್ನು ನುಂಗಿದವರು ದೂರವಾಗುವರು.


ನಿನ್ನೊಳಗೆ ನಿವಾಸಿಗಳು ಬಿಟ್ಟುಬಿಟ್ಟ, ದ್ವೇಷಕ್ಕೀಡಾದ, ಯಾರೂ ಹಾದುಹೋಗದ ನಿನಗೆ ನಾನು ನಿತ್ಯ ಘನತೆಯನ್ನು ದಯಪಾಲಿಸಿ ನಿನ್ನನ್ನು ಎಲ್ಲಾ ಸಂತತಿಗಳಲ್ಲಿಯೂ ಉಲ್ಲಾಸವಾಗಿರುವಂತೆ ಮಾಡುವೆನು.


ಯೆಹೋವ ದೇವರು ತನ್ನ ಬಲಗೈಯಿಂದಲೂ, ತನ್ನ ಬಲವುಳ್ಳ ತೋಳಿನಿಂದಲೂ ಆಣೆಯಿಟ್ಟು ಹೇಳಿದ್ದೇನೆಂದರೆ: “ನಿಶ್ಚಯವಾಗಿ ನಾನು ಇನ್ನು ಮೇಲೆ ನಿನ್ನ ಧಾನ್ಯಗಳನ್ನು ನಿನ್ನ ಶತ್ರುಗಳಿಗೆ ಆಹಾರವಾಗಿ ಕೊಡುವುದಿಲ್ಲ. ನೀನು ಕಷ್ಟಪಟ್ಟು ಮಾಡಿದ ನಿನ್ನ ದ್ರಾಕ್ಷಾರಸವನ್ನು ವಿದೇಶಿಯರು ಕುಡಿಯುವುದಿಲ್ಲ.


ನಿನ್ನ ಪರಿಶುದ್ಧ ಪಟ್ಟಣಗಳು ಅಡವಿಯಾದವು. ಚೀಯೋನು ಅಡವಿಯಾಯಿತು. ಯೆರೂಸಲೇಮು ಹಾಳಾಯಿತು.


ಸಿಂಹವು ತನ್ನ ಪೊದೆಯೊಳಗಿಂದ ಏರಿ ಬರುತ್ತದೆ. ಇತರ ಜನಾಂಗಗಳನ್ನು ನಾಶ ಮಾಡುವವನು ಹೊರಟಿದ್ದಾನೆ. ನಿನ್ನ ದೇಶವನ್ನು ಹಾಳು ಮಾಡುವುದಕ್ಕೆ ತನ್ನ ಸ್ಥಳವನ್ನು ಬಿಟ್ಟಿದ್ದಾನೆ. ನಿನ್ನ ಪಟ್ಟಣಗಳು ನಿವಾಸಿ ಇಲ್ಲದೆ ಪಾಳು ಬೀಳುವುದು.


ಆಗ ನಾನು ಯೆಹೂದದ ಪಟ್ಟಣಗಳಲ್ಲಿಯೂ, ಯೆರೂಸಲೇಮಿನ ಬೀದಿಗಳಲ್ಲಿಯೂ ಉಲ್ಲಾಸದ ಶಬ್ದವನ್ನೂ, ಸಂತೋಷ ಶಬ್ದವನ್ನೂ, ಮದುಮಗನ ಶಬ್ದವನ್ನೂ, ಮದುಮಗಳ ಶಬ್ದವನ್ನೂ ನಿಲ್ಲಿಸುವೆನು. ಏಕೆಂದರೆ, ದೇಶವು ಹಾಳಾಗುವುದು.


ಆದ್ದರಿಂದ ನನ್ನ ರೌದ್ರವೂ ನನ್ನ ಕೋಪವೂ ಸುರಿದು, ಯೆಹೂದದ ಪಟ್ಟಣಗಳಲ್ಲಿಯೂ, ಯೆರೂಸಲೇಮಿನ ಬೀದಿಗಳಲ್ಲಿಯೂ ಉರಿಯಿತು. ಅವು ಈ ದಿನದವರೆಗೂ ಹಾಳೂ, ಬೀಳೂ ಆದವು.


ನಾನು ನಿಮ್ಮನ್ನು ಪೂರ್ವದೇಶದ ಜನರಿಗೆ ಸೊತ್ತಾಗಿ ಕೊಡುತ್ತೇನೆ, ಅವರು ತಮ್ಮ ಗುಡಾರಗಳನ್ನು ನಿನ್ನಲ್ಲಿ ನೆಲೆಗೊಳಿಸುವರು. ತಮ್ಮ ನಿವಾಸಗಳನ್ನು ನಿನ್ನಲ್ಲಿ ಮಾಡಿಕೊಳ್ಳುವರು, ಅವರು ನಿಮ್ಮ ಫಲವನ್ನು ತಿಂದು ನಿಮ್ಮ ಹಾಲನ್ನೇ ಕುಡಿಯುವರು.


ನಿನ್ನ ದೇಶದ ಪಟ್ಟಣಗಳನ್ನು ನಾಶಮಾಡಿಬಿಟ್ಟು ನಿನ್ನ ಕೋಟೆಗಳನ್ನೆಲ್ಲಾ ಕೆಡವಿಹಾಕುವೆನು.


ಆದ್ದರಿಂದ ನಾನು ಸಹ ನಿನ್ನನ್ನು ಹೊಡೆದು ನಿನ್ನ ಪಾಪಗಳ ನಿಮಿತ್ತ ನಿನ್ನನ್ನು ಹಾಳುಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು