Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 1:8 - ಕನ್ನಡ ಸಮಕಾಲಿಕ ಅನುವಾದ

8 ಚೀಯೋನ್ ಪುತ್ರಿಯು ದ್ರಾಕ್ಷಿ ತೋಟದಲ್ಲಿರುವ ಮನೆಯ ಹಾಗೆಯೂ, ಸೌತೆಕಾಯಿಯ ಹೊಲದ ಗುಡಿಸಿಲಿನ ಹಾಗೂ ಮುತ್ತಿಗೆ ಹಾಕಿರುವ ಪಟ್ಟಣದ ಹಾಗೆಯೂ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯೆರೂಸಲೇಮಿನ ನಗರವೊಂದೇ ಉಳಿದು, ದ್ರಾಕ್ಷಿತೋಟದ ಮನೆಯಂತೆಯೂ, ಸೌತೆಕಾಯಿಯ ಹೊಲದ ಗುಡಿಸಿಲಿನ ಹಾಗೂ ಮುತ್ತಿಗೆ ಹಾಕಲ್ಪಟ್ಟ ಪಟ್ಟಣದ ಹಾಗೆಯೂ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಸಿಯೋನ್ ನಗರವೊಂದೇ ಮುತ್ತಿಗೆಗೆ ತುತ್ತಾದ ಪಟ್ಟಣದಂತೆ, ದ್ರಾಕ್ಷಾತೋಟದ ಅಟ್ಟಣಿಯಂತೆ, ಸೌತೆ ಹೊಲದ ಗುಡಿಸಿಲಿನಂತೆ ಸುರಕ್ಷತೆಯ ಅವಕಾಶವಿಲ್ಲದೆ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಚೀಯೋನ್ ನಗರಿಯೊಂದೇ ಉಳಿದು ದ್ರಾಕ್ಷೇತೋಟದ ಮಂಚಿಕೆಯಂತೆಯೂ ಸವುತೆಯ ಹೊಲದ ಗುಡಸಲಿನ ಹಾಗೂ ಮುತ್ತಿದ ಪಟ್ಟಣದೋಪಾದಿಯಲ್ಲಿಯೂ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಚೀಯೋನ್ ನಗರಿಯು ದ್ರಾಕ್ಷಿತೋಟದಲ್ಲಿರುವ ಜನಶೂನ್ಯವಾದ ಡೇರೆಯಂತಿದೆ; ಸೌತೆಯ ಹೊಲದಲ್ಲಿ ಪಾಳುಬಿದ್ದಿರುವ ಮನೆಯಂತಿದೆ; ಶತ್ರುಗಳಿಗೆ ಸೋತುಹೋದ ನಗರದಂತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 1:8
21 ತಿಳಿವುಗಳ ಹೋಲಿಕೆ  

ಚೀಯೋನ್ ಪುತ್ರಿಯೇ, ಮಹಾ ಉಲ್ಲಾಸಪಡು. ಯೆರೂಸಲೇಮಿನ ಪುತ್ರಿಯೇ ಆರ್ಭಟಿಸು, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ. ಆತನು ನೀತಿವಂತನಾಗಿಯೂ ಜಯಹೊಂದಿದವನಾಗಿಯೂ, ದೀನನಾಗಿಯೂ ಕತ್ತೆಯ ಮೇಲೆ ಹೌದು, ಕತ್ತೆಮರಿಯ ಮೇಲೆ ಕೂತುಕೊಂಡು ಬರುತ್ತಾನೆ.


“ಚೀಯೋನ್ ಪುತ್ರಿಯೇ, ಭಯಪಡಬೇಡ, ಇಗೋ, ನಿನ್ನ ಅರಸ ಕತ್ತೆಮರಿಯ ಮೇಲೆ ಕೂತುಕೊಂಡು ಬರುತ್ತಾರೆ,” ಎಂಬ ಮಾತು ನೆರವೇರಿತು.


“ಚೀಯೋನ್ ಪುತ್ರಿಯೇ, ಹಾಡಿ ಹರ್ಷಿಸು. ಏಕೆಂದರೆ, ನಾನು ಬರುವೆನು ಮತ್ತು ನಾನು ನಿಮ್ಮ ಮಧ್ಯದಲ್ಲಿ ವಾಸಿಸುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.


ಇಗೋ, ಯೆಹೋವ ದೇವರು ಭೂಮಿಯ ಅಂತ್ಯದವರೆಗೆ ಹೀಗೆ ಘೋಷಣೆ ಮಾಡಿದ್ದಾರೆ: “ಚೀಯೋನಿನ ಪುತ್ರಿ ಇಗೋ, ‘ನಿನ್ನ ರಕ್ಷಣೆಯು ಬರುತ್ತದೆ. ಆತನ ಬಹುಮಾನವು ಆತನ ಸಂಗಡ, ಆತನ ಪ್ರತಿಫಲವು ಆತನ ಮುಂದೆಯೂ ಇದೆ ಎಂದು ಹೇಳಿರಿ.’ ”


ಆ ದಿನದಲ್ಲಿ ಅವರು ನೋಬಿನಲ್ಲಿ ಇಳಿದುಕೊಳ್ಳುವರು. ಚೀಯೋನ್ ನಗರಿಯ ಪರ್ವತದ ಕಡೆಗೆ, ಯೆರೂಸಲೇಮಿನ ಬೆಟ್ಟದ ಕಡೆಗೆ ಕೈ ಬೀಸುತ್ತಾರೆ.


ಅವರು ತನ್ನ ಗುಡಾರವನ್ನು ತೋಟದಂತೆ ಬಲಾತ್ಕಾರವಾಗಿ ತೆಗೆದುಹಾಕಿದ್ದಾರೆ. ಅವರು ತನ್ನ ಸಭಾ ಸ್ಥಾನಗಳನ್ನು ನಾಶಮಾಡಿದ್ದಾರೆ. ಯೆಹೋವ ದೇವರು ಚೀಯೋನಿಗೆ ಪವಿತ್ರ ಹಬ್ಬಗಳನ್ನೂ, ಸಬ್ಬತ್ ದಿನಗಳನ್ನೂ ಮರೆತುಬಿಡುವಂತೆ ಮಾಡಿದ್ದಾರೆ. ತನ್ನ ಕೋಪದ ಉರಿಯಲ್ಲಿ ಅರಸನನ್ನೂ, ಯಾಜಕನನ್ನೂ ತುಚ್ಛೀಕರಿಸಿದ್ದಾರೆ.


ಕರ್ತದೇವರು ಹೇಗೆ ತಮ್ಮ ಕೋಪದ ಮೇಘದಿಂದ ಚೀಯೋನಿನ ಮಗಳನ್ನು ಮುಚ್ಚಿ ಇಸ್ರಾಯೇಲಿನ ಸೌಂದರ್ಯವನ್ನು ಆಕಾಶದಿಂದ ಭೂಮಿಗೆ ಎಸೆದರು. ತನ್ನ ಕೋಪದ ದಿನದಲ್ಲಿ, ತನ್ನ ಪಾದಪೀಠವನ್ನು ಜ್ಞಾಪಕ ಮಾಡಿಕೊಳ್ಳಲಿಲ್ಲ.


ಅವನನ್ನು ಕುರಿತು ಯೆಹೋವ ದೇವರು ಹೇಳುವುದೇನೆಂದರೆ: “ಕನ್ನಿಕೆಯಾದ ಚೀಯೋನ್ ಪುತ್ರಿಯು ನಿನ್ನನ್ನು ತಿರಸ್ಕರಿಸಿ, ನಿನಗೆ ಅಪಹಾಸ್ಯ ಮಾಡುತ್ತಾಳೆ. ಯೆರೂಸಲೇಮಿನ ಪುತ್ರಿಯು ನೀನು ಓಡಿ ಹೋಗುವಾಗ ತನ್ನ ತಲೆಯಾಡಿಸುತ್ತಾಳೆ.


ಯೆಹೋವ ದೇವರು ನ್ಯಾಯತೀರ್ಪಿನ ಆತ್ಮದಿಂದಲೂ, ದಹಿಸುವ ಆತ್ಮದಿಂದಲೂ ಚೀಯೋನಿನ ಪುತ್ರಿಯರ ಕಲ್ಮಷವನ್ನು ತೊಳೆದು, ಯೆರೂಸಲೇಮಿನ ಮೇಲಿನ ರಕ್ತದ ಕಲೆಗಳನ್ನು ತೆಗೆದುಹಾಕುವರು.


ಆಗ ಚೀಯೋನೆಂಬ ನಗರ ದ್ವಾರಗಳಲ್ಲಿ ನಿಮ್ಮ ಸ್ತುತಿಯನ್ನು ಸಾರುವೆನು. ನಿಮ್ಮ ರಕ್ಷಣೆಯಲ್ಲಿ ಆನಂದಿಸುವೆನು.


ದುಷ್ಟರು ಕಟ್ಟಿಕೊಂಡ ಮನೆಯು ಜೇಡ ಹುಳದ ಗೂಡಿನಂತೆಯೂ, ಕಾವಲುಗಾರನ ಗುಡಿಸಿಲಂತೆಯೂ ದುರ್ಬಲವಾಗಿರುವುದು.


ಹೊಲ ಕಾಯುವವರಂತೆ ಸುತ್ತಲಾಗಿ ಅವಳಿಗೆ ವಿರೋಧವಾಗಿದ್ದಾರೆ. ಏಕೆಂದರೆ ನನಗೆ ವಿರೋಧವಾಗಿ ತಿರುಗಿ ಬಿದ್ದಿದ್ದಾಳೆಂದು,’ ” ಎಂದು ಯೆಹೋವ ದೇವರು ಹೇಳುತ್ತಾರೆ.


ಯೆಹೂದದಲ್ಲಿಯೂ ನುಗ್ಗಿ, ತುಂಬಿತುಳುಕಿ ಹಬ್ಬಿಕೊಂಡು ಕತ್ತಿನವರೆಗೂ ಏರುವುದು. ಇಮ್ಮಾನುಯೇಲನೇ, ಆ ಅರಸನ ರೆಕ್ಕೆಗಳು ಹರಡಿ ನಿನ್ನ ದೇಶದ ಅಗಲವನ್ನೆಲ್ಲಾ ಆವರಿಸಿಕೊಳ್ಳುವುವು.”


ನಿಮ್ಮ ದೇಶವು ಹಾಳಾಗಿದೆ. ನಿಮ್ಮ ಪಟ್ಟಣಗಳು ಬೆಂಕಿಯಿಂದ ಸುಟ್ಟುಹೋಗಿವೆ. ನಿಮ್ಮ ಹೊಲಗಳನ್ನು ಪರರು ನಿಮ್ಮೆದುರಿಗೆ ನುಂಗಿಬಿಡುತ್ತಿದ್ದಾರೆ. ಅದು ಇತರ ಜನರಿಂದ ಕೆಡವಿಬಿದ್ದು ಹಾಳಾಗಿದೆ.


ಸೇನಾಧೀಶ್ವರ ಯೆಹೋವ ದೇವರು ನಮಗೆ ಮಿಕ್ಕಿದ್ದರಲ್ಲಿ ಸ್ವಲ್ಪವನ್ನಾದರೂ ಉಳಿಸದೆ ಹೋಗಿದ್ದರೆ, ನಾವು ಸೊದೋಮಿನಂತೆ ಆಗುತ್ತಿದ್ದೆವು, ಗೊಮೋರಕ್ಕೆ ಸಮಾನವಾಗಿಯೂ ಇರುತ್ತಿದ್ದೆವು.


‘ನನಗೋಸ್ಕರ ಇವರನ್ನು ಯಾರು ನನ್ನಲ್ಲಿ ಪಡೆದರು? ನಾನು ದುಃಖಿತ ಮತ್ತು ಬಂಜೆಯಾಗಿದ್ದೆ; ನನ್ನನ್ನು ಗಡಿಪಾರು ಮಾಡಿ ತಿರಸ್ಕರಿಸಲಾಯಿತು. ಇವುಗಳನ್ನು ತಂದವರು ಯಾರು? ನಾನು ಒಬ್ಬಂಟಿಯಾಗಿ ಉಳಿದಿದ್ದೇನೆ, ಇವರನ್ನು ಸಾಕಿದವರು ಯಾರು? ಅವರೆಲ್ಲಿದ್ದರು?’ ” ಎಂದುಕೊಳ್ಳುವೆ.


ಸುಂದರಿ ಮತ್ತು ಕೋಮಲಳಾದ ಚೀಯೋನಿನ ಮಗಳನ್ನು ನಾನು ನಾಶಮಾಡುತ್ತೇನೆ.


ಸುತ್ತಲೂ ದಂಡಿಳಿಸಿ ನಿನಗೆ ವಿರುದ್ಧವಾಗಿ ಕೋಟೆಗಳನ್ನು ಎಬ್ಬಿಸಿ, ದಿಬ್ಬ ಹಾಕಿ ನಿನ್ನ ಮೇಲೆ ಮುತ್ತಿಗೆ ಹಾಕುವೆನು.


ಒಬ್ಬನ ಬೆದರಿಕೆಗೆ ಸಾವಿರ ಜನರು ಓಡುವರು, ಐವರು ಹೆದರಿಸುವುದರಿಂದ ನೀವೆಲ್ಲರೂ ಓಡಿಹೋಗುವಿರಿ, ಕಟ್ಟಕಡೆಗೆ ಬೆಟ್ಟದ ಶಿಖರದಲ್ಲಿನ ಸ್ತಂಭದ ಹಾಗೂ ಗುಡ್ಡದ ಮೇಲಣ ಕಂಬದಂತೆಯೂ ಒಂಟಿಯಾಗಿ ಉಳಿಯುವಿರಿ.”


ಜೀವಿಸುವ ದೇವರನ್ನು ನಿಂದಿಸಲು ಅಸ್ಸೀರಿಯದ ಅರಸನಿಂದ ಕಳುಹಿಸಲಾಗಿದ್ದ ಸೈನ್ಯಾಧಿಕಾರಿಯ ನಿಂದೆಯ ಮಾತುಗಳನ್ನು ನಿನ್ನ ದೇವರಾದ ಯೆಹೋವ ದೇವರು ಕೇಳಿದ್ದಾರೆ. ನಿನ್ನ ದೇವರಾದ ಯೆಹೋವ ದೇವರು ಅವನ ಮಾತುಗಳಿಗೋಸ್ಕರ ಅವನನ್ನು ಗದರಿಸುವರು. ಆದ್ದರಿಂದ ನೀನು ಉಳಿದಿರುವ ಜನರಿಗಾಗಿ ಅವರನ್ನು ಪ್ರಾರ್ಥಿಸು, ಎಂಬುದಾಗಿ ಹಿಜ್ಕೀಯನು ಅನ್ನುತ್ತಾನೆ,” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು