ಯೆಶಾಯ 10:13 - ಕನ್ನಡ ಸಮಕಾಲಿಕ ಅನುವಾದ13 ಏಕೆಂದರೆ ಅಸ್ಸೀರಿಯ ತನ್ನೊಳಗೆ ಹೀಗೆ ಅಂದುಕೊಂಡನು, “ ‘ನನ್ನ ಕೈಯ ಬಲದಿಂದಲೂ ನನ್ನ ಜ್ಞಾನದಿಂದಲೂ ಅದನ್ನು ಮಾಡಿದೆ. ಏಕೆಂದರೆ, ನಾನು ವಿವೇಕಿ. ಜನಾಂಗಗಳ ಮೇರೆಗಳನ್ನು ಕಿತ್ತು, ಅವರ ನಿಧಿಗಳನ್ನು ಕೊಳ್ಳೆಹೊಡೆದು, ಅದರ ಅರಸರನ್ನು ಮಹಾವೀರನಂತೆ ಕೆಡವಿಬಿಟ್ಟಿದ್ದೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಏಕೆಂದರೆ ಅವನು ತನ್ನೊಳಗೆ, “ನನ್ನ ಜ್ಞಾನ, ಭುಜಬಲಗಳಿಂದಲೇ ಇದನ್ನು ಮಾಡಿದ್ದೇನೆ. ನಾನೇ ವಿವೇಕವುಳ್ಳ ಜನಾಂಗಗಳ ಮೇರೆಗಳನ್ನು ಕಿತ್ತು, ಅವರ ನಿಧಿನಿಕ್ಷೇಪಗಳನ್ನು ಸೂರೆಮಾಡಿ, ಸಿಂಹಾಸನಾರೂಢರನ್ನು ಮಹಾವೀರನಂತೆ ಕೆಡವಿಬಿಟ್ಟಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಅಸ್ಸೀರಿಯದ ಅನಿಸಿಕೆಯಿದು: “ನಾನು ವಿವೇಕಿ, ನನ್ನ ಭುಜಬಲದಿಂದಲೇ ಇದನ್ನು ಮಾಡಿದ್ದೇನೆ. ನನ್ನ ಜ್ಞಾನಶಕ್ತಿಯಿಂದಲೇ ಇದನ್ನು ಸಾಧಿಸಿದ್ದೇನೆ. ನಾಡುಗಳ ಮಧ್ಯೆಯಿರುವ ಎಲ್ಲೆಗಳನ್ನು ಕಿತ್ತುಹಾಕಿದ್ದೇನೆ. ಅವು ಕೂಡಿಸಿಟ್ಟುಕೊಂಡಿದ್ದ ನಿಕ್ಷೇಪಗಳನ್ನು ಸೂರೆಮಾಡಿದ್ದೇನೆ. ಗದ್ದುಗೆಯ ಮೇಲೆ ಕುಳಿತಿರುವವರನ್ನು ಮಹಾ ವೀರನಂತೆ ಕೆಡವಿಬಿಟ್ಟಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಏಕಂದರೆ ಅವನು ತನ್ನೊಳಗೆ - ನನ್ನ ಜ್ಞಾನಭುಜ ಬಲಗಳಿಂದಲೇ ಇದನ್ನು ಮಾಡಿದ್ದೇನೆ, ನಾನೇ ವಿವೇಕಿ; ಜನಾಂಗಗಳ ಎಲ್ಲೆಗಳನ್ನು ಕಿತ್ತು ಅವರ ನಿಧಿನಿಕ್ಷೇಪಗಳನ್ನು ಸೂರೆಮಾಡಿ ಸಿಂಹಾಸನಾರೂಢರನ್ನು ಮಹಾವೀರನಂತೆ ಕೆಡವಿಬಿಟ್ಟಿದ್ದೇನೆ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಅಶ್ಶೂರದ ಅರಸನು ಹೇಳುವುದೇನೆಂದರೆ, “ನಾನು ಜ್ಞಾನಿಯಾಗಿದ್ದೇನೆ, ನನ್ನ ಸ್ವಂತ ಜ್ಞಾನದಿಂದಲೂ ಸಾಮರ್ಥ್ಯದಿಂದಲೂ ನಾನು ಅನೇಕ ಮಹಾಕಾರ್ಯಗಳನ್ನು ನಡಿಸಿದ್ದೇನೆ. ಅನೇಕ ಜನಾಂಗಗಳನ್ನು ಸೋಲಿಸಿದ್ದೇನೆ; ಅವರ ಐಶ್ವರ್ಯಗಳನ್ನು ಸೂರೆಮಾಡಿದ್ದೇನೆ. ಅವರ ಜನರನ್ನು ನನ್ನ ಗುಲಾಮರನ್ನಾಗಿ ಮಾಡಿದ್ದೇನೆ. ನಾನು ಮಹಾ ವೀರನಾಗಿರುವೆ. ಅಧ್ಯಾಯವನ್ನು ನೋಡಿ |
ಆದಕಾರಣ ಇಸ್ರಾಯೇಲಿನ ದೇವರು ಅಸ್ಸೀರಿಯದ ಅರಸನಾದ ಪೂಲನ ಆತ್ಮವನ್ನೂ ಅಸ್ಸೀರಿಯದ ಅರಸನಾದ ತಿಗ್ಲತ್ಪಿಲೆಸರನ ಆತ್ಮವನ್ನೂ ಪ್ರೇರಿಸಿದ್ದರಿಂದ, ಅವರು ಅವರನ್ನು ಸೆರೆಯಾಗಿ ಒಯ್ದರು. ಆ ರೂಬೇನ್ಯರನ್ನೂ, ಗಾದ್ಯರನ್ನೂ, ಮನಸ್ಸೆಯ ಅರ್ಧ ಗೋತ್ರದವರನ್ನೂ ಹಲಹ, ಹಾಬೋರ್, ಹಾರ, ಎಂಬ ಪ್ರಾಂತಗಳಿಗೂ ಗೋಜಾನ್ ನದಿಯ ಪ್ರದೇಶಗಳಿಗೂ ತೆಗೆದುಕೊಂಡು ಹೋದರು. ಅವರು ಇಂದಿನವರೆಗೂ ಅಲ್ಲಿಯೇ ಇದ್ದಾರೆ.
ಸ್ವಲ್ಪ ಕಾಲವಾದ ನಂತರ ನಾನು ಬಂದು, ನಿಮ್ಮನ್ನು ಧಾನ್ಯ, ದ್ರಾಕ್ಷಾರಸ, ಆಹಾರ, ದ್ರಾಕ್ಷಿತೋಟ, ಎಣ್ಣೆಮರಗಳು, ಜೇನು ಇವು ಸಮೃದ್ಧಿಯಾಗಿರುವ ನಿಮ್ಮ ದೇಶಕ್ಕೆ ಸಮಾನವಾಗಿರುವ ಇನ್ನೊಂದು ದೇಶಕ್ಕೆ ಕರೆದುಕೊಂಡು ಹೋಗುವೆನು. ಜೀವವನ್ನು ಆಯ್ದುಕೊಳ್ಳಿರಿ, ಮರಣವನ್ನಲ್ಲ. “ ‘ಯೆಹೋವ ದೇವರು ನಮ್ಮನ್ನು ರಕ್ಷಿಸುವರು,’ ಎಂದು ಹಿಜ್ಕೀಯನು ನಿಮ್ಮನ್ನು ಪ್ರೇರೇಪಿಸಿ ತಪ್ಪು ಮಾರ್ಗದಲ್ಲಿ ನಡೆಸುವಾಗ, ಅವನ ಮಾತನ್ನು ಕೇಳಬೇಡಿರಿ.