ಯೆಶಾಯ 10:17 - ಕನ್ನಡ ಸಮಕಾಲಿಕ ಅನುವಾದ17 ಇಸ್ರಾಯೇಲಿನ ಬೆಳಕು ಬೆಂಕಿಯಾಗುವುದು, ಅದರ ಪರಿಶುದ್ಧರು ಜ್ವಾಲೆಯಂತಿರುವರು, ಅದು ಒಂದೇ ದಿನದಲ್ಲಿ ಅವನ ಮುಳ್ಳು, ದತ್ತೂರಿಗಳನ್ನು ದಹಿಸಿ ನುಂಗಿಬಿಡುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಇಸ್ರಾಯೇಲರ ಪರಂಜ್ಯೋತಿಯು ದಹಿಸುವ ಅಗ್ನಿಯಾಗುವುದು. ಅವರ ಪರಿಶುದ್ಧನು ಜ್ವಾಲೆಯಂತಿರುವನು. ಅದು ಒಂದೇ ದಿನದಲ್ಲಿ ಅಶ್ಶೂರದ ಮುಳ್ಳುಗಿಳ್ಳನ್ನು ಸುಟ್ಟು ನುಂಗಿಬಿಡುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಇಸ್ರಯೇಲಿನ ಪರಂಜ್ಯೋತಿಯಾದ ದೇವರು ಅಗ್ನಿಯಂತಾಗುವರು; ಇಸ್ರಯೇಲಿನ ಪರಮಪಾವನ ಸ್ವಾಮಿ ಜ್ವಾಲೆಯಂತಾಗುವರು; ಅದು ಒಂದೇ ಒಂದು ದಿನದಲ್ಲಿ ಅಸ್ಸೀರಿಯರ ಮುಳ್ಳುಪೊದರುಗಳನ್ನೂ ಬಿಡದೆ ಎಲ್ಲವನ್ನೂ ದಹಿಸಿಬಿಡುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಇಸ್ರಾಯೇಲ್ಯರ ಪರಂಜ್ಯೋತಿಯು ದಹಿಸುವ ಅಗ್ನಿಯಾಗುವದು, ಅವರ ಸದಮಲಸ್ವಾವಿುಯು ಜ್ವಾಲೆಯಂತಿರುವನು; ಅದು ಒಂದೇ ದಿವಸದಲ್ಲಿ ಅಶ್ಶೂರದ ಮುಳ್ಳುಗಿಳ್ಳನ್ನು ಸುಟ್ಟು ನುಂಗಿಬಿಡುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಇಸ್ರೇಲಿನ ಬೆಳಕು ಬೆಂಕಿಯಂತಿದೆ. ಪರಿಶುದ್ಧನಾಗಿರುವಾತನು ಬೆಂಕಿಯ ಜ್ವಾಲೆಯಂತಿದ್ದಾನೆ. ಮೊದಲು ಹಣಜಿ ಕಸಕಡ್ಡಿಗಳನ್ನು ಸುಡುವ ಬೆಂಕಿಯಂತೆ ಆತನಿರುವನು. ಅಧ್ಯಾಯವನ್ನು ನೋಡಿ |