Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 10:22 - ಕನ್ನಡ ಸಮಕಾಲಿಕ ಅನುವಾದ

22 ತಮ್ಮ ಜನರಾದ ಇಸ್ರಾಯೇಲರು ಸಮುದ್ರದ ಉಸುಬಿನಂತಿದ್ದರೂ, ಅವರಲ್ಲಿ ಉಳಿದವರು ಮಾತ್ರ ಹಿಂದಿರುಗುವರು. ಅವರ ಅಳಿವು ಶಾಸನಬದ್ಧವಾದುದು; ಹಾಗೂ ಸಂಪೂರ್ಣವಾಗಿ ನ್ಯಾಯಸಮ್ಮತವಾದುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಇಸ್ರಾಯೇಲೇ, ನಿನ್ನ ಜನರು ಸಮುದ್ರದ ಉಸುಬಿನಂತೆ ಅಸಂಖ್ಯವಾಗಿದ್ದರೂ ಅವರಲ್ಲಿ ಉಳಿದವರು ಮಾತ್ರ ತಿರುಗಿಕೊಳ್ಳುವರು. ನಾಶವಾಗುವುದಕ್ಕೆ ವಿಧಿಸಲ್ಪಟ್ಟದ್ದು, ನ್ಯಾಯನೀತಿಯಿಂದ ತುಂಬಿ ತುಳುಕುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಇಸ್ರಯೇಲೇ, ನಿನ್ನ ಜನರು ಸಮುದ್ರದ ಮರಳಿನಂತೆ ಅಸಂಖ್ಯಾತರಾಗಿ ಇದ್ದರೂ ಅವರಲ್ಲಿ ಕೆಲವರು ಮಾತ್ರ ಉಳಿದು ಹಿಂದಿರುಗುವರು. ಅವರ ಅಳಿವು ಶಾಸನಬದ್ಧವಾದುದು ಹಾಗೂ ಸಂಪೂರ್ಣವಾಗಿ ನ್ಯಾಯಸಮ್ಮತವಾದುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಇಸ್ರಾಯೇಲೇ, ನಿನ್ನ ಜನರು ಸಮುದ್ರದ ಉಸುಬಿನಂತೆ ಅಸಂಖ್ಯವಾಗಿದ್ದರೂ ಅವರಲ್ಲಿ ಉಳಿದ ಒಂದು ಶೇಷ ಮಾತ್ರ ತಿರುಗಿಕೊಳ್ಳುವದು; ತುಂಬಿತುಳುಕುವ ನ್ಯಾಯಪ್ರವಾಹದ ಪ್ರಲಯ ನಿಶ್ಚಿತವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ನಿನ್ನ ಜನರು ಸಮುದ್ರದ ಮರಳಿನಂತೆ ಬಹಳವಿರುವರು. ಆದರೆ ಅವರಲ್ಲಿ ಕೆಲವರೇ ಉಳಿದು ಕರ್ತನ ಬಳಿಗೆ ಬರುವರು. ಆ ಜನರು ದೇವರ ಬಳಿಗೆ ಹಿಂತಿರುಗುವರು. ಅದಕ್ಕಿಂತ ಮೊದಲು ನಿನ್ನ ದೇಶವು ನಾಶವಾಗುವದು. ದೇಶವು ನಾಶವಾಗುವದೆಂದು ದೇವರು ಪ್ರಕಟಿಸಿದ್ದಾನೆ. ಆ ಬಳಿಕ ದೇವರ ಒಳ್ಳೆತನವು ಆ ದೇಶಕ್ಕೆ ಬರುವದು. ಅದು ದಡತುಂಬಿ ಹರಿಯುವ ನದಿಯೋಪಾದಿಯಲ್ಲಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 10:22
24 ತಿಳಿವುಗಳ ಹೋಲಿಕೆ  

ಆದರೆ ದೇಶದಲ್ಲಿ ಹತ್ತನೆಯ ಪಾಲು ಉಳಿದಿದ್ದರೂ, ಅದು ಕೂಡ ನಾಶವಾಗುವುದು. ಏಲಾ ಮರವನ್ನಾಗಲೀ, ಅಲ್ಲೋನ್ ಮರವನ್ನಾಗಲೀ ಕಡಿದ ಮೇಲೆ ಉಳಿಯುವುದು ಬುಡ ಮಾತ್ರ. ಅದೇ ರೀತಿಯಾಗಿ ಪವಿತ್ರ ಜನರು ದೇಶದಲ್ಲಿ ಬುಡವಾಗಿ ಉಳಿದಿರುವರು.”


ಅವನು ಹೊರಗೆ ಬಂದು ಭೂಮಿಯ ನಾಲ್ಕುದಿಕ್ಕುಗಳಲ್ಲಿರುವ ಗೋಗ್ ಮಾಗೋಗ್ ಎಂಬ ರಾಷ್ಟ್ರಗಳನ್ನು ಮೋಸಗೊಳಿಸಿ ಅವರನ್ನು ಯುದ್ಧಕ್ಕೆ ಕೂಡಿಸುವನು. ಅವರ ಸಂಖ್ಯೆಯು ಸಮುದ್ರತೀರದ ಮರಳಿನಷ್ಟಿರುವುದು.


ಅವನು ಒಂದು ವಾರಕ್ಕಾಗಿ ಬಹಳ ಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು. ವಾರದ ಅರ್ಧದಲ್ಲಿ ಯಜ್ಞವನ್ನೂ, ಅರ್ಪಣೆಯನ್ನೂ ನಿಲ್ಲಿಸುವನು. ದೇವಾಲಯದಲ್ಲಿ ಹಾಳುಮಾಡುವ ಅಸಹ್ಯ ವಸ್ತುವನ್ನು ಅವನು ಸ್ಥಾಪಿಸುವನು. ಇದು ಅವನ ಮೇಲೆ ನಿರ್ಣಯವಾದದ್ದು, ಸುರಿಯುವ ತನಕ ಇರುವುದು,” ಎಂದು ಹೇಳಿದನು.


ನೀನು ನಿನ್ನ ಕಠಿಣವಾದ ಮತ್ತು ಪಶ್ಚಾತ್ತಾಪ ಪಡದ ಹೃದಯದಿಂದ, ನಿನಗೋಸ್ಕರ ದೇವರ ನೀತಿಯುಳ್ಳ ತೀರ್ಪು ಪ್ರಕಟವಾಗುವ ಕೋಪದ ದಿನಕ್ಕಾಗಿ ದೇವರ ಕೋಪವನ್ನು ಸಂಗ್ರಹಿಸಿಕೊಳ್ಳುತ್ತಿದ್ದಿ.


ಏಕೆಂದರೆ ದೇವರು ನೇಮಿಸಿದ ಒಬ್ಬರ ಮುಖಾಂತರ ಇಡೀ ಜಗತ್ತಿಗೆ ನೀತಿಗನುಸಾರವಾಗಿ ನ್ಯಾಯತೀರ್ಪು ಮಾಡುವ ಒಂದು ದಿನವನ್ನು ನೇಮಕ ಮಾಡಿದ್ದಾರೆ. ಇದನ್ನು ಎಲ್ಲರಿಗೂ ಖಚಿತ ಪಡಿಸಲೆಂದೇ ಆ ಒಬ್ಬರನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದ್ದಾರೆ.”


ಯೆಹೂದದಲ್ಲಿಯೂ ನುಗ್ಗಿ, ತುಂಬಿತುಳುಕಿ ಹಬ್ಬಿಕೊಂಡು ಕತ್ತಿನವರೆಗೂ ಏರುವುದು. ಇಮ್ಮಾನುಯೇಲನೇ, ಆ ಅರಸನ ರೆಕ್ಕೆಗಳು ಹರಡಿ ನಿನ್ನ ದೇಶದ ಅಗಲವನ್ನೆಲ್ಲಾ ಆವರಿಸಿಕೊಳ್ಳುವುವು.”


ಆಗ ನಾನು, “ಯೆಹೋವ ದೇವರೇ, ಇದು ಎಷ್ಟರವರೆಗೆ?” ಎಂದೆನು. ಅದಕ್ಕೆ ಅವರು ಹೀಗೆ ಉತ್ತರಕೊಟ್ಟರು, “ಪಟ್ಟಣಗಳು ನಿವಾಸಿಗಳಿಲ್ಲದೆ, ಮನೆಗಳು ಮನುಷ್ಯನಿಲ್ಲದೆ, ಹೊಲಗಳು ಸಂಪೂರ್ಣವಾಗಿ ಹಾಳಾಗುವವರೆಗೂ,


ಯೆಹೂದ ಮತ್ತು ಇಸ್ರಾಯೇಲಿನ ಜನರು ಸಮುದ್ರದ ಮರಳಿನ ಹಾಗೆ ಅಸಂಖ್ಯಾತರಾದರು. ಅವರು ಉಂಡು ಕುಡಿದು ಸುಖದಿಂದ ಇದ್ದರು.


ಈ ರೀತಿಯಾಗಿ ನೀತಿವಂತರಿಗೂ ದುಷ್ಟರಿಗೂ ಭೇದ ಮಾಡದೆ, ನೀತಿವಂತರನ್ನು ದುಷ್ಟರ ಸಂಗಡ ಕೊಲ್ಲುವುದು ನಿಮ್ಮಿಂದ ಎಂದಿಗೂ ಆಗಬಾರದು. ಭೂಲೋಕಕ್ಕೆಲ್ಲಾ ನ್ಯಾಯಾಧಿಪತಿಯಾಗಿರುವ ತಾವು ನ್ಯಾಯವಾದದ್ದನ್ನೇ ಮಾಡಬೇಕಲ್ಲವೇ?” ಎಂದನು.


“ಆದರೂ ಇಸ್ರಾಯೇಲ್ ಜನರು ಅಳೆಯುವುದಕ್ಕೂ ಎಣಿಸುವುದಕ್ಕೂ ಅಸಾಧ್ಯವಾದ ಕಡಲತೀರದ ಮರಳಿನಂತಾಗುವರು. ದೇವರು ಯಾವ ಸ್ಥಳದಲ್ಲಿ ಅವರನ್ನು, ‘ನೀವು ನನ್ನ ಜನರಲ್ಲ’ ಎಂದಿದ್ದಾರೋ ಆ ಸ್ಥಳದಲ್ಲಿಯೇ, ‘ನೀವು ಜೀವಸ್ವರೂಪಿಯಾದ ದೇವರ ಮಕ್ಕಳು’ ಎನಿಸಿಕೊಳ್ಳುವ ದಿನ ಬರುವುದು.


ಯಾಕೋಬನ ಮನೆತನದವರೇ, ಇಸ್ರಾಯೇಲ್ ಮನೆತನದಲ್ಲಿ ಉಳಿದಿರುವವರೇ, ನಿಮ್ಮನ್ನು ಗರ್ಭದಲ್ಲಿ ಹೊತ್ತು, ಹುಟ್ಟಿದಂದಿನಿಂದ ಪಾಲಿಸುತ್ತಿದ್ದಾತನ ಮಾತನ್ನು ಕೇಳಿರಿ.


ನಿನ್ನ ಸಂತಾನವು ಸಹ ಮರಳಿನಂತೆಯೂ, ನಿನ್ನ ಮಕ್ಕಳು ಅಸಂಖ್ಯಾತ ಧಾನ್ಯಗಳಂತೆಯೂ ಇರುವರು. ಅವರ ಹೆಸರುಗಳು ನನ್ನ ಸಮ್ಮುಖದಿಂದ, ಅಳಿದುಹೋಗದೆ ಇರುವುದು.”


ಕನಿಷ್ಠನು ಸಾವಿರವಾಗುವನು, ಅಲ್ಪನಿಂದ ಬಲವಾದ ಜನಾಂಗವಾಗುವುದು. ಯೆಹೋವನೆಂಬ ನಾನು ಕ್ಲುಪ್ತ ಕಾಲದಲ್ಲಿ ಇದನ್ನು ಬಹು ಬೇಗನೆ ಉಂಟುಮಾಡುವೆನು.


ಯೆಹೋವ ದೇವರು ಹೀಗೆನ್ನುತ್ತಾರೆ: “ರಸ ದೊರೆಯಬಹುದಾದ ದ್ರಾಕ್ಷಿ ಗೊಂಚಲನ್ನು ಒಬ್ಬನು ನೋಡಿ, ‘ಹಾಳು ಮಾಡಬೇಡ, ಅದರಲ್ಲಿ ಪ್ರಯೋಜನವಿದೆ,’ ಎನ್ನುವಂತೆ ನಾನು ನನ್ನ ಸೇವಕರನ್ನು ಲಕ್ಷ್ಯಕ್ಕೆ ತಂದು ಇವರನ್ನೆಲ್ಲಾ ಹಾಳುಮಾಡಬಾರದು ಎಂದುಕೊಳ್ಳುವೆನು.


ಏಕೆಂದರೆ ಯೆರೂಸಲೇಮಿನಿಂದ ಉಳಿದವರೂ, ಚೀಯೋನ್ ಪರ್ವತದಿಂದ ತಪ್ಪಿಸಿಕೊಂಡವರೂ ಹೊರಡುವರು. ಸೇನಾಧೀಶ್ವರ ಯೆಹೋವ ದೇವರ ಆಸಕ್ತಿಯು ಇದನ್ನು ನೆರವೇರಿಸುವುದು.


ಯೆಹೂದದ ಮನೆತನದಲ್ಲಿ ತಪ್ಪಿಸಿಕೊಂಡು ಉಳಿದವರು ತಿರುಗಿ, ದೇಶದಲ್ಲಿ ಬೇರೂರಿ ನೆಲೆಗೊಂಡು ಅಭಿವೃದ್ಧಿಯಾಗುವರು.


“ವಿಮೋಚಕನು ಚೀಯೋನಿಗೂ ಯಾಕೋಬಿನಲ್ಲಿ ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಡುವವರಿಗಾಗಿಯೂ ಬರುವನು,” ಎಂದು ಯೆಹೋವ ದೇವರು ಹೇಳುತ್ತಾರೆ.


“ಓ ಭ್ರಷ್ಟರಾದ ಜನರೇ, ತಿರುಗಿಕೊಳ್ಳಿರಿ,” ಎಂದು ಯೆಹೋವ ದೇವರು ನುಡಿಯುತ್ತಾರೆ. “ಏಕೆಂದರೆ, ನಾನು ನಿಮಗೆ ಪತಿ. ಪಟ್ಟಣದೊಳಗಿಂದ ಒಬ್ಬನನ್ನು, ಗೋತ್ರದೊಳಗಿಂದ ಇಬ್ಬರನ್ನು ತೆಗೆದುಕೊಂಡು, ಚೀಯೋನಿಗೆ ಕರೆದುಕೊಂಡು ಬರುವೆನು.


ಆದರೆ ಖಡ್ಗಕ್ಕೆ ತಪ್ಪಿಸಿಕೊಂಡ ಸ್ವಲ್ಪ ಜನರು ಈಜಿಪ್ಟ್ ದೇಶದೊಳಗಿಂದ ಯೆಹೂದ ದೇಶಕ್ಕೆ ಹಿಂದಿರುಗಿ ಹೋಗುವರು. ಆಗ ಈಜಿಪ್ಟ್ ದೇಶದಲ್ಲಿ ತಂಗುವುದಕ್ಕೆ ಬಂದಿರುವ ಯೆಹೂದದ ಉಳಿದವರೆಲ್ಲಾ ನನ್ನ ಮಾತು ನಿಲ್ಲುವುದೋ, ಅವರ ಮಾತು ನಿಲ್ಲುವುದೋ ಎಂಬುದನ್ನು ತಿಳಿದುಕೊಳ್ಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು